1. {#1ಇಸ್ರಾಯೇಲಿನ ಸಂಪೂರ್ಣ ಪುನಃಸ್ಥಾಪನೆ } [PS]“ ‘ಇದಲ್ಲದೆ ನೀವು ದೇಶವನ್ನು ಚೀಟುಹಾಕಿ ಸೊತ್ತಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಯೆಹೋವ ದೇವರಿಗೆ ಕಾಣಿಕೆಯಾಗಿ ಕೊಡಬೇಕು. ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ. ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ.
2. ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಮತ್ತು ಅದರ ಸುತ್ತಲೂ ಸುಮಾರು ಇಪ್ಪತ್ತಾರು ಮೀಟರ್ ತೆರೆದ ಭೂಮಿ ಇರಬೇಕು. ಇರುವುದು.
3. ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಮತ್ತು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು.
4. ದೇಶದ ಪರಿಶುದ್ಧ ಭಾಗವು ಯೆಹೋವ ದೇವರಿಗೆ ಸೇವೆ ಮಾಡಲು ಸಮೀಪಿಸುವಂತೆ, ಪರಿಶುದ್ಧಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.
5. ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆ ಮಾಡುವ ಲೇವಿಯರಿಗೆ ತಮಗೆ ಸೊತ್ತಾಗಿ ಇಪ್ಪತ್ತು ಕೊಠಡಿಗಳಿಗಾಗಿ ಇರಬೇಕು. [PE]
6.
7. [PS]“ ‘ನೀವು ಪಟ್ಟಣದ ಸೊತ್ತನ್ನು ಕಾಣಿಕೆಯಾದ ಪರಿಶುದ್ಧಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು. ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವುದು. [PE][PS]“ ‘ಕಾಣಿಕೆಯಾದ ಪರಿಶುದ್ಧಭಾಗದ ಮುಂದೆಯೂ ಪಟ್ಟಣದ ಸೊತ್ತಿನ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು. ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಒಂದು ಗೋತ್ರದ ಸ್ವಾಸ್ತ್ಯದ ಉದ್ದಕ್ಕೆ ಸರಿಸಮಾನವಾಗಿರುವುದು.
8. ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸೊತ್ತಾಗಿರುವುದು. ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವ ಪಡಿಸುವುದೇ ಇಲ್ಲ. ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲಾಗುವುದು. [PE]
9. [PS]“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನೂ ಸುಲಿಗೆಯನ್ನೂ ಬಿಡಿರಿ. ನ್ಯಾಯವನ್ನೂ ನೀತಿಯನ್ನೂ ನಡೆಸಿರಿ. ನನ್ನ ಜನರನ್ನು ಓಡಿಸಬೇಡಿರಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
10. ನ್ಯಾಯವಾದ ತಕ್ಕಡಿಯೂ ನ್ಯಾಯವಾದ ಎಫಾವೂ[* ಎಫಾವೂ ಸುಮಾರು 22 ಲೀಟರ್ ] ನ್ಯಾಯವಾದ ಬಾತ್ [† ಬಾತ್ ಸುಮಾರು 22 ಲೀಟರ್ ] ಅಳತೆಯೂ ನಿಮಗಿರಬೇಕು.
11. ಎಫಾ ಎಂಬ ಧಾನ್ಯದ ಅಳತೆ ಮತ್ತು ಬತ್ ಎಂಬ ರಸದ್ರವ್ಯದ ಅಳತೆ ಒಂದೇ ಪ್ರಮಾಣವಾಗಿರಬೇಕು; ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಎಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಹೋಮೆರ್ ಎರಡಕ್ಕೂ ಪ್ರಮಾಣಿತ ಅಳತೆಗೆ ಸಂಬಂಧವಾಗಿರಬೇಕು.
12. ಒಂದು ಶೆಕೆಲ್ ಇಪ್ಪತ್ತು ಗೇರಾ ತೂಕವಾಗಿರಬೇಕು. ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು ಶೇಕೆಲು, ಇಪ್ಪತ್ತೈದು ಶೇಕೆಲು ಅಥವಾ ಹದಿನೈದು ಶೆಕೆಲ್ ತೂಕದ್ದಾಗಿರಲಿ. [PE]
13. [PS]“ ‘ಇದು ಸಮರ್ಪಿಸಬೇಕಾದ ವಿಶೇಷ ಕಾಣಿಕೆ: ನೀವು ಜವೆಗೋಧಿಯ ಓಮೆರಿನಲ್ಲಿ ಏಫದ ಆರನೆಯ ಪಾಲನ್ನು ಕಾಣಿಕೆಯಾಗಿ ಕೊಡಬೇಕು.
14. ಒಂದು ಬಾತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗ, ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಎಫಾ ಅಳತೆಯ ಆರನೆಯ ಒಂದು ಪಾಲು; ಒಂದು ಬಾತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ, ಒಂದು ಕೋರ್ ಅಂದರೆ, ಹತ್ತು ಬಾತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬಾತ್ ಅಳತೆಯ ಹತ್ತನೆಯ ಒಂದು ಪಾಲು; ಏಕೆಂದರೆ ಹತ್ತು ಬಾತ್ ಒಂದೇ ಓಮೆರ್.
15. ಇಸ್ರಾಯೇಲಿನ ನೀರಿರುವ ಹುಲ್ಲುಗಾವಲುಗಳಿಂದ ಇನ್ನೂರು ಮಂದಿಯ ಹಿಂಡಿನಿಂದ ಒಂದು ಕುರಿಯನ್ನು ತೆಗೆದುಕೊಳ್ಳಬೇಕು. ಇವುಗಳನ್ನು ಜನರಿಗಾಗಿ ಪ್ರಾಯಶ್ಚಿತ್ತವನ್ನು ಮಾಡಲು ಧಾನ್ಯಯಜ್ಞಗಳು, ದಹನಬಲಿಗಳು ಮತ್ತು ಸಮಾಧಾನದ ಅರ್ಪಣೆಗಳಿಗಾಗಿ ಬಳಸಲಾಗುವುದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
16. ದೇಶದಲ್ಲಿರುವ ಜನರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭುವಿಗಾಗಿ ಕೊಡಬೇಕು.
17. ಹಬ್ಬಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವಿಶ್ರಾಂತಿಯ ದಿನಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವುದು ಪ್ರಭುವಿನ ಕೆಲಸವಾಗಿರುವುದು. ಆತನು ಇಸ್ರಾಯೇಲ್ಯರಿಗೆ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಳನ್ನು, ಧಾನ್ಯದ ಅರ್ಪಣೆಗಳನ್ನು, ದಹನಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಒದಗಿಸುವನು. [PE]
18. [PS]“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೆಯ ಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡಬೇಕು.
19. ಯಾಜಕನು ದೋಷಪರಿಹಾರ ಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;
20. ತಿಳಿಯದೆ ಅಥವಾ ಅಜ್ಞಾನದಿಂದ ಪಾಪಮಾಡುವ ಪ್ರತಿಯೊಬ್ಬರಿಗೂ ತಿಂಗಳ ಏಳನೇ ದಿನದಲ್ಲಿ ನೀವು ಅದೇ ರೀತಿ ಮಾಡಬೇಕು; ಈ ರೀತಿಯಾಗಿ ನೀವು ದೇವಾಲಯಕ್ಕೆ ಪ್ರಾಯಶ್ಚಿತ್ತವನ್ನು ಮಾಡಬೇಕು. [PE]
21. [PS]“ ‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕಹಬ್ಬವು ಇರಬೇಕು. ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.
22. ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ದೋಷಪರಿಹಾರ ಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.
23. ಹಬ್ಬದ ಏಳು ದಿವಸಗಳಲ್ಲಿ ಪ್ರತಿದಿನವೂ ಅವನು ಯೆಹೋವ ದೇವರಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿದಿನವೂ ದೋಷಪರಿಹಾರ ಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು.
24. ಅವನು ಒಂದೊಂದು ಹೋರಿಗೆ ಮತ್ತು ಟಗರಿಗೆ ಐದು ಕಿಲೋಗ್ರಾಂ ಗೋಧಿಹಿಟ್ಟನ್ನೂ ಸುಮಾರು ಮೂರುವರೆ ಲೀಟರ್ ಎಣ್ಣೆಯನ್ನು ಧಾನ್ಯ ಸಮರ್ಪಣೆಯಾಗಿ ಅರ್ಪಿಸಬೇಕು. [PE]
25. [PS]“ ‘ಏಕೆಂದರೆ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕ ಬಲಿಪ್ರಾಣಿ, ದಹನಬಲಿಪ್ರಾಣಿ, ಧಾನ್ಯ ಸಮರ್ಪಣೆ, ಎಣ್ಣೆ ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು. [PE]