1. {#1ಇಸ್ರಾಯೇಲಿನ ಮೇಲೆ ಯೆಹೋವ ದೇವರ ರೌದ್ರ } [QS]“ಪೂರ್ವದಲ್ಲಿ ಎಫ್ರಾಯೀಮು ಮಾತನಾಡುವಾಗ, [QE][QS2]ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು. [QE][QS2]ಆದರೆ ಬಾಳನ ಆರಾಧನೆಯಲ್ಲಿ ಅವನು ಅಪರಾಧಿಯಾಗಿ ಸತ್ತನು. [QE]
2. [QS]ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ. [QE][QS2]ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ, [QE][QS]ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. [QE][QS2]ಅದೆಲ್ಲವೂ ಕಮ್ಮಾರರ ಕೈಕೆಲಸವೇ. [QE][QS]ಅವರು ನರಬಲಿಯನ್ನು ಅರ್ಪಿಸುತ್ತಾರೆ, [QE][QS2]ಬಸವನ ವಿಗ್ರಹಕ್ಕೆ ಮುದ್ದಿಡುತ್ತಾರೆ,” [QE][QS2]ಎಂದು ಜನರು ಅವರ ಬಗ್ಗೆ ಹೇಳುತ್ತಾರೆ. [QE]
3. [QS]ಆದ್ದರಿಂದ ಅವರು ಪ್ರಾತಃಕಾಲದ ಮಂಜಿನ ಹಾಗೆಯೂ, [QE][QS2]ಬೇಗನೆ ಮಾಯವಾಗುವ ಇಬ್ಬನಿಯ ಹಾಗೆಯೂ, [QE][QS2]ಸುಳಿಗಾಳಿಯು ಕಣದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ, [QE][QS2]ಚಿಮಿಣಿಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು. [QE][PBR]
4. [QS]ಆದರೂ ನಾನು ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದ, [QE][QS2]ನಾನೇ ನಿನ್ನ ದೇವರಾಗಿರುವ ಯೆಹೋವನಾಗಿದ್ದೇನೆ. [QE][QS]ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು. [QE][QS2]ಏಕೆಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ. [QE]
5. [QS]ನಾನು ನಿನ್ನನ್ನು ಮರುಭೂಮಿಯಲ್ಲಿಯೂ, [QE][QS2]ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ. [QE]
6. [QS]ನಾನು ಅವರಿಗೆ ಆಹಾರ ಕೊಟ್ಟೆನು, ಅವರು ತೃಪ್ತರಾದರು. [QE][QS2]ಅವರು ತೃಪ್ತರಾದಾಗ, ಅಹಂಕಾರಿಗಳಾದರು, [QE][QS2]ಅನಂತರ ಅವರು ನನ್ನನ್ನು ಮರೆತುಬಿಟ್ಟರು. [QE]
7. [QS]ಆದ್ದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು. [QE][QS2]ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚುಹಾಕುವೆನು. [QE]
8. [QS]ನಾನು ಮರಿಯನ್ನು ಕಳೆದುಕೊಂಡ ಕರಡಿಯಂತೆ ಅವರನ್ನು ಎದುರುಗೊಳ್ಳುವೆನು. [QE][QS2]ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. [QE][QS]ನಾನು ಸಿಂಹದ ಹಾಗೆ ಅವರನ್ನು ನುಂಗುವೆನು. [QE][QS2]ಕಾಡುಮೃಗವು ಅವರನ್ನು ಸೀಳಿ ಹಾಕುವುದು. [QE][PBR]
9. [QS]“ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ [QE][QS2]ತಿರುಗಿಬಿದ್ದದರಿಂದ ನಾಶವಾಗಿದ್ದೀ. [QE]
10. [QS]ಈಗ ನಿನ್ನ ಅರಸನು ಎಲ್ಲಿ? [QE][QS2]ನಿನ್ನ ಪಟ್ಟಣಗಳೆಲ್ಲಾ ನಿನ್ನವರನ್ನು ಉದ್ಧರಿಸುವನೋ? [QE][QS]ನನಗೆ ರಾಜ್ಯವನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು [QE][QS2]ಎಂದು ನನ್ನನ್ನು ಕೇಳಿಕೊಂಡಿಯಷ್ಟೆ. [QE][QS2]ಆ ನ್ಯಾಯಾಧಿಪತಿಗಳು ಎಲ್ಲಿ? [QE]
11. [QS]ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು [QE][QS2]ಮತ್ತು ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು. [QE]
12. [QS]ಎಫ್ರಾಯೀಮಿನ ದುಷ್ಕೃತ್ಯವು ಸಂಗ್ರಹವಾಗಿದೆ. [QE][QS2]ಅವನ ಪಾಪವು ದಾಖಲೆಯಾಗಿದೆ. [QE]
13. [QS]ಎಫ್ರಾಯೀಮಿಗೆ ಪ್ರಸವವೇದನೆ ಬಂದಿದೆ. [QE][QS2]ಅಷ್ಟೇ ಅಲ್ಲ. [QE][QS]ಅದೊಂದು ಮಂಕು ಮಗುವಿನಂತಿದೆ. [QE][QS2]ಹುಟ್ಟಿ, ಹೊರಗೆ ಬರಬಹುದಾದರೂ, [QE][QS2]ಅವನು ಬಾರದೆ ಇದ್ದಾನೆ. [QE][PBR]
14. [QS]“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. [QE][QS2]ಮರಣದಿಂದ ಅವರನ್ನು ಬಿಡಿಸುವೆನು. [QE][QS]ಮರಣವೇ ನಿನ್ನ ಉಪದ್ರವ ಎಲ್ಲಿ? [QE][QS2]ಪಾತಾಳವೇ ನಿನ್ನ ವಿನಾಶವೆಲ್ಲಿ? [QE][PBR] [QS]“ಅನುಕಂಪವು ನನ್ನಿಂದ ದೂರವಾಗಿದೆ. [QE]
2. [QS2]ಎಫ್ರಾಯೀಮು ತನ್ನ ಸಹೋದರರಲ್ಲಿ ಫಲ ಸಮೃದ್ಧವಾಗಿದ್ದರೂ, [QE][QS]ಕಾಡಿನಿಂದ ಯೆಹೋವ ದೇವರು ಬೀಸಮಾಡುವ [QE][QS2]ಪೂರ್ವ ಗಾಳಿಯು ಬರಲು, [QE][QS]ಅವನ ಬುಗ್ಗೆಯು ಬತ್ತುವುದು. [QE][QS2]ಅವನ ಒರತೆಯು ಒಣಗುವುದು. [QE][QS]ಅವನ ಬೊಕ್ಕಸಗಳ ನಿಧಿಯನ್ನು [QE][QS2]ಶತ್ರುಗಳು ಸೂರೆಮಾಡುವರು. [QE]
16. [QS]ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ, [QE][QS2]ತನ್ನ ದೋಷಫಲವನ್ನು ಅನುಭವಿಸಲೇಬೇಕು. [QE][QS]ಅದರ ಜನರು ಖಡ್ಗದಿಂದ ಹತರಾಗುವರು, [QE][QS2]ವೈರಿಗಳು ಅವಳ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. [QE][QS2]ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.” [QE]