1. {#1ಬಾಬಿಲೋನಿನ ವಿರುದ್ಧ ಪ್ರವಾದನೆ }
2. [PS]ಆಮೋಚನ ಮಗ ಯೆಶಾಯನಿಗೆ ಬಾಬಿಲೋನಿನ ವಿಷಯವಾಗಿ ಬಂದ ಪ್ರವಾದನೆ: [PE][QS]ಶತ್ರುಗಳು ಬಂದು ಶ್ರೇಷ್ಠರ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ [QE][QS2]ನೀವು ಧ್ವಜವನ್ನೆತ್ತಿ [QE][QS]ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ [QE][QS2]ಜೋರಾಗಿ ಕೂಗಿ ಕರೆಯಿರಿ. [QE]
3. [QS]ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ, ನನ್ನ ಜಯದಲ್ಲಿ ಉಲ್ಲಾಸಿಸುವವರನ್ನೂ, [QE][QS2]ನನ್ನ ಶೂರರನ್ನೂ ಸಹ [QE][QS2]ನನ್ನ ಕೋಪವನ್ನು ತೆಗೆದುಕೊಂಡು ಹೋಗಲು ಕರೆದಿದ್ದೇನೆ. [QE][PBR]
4. [QS]ಬಹು ಸಮೂಹವು ಇದ್ದಂತೆ [QE][QS2]ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ. [QE][QS]ಒಟ್ಟಿಗೆ ಕೂಡಿಕೊಂಡ [QE][QS2]ರಾಜ್ಯಗಳ ಜನಾಂಗಗಳ ಆರ್ಭಟ, [QE][QS]ಸೇನಾಧೀಶ್ವರ ಯೆಹೋವ ದೇವರು [QE][QS2]ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾರೆ. [QE]
5. [QS]ಯೆಹೋವ ದೇವರು ಮತ್ತು ಅವರ ರೋಷಕ್ಕೆ [QE][QS2]ಆಯುಧಗಳಾದವರು ದೂರದೇಶದಿಂದ ಎಂದರೆ, [QE][QS]ಆಕಾಶಮಂಡಲದ ಕಟ್ಟಕಡೆಯಿಂದ [QE][QS2]ದೇಶವನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾರೆ. [QE][PBR]
6. [QS]ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. [QE][QS2]ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು. [QE]
7. [QS]ಆದಕಾರಣ ಎಲ್ಲಾ ಕೈಗಳು ಜೋಲು ಬೀಳುವುವು [QE][QS2]ಮತ್ತು ಪ್ರತಿಯೊಬ್ಬನ ಹೃದಯವು ಕರಗುವುದು. [QE]
8. [QS]ಅವರು ಭಯಪಡುವರು. [QE][QS2]ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವುವು. [QE][QS2]ಪ್ರಸವವೇದನೆಯಲ್ಲಿರುವ ಸ್ತ್ರೀಯರಂತೆ ಸಂಕಟಪಡುವರು. [QE][QS]ಅವರು ಒಬ್ಬರಿಗೊಬ್ಬರು ಭ್ರಮೆ ಪಡುವರು. [QE][QS2]ಅವರ ಮುಖಗಳು ಜ್ವಾಲೆಯಂತಿರುವುವು. [QE][PBR]
9. [QS]ಇಗೋ, ಯೆಹೋವ ದೇವರ ದಿನವು ಬರುತ್ತದೆ. [QE][QS2]ಅದು ಭೂಮಿಯನ್ನು ಹಾಳು ಮಾಡುವುದಕ್ಕೂ, [QE][QS]ಅಲ್ಲಿಂದ ಪಾಪಿಗಳನ್ನು ನಿರ್ಮೂಲ ಮಾಡುವುದಕ್ಕೂ, [QE][QS2]ಕಡುಕೋಪದಿಂದಲೂ, ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವುದು. [QE]
10. [QS]ಏಕೆಂದರೆ, ಆಕಾಶದ ನಕ್ಷತ್ರಗಳು [QE][QS2]ಮತ್ತು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ. [QE][QS]ಸೂರ್ಯನು ಮೂಡುತ್ತಲೇ ಕತ್ತಲಾಗುವನು. [QE][QS2]ಚಂದ್ರನು ತನ್ನ ಬೆಳಕನ್ನು ಕೊಡುವುದಿಲ್ಲ. [QE]
11. [QS]ಅವರ ಕೆಟ್ಟ ಕಾರ್ಯಗಳಿಗೋಸ್ಕರವೂ, [QE][QS2]ದುಷ್ಟರ ಅಪರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸುವೆನು, [QE][QS]ಗರ್ವಿಷ್ಠರ ಅಹಂಕಾರವನ್ನು ನಿಲ್ಲಿಸಿಬಿಡುವೆನು. [QE][QS2]ಭಯಂಕರವಾದವರ ಹೆಮ್ಮೆಯನ್ನು ತಗ್ಗಿಸುವೆನು. [QE]
12. [QS]ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ, [QE][QS2]ಓಫೀರ್ ಬಂಗಾರಕ್ಕಿಂತಲೂ ಜನರು ವಿರಳವಾಗಿರುವಂತೆ ಮಾಡುವೆನು. [QE]
13. [QS]ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರ ಕೋಪವೂ, [QE][QS2]ಅವರ ತೀಕ್ಷ್ಣರೋಷವೂ ಪ್ರಕಟವಾಗುವ ಆ ದಿನದಂದು, [QE][QS]ಆಕಾಶಮಂಡಲ ನಡುಗುವುದು. [QE][QS2]ಭೂಮಂಡಲ ಅದರ ಸ್ಥಳದಿಂದ ಕದಲುವುದು. [QE][PBR]
14. [QS]ಅದು ಅಟ್ಟಿದ ಜಿಂಕೆಯಂತೆಯೂ, [QE][QS2]ಕುರುಬರಿಲ್ಲದ ಕುರಿಗಳಂತೆಯೂ ಇರುವುದು. [QE][QS]ಅವರಲ್ಲಿ ಪ್ರತಿಯೊಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು; [QE][QS2]ಪ್ರತಿಯೊಬ್ಬನು ತನ್ನ ಸ್ವದೇಶಕ್ಕೆ ಓಡಿಹೋಗುವನು. [QE]
15. [QS]ಸಿಕ್ಕಿದ ಪ್ರತಿಯೊಬ್ಬನೂ ಇರಿತಕ್ಕೆ ಗುರಿಯಾಗುವನು. [QE][QS2]ಅಟ್ಟಿಹಿಡಿಯಲಾದ ಪ್ರತಿಯೊಬ್ಬನೂ ಖಡ್ಗಕ್ಕೆ ತುತ್ತಾಗುವನು. [QE]
16. [QS]ಅವರ ಮಕ್ಕಳೂ ಸಹ ಅವರ ಕಣ್ಣೆದುರಿಗೆ ಹತರಾಗುವರು. [QE][QS2]ಅವರ ಮನೆಗಳು ಸೂರೆಮಾಡಲಾಗುವುದು. ಅವರ ಹೆಂಡತಿಯರು ಅತ್ಯಾಚಾರಕ್ಕೆ ಈಡಾಗುವರು. [QE][PBR]
17. [QS]ಇಗೋ, ಬೆಳ್ಳಿಯನ್ನು ಲಕ್ಷಿಸದೆ, [QE][QS2]ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು [QE][QS2]ಅವರಿಗೆ ವಿರೋಧವಾಗಿ ನಾನು ಎಬ್ಬಿಸುವೆನು. [QE]
18. [QS]ಅವರ ಬಿಲ್ಲುಗಳು ಸಹ ಯುವಕರನ್ನು ಸಂಹರಿಸುವುವು. [QE][QS2]ಇವರು ಹಸುಳೆಗಳನ್ನು ಕರುಣಿಸರು. [QE][QS2]ಇವರು ಮಕ್ಕಳನ್ನು ಕನಿಕರಿಸುವುದಿಲ್ಲ. [QE]
19. [QS]ರಾಜ್ಯಗಳ ಘನತೆಯೂ, [QE][QS2]ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬಿಲೋನನ್ನು [QE][QS]ದೇವರು ಸೊದೋಮ್ ಗೊಮೋರಗಳನ್ನು [QE][QS2]ಕೆಡವಿಬಿಟ್ಟಂತೆ ಕೆಡವಿಬಿಡುವನು. [QE]
20. [QS]ಅದು ಎಂದಿಗೂ ನಿವಾಸ ಸ್ಥಳವಾಗದು. [QE][QS2]ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; [QE][QS]ಯಾವ ಅರಬಿಯನೂ ಗುಡಾರಹಾಕನು. [QE][QS2]ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು. [QE]
21. [QS]ಆದರೆ ಕಾಡುಮೃಗಗಳು ಅಲ್ಲಿ ಮಲಗುವುವು. [QE][QS2]ಅವರ ಮನೆಗಳು ನರಿಗಳಿಂದ ತುಂಬಿರುವುವು, [QE][QS]ಅಲ್ಲಿ ಗೂಬೆಗಳು ವಾಸಿಸುವುವು [QE][QS2]ಮತ್ತು ಕಾಡುಮೇಕೆಗಳು ಅಲ್ಲಿ ಕುಣಿದಾಡುವುವು. [QE]
22. [QS]ಅವರ ಕೋಣೆಗಳಲ್ಲಿ ತೋಳಗಳು ಕೂಗುವುವು, [QE][QS2]ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ನರಿಗಳು ವಾಸಿಸುವುವು. [QE][QS]ಬಾಬಿಲೋನಿಗೆ ಕಾಲವು ಸಮೀಪಿಸಿತು. [QE][QS2]ಇನ್ನು ಅದರ ದಿನಗಳು ಮುಂದುವರಿಯುವುದಿಲ್ಲ. [QE][PBR] [PBR]