ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಯೆಹೆಜ್ಕೇಲನು
1. {#1ಯೆರೂಸಲೇಮು, ಪ್ರಯೋಜನವಿಲ್ಲದ ದ್ರಾಕ್ಷಾಲತೆ } [PS]ಯೆಹೋವ ದೇವರ ವಾಕ್ಯವು ನನಗೆ ಬಂದಿತು,
2. “ಮನುಷ್ಯಪುತ್ರನೇ, ದ್ರಾಕ್ಷಿ ಗಿಡವು ಅಡವಿಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?
3. ಇದರಿಂದ ಕಟ್ಟಿಗೆಯನ್ನು ತೆಗೆದುಕೊಂಡು ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವನನ್ನಾದರೂ ನೇತುಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
4. ಇದನ್ನು ಬೆಂಕಿಗೆ ಸೌದೆಯಾಗಿ ಹಾಕುತ್ತಾರೆ. ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡುತ್ತದೆ. ಅದರ ಮಧ್ಯ ಭಾಗವು ಸುಟ್ಟು ಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವುದೋ?
5. ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ, ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟುಹೋದ ಮೇಲೆ ಯಾವ ಕೆಲಸಕ್ಕೆ ಬಂದೀತು?” [PE]
6. [PS]“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ವನವೃಕ್ಷಗಳಲ್ಲಿ ದ್ರಾಕ್ಷಿಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಮಾಡಿರುವೆನೋ ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ವಿನಾಶಕ್ಕೆ ಗುರಿಮಾಡಿದ್ದೇನೆ.
7. ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.
8. ಅವರು ದ್ರೋಹ ಮಾಡಿದ್ದರಿಂದ ನಾನು ಆ ದೇಶವನ್ನು ಹಾಳುಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” [PE]
ಒಟ್ಟು 48 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 15 / 48
ಯೆರೂಸಲೇಮು, ಪ್ರಯೋಜನವಿಲ್ಲದ ದ್ರಾಕ್ಷಾಲತೆ 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು, 2 “ಮನುಷ್ಯಪುತ್ರನೇ, ದ್ರಾಕ್ಷಿ ಗಿಡವು ಅಡವಿಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು? 3 ಇದರಿಂದ ಕಟ್ಟಿಗೆಯನ್ನು ತೆಗೆದುಕೊಂಡು ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವನನ್ನಾದರೂ ನೇತುಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? 4 ಇದನ್ನು ಬೆಂಕಿಗೆ ಸೌದೆಯಾಗಿ ಹಾಕುತ್ತಾರೆ. ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡುತ್ತದೆ. ಅದರ ಮಧ್ಯ ಭಾಗವು ಸುಟ್ಟು ಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವುದೋ? 5 ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ, ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟುಹೋದ ಮೇಲೆ ಯಾವ ಕೆಲಸಕ್ಕೆ ಬಂದೀತು?” 6 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ವನವೃಕ್ಷಗಳಲ್ಲಿ ದ್ರಾಕ್ಷಿಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಮಾಡಿರುವೆನೋ ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ವಿನಾಶಕ್ಕೆ ಗುರಿಮಾಡಿದ್ದೇನೆ. 7 ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. 8 ಅವರು ದ್ರೋಹ ಮಾಡಿದ್ದರಿಂದ ನಾನು ಆ ದೇಶವನ್ನು ಹಾಳುಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
ಒಟ್ಟು 48 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 15 / 48
×

Alert

×

Kannada Letters Keypad References