ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
1. {#1ಹೊಸ ಒಡಂಬಡಿಕೆಯ ಮಹಾಯಾಜಕ } [PS]ನಾವು ಈಗ ಹೇಳುವ ವಿಷಯಗಳ ಮುಖ್ಯಾಂಶ ಇದು: ಪರಲೋಕದೊಳಗೆ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಕುಳಿತುಕೊಂಡಿರುವಂಥ ಮಹಾಯಾಜಕ ಒಬ್ಬರು ನಮಗಿದ್ದಾರೆ.
2. ಕ್ರಿಸ್ತ ಯೇಸು ಆಗಿರುವ ಇವರು ಪವಿತ್ರ ಸ್ಥಾನದಲ್ಲಿ ಅಂದರೆ, ಮನುಷ್ಯರಿಂದಲ್ಲ ದೇವರೇ ನಿರ್ಮಿಸಿದ ಪವಿತ್ರ ಸ್ಥಾನದ ನಿಜ ಗುಡಾರದಲ್ಲಿ ಸೇವೆಮಾಡುವವರಾಗಿದ್ದಾರೆ. [PE]
3. [PS]ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಯೇಸುವಿಗೆ ಸಹ ಏನಾದರೂ ಇರುವುದು ಅವಶ್ಯವಾಗಿದೆ.
4. ಯೇಸು ಭೂಮಿಯ ಮೇಲೆ ಇರುವುದಾದರೆ ಯಾಜಕರೇ ಆಗುತ್ತಿರಲಿಲ್ಲ. ಏಕೆಂದರೆ ಮೋಶೆಯ ನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.
5. ಅವರು ಪರಲೋಕದಲ್ಲಿರುವವುಗಳ ನಿದರ್ಶನವೂ ಛಾಯೆಯೂ ಆಗಿರುವ ಆಲಯಗಳಲ್ಲಿ ಸೇವೆಯನ್ನು ನಡೆಸುವರು. ಇದರಂತೆಯೇ ಮೋಶೆಯು ಗುಡಾರವನ್ನು ಮಾಡುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು,”[* ವಿಮೋ 25:40 ] ಎಂದು ದೇವರಿಂದ ಎಚ್ಚರಿಕೆ ಕೊಡಲಾಗಿತ್ತಲ್ಲವೇ?
6. ಯೇಸುವಾದರೋ ಈಗ ಅದಕ್ಕಿಂತ ಶ್ರೇಷ್ಠ ಸೇವೆಯನ್ನು ಹೊಂದಿದವರಾಗಿದ್ದಾರೆ. ಅಷ್ಟೇ ಅಲ್ಲದೆ ಇವರು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಒಡಂಬಡಿಕೆಗೆ ಸಹ ಮಧ್ಯಸ್ಥರಾಗಿದ್ದಾರೆ. [PE]
7. [PS]ಆ ಮೊದಲನೆಯ ಒಡಂಬಡಿಕೆಯು ತಪ್ಪಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ.
8. ಆದರೆ ದೇವರು ಜನರಲ್ಲಿ ತಪ್ಪನ್ನು ಕಂಡುಹಿಡಿದು ಹೀಗೆಂದರು, [PE][QS]“ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ [QE][QS2]ಯೂದ ವಂಶದವರೊಂದಿಗೂ [QE][QS]ಒಂದು ಹೊಸ ಒಡಂಬಡಿಕೆಯನ್ನು [QE][QS2]ಮಾಡಿಕೊಳ್ಳುವ ದಿನಗಳು ಬರುವವು. [QE]
9. [QS]ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, [QE][QS2]ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು [QE][QS2]ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. [QE][QS]ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. [QE][QS2]ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, [QE][QS2]ಎಂದು ಕರ್ತದೇವರು ಹೇಳುತ್ತಾರೆ. [QE]
10. [QS]ಆ ದಿನಗಳ ತರುವಾಯ [QE][QS2]ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು: [QE][QS]ನಾನು ನನ್ನ ನಿಯಮಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. [QE][QS2]ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. [QE][QS]ನಾನು ಅವರಿಗೆ ದೇವರಾಗಿರುವೆನು. [QE][QS2]ಅವರು ನನಗೆ ಪ್ರಜೆಯಾಗಿರುವರು. [QE]
11. [QS]ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ, [QE][QS2]ತನ್ನ ಸಹೋದರನಿಗೂ, ‘ಕರ್ತದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. [QE][QS]ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ [QE][QS2]ಎಲ್ಲರೂ ನನ್ನನ್ನು ಅರಿತುಕೊಳ್ಳುವರು. [QE]
12. [QS]ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು [QE][QS2]ಮತ್ತು ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ, [QE][MS]ಎಂದು ಕರ್ತದೇವರು ನುಡಿಯುತ್ತಾರೆ.”[† ಯೆರೆ 31:31-34 ] [ME]
13. [PS]ಇಲ್ಲಿ ದೇವರು “ಹೊಸ ಒಡಂಬಡಿಕೆ” ಎಂದು ಹೇಳಿರುವಾಗ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿದ್ದಾರೆ. ಅದು ಹಳೆಯದಾಗುತ್ತಾ ಕ್ಷೀಣವಾಗಿ ಅಳಿದು ಹೋಗಲಿದೆ. [PE]
ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 13
1 2 3 4 5 6 7 8 9 10 11 12 13
ಹೊಸ ಒಡಂಬಡಿಕೆಯ ಮಹಾಯಾಜಕ 1 ನಾವು ಈಗ ಹೇಳುವ ವಿಷಯಗಳ ಮುಖ್ಯಾಂಶ ಇದು: ಪರಲೋಕದೊಳಗೆ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಕುಳಿತುಕೊಂಡಿರುವಂಥ ಮಹಾಯಾಜಕ ಒಬ್ಬರು ನಮಗಿದ್ದಾರೆ. 2 ಕ್ರಿಸ್ತ ಯೇಸು ಆಗಿರುವ ಇವರು ಪವಿತ್ರ ಸ್ಥಾನದಲ್ಲಿ ಅಂದರೆ, ಮನುಷ್ಯರಿಂದಲ್ಲ ದೇವರೇ ನಿರ್ಮಿಸಿದ ಪವಿತ್ರ ಸ್ಥಾನದ ನಿಜ ಗುಡಾರದಲ್ಲಿ ಸೇವೆಮಾಡುವವರಾಗಿದ್ದಾರೆ. 3 ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಯೇಸುವಿಗೆ ಸಹ ಏನಾದರೂ ಇರುವುದು ಅವಶ್ಯವಾಗಿದೆ. 4 ಯೇಸು ಭೂಮಿಯ ಮೇಲೆ ಇರುವುದಾದರೆ ಯಾಜಕರೇ ಆಗುತ್ತಿರಲಿಲ್ಲ. ಏಕೆಂದರೆ ಮೋಶೆಯ ನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ. 5 ಅವರು ಪರಲೋಕದಲ್ಲಿರುವವುಗಳ ನಿದರ್ಶನವೂ ಛಾಯೆಯೂ ಆಗಿರುವ ಆಲಯಗಳಲ್ಲಿ ಸೇವೆಯನ್ನು ನಡೆಸುವರು. ಇದರಂತೆಯೇ ಮೋಶೆಯು ಗುಡಾರವನ್ನು ಮಾಡುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು,”* ವಿಮೋ 25:40 ಎಂದು ದೇವರಿಂದ ಎಚ್ಚರಿಕೆ ಕೊಡಲಾಗಿತ್ತಲ್ಲವೇ? 6 ಯೇಸುವಾದರೋ ಈಗ ಅದಕ್ಕಿಂತ ಶ್ರೇಷ್ಠ ಸೇವೆಯನ್ನು ಹೊಂದಿದವರಾಗಿದ್ದಾರೆ. ಅಷ್ಟೇ ಅಲ್ಲದೆ ಇವರು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಒಡಂಬಡಿಕೆಗೆ ಸಹ ಮಧ್ಯಸ್ಥರಾಗಿದ್ದಾರೆ. 7 ಆ ಮೊದಲನೆಯ ಒಡಂಬಡಿಕೆಯು ತಪ್ಪಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ. 8 ಆದರೆ ದೇವರು ಜನರಲ್ಲಿ ತಪ್ಪನ್ನು ಕಂಡುಹಿಡಿದು ಹೀಗೆಂದರು, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು. 9 ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, ಎಂದು ಕರ್ತದೇವರು ಹೇಳುತ್ತಾರೆ. 10 ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು: ನಾನು ನನ್ನ ನಿಯಮಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು. 11 ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ, ತನ್ನ ಸಹೋದರನಿಗೂ, ‘ಕರ್ತದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. 12 ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ, ಎಂದು ಕರ್ತದೇವರು ನುಡಿಯುತ್ತಾರೆ.” ಯೆರೆ 31:31-34 13 ಇಲ್ಲಿ ದೇವರು “ಹೊಸ ಒಡಂಬಡಿಕೆ” ಎಂದು ಹೇಳಿರುವಾಗ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿದ್ದಾರೆ. ಅದು ಹಳೆಯದಾಗುತ್ತಾ ಕ್ಷೀಣವಾಗಿ ಅಳಿದು ಹೋಗಲಿದೆ.
ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 13
1 2 3 4 5 6 7 8 9 10 11 12 13
×

Alert

×

Kannada Letters Keypad References