1. [QS]ಅನೀತಿಯ ನೇಮಕಗಳನ್ನು ನೇಮಿಸಿ, [QE][QS2]ಕ್ರೂರವಾದ ಕಾನೂನುಗಳನ್ನು ಬರೆಯುವವರಿಗೆ ಕಷ್ಟ! [QE]
2. [QS]ಇವರು ವಿಧವೆಯರನ್ನು ಸೂರೆಮಾಡಿ, [QE][QS2]ದಿಕ್ಕಿಲ್ಲದವರಿಂದ ಸುಲಿದುಕೊಂಡು [QE][QS]ದೀನರಿಗೆ ನ್ಯಾಯವನ್ನು ತಪ್ಪಿಸಿ, [QE][QS2]ನನ್ನ ಜನರಲ್ಲಿ ಬಡವರ ನ್ಯಾಯವನ್ನು ತೆಗೆಯಬೇಕೆಂದಿದ್ದಾರೆ. [QE]
3. [QS]ವಿಚಾರಣೆಯ ದಿನದಲ್ಲಿಯೂ, [QE][QS2]ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? [QE][QS]ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? [QE][QS2]ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ? [QE]
4. [QS]ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, [QE][QS2]ಹತರಾಗಿರುವವರ ಕೆಳಗೆ ಬಿದ್ದಿರುವುದೇ ಇವರ ಗತಿ. [QE][PBR] [QS]ಏಕೆಂದರೆ, ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, [QE][QS2]ಅವರ ಕೈ ಇನ್ನೂ ಚಾಚಿಯೇ ಇದೆ. [QE]
5. {#1ಅಸ್ಸೀರಿಯದ ಮೇಲೆ ದೇವರ ದಂಡನೆ } [QS]“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, [QE][QS2]ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ. [QE]
6. [QS]ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, [QE][QS2]ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, [QE][QS]ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ [QE][QS2]ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು. [QE]
7. [QS]ಅದರ ಅಭಿಪ್ರಾಯವೋ ಹಾಗಲ್ಲ. [QE][QS2]ಅದರ ಹೃದಯವು ಈ ಪ್ರಕಾರ ಆಲೋಚಿಸುವುದಿಲ್ಲ. [QE][QS]ಜನಾಂಗಗಳನ್ನು ಕಡಿದುಬಿಡುವುದು ಕೊಂಚವಾಗಿ ಅಲ್ಲ. [QE][QS2]ಆದರೆ ನಾಶಮಾಡುವುದು ಅದರ ಹೃದಯದ ಉದ್ದೇಶವು. [QE]
8. [QS]ಏಕೆಂದರೆ ಅವನು, ‘ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ? [QE]
2. [QS2]ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ? [QE][QS]ಹಮಾತ್ ಅರ್ಪಾದಿನ ಹಾಗಲ್ಲವೇ? [QE][QS2]ಸಮಾರ್ಯವು ದಮಸ್ಕದ ಹಾಗಲ್ಲವೋ? [QE]
10. [QS]ಯೆರೂಸಲೇಮಿನಲ್ಲಿಯೂ ಸಮಾರ್ಯದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು [QE][QS2]ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ, [QE]
11. [QS]ನಾನು ಸಮಾರ್ಯ ಮತ್ತು ಅದರ ವಿಗ್ರಹಗಳಿಗೆ ಮಾಡಿದಂತೆಯೇ [QE][QS2]ಯೆರೂಸಲೇಮಿಗೆ ಮತ್ತು ಅದರ ವಿಗ್ರಹಗಳಿಗೆ ಮಾಡುತ್ತೇನೆಯೇ?’ ” [QE]
12. [PS]ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”
13. ಏಕೆಂದರೆ ಅಸ್ಸೀರಿಯ ತನ್ನೊಳಗೆ ಹೀಗೆ ಅಂದುಕೊಂಡನು, [PE][QS]“ ‘ನನ್ನ ಕೈಯ ಬಲದಿಂದಲೂ ನನ್ನ ಜ್ಞಾನದಿಂದಲೂ ಅದನ್ನು ಮಾಡಿದೆ. [QE][QS2]ಏಕೆಂದರೆ, ನಾನು ವಿವೇಕಿ. ಜನಾಂಗಗಳ ಮೇರೆಗಳನ್ನು ಕಿತ್ತು, [QE][QS]ಅವರ ನಿಧಿಗಳನ್ನು ಕೊಳ್ಳೆಹೊಡೆದು, [QE][QS2]ಅದರ ಅರಸರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. [QE]
14. [QS]ಜನರ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ; [QE][QS2]ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಕೂಡಿಸುವಂತೆ, [QE][QS]ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. [QE][QS2]ರೆಕ್ಕೆಯಾಡಿಸಿ ಬಾಯಿತೆರೆದು [QE][QS2]ಕೀಚುಗುಟ್ಟಲು ಯಾರೂ ಇರಲಿಲ್ಲ.’ ” [QE][PBR]
15. [QS]ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? [QE][QS2]ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿಕೊಂಡೀತೆ? [QE][QS]ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಕೋಲು ಹಿಡಿದವನನ್ನೇ ಹೊಡೆದಂತಾಯಿತು! [QE][QS2]ನಿರ್ಜೀವ ಬೆತ್ತ ಸಜೀವ ಮನುಷ್ಯನನ್ನೇ ಬಡಿದಂತಾಯಿತು! [QE]
16. [QS]ಆದಕಾರಣ ಸೇನಾಧೀಶ್ವರ ಯೆಹೋವ ದೇವರು ಅವನ ಕೊಬ್ಬಿದ ಯೋಧರಿಗೆ ಕ್ಷಯವನ್ನು ಉಂಟುಮಾಡುವರು, [QE][QS2]ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಕೆಳಗೆ ಹತ್ತಿಕೊಳ್ಳುವುದು. [QE]
17. [QS]ಇಸ್ರಾಯೇಲಿನ ಬೆಳಕು ಬೆಂಕಿಯಾಗುವುದು, [QE][QS2]ಅದರ ಪರಿಶುದ್ಧರು ಜ್ವಾಲೆಯಂತಿರುವರು, [QE][QS]ಅದು ಒಂದೇ ದಿನದಲ್ಲಿ ಅವನ ಮುಳ್ಳು, [QE][QS2]ದತ್ತೂರಿಗಳನ್ನು ದಹಿಸಿ ನುಂಗಿಬಿಡುವುದು. [QE]
18. [QS]ದೇಹಾತ್ಮದಂಥ ಅದರ ಉದ್ಯಾನವನವನ್ನೂ, [QE][QS2]ಫಲಭರಿತ ತೋಟದ ವೈಭವವನ್ನು ನಿರ್ಮೂಲ ಮಾಡುವುದು. [QE][QS2]ದೇಶವೋ ರೋಗಿಯಂತೆ ನಾಶವಾಗುವುದು. [QE]
19. [QS]ಅವನ ಉಳಿದ ವನವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆಯಾಗಿರುವುದು. [QE]
20. {#1ಇಸ್ರಾಯೇಲರಲ್ಲಿ ಉಳಿದವರು } [QS]ಆ ದಿನದಲ್ಲಿ ಇಸ್ರಾಯೇಲರಲ್ಲಿ ಉಳಿದವರೂ, [QE][QS2]ಯಾಕೋಬಿನ ಮನೆತನದಿಂದ [QE][QS]ತಪ್ಪಿಸಿಕೊಂಡವರೂ ಇನ್ನು ಮೇಲೆ [QE][QS2]ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು, [QE][QS]ಇಸ್ರಾಯೇಲಿನ ಪರಿಶುದ್ಧರಾದ ಯೆಹೋವ ದೇವರ [QE][QS2]ಸತ್ಯವಾಗಿ ಆಧಾರಮಾಡಿಕೊಳ್ಳುವರು. [QE]
21. [QS]ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ [QE][QS2]ಪರಾಕ್ರಮಿಯಾದ ದೇವರ ಕಡೆಗೆ ಹಿಂದಿರುಗುವರು. [QE]
22. [QS]ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ, [QE][QS2]ಅವರಲ್ಲಿ ಉಳಿದವರು ಮಾತ್ರ ಹಿಂದಿರುಗುವರು. [QE][QS]ಅವರ ಅಳಿವು ಶಾಸನಬದ್ಧವಾದುದು; [QE][QS2]ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು. [QE]
23. [QS]ಏಕೆಂದರೆ ಸೇನಾಧೀಶ್ವರ ಯೆಹೋವ ದೇವರೆಂಬ ಕರ್ತ ಆಗಿರುವವರು, ಎಲ್ಲಾ ದೇಶದ [QE][QS2]ಮಧ್ಯದಲ್ಲಿ ತಿಳಿಸಿದ ವಿನಾಶವನ್ನು ಉಂಟುಮಾಡುವರು. [QE]
24. [PS]ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: [PE][QS]ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, [QE][QS2]ಈಜಿಪ್ಟಿನವರಂತೆ ನಿಮ್ಮನ್ನು ಕೋಲಿನಿಂದ ಹೊಡೆದು, [QE][QS]ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು [QE][QS2]ಎತ್ತುವ ಅಸ್ಸೀರಿಯದವರಿಗೆ ಭಯಪಡಬೇಡಿರಿ. [QE]
25. [QS]ನನ್ನ ಕೋಪವು ಅವರ ದಂಡನೆಗಾಗುವುದು; [QE][QS2]ಆದ್ದರಿಂದ ಇನ್ನು ಸ್ವಲ್ಪಕಾಲದಲ್ಲಿ ಕೋಪವು ತೀರಿಹೋಗುವುದು. [QE][PBR]
26. [QS]ಸೇನಾಧೀಶ್ವರ ಯೆಹೋವ ದೇವರು [QE][QS2]ಓರೇಬ್ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ, [QE][QS]ಅವರು ಕೋಲನ್ನು ಸಮುದ್ರದ ಮೇಲೆ ಚಾಚಿ, [QE][QS2]ಈಜಿಪ್ಟಿನವರ ಮೇಲೆ ಎತ್ತಿದಂತೆ ಎತ್ತುವರು. [QE]
27. [QS]ಆ ದಿನದಲ್ಲಿ ಅವರು ಹೊರಿಸಿದ ಹೊರೆಯು [QE][QS2]ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು [QE][QS]ನಿಮ್ಮ ಕುತ್ತಿಗೆಯಿಂದಲೂ ತೊಲಗುವುದು [QE][QS2]ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು. [QE][PBR]
28. [QS]ಅವರು ಅಯ್ಯಾಥಿಗೆ ಬಂದರು. [QE][QS2]ಮಿಗ್ರೋನನ್ನು ಹಾದು ಹೋಗಿ, [QE][QS2]ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟಿದ್ದಾರೆ. [QE]
29. [QS]ಅವರು ಕಣಿವೆಯನ್ನು ದಾಟಿದ್ದಾರೆ; [QE][QS2]ಗಿಬೆಯದಲ್ಲಿ ಇಳುಕೊಂಡಿದ್ದಾರೆ. [QE][QS]ರಾಮಾ ಜನತೆ ಹೆದರುತ್ತಿದೆ; [QE][QS2]ಸೌಲನ ಗಿಬೆಯದ ಜನತೆ ಓಡಿಹೋಗಿದೆ. [QE]
30. [QS]ಗಲ್ಲೀಮ್ ಮಗಳೇ, ನಿನ್ನ ಸ್ವರವೆತ್ತಿ ಕೂಗು; [QE][QS2]ಬಡ ಅನಾತೋತೇ, [QE][QS2]ಲಯೆಷಿನವರೆಗೂ ಕೇಳಿಸುವಂತೆ ಕೂಗು. [QE]
31. [QS]ಮದ್ಮೇನ ದಿಕ್ಕುಪಾಲಾಯಿತು. [QE][QS2]ಗೆಬೀಮಿನ ನಿವಾಸಿಗಳು ಓಡಿಹೋಗಲು ಕೂಡಿಕೊಂಡರು. [QE]
32. [QS]ಆ ದಿನದಲ್ಲಿ ಅವರು ನೋಬಿನಲ್ಲಿ ಇಳಿದುಕೊಳ್ಳುವರು. [QE][QS2]ಚೀಯೋನ್ ನಗರಿಯ ಪರ್ವತದ ಕಡೆಗೆ, [QE][QS]ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ. [QE][PBR]
33. [QS]ಇಗೋ, ಕರ್ತದೇವರು ಆಗಿರುವ ಸೇನಾಧೀಶ್ವರ ಯೆಹೋವ ದೇವರು [QE][QS2]ಭಯಂಕರವಾಗಿ ಕೊಂಬೆಯನ್ನು ಕತ್ತರಿಸುವರು. [QE][QS]ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವುವು, [QE][QS2]ಎತ್ತರದ ಮರಗಳನ್ನು ನೆಲಕ್ಕೆ ಉರುಳಿಸುವರು. [QE]
34. [QS]ಅವರು ಅಡವಿಯ ಪೊದೆಗಳನ್ನು ಕೊಡಲಿಯಿಂದ ಕಡಿದುಬಿಡುವರು. [QE][QS2]ಲೆಬನೋನು ಪರಾಕ್ರಮಿಯಾಗಿರುವವರ ಮುಂದೆ ಬಿದ್ದುಹೋಗುವುದು. [QE]