ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ವಿಮೋಚನಕಾಂಡ
1.
2. [PS]ಆಗ ಯೆಹೋವ ದೇವರು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನನ್ನ ಬಲವಾದ ಹಸ್ತವನ್ನು ಕಂಡು ಅವನು ಅವರನ್ನು ಹೋಗಗೊಡಿಸುವನು. ನನ್ನ ಬಲವಾದ ಹಸ್ತದ ಕಾರಣದಿಂದ ಅವನು ಅವರನ್ನು ತನ್ನ ದೇಶದೊಳಗಿಂದ ಹೊರಡಿಸುವನು,” ಎಂದರು. [PE][PS]ಇದಲ್ಲದೆ ದೇವರು ಮೋಶೆಯ ಸಂಗಡ ಮಾತನಾಡಿ, “ನಾನೇ ಯೆಹೋವ ದೇವರು.
3. ನಾನೇ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಸರ್ವಶಕ್ತ ದೇವರೆಂದು ಪ್ರಕಟಿಸಿಗೊಂಡೆನು. ಆದರೆ ಯೆಹೋವ ದೇವರೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಪೂರ್ಣವಾಗಿ ತಿಳಿಸಲಿಲ್ಲ.
4. ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು.
5. ಈಜಿಪ್ಟಿನವರು ದಾಸರನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲರ ನರಳುವಿಕೆಯನ್ನು ಕೇಳಿ, ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು. [PE]
6. [PS]“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.
7. ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.
8. ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕೊಡುವೆನೆಂದು ಕೈಯನ್ನೆತ್ತಿ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸೊತ್ತಾಗಿ ಕೊಡುವೆನೆಂದು ಹೇಳಿದ ಯೆಹೋವ ದೇವರು ನಾನೇ,’ ಎಂದು ಹೇಳು,” ಎಂದರು. [PE]
9.
10. [PS]ಮೋಶೆಯು ಇಸ್ರಾಯೇಲರಿಗೆ ಹಾಗೆ ಹೇಳಿದಾಗ, ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ. [PE][PS]ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
11. “ನೀನು ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಹೋಗಿ, ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಗೆ ಕಳುಹಿಸುವಂತೆ ಅವನ ಸಂಗಡ ಮಾತನಾಡು,” ಎಂದರು. [PE]
12.
13. [PS]ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತನ್ನು ಕೇಳದಿರುವಲ್ಲಿ, ತೊದಲು ಮಾತನಾಡುವ ನನ್ನ ಮಾತನ್ನು ಫರೋಹನು ಕೇಳುವುದು ಹೇಗೆ?” ಎಂದನು. [PE]{#1ಮೋಶೆ ಮತ್ತು ಆರೋನರ ವಂಶಾವಳಿ } [PS]ಯೆಹೋವ ದೇವರು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಈಜಿಪ್ಟಿನ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾಯೇಲರ ಬಳಿಗೂ ಅರಸನಾದ ಫರೋಹನ ಬಳಿಗೂ ಹೋಗಬೇಕೆಂದು ಅವರಿಗೆ ಆಜ್ಞಾಪಿಸಿದರು. [PE][PBR]
14. [LS4] ಇಸ್ರಾಯೇಲ್ ಗೋತ್ರಗಳ ಮನೆಯ ಮುಖ್ಯಸ್ಥರು ಇವರೇ: [LE][PBR] [LS]ಇಸ್ರಾಯೇಲನ ಜೇಷ್ಠ ಪುತ್ರನಾದ ರೂಬೇನನ ಪುತ್ರರು: [LE][LS2]ಹನೋಕ್, ಪಲ್ಲೂ, ಹೆಚ್ರೋನ್, ಕರ್ಮೀ. [LE][LS4]ಇವರು ರೂಬೇನನ ಗೋತ್ರಗಳ ಮೂಲ ಪುರುಷರು. [LE][PBR]
15. [LS] ಸಿಮೆಯೋನನ ಪುತ್ರರು: [LE][LS2]ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ. [LE][LS4]ಇವು ಸಿಮೆಯೋನನ ಗೋತ್ರಗಳು. [LE][PBR]
16. [LS] ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಪುತ್ರರ ಹೆಸರುಗಳು: [LE][LS2]ಗೇರ್ಷೋನ್, ಕೊಹಾತ್, ಮೆರಾರೀ. [LE][LS4]ಲೇವಿಯು ನೂರಮೂವತ್ತೇಳು ವರ್ಷಗಳವರೆಗೆ ಬದುಕಿದ್ದನು. [LE]
17. [LS2] ಗೇರ್ಷೋನನ ಪುತ್ರರು ಅವರ ಗೋತ್ರಗಳಿಗನುಸಾರವಾಗಿ: [LE][LS3]ಲಿಬ್ನೀ ಮತ್ತು ಶಿಮ್ಮೀಯರು. [LE]
18. [LS2] ಕೊಹಾತನ ಪುತ್ರರು: [LE][LS3]ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. [LE][LS2]ಕೊಹಾತನು ಜೀವಿಸಿದ ವರ್ಷಗಳು ನೂರಮೂವತ್ತಮೂರು. [LE]
19. [LS2] ಮೆರಾರೀಯ ಪುತ್ರರು: [LE][LS3]ಮಹ್ಲೀ, ಮೂಷೀ. [LE][LS4]ವಂಶಾವಳಿಗಳ ಪ್ರಕಾರ ಇವೇ ಲೇವಿಯ ಗೋತ್ರಗಳು. [LE][PBR]
20. [LS] ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆದಳನ್ನು ಮದುವೆಯಾದನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. [LE][LS4]ಅಮ್ರಾಮನು ಜೀವಿಸಿದ ಕಾಲ ನೂರಮೂವತ್ತೇಳು ವರ್ಷಗಳು. [LE]
21. [LS] ಇಚ್ಹಾರನ ಪುತ್ರರು: [LE][LS2]ಕೋರಹ, ನೆಫೆಗ್ ಮತ್ತು ಜಿಕ್ರಿ. [LE]
22. [LS] ಉಜ್ಜೀಯೇಲನ ಪುತ್ರರು: [LE][LS2]ಮೀಶಾಯೇಲ್, ಎಲ್ಜಾಫಾನ್ ಮತ್ತು ಸಿತ್ರಿ. [LE]
23. [LS] ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬಳನ್ನು ಮದುವೆಯಾದನು. ಆಕೆಯು ಅವನಿಗೆ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಇವರನ್ನು ಹೆತ್ತಳು. [LE][PBR]
24. [LS] ಕೋರಹನ ಪುತ್ರರು: [LE][LS2]ಅಸ್ಸೀರ್ ಎಲ್ಕಾನಾ, ಅಬೀಯಾಸಾಫ್ ಎಂಬುವರು. [LE][LS4]ಇವು ಕೋರಹೀಯರ ಗೋತ್ರಗಳು. [LE][PBR]
25. [LS] ಆರೋನನ ಮಗ ಎಲಿಯಾಜರನು ಪೂಟಿಯೇಲನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಯಾದನು. ಆಕೆಯು ಅವನಿಗೆ ಫೀನೆಹಾಸನನ್ನು ಹೆತ್ತಳು. [LE][PBR] [LS4]ಗೋತ್ರಗಳ ಪ್ರಕಾರ ಇವರು ಲೇವಿಯರ ಗೋತ್ರಗಳ ಮುಖ್ಯಸ್ಥರು. [LE][PBR]
26. [PS]ಆರೋನ್, ಮೋಶೆ ಇವರಿಗೆ, “ಇಸ್ರಾಯೇಲರನ್ನು ಅವರವರ ಗೋತ್ರಗಳಿಗನುಸಾರವಾಗಿ ಈಜಿಪ್ಟಿನ ಒಳಗಿಂದ ಹೊರಗೆ ಬರಮಾಡಬೇಕು,” ಎಂದು ಯೆಹೋವ ದೇವರು ಹೇಳಿದ್ದರು.
27. ಆದುದರಿಂದ ಮೋಶೆ, ಆರೋನರೂ ಇಸ್ರಾಯೇಲರನ್ನು ಹೊರಗೆ ತರುವುದಕ್ಕಾಗಿ ಈಜಿಪ್ಟಿನ ಅರಸನಾದ ಫರೋಹನ ಸಂಗಡ ಮಾತನಾಡಿದರು. [PE]
28. {#1ಆರೋನನು ಮೋಶೆಯ ಪರವಾಗಿ ಮಾತನಾಡುವುದು } [PS]ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದರು.
29. ಅವರು ಮೋಶೆಗೆ, “ನಾನೇ ಯೆಹೋವ ದೇವರು. ನಾನು ನಿನಗೆ ಹೇಳುವುದನ್ನೆಲ್ಲಾ ಈಜಿಪ್ಟಿನ ಅರಸನಾದ ಫರೋಹನಿಗೆ ತಿಳಿಸು,” ಎಂದರು. [PE]
30. [PS]ಅದಕ್ಕೆ ಮೋಶೆಯು ಯೆಹೋವ ದೇವರ ಮುಂದೆ, “ಇಗೋ, ನಾನು ತೊದಲು ಮಾತನಾಡುವವನು. ಫರೋಹನು ನನ್ನ ಮಾತನ್ನು ಹೇಗೆ ಕೇಳುತ್ತಾನೆ?” ಎಂದನು. [PE]
ಒಟ್ಟು 40 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 40
1 2 ಆಗ ಯೆಹೋವ ದೇವರು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನನ್ನ ಬಲವಾದ ಹಸ್ತವನ್ನು ಕಂಡು ಅವನು ಅವರನ್ನು ಹೋಗಗೊಡಿಸುವನು. ನನ್ನ ಬಲವಾದ ಹಸ್ತದ ಕಾರಣದಿಂದ ಅವನು ಅವರನ್ನು ತನ್ನ ದೇಶದೊಳಗಿಂದ ಹೊರಡಿಸುವನು,” ಎಂದರು. ಇದಲ್ಲದೆ ದೇವರು ಮೋಶೆಯ ಸಂಗಡ ಮಾತನಾಡಿ, “ನಾನೇ ಯೆಹೋವ ದೇವರು. 3 ನಾನೇ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಸರ್ವಶಕ್ತ ದೇವರೆಂದು ಪ್ರಕಟಿಸಿಗೊಂಡೆನು. ಆದರೆ ಯೆಹೋವ ದೇವರೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಪೂರ್ಣವಾಗಿ ತಿಳಿಸಲಿಲ್ಲ. 4 ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು. 5 ಈಜಿಪ್ಟಿನವರು ದಾಸರನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲರ ನರಳುವಿಕೆಯನ್ನು ಕೇಳಿ, ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು. 6 “ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು. 7 ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು. 8 ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕೊಡುವೆನೆಂದು ಕೈಯನ್ನೆತ್ತಿ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸೊತ್ತಾಗಿ ಕೊಡುವೆನೆಂದು ಹೇಳಿದ ಯೆಹೋವ ದೇವರು ನಾನೇ,’ ಎಂದು ಹೇಳು,” ಎಂದರು. 9 10 ಮೋಶೆಯು ಇಸ್ರಾಯೇಲರಿಗೆ ಹಾಗೆ ಹೇಳಿದಾಗ, ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ. ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, 11 “ನೀನು ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಹೋಗಿ, ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಗೆ ಕಳುಹಿಸುವಂತೆ ಅವನ ಸಂಗಡ ಮಾತನಾಡು,” ಎಂದರು. 12 13 ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತನ್ನು ಕೇಳದಿರುವಲ್ಲಿ, ತೊದಲು ಮಾತನಾಡುವ ನನ್ನ ಮಾತನ್ನು ಫರೋಹನು ಕೇಳುವುದು ಹೇಗೆ?” ಎಂದನು. ಮೋಶೆ ಮತ್ತು ಆರೋನರ ವಂಶಾವಳಿ ಯೆಹೋವ ದೇವರು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಈಜಿಪ್ಟಿನ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾಯೇಲರ ಬಳಿಗೂ ಅರಸನಾದ ಫರೋಹನ ಬಳಿಗೂ ಹೋಗಬೇಕೆಂದು ಅವರಿಗೆ ಆಜ್ಞಾಪಿಸಿದರು. 14 ಇಸ್ರಾಯೇಲ್ ಗೋತ್ರಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಜೇಷ್ಠ ಪುತ್ರನಾದ ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನ್, ಕರ್ಮೀ. ಇವರು ರೂಬೇನನ ಗೋತ್ರಗಳ ಮೂಲ ಪುರುಷರು. 15 ಸಿಮೆಯೋನನ ಪುತ್ರರು: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ. ಇವು ಸಿಮೆಯೋನನ ಗೋತ್ರಗಳು. 16 ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಪುತ್ರರ ಹೆಸರುಗಳು: ಗೇರ್ಷೋನ್, ಕೊಹಾತ್, ಮೆರಾರೀ. ಲೇವಿಯು ನೂರಮೂವತ್ತೇಳು ವರ್ಷಗಳವರೆಗೆ ಬದುಕಿದ್ದನು. 17 ಗೇರ್ಷೋನನ ಪುತ್ರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಮತ್ತು ಶಿಮ್ಮೀಯರು. 18 ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೊಹಾತನು ಜೀವಿಸಿದ ವರ್ಷಗಳು ನೂರಮೂವತ್ತಮೂರು. 19 ಮೆರಾರೀಯ ಪುತ್ರರು: ಮಹ್ಲೀ, ಮೂಷೀ. ವಂಶಾವಳಿಗಳ ಪ್ರಕಾರ ಇವೇ ಲೇವಿಯ ಗೋತ್ರಗಳು. 20 ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆದಳನ್ನು ಮದುವೆಯಾದನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರಮೂವತ್ತೇಳು ವರ್ಷಗಳು. 21 ಇಚ್ಹಾರನ ಪುತ್ರರು: ಕೋರಹ, ನೆಫೆಗ್ ಮತ್ತು ಜಿಕ್ರಿ. 22 ಉಜ್ಜೀಯೇಲನ ಪುತ್ರರು: ಮೀಶಾಯೇಲ್, ಎಲ್ಜಾಫಾನ್ ಮತ್ತು ಸಿತ್ರಿ. 23 ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬಳನ್ನು ಮದುವೆಯಾದನು. ಆಕೆಯು ಅವನಿಗೆ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಇವರನ್ನು ಹೆತ್ತಳು. 24 ಕೋರಹನ ಪುತ್ರರು: ಅಸ್ಸೀರ್ ಎಲ್ಕಾನಾ, ಅಬೀಯಾಸಾಫ್ ಎಂಬುವರು. ಇವು ಕೋರಹೀಯರ ಗೋತ್ರಗಳು. 25 ಆರೋನನ ಮಗ ಎಲಿಯಾಜರನು ಪೂಟಿಯೇಲನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಯಾದನು. ಆಕೆಯು ಅವನಿಗೆ ಫೀನೆಹಾಸನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿಯರ ಗೋತ್ರಗಳ ಮುಖ್ಯಸ್ಥರು. 26 ಆರೋನ್, ಮೋಶೆ ಇವರಿಗೆ, “ಇಸ್ರಾಯೇಲರನ್ನು ಅವರವರ ಗೋತ್ರಗಳಿಗನುಸಾರವಾಗಿ ಈಜಿಪ್ಟಿನ ಒಳಗಿಂದ ಹೊರಗೆ ಬರಮಾಡಬೇಕು,” ಎಂದು ಯೆಹೋವ ದೇವರು ಹೇಳಿದ್ದರು. 27 ಆದುದರಿಂದ ಮೋಶೆ, ಆರೋನರೂ ಇಸ್ರಾಯೇಲರನ್ನು ಹೊರಗೆ ತರುವುದಕ್ಕಾಗಿ ಈಜಿಪ್ಟಿನ ಅರಸನಾದ ಫರೋಹನ ಸಂಗಡ ಮಾತನಾಡಿದರು. ಆರೋನನು ಮೋಶೆಯ ಪರವಾಗಿ ಮಾತನಾಡುವುದು 28 ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದರು. 29 ಅವರು ಮೋಶೆಗೆ, “ನಾನೇ ಯೆಹೋವ ದೇವರು. ನಾನು ನಿನಗೆ ಹೇಳುವುದನ್ನೆಲ್ಲಾ ಈಜಿಪ್ಟಿನ ಅರಸನಾದ ಫರೋಹನಿಗೆ ತಿಳಿಸು,” ಎಂದರು. 30 ಅದಕ್ಕೆ ಮೋಶೆಯು ಯೆಹೋವ ದೇವರ ಮುಂದೆ, “ಇಗೋ, ನಾನು ತೊದಲು ಮಾತನಾಡುವವನು. ಫರೋಹನು ನನ್ನ ಮಾತನ್ನು ಹೇಗೆ ಕೇಳುತ್ತಾನೆ?” ಎಂದನು.
ಒಟ್ಟು 40 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 40
×

Alert

×

Kannada Letters Keypad References