1. {#1ಇಸ್ರಾಯೇಲರ ವಿರುದ್ಧ ತೀರ್ಪು } [QS]“ಯಾಜಕರೇ, ಇದನ್ನು ನೀವು ಕೇಳಿರಿ; [QE][QS2]ಇಸ್ರಾಯೇಲಿನ ಮನೆತನದವರೇ ಕೇಳಿಸಿಕೊಳ್ಳಿರಿ; [QE][QS]ಅರಸನ ಮನೆಯವರೇ ಕಿವಿಗೊಡಿರಿ. [QE][QS2]ನೀವು ಮಿಚ್ಪದಲ್ಲಿ ಉರುಲಾಗಿಯೂ, [QE][QS]ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದ ಕಾರಣ [QE][QS2]ನಿಮಗೆ ವಿರುದ್ಧವಾಗಿ ಈ ನ್ಯಾಯತೀರ್ಪು ಬಂದಿದೆ. [QE]
2. [QS]ನನಗೆ ತಿರುಗಿಬಿದ್ದವರು ಅಗಾಧವಾದ ಕೊಲೆಯನ್ನು ಮಾಡುವುದರಲ್ಲಿ ಮಗ್ನರಾಗಿದ್ದರೆ. [QE][QS2]ಆದರೂ ನಾನು ಅವರೆಲ್ಲರನ್ನು ಶಿಕ್ಷಿಸುವವನಾಗಿದ್ದೇನೆ. [QE]
3. [QS]ನಾನು ಎಫ್ರಾಯೀಮನ್ನು ಬಲ್ಲೆನು, [QE][QS2]ಇಸ್ರಾಯೇಲು ನನಗೆ ಮರೆಯಾದದ್ದಲ್ಲ. [QE][QS]ಏಕೆಂದರೆ ಎಫ್ರಾಯೀಮೇ, ನೀನು ಈಗಲೇ ವ್ಯಭಿಚಾರ ಮಾಡಲು ತಿರುಗಿಕೊಂಡಿದ್ದೀ. [QE][QS2]ಇಸ್ರಾಯೇಲು ಸಹ ಅಪವಿತ್ರವಾಯಿತು. [QE][PBR]
4. [QS]“ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳದಂತೆ, [QE][QS2]ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. [QE][QS]ವ್ಯಭಿಚಾರದ ಆತ್ಮವು ಅವರ ಹೃದಯದಲ್ಲಿದೆ. [QE][QS2]ಅವರು ಯೆಹೋವ ದೇವರನ್ನು ಸ್ವೀಕರಿಸಿಕೊಳ್ಳುವುದಿಲ್ಲ. [QE]
5. [QS]ಇಸ್ರಾಯೇಲಿನ ಗರ್ವವು ಅವರ ಮುಖದ ಮುಂದೆ ಸಾಕ್ಷಿಕೊಡುತ್ತದೆ. [QE][QS2]ಇಸ್ರಾಯೇಲು ಮತ್ತು ಎಫ್ರಾಯೀಮು ತಮ್ಮ ಪಾಪದಲ್ಲಿ ಎಡವಿ ಬೀಳುವವು. [QE][QS2]ಯೆಹೂದವು ಸಹ ಅವರೊಂದಿಗೆ ಬೀಳುವುದು. [QE]
6. [QS]ಅವರು ಯೆಹೋವ ದೇವರನ್ನು [QE][QS2]ಹುಡುಕುವುದಕ್ಕೆ ತಮ್ಮ ದನಕುರಿಗಳೊಂದಿಗೂ ಹೋಗುವರು. [QE][QS]ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡಿದ್ದರಿಂದ, [QE][QS2]ಅವರು ಆತನನ್ನು ಕಾಣುವುದೇ ಇಲ್ಲ. [QE]
7. [QS]ಅವರು ಯೆಹೋವ ದೇವರಿಗೆ ಅಪನಂಬಿಗಸ್ತರಾಗಿದ್ದಾರೆ. [QE][QS2]ಅವರು ವ್ಯಭಿಚಾರದ ಮಕ್ಕಳನ್ನು ಪಡೆದಿದ್ದಾರೆ. [QE][QS]ಅವರು ತಮ್ಮ ಅಮಾವಾಸ್ಯೆ ಹಬ್ಬಗಳನ್ನು ಆಚರಿಸಿದಾಗ, [QE][QS2]ಅವರ ಹೊಲಗಳು ನುಂಗಿಬಿಡಲಾಗುವವು. [QE][PBR]
8. [QS]“ಗಿಬೆಯದಲ್ಲಿ ತುತೂರಿಯನ್ನೂ [QE][QS2]ರಾಮದಲ್ಲಿ ಕೊಂಬನ್ನೂ ಊದಿರಿ. [QE][QS]ಬೆನ್ಯಾಮೀನೇ, ನಿನ್ನ ಹಿಂದೆ ನೋಡು! [QE][QS2]ಬೇತಾವೆನಿನಲ್ಲಿ ಗಟ್ಟಿಯಾಗಿ ಕೂಗು. [QE]
9. [QS]ಎಫ್ರಾಯೀಮು ಗದರಿಸುವ [QE][QS2]ದಿವಸದಲ್ಲೇ ಹಾಳಾಗುವುದು. [QE][QS]ಇಸ್ರಾಯೇಲಿನ ಗೋತ್ರಗಳಲ್ಲಿ [QE][QS2]ನಾನು ನಿಶ್ಚಯವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ. [QE]
10. [QS]ಯೆಹೂದದ ನಾಯಕರು [QE][QS2]ಮೇರೆಗಳನ್ನು ಸರಿಸುವವರ ಹಾಗೆ ಇದ್ದರು. [QE][QS]ಅವರ ಮೇಲೆ, [QE][QS2]ನೀರಿನ ಪ್ರವಾಹದಂತೆ ನನ್ನ ಕೋಪವನ್ನು ಸುರಿಸುವೆನು. [QE]
11. [QS]ಎಫ್ರಾಯೀಮು, ವಿಗ್ರಹಗಳನ್ನು ಅನುಸರಿಸಲು ಮನಸ್ಸು ಮಾಡಿದ ಕಾರಣ, [QE][QS2]ಅವನು ನ್ಯಾಯತೀರ್ಪಿಗೆ ಗುರಿಯಾಗಿ, ಹಿಂಸೆಗೆ ಒಳಗಾದನು. [QE]
12. [QS]ನಾನು ಎಫ್ರಾಯೀಮಿಗೆ ನುಸಿಯ ಹಾಗೆಯೂ, [QE][QS2]ಯೆಹೂದದ ಮನೆತನದವರಿಗೆ ಕೊಳೆಯುವಿಕೆಯ ಹಾಗೆಯೂ ಇರುವೆನು. [QE][PBR]
13. [QS]“ಎಫ್ರಾಯೀಮು ತನ್ನ ರೋಗವನ್ನು [QE][QS2]ಯೆಹೂದವು ತನ್ನ ಗಾಯವನ್ನು ನೋಡಿದಾಗ, [QE][QS]ಎಫ್ರಾಯೀಮ್ ಅಸ್ಸೀರಿಯಕ್ಕೆ ತಿರುಗಿ, [QE][QS2]ಸಹಾಯಕ್ಕಾಗಿ ಮಹಾ ಅರಸನ ಬಳಿಗೆ ಕಳುಹಿಸಿತು. [QE][QS]ಆದರೆ ನಿಮ್ಮನ್ನು ಗುಣಪಡಿಸಲು [QE][QS2]ಅವನು ಶಕ್ತನಲ್ಲ. [QE][QS2]ನಿಮ್ಮ ಗಾಯವನ್ನು ಗುಣಪಡಿಸಲಾರನು. [QE]
14. [QS]ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, [QE][QS2]ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. [QE][QS]ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. [QE][QS2]ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು. [QE]
15. [QS]ಅಪರಾಧಗಳನ್ನು ಅರಿಕೆಮಾಡಿ, [QE][QS2]ನನ್ನ ಮುಖವನ್ನು ಹುಡುಕುವವರೆಗೂ, [QE][QS2]ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. [QE][QS]ಅವರ ಕಷ್ಟದಲ್ಲಿ [QE][QS2]ಅವರು ನನ್ನನ್ನು ಬೇಗ ಹುಡುಕುವರು.” [QE]