1. [QS]ನಾನು ಕಾವಲುಗಾರನಾಗಿ ನಿಲ್ಲುವೆನು. [QE][QS2]ಕಾವಲು ಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. [QE][QS]ಯೆಹೋವ ದೇವರು ನನಗೆ ಏನು ಹೇಳುವರೋ, [QE][QS2]ಯಾವ ಉತ್ತರ ಕೊಡುವರೋ, ಎಂದು ಎದುರು ನೋಡುವೆನು. [QE]
2. {#1ಯೆಹೋವ ದೇವರ ಉತ್ತರ } [PS]ಆಗ ಯೆಹೋವ ದೇವರು ನನಗೆ ಉತ್ತರಕೊಟ್ಟರು. [PE][QS]ಪ್ರಕಟನೆಯನ್ನು ಬರೆ. [QE][QS2]ಅದನ್ನು ಓದುವವನು ಶೀಘ್ರವಾಗಿ ಓದುವಂತೆ, [QE][QS2]ಅದನ್ನು ಹಲಗೆಗಳ ಮೇಲೆ ಕೆತ್ತು. [QE]
3. [QS]ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. [QE][QS2]ಅದು ಅಂತ್ಯದ ಬಗ್ಗೆ ಮಾತಾಡುವುದು. [QE][QS2]ಅದು ಸುಳ್ಳಾಗದು. ಅದು ತಡವಾದರೂ, [QE][QS]ಅದಕ್ಕೆ ಕಾದುಕೊಂಡಿರು. [QE][QS2]ಏಕೆಂದರೆ ಅದು ತಡಮಾಡದೆ [QE][QS2]ನಿಶ್ಚಯವಾಗಿ ಬರುವುದು. [QE][PBR] [PBR]
4. [QS]ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ. [QE][QS2]ಆದರೆ ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು. [QE]
5. [QS]ಇದಲ್ಲದೆ ದ್ರಾಕ್ಷಾರಸವು ಮೋಸಕರ. [QE][QS2]ಅವನು ಅಹಂಕಾರಿ, ಎಂದಿಗೂ ವಿಶ್ರಾಂತಿ ಹೊಂದನು. [QE][QS]ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಳ್ಳುತ್ತಾನೆ. [QE][QS2]ಮರಣದ ಹಾಗಿದ್ದಾನೆ, ತೃಪ್ತಿಯಾಗುವುದಿಲ್ಲ; [QE][QS]ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; [QE][QS2]ಎಲ್ಲಾ ಜನರನ್ನು ತನ್ನ ಸೆರೆಯಾಳುಗಳಾಗಿ ಮಾಡಿಕೊಳ್ಳುತ್ತಾನೆ. [QE]
6. [PS]ಅವರೆಲ್ಲರೂ ಅವನನ್ನು ಅಪಹಾಸ್ಯದ ಮಾತುಗಳಿಂದ ಅವಮಾನ ಮಾಡುವುದಿಲ್ಲವೋ? [PE][QS]ಕದ್ದುಕೊಂಡ ವಸ್ತುಗಳನ್ನು ರಾಶಿಯಾಗಿ ಕೂಡಿಸಿಟ್ಟುಕೊಳ್ಳುವವನಿಗೆ [QE][QS2]ಅಕ್ರಮ ಮಾರ್ಗದಿಂದ ಐಶ್ವರ್ಯವಂತನಾಗಿರುವವನಿಗೆ ಕಷ್ಟ. [QE][QS2]ಇದೆಷ್ಟರವರೆಗೆ ಮುಂದುವರಿಯಬೇಕು? [QE]
7. [QS]ನಿನ್ನ ಸಾಲಗಾರರು ಕ್ಷಣಮಾತ್ರದಲ್ಲಿ ಏಳರೋ? [QE][QS2]ಅವರು ಎಚ್ಚರಗೊಂಡು ನಿನಗೆ ಬೆದರಿಕೆ ಹಾಕುವರೋ? [QE][QS2]ಆಗ ನೀನು ಅವರಿಗೆ ಸುಲಿಗೆಯಾಗುವೆ. [QE]
8. [QS]ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ, [QE][QS2]ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು. [QE][QS]ಏಕೆಂದರೆ ನೀನು ಮಾನವರ ರಕ್ತ ಸುರಿಸಿದ್ದಿ. [QE][QS2]ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿ ಇರುವುದೆಲ್ಲವನ್ನು ನಾಶಮಾಡಿದ್ದೀ. [QE][PBR]
9. [QS]ಅನ್ಯಾಯದ ಲಾಭದಿಂದ ತನ್ನ ನಿವಾಸ ಕಟ್ಟಿಕೊಳ್ಳುವವನಿಗೂ, [QE][QS2]ತನ್ನ ಗೂಡನ್ನು ಉನ್ನತದಲ್ಲಿಡುವವನಿಗೂ, [QE][QS2]ನಾಶದ ಹಿಡಿತದಿಂದ ತಪ್ಪಿಸಿಕೊಳ್ಳಬಯಸುವವನಿಗೂ ಕಷ್ಟ! [QE]
10. [QS]ನೀನು ಬಹು ಜನಾಂಗಗಳನ್ನು ನಿರ್ಮೂಲ ಮಾಡಿದ್ದು, [QE][QS2]ನಿನ್ನ ಕುಲಕ್ಕೆ ಅವಮಾನವನ್ನೇ ಆಲೋಚಿಸಿಕೊಂಡ ಹಾಗಾಯಿತು. [QE][QS2]ನಿನಗೆ ನೀನೇ ಕೆಡುಕು ಮಾಡಿಕೊಂಡಿದ್ದೀ. [QE]
11. [QS]ಗೋಡೆಯೊಳಗಿಂದ ಕಲ್ಲು ಕೂಗುತ್ತದೆ. [QE][QS2]ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ. [QE][PBR]
12. [QS]ಊರನ್ನು ನರಹತ್ಯದಿಂದ ಕಟ್ಟಿ, ಪಟ್ಟಣವನ್ನು [QE][QS2]ಅನ್ಯಾಯದಿಂದ ಸ್ಥಾಪಿಸುವವನಿಗೆ ಕಷ್ಟ! [QE]
13. [QS]ಜನರ ಶ್ರಮೆಯು ಬೆಂಕಿಗೆ ತುತ್ತಾಗುವುದು. [QE][QS2]ಜನಾಂಗಗಳು ವ್ಯರ್ಥವಾಗಿ ದಣಿದುಕೊಳ್ಳುತ್ತವೆ. [QE][QS2]ಇದು ಸೇನಾಧೀಶ್ವರ ಯೆಹೋವ ದೇವರ ಚಿತ್ತವಷ್ಟೆ. [QE]
14. [QS]ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, [QE][QS2]ಯೆಹೋವ ದೇವರ ಮಹಿಮೆಯ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು. [QE][PBR]
15. [QS]ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ, ನಿನ್ನ ನೆರೆಯವರಿಗೆ ಕುಡಿಸಿ, [QE][QS2]ಅವರ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, [QE][QS2]ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ! [QE]
16. [QS]ಮಹಿಮೆಯ ಬದಲಾಗಿ ನಾಚಿಕೆಯಿಂದ ನೀನು ತುಂಬಿರುವೆ. [QE][QS2]ಈಗ ನಿನ್ನ ಸರದಿ, ಕುಡಿದು ಬೆತ್ತಲೆಯಾಗು. [QE][QS]ಯೆಹೋವ ದೇವರ ಬಲಗೈಯಲ್ಲಿನ ಪಾತ್ರೆ ನಿನ್ನ ಕಡೆಗೆ ತಿರುಗುವುದು. [QE][QS2]ನಿನ್ನ ಘನತೆಯನ್ನು ಅವಮಾನವು ಮುಚ್ಚುವುದು. [QE]
17. [QS]ಲೆಬನೋನಿನ ಮೇಲೆ ಮಾಡಿದ ಬಲಾತ್ಕಾರವು ನಿನ್ನನ್ನು ಚಕಿತಗೊಳಿಸುವುದು. [QE][QS2]ಮೃಗಗಳ ನಾಶವು ನಿನ್ನನ್ನು ಹೆದರಿಸುವುದು. [QE][QS]ಏಕೆಂದರೆ ನೀನು ಮನುಷ್ಯರ ರಕ್ತ ಸುರಿಸಿದ್ದೀ; [QE][QS2]ನೀನು ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿರುವ ಎಲ್ಲವುಗಳನ್ನು ನಾಶಮಾಡಿದ್ದೀ. [QE][PBR]
18. [QS]“ಮನುಷ್ಯನು ಕೆತ್ತಿ ರೂಪಿಸಿದ ವಿಗ್ರಹದಿಂದ ಪ್ರಯೋಜನವೇನು? [QE][QS2]ಸುಳ್ಳನ್ನು ಬೋಧಿಸುವಂಥ ಪ್ರತಿಮೆಯ ಬೆಲೆಯೇನು? [QE][QS]ಅದನ್ನು ರೂಪಿಸಿದವನು, ತನ್ನ ಸ್ವಂತ ಸೃಷ್ಟಿಯನ್ನು ನಂಬುತ್ತಾನೆ. [QE][QS2]ಮಾತನಾಡದಂಥ ಮೂರ್ತಿಗಳನ್ನು ಅವನು ಮಾಡುತ್ತಾನೆ. [QE]
19. [QS]ಮರಕ್ಕೆ, ‘ಎಚ್ಚರವಾಗು!’ ಮೂಕವಾದ ಕಲ್ಲಿಗೆ, ‘ಎದ್ದೇಳು!’ ಎಂದು ಹೇಳುವವನಿಗೆ ಕಷ್ಟ! [QE][QS2]ಅದು ಮಾರ್ಗದರ್ಶನ ನೀಡುವುದೇ? [QE][QS]ಅದು ಬಂಗಾರ, ಬೆಳ್ಳಿಯಿಂದ ಹೊದಿಸಿದ್ದಾರೆ. [QE][QS2]ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.” [QE][PBR]
20. [QS]ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ. [QE][QS2]ಅವರ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ. [QE]