1. {#1ಇಷಯನ ಕೊಂಬೆ } [QS]ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು [QE][QS2]ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು. [QE]
2. [QS]ಅವನ ಮೇಲೆ ಯೆಹೋವ ದೇವರ ಆತ್ಮ, [QE][QS2]ಜ್ಞಾನ ಮತ್ತು ವಿವೇಕದಾಯಕ ಆತ್ಮ, [QE][QS2]ಸಮಾಲೋಚನೆ ಮತ್ತು ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, [QE][QS2]ತಿಳುವಳಿಕೆ ಮತ್ತು ಯೆಹೋವ ದೇವರ ಭಯದ ಆತ್ಮ, [QE]
3. [QS]ಅವರು ಯೆಹೋವ ದೇವರ ಭಯದಲ್ಲಿ ಆನಂದಿಸುವರು. [QE][PBR] [QS]ಅವರು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ, [QE][QS2]ತಮ್ಮ ಕಿವಿಗಳ ಕೇಳ್ವಿಕೆಯ ಪ್ರಕಾರವೂ ತೀರ್ಪು ಮಾಡುವುದಿಲ್ಲ. [QE]
4. [QS]ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. [QE][QS2]ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, [QE][QS]ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. [QE][QS2]ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು. [QE]
5. [QS]ನೀತಿಯೇ ಅವರಿಗೆ ನಡುಕಟ್ಟು, [QE][QS2]ನಂಬಿಗಸ್ತಿಕೆಯೇ ಅವರ ಸೊಂಟದ ಪಟ್ಟಿ. [QE][PBR]
6. [QS]ತೋಳವು ಕುರಿಯ ಸಂಗಡ ವಾಸಿಸುವುದು; [QE][QS2]ಚಿರತೆಯು ಮೇಕೆ ಮರಿಯೊಂದಿಗೆ ಮಲಗುವುದು; [QE][QS]ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವುವು; [QE][QS2]ಇವುಗಳನ್ನು ಒಂದು ಪುಟ್ಟ ಮಗುವು ನಡೆಸುವುದು. [QE]
7. [QS]ಹಸುವು ಕರಡಿಯ ಸಂಗಡ ಮೇಯುವುವು; [QE][QS2]ಅವುಗಳ ಮರಿಗಳು ಜೊತೆಯಾಗಿ ಮಲಗುವುವು; [QE][QS2]ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯುವುದು. [QE]
8. [QS]ಹಸುಳೆಯು ನಾಗರ ಹಾವಿನ ಹುತ್ತದ ಮೇಲೆ ಆಡುವುದು [QE][QS2]ಮತ್ತು ಪುಟ್ಟ ಮಗುವು ಹಾವಿನ ಬಿಲದ ಒಳಗೆ ಕೈ ಹಾಕುವುದು. [QE]
9. [QS]ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, [QE][QS2]ಯಾರೂ ಹಾಳುಮಾಡುವುದಿಲ್ಲ. [QE][QS]ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, [QE][QS2]ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು. [QE]
10. [PS]ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.
11. ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು. [PE]
12. [QS]ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ [QE][QS2]ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. [QE][QS]ಯೆಹೂದದಿಂದ ಚದರಿದವರನ್ನು [QE][QS2]ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು. [QE]
13. [QS]ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗಿ, [QE][QS2]ಯೆಹೂದದ ವಿರೋಧಿಗಳು ಇಲ್ಲದಂತಾಗುವರು. [QE][QS]ಹೀಗೆ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚು ಪಡುವುದಿಲ್ಲ; [QE][QS2]ಯೆಹೂದವು ಎಫ್ರಾಯೀಮಿಗೆ ವಿರೋಧವಾಗಿರುವುದಿಲ್ಲ. [QE]
14. [QS]ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಟಿಯರ ಇಳಿಜಾರು ಪ್ರದೇಶದ ಮೇಲೆ ಎರಗುವರು. [QE][QS2]ಅವರು ಜೊತೆಯಾಗಿ ಪೂರ್ವದವರನ್ನು ಸೂರೆ ಮಾಡುವರು, [QE][QS]ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು [QE][QS2]ದಾಳಿಮಾಡುವರು ಮತ್ತು ಅಮ್ಮೋನಿಯರು ಅವರಿಗೆ ಅಧೀನರಾಗುವರು. [QE]
15. [QS]ಯೆಹೋವ ದೇವರು ಈಜಿಪ್ಟಿನ ಸಮುದ್ರದ ಕೊಲ್ಲಿಯನ್ನು [QE][QS2]ಸಂಪೂರ್ಣವಾಗಿ ತೆಗೆದುಹಾಕುವರು, [QE][QS]ಅವರು ತಮ್ಮ ಉಷ್ಣಗಾಳಿಯಿಂದ [QE][QS2]ಯೂಫ್ರೇಟೀಸ್ ನದಿಯ ಮೇಲೆ ಕೈಯನ್ನು ಝಾಡಿಸಿ, [QE][QS]ಅದನ್ನು ಏಳು ಹೊಳೆಗಳಾಗಿ ಒಡೆದು, [QE][QS2]ಮನುಷ್ಯರ ಕೆರಗಳು ನೆನೆಯದಂತೆ ದಾಟಿಸುವರು. [QE]
16. [QS]ಇದಲ್ಲದೆ ಇಸ್ರಾಯೇಲರು ಈಜಿಪ್ಟ್ ದೇಶದಿಂದ [QE][QS2]ಹೊರಟು ಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ [QE][QS]ಹಾಗೆಯೇ ಅಸ್ಸೀರಿಯದಿಂದ ತಪ್ಪಿಸಿಕೊಂಡು ಬರುವ [QE][QS2]ತಮ್ಮ ಉಳಿದ ಜನರಿಗೆ ವಿಶಾಲವಾದ ಮಾರ್ಗವು ಇರುವುದು. [QE]