ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಯೆಹೆಜ್ಕೇಲನು
1. {#1ಇಬ್ಬರು ವೇಶ್ಯೆ ಸಹೋದರಿಯರು } [PS]ಯೆಹೋವ ದೇವರ ವಾಕ್ಯವು ನನಗೆ ಬಂದಿತು,
2. “ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು;
3. ಅವರು ಈಜಿಪ್ಟಿನಲ್ಲಿ ವೇಶ್ಯೆ ಆದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲಾದವು; ಅವುಗಳ ತೊಟ್ಟುಗಳು ನಸುಕಲಾದವು.
4. ಅವರುಗಳ ಹೆಸರುಗಳೇನೆಂದರೆ ಒಹೊಲ ಎಂಬವಳು ದೊಡ್ಡವಳು. ಒಹೊಲೀಬ ಎಂಬವಳು ಚಿಕ್ಕವಳು. ಅವರು ನನ್ನವರಾಗಿದ್ದು ಪುತ್ರಪುತ್ರಿಯರನ್ನು ಹೆತ್ತರು; ಅವರ ಹೆಸರುಗಳಾದ ಒಹೊಲ ಎಂಬುದು ಸಮಾರ್ಯವು ಮತ್ತು ಒಹೊಲೀಬ ಎಂಬುದು ಯೆರೂಸಲೇಮು ಆಗಿದೆ. [PE]
5. [PS]“ಒಹೊಲಳು ಇನ್ನು ನನ್ನ ವಶವಾಗಿರುವಾಗಲೇ ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು ತನ್ನ ನೆರೆಯವರಾದ ಅಸ್ಸೀರಿಯದವರನ್ನು,
6. ಅವರೆಲ್ಲರೂ ನೀಲಿ ಬಣ್ಣದಿಂದ ಹೊದಿಕೆಯಾದ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಯೌವನಸ್ಥರೂ, ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು ಮೋಹಿಸಿದಳು.
7. ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಸ್ಸೀರಿಯದಲ್ಲಿನ ಗಣ್ಯವ್ಯಕ್ತಿಗಳಾಗಿದ್ದರು. ಅವಳು ಯಾರನ್ನು ಮೋಹಿಸಿದಳೋ, ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರ ಪಡಿಸಿಕೊಂಡಳು.
8. ಅವಳು ಈಜಿಪ್ಟಿನಲ್ಲಿ ಇದ್ದಾಗಿನಿಂದಲೂ ವ್ಯಭಿಚಾರವನ್ನು ಬಿಡಲಿಲ್ಲ. ಅವಳ ಯೌವನದಲ್ಲಿ ಪುರುಷರು ಅವಳ ಸಂಗಡ ಮಲಗಿದರು. ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ಅವಳ ಮೇಲೆ ವ್ಯಭಿಚಾರ ನಡೆಸಿದರು. [PE]
9. [PS]“ಆದ್ದರಿಂದ ನಾನು ಅವಳನ್ನು ಮೋಹಿಸಿದ ಅವಳ ಪ್ರಿಯರ ಕೈಗೆ ಅಸ್ಸೀರಿಯರ ಕೈಗೆ ಒಪ್ಪಿಸಿದೆನು.
10. ಅವರು ಅವಳ ಬೆತ್ತಲೆತನವನ್ನು ಬಯಲುಪಡಿಸಿದರು ಮತ್ತು ಅವಳ ಪುತ್ರರನ್ನೂ, ಅವಳ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು. [PE]
11. [PS]“ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ, ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆಸಿದಳು.
12. ಅವಳು ಯೋಧರಾದ ಅಸ್ಸೀರಿಯರನ್ನೂ, ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಉಡುಪು ಧರಿಸಿ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರಾಗಿಯೂ, ಅಪೇಕ್ಷಿಸತಕ್ಕ ಯೌವನಸ್ಥರಾಗಿಯೂ ಇರುವಂಥವರನ್ನು ಮೋಹಿಸಿದಳು.
13. ಅವಳೂ ಅಪವಿತ್ರಳಾದದ್ದನ್ನು ಕಂಡೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದರು. [PE]
14. [PS]“ಅವಳು ತನ್ನ ವ್ಯಭಿಚಾರತ್ವವನ್ನು ಇನ್ನೂ ಹೆಚ್ಚಿಸಿದಳು. ಗೋಡೆಯ ಮೇಲೆ ಕೆಂಪು ಬಣ್ಣದಿಂದ ಚಿತ್ರಿಸಲಾದ ಕಸ್ದೀಯರ ಪುರುಷರನ್ನು ನೋಡಿದಳು. ಅವರು,
15. ಚಿತ್ರದಲ್ಲಿನ ಪುರುಷರು ತಮ್ಮ ಸೊಂಟದ ಸುತ್ತಲೂ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು ಮತ್ತು ತಲೆಯ ಮೇಲೆ ಬೀಸುವ ಪೇಟಗಳನ್ನು ಹೊಂದಿದ್ದರು; ಅವರೆಲ್ಲರೂ ಬಾಬಿಲೋನ್ ನಿವಾಸಿಗಳಂತೆ, ಬಾಬಿಲೋನಿನ ರಥದ ಅಧಿಕಾರಿಗಳಂತೆ ಕಾಣುತ್ತಿದ್ದರು.
16. ಅವಳ ಕಣ್ಣುಗಳಿಂದ ಅವರನ್ನು ನೋಡಿದಾಗ ತಕ್ಷಣವೇ ಅವರನ್ನು ಮೋಹಿಸಿದಳು. ಅವರ ಬಳಿಗೆ ಕಸ್ದೀಯಕ್ಕೆ[* ಕಸ್ದೀಯ ಅಥವಾ ಬಾಬಿಲೋನ್ ] ದೂತರನ್ನು ಕಳುಹಿಸಿದಳು.
17. ಆಗ ಬಾಬಿಲೋನಿನವರು ಅವರ ಪ್ರೀತಿಯ ಹಾಸಿಗೆಯ ಮೇಲೆ ಬಂದು ಆಕೆಯನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು. ಅವಳು ಅವರಿಂದ ಅಪವಿತ್ರಳಾದ ಮೇಲೆ ಅವರ ಬಗ್ಗೆ ಇವಳಿಗೇ ಜಿಗುಪ್ಸೆ ಹುಟ್ಟಿತು.
18. ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನ್ನು ಬಯಲು ಪಡಿಸಿಕೊಂಡಾಗ, ತನ್ನ ಜಿಗುಪ್ಸೆ ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.
19. ಆದರೂ ಅವಳು ಈಜಿಪ್ಟ್ ದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿದಳು.
20. ಕತ್ತೆಗಳಂತೆ ಬೆದೆಯುಳ್ಳವರು ಕುದುರೆಗಳಂತೆ ದಾಟುವವರು ಆದ ತನ್ನ ಪ್ರಿಯರನ್ನು ಮೋಹಿಸಿದಳು.
21. ಹೀಗೆ ಈಜಿಪ್ಟಿನಿಂದ ನಿನ್ನ ಯೌವನದ ಸ್ತನಗಳ ತೊಟ್ಟುಗಳನ್ನು ಬತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ. [PE]
22. [PS]“ಆದ್ದರಿಂದ ಒಹೊಲೀಬಳೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ಯಾರಿಂದ ನಿನ್ನ ಮನಸ್ಸಿನಲ್ಲಿ ಜಿಗುಪ್ಸೆ ಹುಟ್ಟಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ವಿರೋಧವಾಗಿ ತರುತ್ತೇನೆ.
23. ಬಾಬಿಲೋನಿನವರು ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಎಲ್ಲಾ ಅಸ್ಸೀರಿಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿ ಹೊಂದಿದವರೂ ಎಲ್ಲರೂ ಕುದುರೆಗಳ ಮೇಲೆ ಬೀಳುವಂತೆ ಮಾಡುವೆನು.
24. ಅವರು ರಥಗಳ ಸಂಗಡವಾಗಿಯೂ ಬಂಡಿಗಳ ಸಂಗಡವಾಗಿಯೂ ಜನಗಳ ಸಮೂಹದ ಸಂಗಡವಾಗಿಯೂ ಬಲವುಳ್ಳವರಾಗಿ ತಮ್ಮ ಆಯುಧಗಳೊಂದಿಗೆ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣವನ್ನೂ ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯತೀರ್ಪಿನ ಅಧಿಕಾರ ಕೊಡುವೆನು. ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.
25. ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು. ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು. ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದುಹಾಕು; ನಿನ್ನಲ್ಲಿ ಉಳಿದವರು ಖಡ್ಗದಿಂದ ಬೀಳುವರು. ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.
26. ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು.
27. ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಈಜಿಪ್ಟಿನಲ್ಲಿ ಇದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು. ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಈಜಿಪ್ಟನ್ನು ಜ್ಞಾಪಕಕ್ಕೆ ತರದೇ ಇರುವೆ. [PE]
28. [PS]“ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಕುಂದಿಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.
29. ಅವರು ನಿನ್ನ ವಿಷಯದಲ್ಲಿ ಹಗೆತೀರಿಸಿಕೊಳ್ಳುವರು. ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವುದು.
30. ನೀನು ಇತರ ಜನಾಂಗಗಳ ಹಿಂದೆ ಹೋಗಿ ವ್ಯಭಿಚಾರ ಮಾಡಿದ್ದರಿಂದಲೂ ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಿನಗೆ ಮಾಡುತ್ತೇನೆ.
31. ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ. [PE]
32. [PS]“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: [PE][QS]“ನೀನು ನಿನ್ನ ಸಹೋದರಿಯ [QE][QS2]ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವೆ. [QE][QS]ನೀನು ಹಾಸ್ಯಕ್ಕೂ ನಿಂದೆಗೂ ಗುರಿಯಾಗುವೆ. [QE][QS2]ಅದೇ ನಿನಗೆ ಹೆಚ್ಚಾಗುವುದು. [QE]
33. [QS]ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ [QE][QS2]ವಿಸ್ಮಯವೂ ನಾಶವೂ ಆಗುವುದು. [QE][QS2]ನೀನು ಮತ್ತಿನಿಂದಲೂ ದುಃಖದಿಂದಲೂ ತುಂಬಿರುವೆ. [QE]
34. [QS]ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು [QE][QS2]ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ [QE][QS2]ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವೆ; [QE][MS]ಏಕೆಂದರೆ ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ. [ME][PBR]
35.
36. [PS]“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನಿನ ಮೇಲೆ ಮರೆಮಾಡಿದ ಮೇಲೆ ನೀನು ನಿನ್ನ ದುಷ್ಕರ್ಮವನ್ನೂ ವ್ಯಭಿಚಾರದ ಪ್ರತಿಫಲವನ್ನೂ ಅನುಭವಿಸಲೇಬೇಕು.” [PE][PS]ಯೆಹೋವ ದೇವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸುವೆಯೋ? ಹೌದು, ಅವರ ಅಸಹ್ಯಕರ ಕೃತ್ಯಗಳನ್ನು ಅವರಿಗೆ ತಿಳಿಸು.
37. ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಇದೆ: ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ. ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ.
38. ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರಪಡಿಸಿ ನನ್ನ ವಿಶ್ರಾಂತಿಯ ದಿನಗಳನ್ನು ಕೆಡಿಸಿದ್ದಾರೆ.
39. ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದುಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವುದಕ್ಕೆ ಬಂದರು. ಅವರು ನನ್ನ ಆಲಯದ ಒಳಗೆ ಹೀಗೆ ಮಾಡಿದ್ದಾರೆ. [PE]
40. [PS]“ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರಿಗೆ ಕರೆಯ ಕಳುಹಿಸಿದ್ದಾರೆ. ಅವರು ಬಂದಾಗ ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನ ಆಭರಣಗಳಿಂದ ಅಲಂಕರಿಸಿಕೊಂಡೆ.
41. ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ನನ್ನ ಧೂಪವನ್ನು ನನ್ನ ಎಣ್ಣೆಯನ್ನು ಇಟ್ಟಿದ್ದ ಮೇಜನ್ನು ಸಿದ್ಧಮಾಡಿದೆ. [PE]
42. [PS]“ಅವಳ ಸಂಗಡ ವಿನೋದಪ್ರಿಯ ಸಮೂಹದ ಶಬ್ದವು ಇತ್ತು. ಸಾಧಾರಣ ಮನುಷ್ಯರ ಸಂಗಡ ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಆ ಮಹಿಳೆ ಮತ್ತು ಅವಳ ಸಹೋದರಿಯ ಕೈಗಳ ಮೇಲೆ ಕಡಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.
43. ಆಮೇಲೆ ನಾನು ಅವಳಿಗೆ ಹೇಳಿದ್ದೇನೆಂದರೆ, ‘ವ್ಯಭಿಚಾರದಿಂದ ಸವೆದು ಹೋದವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ?’
44. ಆದರೂ ವ್ಯಭಿಚಾರಿಣಿಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು.
45. ನೀತಿಯುಳ್ಳ ನ್ಯಾಯಾಧೀಶರು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು. ಏಕೆಂದರೆ ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ. [PE]
46. [PS]“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ, ಅವರನ್ನು ಸೂರೆಗೂ ಹೆದರಿಕೆಗೂ ಒಪ್ಪಿಸುವೆನು.
47. ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಖಡ್ಗಗಳಿಂದ ಕೊಯ್ದು ಅವರ ಪುತ್ರರನ್ನೂ ಪುತ್ರಿಯರನ್ನೂ ಕೊಂದುಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟುಬಿಡುವರು. [PE]
48. [PS]“ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕರ್ಮದ ಪ್ರಕಾರ ಮಾಡದಿರಲೆಂದು ಅವರಿಗೆ ಬೋಧಿಸಿ ದೇಶದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.
49. ನಿಮ್ಮ ದುಷ್ಕರ್ಮದ ಫಲವನ್ನು ನೀವೇ ಅನುಭವಿಸುವಂತೆ ಮಾಡುವೆ. ನೀವು ನಿಮ್ಮ ವಿಗ್ರಹಗಳ ಆರಾಧನೆಯಿಂದಾದ ಪಾಪಗಳನ್ನು ಹೊರುವಿರಿ. ಆಗ ಸಾರ್ವಭೌಮ ಯೆಹೋವ ದೇವರು ನಾನೇ ಎಂದು ತಿಳಿದುಕೊಳ್ಳುವಿರಿ.” [PE]
ಒಟ್ಟು 48 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 23 / 48
ಇಬ್ಬರು ವೇಶ್ಯೆ ಸಹೋದರಿಯರು 1 ಯೆಹೋವ ದೇವರ ವಾಕ್ಯವು ನನಗೆ ಬಂದಿತು, 2 “ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು; 3 ಅವರು ಈಜಿಪ್ಟಿನಲ್ಲಿ ವೇಶ್ಯೆ ಆದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲಾದವು; ಅವುಗಳ ತೊಟ್ಟುಗಳು ನಸುಕಲಾದವು. 4 ಅವರುಗಳ ಹೆಸರುಗಳೇನೆಂದರೆ ಒಹೊಲ ಎಂಬವಳು ದೊಡ್ಡವಳು. ಒಹೊಲೀಬ ಎಂಬವಳು ಚಿಕ್ಕವಳು. ಅವರು ನನ್ನವರಾಗಿದ್ದು ಪುತ್ರಪುತ್ರಿಯರನ್ನು ಹೆತ್ತರು; ಅವರ ಹೆಸರುಗಳಾದ ಒಹೊಲ ಎಂಬುದು ಸಮಾರ್ಯವು ಮತ್ತು ಒಹೊಲೀಬ ಎಂಬುದು ಯೆರೂಸಲೇಮು ಆಗಿದೆ. 5 “ಒಹೊಲಳು ಇನ್ನು ನನ್ನ ವಶವಾಗಿರುವಾಗಲೇ ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು ತನ್ನ ನೆರೆಯವರಾದ ಅಸ್ಸೀರಿಯದವರನ್ನು, 6 ಅವರೆಲ್ಲರೂ ನೀಲಿ ಬಣ್ಣದಿಂದ ಹೊದಿಕೆಯಾದ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಯೌವನಸ್ಥರೂ, ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು ಮೋಹಿಸಿದಳು. 7 ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಸ್ಸೀರಿಯದಲ್ಲಿನ ಗಣ್ಯವ್ಯಕ್ತಿಗಳಾಗಿದ್ದರು. ಅವಳು ಯಾರನ್ನು ಮೋಹಿಸಿದಳೋ, ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರ ಪಡಿಸಿಕೊಂಡಳು. 8 ಅವಳು ಈಜಿಪ್ಟಿನಲ್ಲಿ ಇದ್ದಾಗಿನಿಂದಲೂ ವ್ಯಭಿಚಾರವನ್ನು ಬಿಡಲಿಲ್ಲ. ಅವಳ ಯೌವನದಲ್ಲಿ ಪುರುಷರು ಅವಳ ಸಂಗಡ ಮಲಗಿದರು. ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ಅವಳ ಮೇಲೆ ವ್ಯಭಿಚಾರ ನಡೆಸಿದರು. 9 “ಆದ್ದರಿಂದ ನಾನು ಅವಳನ್ನು ಮೋಹಿಸಿದ ಅವಳ ಪ್ರಿಯರ ಕೈಗೆ ಅಸ್ಸೀರಿಯರ ಕೈಗೆ ಒಪ್ಪಿಸಿದೆನು. 10 ಅವರು ಅವಳ ಬೆತ್ತಲೆತನವನ್ನು ಬಯಲುಪಡಿಸಿದರು ಮತ್ತು ಅವಳ ಪುತ್ರರನ್ನೂ, ಅವಳ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು. 11 “ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ, ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆಸಿದಳು. 12 ಅವಳು ಯೋಧರಾದ ಅಸ್ಸೀರಿಯರನ್ನೂ, ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಉಡುಪು ಧರಿಸಿ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರಾಗಿಯೂ, ಅಪೇಕ್ಷಿಸತಕ್ಕ ಯೌವನಸ್ಥರಾಗಿಯೂ ಇರುವಂಥವರನ್ನು ಮೋಹಿಸಿದಳು. 13 ಅವಳೂ ಅಪವಿತ್ರಳಾದದ್ದನ್ನು ಕಂಡೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದರು. 14 “ಅವಳು ತನ್ನ ವ್ಯಭಿಚಾರತ್ವವನ್ನು ಇನ್ನೂ ಹೆಚ್ಚಿಸಿದಳು. ಗೋಡೆಯ ಮೇಲೆ ಕೆಂಪು ಬಣ್ಣದಿಂದ ಚಿತ್ರಿಸಲಾದ ಕಸ್ದೀಯರ ಪುರುಷರನ್ನು ನೋಡಿದಳು. ಅವರು, 15 ಚಿತ್ರದಲ್ಲಿನ ಪುರುಷರು ತಮ್ಮ ಸೊಂಟದ ಸುತ್ತಲೂ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು ಮತ್ತು ತಲೆಯ ಮೇಲೆ ಬೀಸುವ ಪೇಟಗಳನ್ನು ಹೊಂದಿದ್ದರು; ಅವರೆಲ್ಲರೂ ಬಾಬಿಲೋನ್ ನಿವಾಸಿಗಳಂತೆ, ಬಾಬಿಲೋನಿನ ರಥದ ಅಧಿಕಾರಿಗಳಂತೆ ಕಾಣುತ್ತಿದ್ದರು. 16 ಅವಳ ಕಣ್ಣುಗಳಿಂದ ಅವರನ್ನು ನೋಡಿದಾಗ ತಕ್ಷಣವೇ ಅವರನ್ನು ಮೋಹಿಸಿದಳು. ಅವರ ಬಳಿಗೆ ಕಸ್ದೀಯಕ್ಕೆ* ಕಸ್ದೀಯ ಅಥವಾ ಬಾಬಿಲೋನ್ ದೂತರನ್ನು ಕಳುಹಿಸಿದಳು. 17 ಆಗ ಬಾಬಿಲೋನಿನವರು ಅವರ ಪ್ರೀತಿಯ ಹಾಸಿಗೆಯ ಮೇಲೆ ಬಂದು ಆಕೆಯನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು. ಅವಳು ಅವರಿಂದ ಅಪವಿತ್ರಳಾದ ಮೇಲೆ ಅವರ ಬಗ್ಗೆ ಇವಳಿಗೇ ಜಿಗುಪ್ಸೆ ಹುಟ್ಟಿತು. 18 ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನ್ನು ಬಯಲು ಪಡಿಸಿಕೊಂಡಾಗ, ತನ್ನ ಜಿಗುಪ್ಸೆ ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು. 19 ಆದರೂ ಅವಳು ಈಜಿಪ್ಟ್ ದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿದಳು. 20 ಕತ್ತೆಗಳಂತೆ ಬೆದೆಯುಳ್ಳವರು ಕುದುರೆಗಳಂತೆ ದಾಟುವವರು ಆದ ತನ್ನ ಪ್ರಿಯರನ್ನು ಮೋಹಿಸಿದಳು. 21 ಹೀಗೆ ಈಜಿಪ್ಟಿನಿಂದ ನಿನ್ನ ಯೌವನದ ಸ್ತನಗಳ ತೊಟ್ಟುಗಳನ್ನು ಬತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ. 22 “ಆದ್ದರಿಂದ ಒಹೊಲೀಬಳೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ಯಾರಿಂದ ನಿನ್ನ ಮನಸ್ಸಿನಲ್ಲಿ ಜಿಗುಪ್ಸೆ ಹುಟ್ಟಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ವಿರೋಧವಾಗಿ ತರುತ್ತೇನೆ. 23 ಬಾಬಿಲೋನಿನವರು ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಎಲ್ಲಾ ಅಸ್ಸೀರಿಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿ ಹೊಂದಿದವರೂ ಎಲ್ಲರೂ ಕುದುರೆಗಳ ಮೇಲೆ ಬೀಳುವಂತೆ ಮಾಡುವೆನು. 24 ಅವರು ರಥಗಳ ಸಂಗಡವಾಗಿಯೂ ಬಂಡಿಗಳ ಸಂಗಡವಾಗಿಯೂ ಜನಗಳ ಸಮೂಹದ ಸಂಗಡವಾಗಿಯೂ ಬಲವುಳ್ಳವರಾಗಿ ತಮ್ಮ ಆಯುಧಗಳೊಂದಿಗೆ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣವನ್ನೂ ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯತೀರ್ಪಿನ ಅಧಿಕಾರ ಕೊಡುವೆನು. ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು. 25 ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು. ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು. ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದುಹಾಕು; ನಿನ್ನಲ್ಲಿ ಉಳಿದವರು ಖಡ್ಗದಿಂದ ಬೀಳುವರು. ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು. 26 ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು. 27 ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಈಜಿಪ್ಟಿನಲ್ಲಿ ಇದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು. ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಈಜಿಪ್ಟನ್ನು ಜ್ಞಾಪಕಕ್ಕೆ ತರದೇ ಇರುವೆ. 28 “ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಕುಂದಿಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ. 29 ಅವರು ನಿನ್ನ ವಿಷಯದಲ್ಲಿ ಹಗೆತೀರಿಸಿಕೊಳ್ಳುವರು. ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವುದು. 30 ನೀನು ಇತರ ಜನಾಂಗಗಳ ಹಿಂದೆ ಹೋಗಿ ವ್ಯಭಿಚಾರ ಮಾಡಿದ್ದರಿಂದಲೂ ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಿನಗೆ ಮಾಡುತ್ತೇನೆ. 31 ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ. 32 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವೆ. ನೀನು ಹಾಸ್ಯಕ್ಕೂ ನಿಂದೆಗೂ ಗುರಿಯಾಗುವೆ. ಅದೇ ನಿನಗೆ ಹೆಚ್ಚಾಗುವುದು. 33 ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶವೂ ಆಗುವುದು. ನೀನು ಮತ್ತಿನಿಂದಲೂ ದುಃಖದಿಂದಲೂ ತುಂಬಿರುವೆ. 34 ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವೆ; ಏಕೆಂದರೆ ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ. 35 36 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನಿನ ಮೇಲೆ ಮರೆಮಾಡಿದ ಮೇಲೆ ನೀನು ನಿನ್ನ ದುಷ್ಕರ್ಮವನ್ನೂ ವ್ಯಭಿಚಾರದ ಪ್ರತಿಫಲವನ್ನೂ ಅನುಭವಿಸಲೇಬೇಕು.” ಯೆಹೋವ ದೇವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸುವೆಯೋ? ಹೌದು, ಅವರ ಅಸಹ್ಯಕರ ಕೃತ್ಯಗಳನ್ನು ಅವರಿಗೆ ತಿಳಿಸು. 37 ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಇದೆ: ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ. ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ. 38 ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರಪಡಿಸಿ ನನ್ನ ವಿಶ್ರಾಂತಿಯ ದಿನಗಳನ್ನು ಕೆಡಿಸಿದ್ದಾರೆ. 39 ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದುಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವುದಕ್ಕೆ ಬಂದರು. ಅವರು ನನ್ನ ಆಲಯದ ಒಳಗೆ ಹೀಗೆ ಮಾಡಿದ್ದಾರೆ. 40 “ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರಿಗೆ ಕರೆಯ ಕಳುಹಿಸಿದ್ದಾರೆ. ಅವರು ಬಂದಾಗ ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನ ಆಭರಣಗಳಿಂದ ಅಲಂಕರಿಸಿಕೊಂಡೆ. 41 ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ನನ್ನ ಧೂಪವನ್ನು ನನ್ನ ಎಣ್ಣೆಯನ್ನು ಇಟ್ಟಿದ್ದ ಮೇಜನ್ನು ಸಿದ್ಧಮಾಡಿದೆ. 42 “ಅವಳ ಸಂಗಡ ವಿನೋದಪ್ರಿಯ ಸಮೂಹದ ಶಬ್ದವು ಇತ್ತು. ಸಾಧಾರಣ ಮನುಷ್ಯರ ಸಂಗಡ ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಆ ಮಹಿಳೆ ಮತ್ತು ಅವಳ ಸಹೋದರಿಯ ಕೈಗಳ ಮೇಲೆ ಕಡಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು. 43 ಆಮೇಲೆ ನಾನು ಅವಳಿಗೆ ಹೇಳಿದ್ದೇನೆಂದರೆ, ‘ವ್ಯಭಿಚಾರದಿಂದ ಸವೆದು ಹೋದವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ?’ 44 ಆದರೂ ವ್ಯಭಿಚಾರಿಣಿಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು. 45 ನೀತಿಯುಳ್ಳ ನ್ಯಾಯಾಧೀಶರು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು. ಏಕೆಂದರೆ ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ. 46 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ, ಅವರನ್ನು ಸೂರೆಗೂ ಹೆದರಿಕೆಗೂ ಒಪ್ಪಿಸುವೆನು. 47 ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಖಡ್ಗಗಳಿಂದ ಕೊಯ್ದು ಅವರ ಪುತ್ರರನ್ನೂ ಪುತ್ರಿಯರನ್ನೂ ಕೊಂದುಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟುಬಿಡುವರು. 48 “ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕರ್ಮದ ಪ್ರಕಾರ ಮಾಡದಿರಲೆಂದು ಅವರಿಗೆ ಬೋಧಿಸಿ ದೇಶದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು. 49 ನಿಮ್ಮ ದುಷ್ಕರ್ಮದ ಫಲವನ್ನು ನೀವೇ ಅನುಭವಿಸುವಂತೆ ಮಾಡುವೆ. ನೀವು ನಿಮ್ಮ ವಿಗ್ರಹಗಳ ಆರಾಧನೆಯಿಂದಾದ ಪಾಪಗಳನ್ನು ಹೊರುವಿರಿ. ಆಗ ಸಾರ್ವಭೌಮ ಯೆಹೋವ ದೇವರು ನಾನೇ ಎಂದು ತಿಳಿದುಕೊಳ್ಳುವಿರಿ.”
ಒಟ್ಟು 48 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 23 / 48
×

Alert

×

Kannada Letters Keypad References