ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಹೋಶೇ
1. {#1ಆಶೀರ್ವಾದಕ್ಕಾಗಿ ಪಶ್ಚಾತ್ತಾಪ ಪಡುತ್ತಾರೆ } [QS]ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. [QE][QS2]ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ. [QE]
2. [QS]ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, [QE][QS2]ಯೆಹೋವ ದೇವರ ಕಡೆಗೆ ತಿರುಗಿಕೊಂಡು, [QE][QS]ಅವರಿಗೆ ಹೇಳಿರಿ: [QE][QS2]“ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, [QE][QS]ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. [QE][QS2]ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು. [QE]
3. [QS]ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ. [QE][QS2]ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ. [QE][QS]ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ, [QE][QS2]‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ. [QE][QS2]ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.” [QE][PBR]
4. [QS]“ನಾನು ಅವರ ಹಿಂಜಾರುವಿಕೆಯನ್ನು ಸ್ವಸ್ಥ ಮಾಡುವೆನು. [QE][QS2]ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. [QE][QS2]ಏಕೆಂದರೆ ನನ್ನ ಕೋಪವು ಅವರ ಕಡೆಯಿಂದ ತಿರುಗಿಕೊಂಡಿದೆ. [QE]
5. [QS]ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. [QE][QS2]ಅವನು ತಾವರೆಯ ಹಾಗೆ ಬೆಳೆಯುವನು. [QE][QS]ತನ್ನ ಬೇರುಗಳನ್ನು ಲೆಬನೋನಿನ [QE][QS2]ಹಾಗೆ ಆಳಕ್ಕೆ ಹರಡುವನು. [QE]
2. [QS2]ಅವನ ಕೊಂಬೆಗಳು ಹರಡಿಕೊಂಡು, [QE][QS]ಅವನ ಸೌಂದರ್ಯವು ಎಣ್ಣೆಮರಗಳ ಹಾಗೆಯೂ [QE][QS2]ಅವನ ಪರಿಮಳವು ಲೆಬನೋನಿನ ದೇವದಾರಿನ ಹಾಗೆಯೂ ಇರುವುದು. [QE]
7. [QS]ಆತನ ನೆರಳಿನಲ್ಲಿ ಜನರು ವಾಸಿಸುವರು, [QE][QS2]ಧಾನ್ಯದ ಹಾಗೆ ಜೀವಿಸುವರು, [QE][QS]ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು. [QE][QS2]ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು. [QE]
8. [QS]ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? [QE][QS2]ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. [QE][QS]ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. [QE][QS2]ನಿನ್ನ ಫಲವು ನನ್ನಿಂದ ಬರುವುದು.” [QE][PBR]
9. [QS]ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. [QE][QS2]ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. [QE][QS]ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. [QE][QS2]ನೀತಿವಂತರು ಅದರಲ್ಲಿ ನಡೆಯುವರು. [QE][QS2]ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು. [QE]
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 14
1 2 3 4 5 6 7 8 9 10 11 12 13 14
ಆಶೀರ್ವಾದಕ್ಕಾಗಿ ಪಶ್ಚಾತ್ತಾಪ ಪಡುತ್ತಾರೆ 1 ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ. 2 ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು. 3 ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ. ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ. ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ, ‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ. ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.” 4 “ನಾನು ಅವರ ಹಿಂಜಾರುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಏಕೆಂದರೆ ನನ್ನ ಕೋಪವು ಅವರ ಕಡೆಯಿಂದ ತಿರುಗಿಕೊಂಡಿದೆ. 5 ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು. ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಆಳಕ್ಕೆ ಹರಡುವನು. 2 ಅವನ ಕೊಂಬೆಗಳು ಹರಡಿಕೊಂಡು, ಅವನ ಸೌಂದರ್ಯವು ಎಣ್ಣೆಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ದೇವದಾರಿನ ಹಾಗೆಯೂ ಇರುವುದು. 7 ಆತನ ನೆರಳಿನಲ್ಲಿ ಜನರು ವಾಸಿಸುವರು, ಧಾನ್ಯದ ಹಾಗೆ ಜೀವಿಸುವರು, ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು. ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು. 8 ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.” 9 ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 14
1 2 3 4 5 6 7 8 9 10 11 12 13 14
×

Alert

×

Kannada Letters Keypad References