ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಯೆಶಾಯ
1. {#1ಈಜಿಪ್ಟ್ ಹಾಗೂ ಕೂಷಿನ ವಿರೋಧವಾದ ಪ್ರವಾದನೆ } [PS]ಅಸ್ಸೀರಿಯದ ಅರಸನಾದ ಸರ್ಗೋನನು ಕಳುಹಿಸಿದ ವರ್ಷದಲ್ಲಿ ಪ್ರಮುಖ ಸೇನಾಪತಿ, ಅಷ್ಡೋದಿಗೆ ಬಂದು ಅದನ್ನು ಮುತ್ತಿಗೆ ಹಾಕಿ ಆಕ್ರಮಿಸಿಕೊಂಡನು.
2. ಅದೇ ಸಮಯದಲ್ಲಿ ಯೆಹೋವ ದೇವರು ಆಮೋಚನ ಮಗ ಯೆಶಾಯನಿಗೆ, “ನಿನ್ನ ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಕೆರಗಳನ್ನು ತೆಗೆದಿಡು,” ಎಂದು ಹೇಳಿದರು. ಅವನು ಹಾಗೆ ಮಾಡಿ, ಬೆತ್ತಲೆಯಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು. [PE]
3. [PS]ಆಗ ಯೆಹೋವ ದೇವರು, “ನನ್ನ ಸೇವಕನಾದ ಯೆಶಾಯನು ಈಜಿಪ್ಟ್ ಮತ್ತು ಕೂಷಿಗು, ಗುರುತಾಗಿಯೂ, ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.
4. ಹಾಗೆಯೇ ಅಸ್ಸೀರಿಯದ ಅರಸನು ಈಜಿಪ್ಟಿನವರನ್ನು ಬಂಧಿಸಿ, ಕೂಷಿನ ಕೈದಿಗಳನ್ನು ಅವರು ದೊಡ್ಡವರಾಗಲೀ, ಸಣ್ಣವರಾಗಲೀ ಬಟ್ಟೆ, ಕೆರಗಳಿಲ್ಲದೆ ಈಜಿಪ್ಟಿನ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.
5. ಆಗ ನನ್ನ ಜನರು ಅವನು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಳ್ಳುತ್ತಿದ್ದ ಈಜಿಪ್ಟಿನ ವಿಷಯವಾಗಿಯೂ, ನಿರಾಶರಾಗಿ ನಾಚಿಕೆಪಡುವರು.
6. ಆ ದಿನದಲ್ಲಿ ಕರಾವಳಿಯ ನಿವಾಸಿಗಳು, ‘ಇಗೋ, ಅಸ್ಸೀರಿಯದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ, ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?’ ಎಂದುಕೊಳ್ಳುವರು.” [PE]
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 20 / 66
ಈಜಿಪ್ಟ್ ಹಾಗೂ ಕೂಷಿನ ವಿರೋಧವಾದ ಪ್ರವಾದನೆ 1 ಅಸ್ಸೀರಿಯದ ಅರಸನಾದ ಸರ್ಗೋನನು ಕಳುಹಿಸಿದ ವರ್ಷದಲ್ಲಿ ಪ್ರಮುಖ ಸೇನಾಪತಿ, ಅಷ್ಡೋದಿಗೆ ಬಂದು ಅದನ್ನು ಮುತ್ತಿಗೆ ಹಾಕಿ ಆಕ್ರಮಿಸಿಕೊಂಡನು. 2 ಅದೇ ಸಮಯದಲ್ಲಿ ಯೆಹೋವ ದೇವರು ಆಮೋಚನ ಮಗ ಯೆಶಾಯನಿಗೆ, “ನಿನ್ನ ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಕೆರಗಳನ್ನು ತೆಗೆದಿಡು,” ಎಂದು ಹೇಳಿದರು. ಅವನು ಹಾಗೆ ಮಾಡಿ, ಬೆತ್ತಲೆಯಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು. 3 ಆಗ ಯೆಹೋವ ದೇವರು, “ನನ್ನ ಸೇವಕನಾದ ಯೆಶಾಯನು ಈಜಿಪ್ಟ್ ಮತ್ತು ಕೂಷಿಗು, ಗುರುತಾಗಿಯೂ, ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು. 4 ಹಾಗೆಯೇ ಅಸ್ಸೀರಿಯದ ಅರಸನು ಈಜಿಪ್ಟಿನವರನ್ನು ಬಂಧಿಸಿ, ಕೂಷಿನ ಕೈದಿಗಳನ್ನು ಅವರು ದೊಡ್ಡವರಾಗಲೀ, ಸಣ್ಣವರಾಗಲೀ ಬಟ್ಟೆ, ಕೆರಗಳಿಲ್ಲದೆ ಈಜಿಪ್ಟಿನ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು. 5 ಆಗ ನನ್ನ ಜನರು ಅವನು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಳ್ಳುತ್ತಿದ್ದ ಈಜಿಪ್ಟಿನ ವಿಷಯವಾಗಿಯೂ, ನಿರಾಶರಾಗಿ ನಾಚಿಕೆಪಡುವರು. 6 ಆ ದಿನದಲ್ಲಿ ಕರಾವಳಿಯ ನಿವಾಸಿಗಳು, ‘ಇಗೋ, ಅಸ್ಸೀರಿಯದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ, ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?’ ಎಂದುಕೊಳ್ಳುವರು.”
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 20 / 66
×

Alert

×

Kannada Letters Keypad References