ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ವಿಮೋಚನಕಾಂಡ
1. {#1ಒಣಹುಲ್ಲಿಲ್ಲದೇ ಇಟ್ಟಿಗೆಗಳು }
2. [PS]ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ, “ಇಸ್ರಾಯೇಲಿನ ಯೆಹೋವ ದೇವರು, ‘ಮರುಭೂಮಿಯಲ್ಲಿ ನನಗೆ ನನ್ನ ಜನರು ಹಬ್ಬವನ್ನಾಚರಿಸುವುದಕ್ಕೆ ಅವರನ್ನು ಹೋಗಗೊಡಿಸು,’ ಎಂದು ಹೇಳುತ್ತಾರೆ,” ಎಂದರು. [PE]
3. [PS]ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು. [PE]
4. [PS]ಆಗ ಅವರು ಫರೋಹನಿಗೆ, “ಹಿಬ್ರಿಯರ ದೇವರು ನಮ್ಮನ್ನು ಸಂದರ್ಶಿಸಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿವಸ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞ ಅರ್ಪಿಸುವುದಕ್ಕೆ ನಾವು ಹೋಗಬೇಕು. ಇಲ್ಲವಾದರೆ ಅವರು ಉಪದ್ರವದಿಂದಲೋ ಖಡ್ಗದಿಂದಲೋ ನಮ್ಮನ್ನು ದಂಡಿಸುವರು,” ಎಂದರು. [PE][PS]ಈಜಿಪ್ಟಿನ ಅರಸನು ಅವರಿಗೆ, “ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸಗಳನ್ನು ಮಾಡದಂತೆ ಏಕೆ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಗಳಿಗೆ ಹೋಗಿ,” ಎಂದನು.
5. ಇದಲ್ಲದೆ ಫರೋಹನು, “ಈಗ ಹಿಬ್ರಿಯರು ಈ ದೇಶದಲ್ಲಿ ಹೆಚ್ಚಿದ್ದಾರೆ. ನೀವು ಅವರನ್ನು ಅವರ ಬಿಟ್ಟಿಕೆಲಸಗಳಿಂದ ನಿಲ್ಲಿಸಿಬಿಡುತ್ತೀರಲ್ಲಾ?” ಎಂದನು. [PE]
6. [PS]ಅದೇ ದಿನದಲ್ಲಿ ಫರೋಹನು ಬಿಟ್ಟಿಕೆಲಸ ಮಾಡಿಸುವವರಿಗೂ ಅವರ ಮೇಲ್ವಿಚಾರಕರಿಗೂ,
7. “ನೀವು ಇನ್ನು ಇಟ್ಟಿಗೆಗಳನ್ನು ಮಾಡುವುದಕ್ಕೆ ಮೊದಲಿನ ಹಾಗೆ ಜನರಿಗೆ ಒಣಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.
8. ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದ್ದರಿಂದ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞವನ್ನು ಅರ್ಪಿಸೋಣ,’ ಎಂದು ಕೂಗುತ್ತಾರೆ.
9. ಈ ಜನರು ಸುಳ್ಳು ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ. ಅವರು ದುಡಿಯಲಿ,” ಎಂದು ಆಜ್ಞಾಪಿಸಿದನು. [PE]
10. [PS]ಆಗ ಬಿಟ್ಟಿಕೆಲಸವನ್ನು ಮಾಡಿಸುವವರೂ ಮೇಲ್ವಿಚಾರಕರೂ ಹೊರಗೆ ಹೋಗಿ ಜನರಿಗೆ, “ಫರೋಹನು ಹೀಗೆ ಹೇಳುತ್ತಾನೆ: ‘ನಾನು ನಿಮಗೆ ಒಣಹುಲ್ಲು ಕೊಡುವುದಿಲ್ಲ.
11. ನಿಮಗೆ ಹುಲ್ಲು ಎಲ್ಲಿ ದೊರಕುವುದೋ, ಅಲ್ಲಿಗೆ ನೀವೇ ಹೋಗಿ ತೆಗೆದುಕೊಳ್ಳಿರಿ. ಆದರೆ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು,’ ಎಂದು ಹೇಳಿದ್ದಾನೆ,” ಎಂದರು.
12. ಆಗ ಜನರು ಒಣಹುಲ್ಲಿಗಾಗಿ ಕಳೆಕೀಳಿಸುವುದಕ್ಕೆ ಈಜಿಪ್ಟ್ ದೇಶದಲ್ಲೆಲ್ಲಾ ಚದರಿಹೋದರು.
13. ಇದಲ್ಲದೆ ಬಿಟ್ಟಿಕೆಲಸ ಮಾಡಿಸುವವರು, “ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿದಂತೆಯೇ, ಪ್ರತಿಯೊಂದು ದಿನದಲ್ಲಿ, ಆ ದಿನದ ಕೆಲಸವನ್ನು ತೀರಿಸಿಬಿಡಬೇಕು,” ಎಂದು ಹೇಳಿ ಅವರನ್ನು ತ್ವರೆಪಡಿಸಿದರು.
14. ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಏಕೆ ಒಪ್ಪಿಸಲಿಲ್ಲ,” ಎಂದು ಹೇಳಿ ಅವರನ್ನು ಹೊಡೆಸಿದರು. [PE]
15. [PS]ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿಮ್ಮ ದಾಸರಿಗೆ ಹೀಗೆ ಮಾಡುತ್ತೀರಿ?
16. ನಿಮ್ಮ ದಾಸರಿಗೆ ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ, ‘ಇಟ್ಟಿಗೆಗಳನ್ನು ಮಾಡಿರಿ’ ಎಂದು ನಮಗೆ ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಆದರೆ ತಪ್ಪು ನಿಮ್ಮ ಸ್ವಂತ ಜನರಲ್ಲಿಯೇ ಇದೆ,” ಎಂದರು. [PE]
17. [PS]ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ನೀವು, ‘ನಾವು ಹೋಗಿ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುತ್ತೇವೆ,’ ಎಂದು ಹೇಳುತ್ತೀರಿ.
18. ಆದ್ದರಿಂದ ಈಗ ಹೋಗಿ ಕೆಲಸಮಾಡಿರಿ. ಹುಲ್ಲನ್ನು ನಿಮಗೆ ಕೊಡುವುದಕ್ಕಾಗುವುದಿಲ್ಲ. ಆದರೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ತಯಾರಿಸಬೇಕು,” ಎಂದನು. [PE]
19. [PS]ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದ್ದರಿಂದ, ಇಸ್ರಾಯೇಲರ ಮೇಲ್ವಿಚಾರಕರು ತಾವು ದುರವಸ್ಥೆಯಲ್ಲಿ ಇದ್ದೇವೆಂದು ತಿಳಿದುಕೊಂಡರು.
20. ಅವರು ಫರೋಹನ ಬಳಿಯಿಂದ ಹೊರಗೆ ಬಂದಾಗ, ದಾರಿಯಲ್ಲಿ ಕಾದಿದ್ದ ಮೋಶೆಯನ್ನೂ, ಆರೋನನನ್ನೂ ಸಂಧಿಸಿದರು.
21. ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು. [PE]
22. {#1ದೇವರು ವಿಮೋಚನೆಯನ್ನು ವಾಗ್ದಾನ ಮಾಡಿದ್ದು } [PS]ಆಗ ಮೋಶೆಯು ಯೆಹೋವ ದೇವರ ಬಳಿಗೆ ಬಂದು, “ಸ್ವಾಮಿ, ಈ ಜನರಿಗೆ ಏಕೆ ಕಷ್ಟವನ್ನು ಕೊಟ್ಟಿದ್ದೀರಿ? ಏಕೆ ನನ್ನನ್ನು ಕಳುಹಿಸಿದಿರಿ?
23. ನಾನು ಫರೋಹನ ಬಳಿಗೆ ಬಂದು ನಿಮ್ಮ ಹೆಸರಿನಲ್ಲಿ ಮಾತನಾಡಿದಂದಿನಿಂದ, ಈ ಜನರಿಗೆ ಅವನು ಕೇಡನ್ನೇ ಮಾಡುತ್ತಿದ್ದಾನೆ. ನೀವು ನಿಮ್ಮ ಜನರನ್ನು ರಕ್ಷಿಸಲಿಲ್ಲವಲ್ಲಾ,” ಎಂದನು. [PE]
ಒಟ್ಟು 40 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 40
ಒಣಹುಲ್ಲಿಲ್ಲದೇ ಇಟ್ಟಿಗೆಗಳು 1 2 ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ, “ಇಸ್ರಾಯೇಲಿನ ಯೆಹೋವ ದೇವರು, ‘ಮರುಭೂಮಿಯಲ್ಲಿ ನನಗೆ ನನ್ನ ಜನರು ಹಬ್ಬವನ್ನಾಚರಿಸುವುದಕ್ಕೆ ಅವರನ್ನು ಹೋಗಗೊಡಿಸು,’ ಎಂದು ಹೇಳುತ್ತಾರೆ,” ಎಂದರು. 3 ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು. 4 ಆಗ ಅವರು ಫರೋಹನಿಗೆ, “ಹಿಬ್ರಿಯರ ದೇವರು ನಮ್ಮನ್ನು ಸಂದರ್ಶಿಸಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿವಸ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞ ಅರ್ಪಿಸುವುದಕ್ಕೆ ನಾವು ಹೋಗಬೇಕು. ಇಲ್ಲವಾದರೆ ಅವರು ಉಪದ್ರವದಿಂದಲೋ ಖಡ್ಗದಿಂದಲೋ ನಮ್ಮನ್ನು ದಂಡಿಸುವರು,” ಎಂದರು. ಈಜಿಪ್ಟಿನ ಅರಸನು ಅವರಿಗೆ, “ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸಗಳನ್ನು ಮಾಡದಂತೆ ಏಕೆ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಗಳಿಗೆ ಹೋಗಿ,” ಎಂದನು. 5 ಇದಲ್ಲದೆ ಫರೋಹನು, “ಈಗ ಹಿಬ್ರಿಯರು ಈ ದೇಶದಲ್ಲಿ ಹೆಚ್ಚಿದ್ದಾರೆ. ನೀವು ಅವರನ್ನು ಅವರ ಬಿಟ್ಟಿಕೆಲಸಗಳಿಂದ ನಿಲ್ಲಿಸಿಬಿಡುತ್ತೀರಲ್ಲಾ?” ಎಂದನು. 6 ಅದೇ ದಿನದಲ್ಲಿ ಫರೋಹನು ಬಿಟ್ಟಿಕೆಲಸ ಮಾಡಿಸುವವರಿಗೂ ಅವರ ಮೇಲ್ವಿಚಾರಕರಿಗೂ, 7 “ನೀವು ಇನ್ನು ಇಟ್ಟಿಗೆಗಳನ್ನು ಮಾಡುವುದಕ್ಕೆ ಮೊದಲಿನ ಹಾಗೆ ಜನರಿಗೆ ಒಣಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ. 8 ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದ್ದರಿಂದ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞವನ್ನು ಅರ್ಪಿಸೋಣ,’ ಎಂದು ಕೂಗುತ್ತಾರೆ. 9 ಈ ಜನರು ಸುಳ್ಳು ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ. ಅವರು ದುಡಿಯಲಿ,” ಎಂದು ಆಜ್ಞಾಪಿಸಿದನು. 10 ಆಗ ಬಿಟ್ಟಿಕೆಲಸವನ್ನು ಮಾಡಿಸುವವರೂ ಮೇಲ್ವಿಚಾರಕರೂ ಹೊರಗೆ ಹೋಗಿ ಜನರಿಗೆ, “ಫರೋಹನು ಹೀಗೆ ಹೇಳುತ್ತಾನೆ: ‘ನಾನು ನಿಮಗೆ ಒಣಹುಲ್ಲು ಕೊಡುವುದಿಲ್ಲ. 11 ನಿಮಗೆ ಹುಲ್ಲು ಎಲ್ಲಿ ದೊರಕುವುದೋ, ಅಲ್ಲಿಗೆ ನೀವೇ ಹೋಗಿ ತೆಗೆದುಕೊಳ್ಳಿರಿ. ಆದರೆ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು,’ ಎಂದು ಹೇಳಿದ್ದಾನೆ,” ಎಂದರು. 12 ಆಗ ಜನರು ಒಣಹುಲ್ಲಿಗಾಗಿ ಕಳೆಕೀಳಿಸುವುದಕ್ಕೆ ಈಜಿಪ್ಟ್ ದೇಶದಲ್ಲೆಲ್ಲಾ ಚದರಿಹೋದರು. 13 ಇದಲ್ಲದೆ ಬಿಟ್ಟಿಕೆಲಸ ಮಾಡಿಸುವವರು, “ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿದಂತೆಯೇ, ಪ್ರತಿಯೊಂದು ದಿನದಲ್ಲಿ, ಆ ದಿನದ ಕೆಲಸವನ್ನು ತೀರಿಸಿಬಿಡಬೇಕು,” ಎಂದು ಹೇಳಿ ಅವರನ್ನು ತ್ವರೆಪಡಿಸಿದರು. 14 ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಏಕೆ ಒಪ್ಪಿಸಲಿಲ್ಲ,” ಎಂದು ಹೇಳಿ ಅವರನ್ನು ಹೊಡೆಸಿದರು. 15 ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿಮ್ಮ ದಾಸರಿಗೆ ಹೀಗೆ ಮಾಡುತ್ತೀರಿ? 16 ನಿಮ್ಮ ದಾಸರಿಗೆ ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ, ‘ಇಟ್ಟಿಗೆಗಳನ್ನು ಮಾಡಿರಿ’ ಎಂದು ನಮಗೆ ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಆದರೆ ತಪ್ಪು ನಿಮ್ಮ ಸ್ವಂತ ಜನರಲ್ಲಿಯೇ ಇದೆ,” ಎಂದರು. 17 ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ನೀವು, ‘ನಾವು ಹೋಗಿ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುತ್ತೇವೆ,’ ಎಂದು ಹೇಳುತ್ತೀರಿ. 18 ಆದ್ದರಿಂದ ಈಗ ಹೋಗಿ ಕೆಲಸಮಾಡಿರಿ. ಹುಲ್ಲನ್ನು ನಿಮಗೆ ಕೊಡುವುದಕ್ಕಾಗುವುದಿಲ್ಲ. ಆದರೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ತಯಾರಿಸಬೇಕು,” ಎಂದನು. 19 ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದ್ದರಿಂದ, ಇಸ್ರಾಯೇಲರ ಮೇಲ್ವಿಚಾರಕರು ತಾವು ದುರವಸ್ಥೆಯಲ್ಲಿ ಇದ್ದೇವೆಂದು ತಿಳಿದುಕೊಂಡರು. 20 ಅವರು ಫರೋಹನ ಬಳಿಯಿಂದ ಹೊರಗೆ ಬಂದಾಗ, ದಾರಿಯಲ್ಲಿ ಕಾದಿದ್ದ ಮೋಶೆಯನ್ನೂ, ಆರೋನನನ್ನೂ ಸಂಧಿಸಿದರು. 21 ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು. ದೇವರು ವಿಮೋಚನೆಯನ್ನು ವಾಗ್ದಾನ ಮಾಡಿದ್ದು 22 ಆಗ ಮೋಶೆಯು ಯೆಹೋವ ದೇವರ ಬಳಿಗೆ ಬಂದು, “ಸ್ವಾಮಿ, ಈ ಜನರಿಗೆ ಏಕೆ ಕಷ್ಟವನ್ನು ಕೊಟ್ಟಿದ್ದೀರಿ? ಏಕೆ ನನ್ನನ್ನು ಕಳುಹಿಸಿದಿರಿ? 23 ನಾನು ಫರೋಹನ ಬಳಿಗೆ ಬಂದು ನಿಮ್ಮ ಹೆಸರಿನಲ್ಲಿ ಮಾತನಾಡಿದಂದಿನಿಂದ, ಈ ಜನರಿಗೆ ಅವನು ಕೇಡನ್ನೇ ಮಾಡುತ್ತಿದ್ದಾನೆ. ನೀವು ನಿಮ್ಮ ಜನರನ್ನು ರಕ್ಷಿಸಲಿಲ್ಲವಲ್ಲಾ,” ಎಂದನು.
ಒಟ್ಟು 40 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 40
×

Alert

×

Kannada Letters Keypad References