ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಗಲಾತ್ಯದವರಿಗೆ
1. [PS]ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ
2. ನನ್ನ ಜೊತೆಯಲ್ಲಿರುವ ಎಲ್ಲಾ ಪ್ರಿಯರೂ, [PE][PBR] [PS]ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದು: [PE][PBR]
3. [PS]ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಇರಲಿ.
4. ಈ ಯೇಸುವೇ ನಮ್ಮನ್ನು ಈಗಿನ ದುಷ್ಟ ಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗಾಗಿ ತಮ್ಮನ್ನೇ ಬಲಿಯಾಗಿ ಒಪ್ಪಿಸಿದರು.
5. ದೇವರಿಗೆ ಯುಗಯುಗಾಂತರಗಳಿಗೂ ಮಹಿಮೆಯಾಗಲಿ. ಆಮೆನ್. [PE][PBR]
6. {#1ಬೇರೆ ಸುವಾರ್ತೆ ಇಲ್ಲ } [PS]ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.
7. ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಗಲಿಬಿಲಿಗೆ ಒಳಪಡಿಸಿ, ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ವಕ್ರಪಡಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ.
8. ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೊಂದನ್ನು ನಾವೇ ಆಗಲಿ, ಪರಲೋಕದೊಳಗಿಂದ ಬಂದ ದೇವದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
9. ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ, ಅವನು ಶಾಪಗ್ರಸ್ತನಾಗಲಿ ಎಂದು ಮೊದಲು ಹೇಳಿದಂತೆಯೇ ಈಗಲೂ ನಾನು ಪುನಃ ಹೇಳುತ್ತೇನೆ. [PE]
10.
11. [PS]ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ. [PE]{#1ದೇವರಿಂದ ಕರೆಹೊಂದಿದ ಪೌಲ } [PS]ಪ್ರಿಯರೇ, ನಾನು ಸಾರಿದ ಸುವಾರ್ತೆಯು ಮಾನವೀಯವಾದದ್ದಲ್ಲವೆಂದು ನಿಮಗೆ ತಿಳಿಯಪಡಿಸುತ್ತೇನೆ.
12. ನಾನು ಅದನ್ನು ಯಾವ ಮನುಷ್ಯನಿಂದಲೂ ಪಡೆಯಲಿಲ್ಲ, ನನಗೆ ಯಾವ ಮನುಷ್ಯನೂ ಉಪದೇಶಿಸಲಿಲ್ಲ, ಆದರೆ ನಾನು ಅದನ್ನು ಕ್ರಿಸ್ತ ಯೇಸುವಿನ ಪ್ರಕಟನೆಯಿಂದಲೇ ಸ್ವೀಕರಿಸಿಕೊಂಡೆನು. [PE]
13. [PS]ನಾನು ಯೆಹೂದ್ಯ ವಿಶ್ವಾಸದಲ್ಲಿದ್ದಾಗ ನನ್ನ ಹಿಂದಿನ ನಡತೆಯನ್ನು ನೀವು ಕೇಳಿದ್ದೀರಷ್ಟೇ. ನಾನು ದೇವರ ಸಭೆಯನ್ನು ಮಿತಿಮೀರಿ ಹಿಂಸೆಪಡಿಸಿ ಹಾಳುಮಾಡಲು ಯತ್ನಿಸುತ್ತಿದ್ದೆನು.
14. ಇದಲ್ಲದೆ ನಾನು ನನ್ನ ಪಿತೃಗಳ ಸಂಪ್ರದಾಯಗಳಲ್ಲಿ ಅತ್ಯಂತ ಅಭಿಮಾನವುಳ್ಳವನಾಗಿ ಸಮಕಾಲಿಕರಾದ ನನ್ನ ಜನರೊಳಗೆ ಅನೇಕರಿಗಿಂತ ಯೆಹೂದ್ಯ ವಿಶ್ವಾಸದಲ್ಲಿ ಎಷ್ಟೋ ಪ್ರಗತಿಯನ್ನು ಹೊಂದಿದವನಾಗಿದ್ದೆನು.
15. ಆದರೆ ದೇವರು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತಮ್ಮ ಕೃಪೆಯ ಮೂಲಕ ನನ್ನನ್ನು ಕರೆದು,
16. ದೇವರು ತಮ್ಮ ಪುತ್ರನನ್ನು ನನ್ನಲ್ಲಿ ಪ್ರಕಟಿಸಿ, ಯೆಹೂದ್ಯರಲ್ಲದವರಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಮನಸ್ಸು ಮಾಡಿದರು. ಕೂಡಲೇ ದೇವರ ಪುತ್ರ ಆಗಿರುವವರ ಪ್ರಕಟಣೆಯ ತರುವಾಯ ನಾನು ಯಾವ ಮನುಷ್ಯರನ್ನು ವಿಚಾರಿಸಲಿಲ್ಲ.
17. ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ, ನಾನು ಅರೇಬಿಯಾಕ್ಕೆ ಹೋದೆನು. ಅನಂತರ ಪುನಃ ದಮಸ್ಕಕ್ಕೆ ಹಿಂದಿರುಗಿದೆನು. [PE]
18. [PS]ಮೂರು ವರ್ಷಗಳ ನಂತರವೇ ನಾನು ಕೇಫನನ್ನು[* ಅಥವಾ ಪೇತ್ರ ] ಪರಿಚಯಮಾಡಿಕೊಳ್ಳಲು ಯೆರೂಸಲೇಮಿಗೆ ಹೋಗಿ ಅವನೊಂದಿಗೆ ಹದಿನೈದು ದಿವಸ ಇದ್ದೆನು.
19. ಆದರೆ ಕರ್ತ ಯೇಸುವಿನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
20. ಈಗ ನಾನು ನಿಮಗೆ ಬರೆಯುತ್ತಿರುವ ವಿಷಯಗಳು ಸುಳ್ಳಲ್ಲ ಎಂದು ದೇವರ ಮುಂದೆ ನಾನು ನಿಶ್ಚಯವಾಗಿ ನಿಮಗೆ ಹೇಳುತ್ತೇನೆ. [PE]
21. [PS]ಆಮೇಲೆ ಸಿರಿಯಾ ಮತ್ತು ಕಿಲಿಕ್ಯ ಪ್ರಾಂತಗಳಿಗೆ ಬಂದೆನು.
22. ಆಗ ಕ್ರಿಸ್ತ ಯೇಸುವಿನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.
23. ಆದರೆ ಅವರು, “ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದ ಇವನು, ತಾನು ನಾಶಮಾಡಲು ಪ್ರಯತ್ನಿಸಿದ್ದ ವಿಶ್ವಾಸವನ್ನೇ ಈಗ ಪ್ರಸಂಗಿಸುತ್ತಿದ್ದಾನೆ,” ಎಂಬುದನ್ನು ಮಾತ್ರ ಕೇಳಿದ್ದರು.
24. ಅವರು ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು. [PE]
ಒಟ್ಟು 6 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 6
1 2 3 4 5 6
1 ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ 2 ನನ್ನ ಜೊತೆಯಲ್ಲಿರುವ ಎಲ್ಲಾ ಪ್ರಿಯರೂ, ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದು: 3 ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಇರಲಿ. 4 ಈ ಯೇಸುವೇ ನಮ್ಮನ್ನು ಈಗಿನ ದುಷ್ಟ ಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗಾಗಿ ತಮ್ಮನ್ನೇ ಬಲಿಯಾಗಿ ಒಪ್ಪಿಸಿದರು. 5 ದೇವರಿಗೆ ಯುಗಯುಗಾಂತರಗಳಿಗೂ ಮಹಿಮೆಯಾಗಲಿ. ಆಮೆನ್. ಬೇರೆ ಸುವಾರ್ತೆ ಇಲ್ಲ 6 ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ. 7 ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಗಲಿಬಿಲಿಗೆ ಒಳಪಡಿಸಿ, ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ವಕ್ರಪಡಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ. 8 ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೊಂದನ್ನು ನಾವೇ ಆಗಲಿ, ಪರಲೋಕದೊಳಗಿಂದ ಬಂದ ದೇವದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. 9 ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ, ಅವನು ಶಾಪಗ್ರಸ್ತನಾಗಲಿ ಎಂದು ಮೊದಲು ಹೇಳಿದಂತೆಯೇ ಈಗಲೂ ನಾನು ಪುನಃ ಹೇಳುತ್ತೇನೆ. 10 11 ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ. ದೇವರಿಂದ ಕರೆಹೊಂದಿದ ಪೌಲ ಪ್ರಿಯರೇ, ನಾನು ಸಾರಿದ ಸುವಾರ್ತೆಯು ಮಾನವೀಯವಾದದ್ದಲ್ಲವೆಂದು ನಿಮಗೆ ತಿಳಿಯಪಡಿಸುತ್ತೇನೆ. 12 ನಾನು ಅದನ್ನು ಯಾವ ಮನುಷ್ಯನಿಂದಲೂ ಪಡೆಯಲಿಲ್ಲ, ನನಗೆ ಯಾವ ಮನುಷ್ಯನೂ ಉಪದೇಶಿಸಲಿಲ್ಲ, ಆದರೆ ನಾನು ಅದನ್ನು ಕ್ರಿಸ್ತ ಯೇಸುವಿನ ಪ್ರಕಟನೆಯಿಂದಲೇ ಸ್ವೀಕರಿಸಿಕೊಂಡೆನು. 13 ನಾನು ಯೆಹೂದ್ಯ ವಿಶ್ವಾಸದಲ್ಲಿದ್ದಾಗ ನನ್ನ ಹಿಂದಿನ ನಡತೆಯನ್ನು ನೀವು ಕೇಳಿದ್ದೀರಷ್ಟೇ. ನಾನು ದೇವರ ಸಭೆಯನ್ನು ಮಿತಿಮೀರಿ ಹಿಂಸೆಪಡಿಸಿ ಹಾಳುಮಾಡಲು ಯತ್ನಿಸುತ್ತಿದ್ದೆನು. 14 ಇದಲ್ಲದೆ ನಾನು ನನ್ನ ಪಿತೃಗಳ ಸಂಪ್ರದಾಯಗಳಲ್ಲಿ ಅತ್ಯಂತ ಅಭಿಮಾನವುಳ್ಳವನಾಗಿ ಸಮಕಾಲಿಕರಾದ ನನ್ನ ಜನರೊಳಗೆ ಅನೇಕರಿಗಿಂತ ಯೆಹೂದ್ಯ ವಿಶ್ವಾಸದಲ್ಲಿ ಎಷ್ಟೋ ಪ್ರಗತಿಯನ್ನು ಹೊಂದಿದವನಾಗಿದ್ದೆನು. 15 ಆದರೆ ದೇವರು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತಮ್ಮ ಕೃಪೆಯ ಮೂಲಕ ನನ್ನನ್ನು ಕರೆದು, 16 ದೇವರು ತಮ್ಮ ಪುತ್ರನನ್ನು ನನ್ನಲ್ಲಿ ಪ್ರಕಟಿಸಿ, ಯೆಹೂದ್ಯರಲ್ಲದವರಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಮನಸ್ಸು ಮಾಡಿದರು. ಕೂಡಲೇ ದೇವರ ಪುತ್ರ ಆಗಿರುವವರ ಪ್ರಕಟಣೆಯ ತರುವಾಯ ನಾನು ಯಾವ ಮನುಷ್ಯರನ್ನು ವಿಚಾರಿಸಲಿಲ್ಲ. 17 ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ, ನಾನು ಅರೇಬಿಯಾಕ್ಕೆ ಹೋದೆನು. ಅನಂತರ ಪುನಃ ದಮಸ್ಕಕ್ಕೆ ಹಿಂದಿರುಗಿದೆನು. 18 ಮೂರು ವರ್ಷಗಳ ನಂತರವೇ ನಾನು ಕೇಫನನ್ನು* ಅಥವಾ ಪೇತ್ರ ಪರಿಚಯಮಾಡಿಕೊಳ್ಳಲು ಯೆರೂಸಲೇಮಿಗೆ ಹೋಗಿ ಅವನೊಂದಿಗೆ ಹದಿನೈದು ದಿವಸ ಇದ್ದೆನು. 19 ಆದರೆ ಕರ್ತ ಯೇಸುವಿನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ. 20 ಈಗ ನಾನು ನಿಮಗೆ ಬರೆಯುತ್ತಿರುವ ವಿಷಯಗಳು ಸುಳ್ಳಲ್ಲ ಎಂದು ದೇವರ ಮುಂದೆ ನಾನು ನಿಶ್ಚಯವಾಗಿ ನಿಮಗೆ ಹೇಳುತ್ತೇನೆ. 21 ಆಮೇಲೆ ಸಿರಿಯಾ ಮತ್ತು ಕಿಲಿಕ್ಯ ಪ್ರಾಂತಗಳಿಗೆ ಬಂದೆನು. 22 ಆಗ ಕ್ರಿಸ್ತ ಯೇಸುವಿನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ. 23 ಆದರೆ ಅವರು, “ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದ ಇವನು, ತಾನು ನಾಶಮಾಡಲು ಪ್ರಯತ್ನಿಸಿದ್ದ ವಿಶ್ವಾಸವನ್ನೇ ಈಗ ಪ್ರಸಂಗಿಸುತ್ತಿದ್ದಾನೆ,” ಎಂಬುದನ್ನು ಮಾತ್ರ ಕೇಳಿದ್ದರು. 24 ಅವರು ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
ಒಟ್ಟು 6 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 6
1 2 3 4 5 6
×

Alert

×

Kannada Letters Keypad References