1. {#1ಯೆಹೋವ ದೇವರಿಗೆ ಸ್ತುತಿ } [QS]ಯೆಹೋವ ದೇವರೇ, ನೀವೇ ನನ್ನ ದೇವರು. [QE][QS2]ನೀವು ಸತ್ಯ ಪ್ರಾಮಾಣಿಕತೆಗಳನ್ನು ಆಲೋಚಿಸಿ, [QE][QS]ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ, [QE][QS2]ಅದ್ಭುತಕಾರ್ಯಗಳನ್ನು ನಡೆಸಿದ ಕಾರಣ ನಿಮ್ಮನ್ನು ಉನ್ನತಪಡಿಸಿ, [QE][QS2]ನಿಮ್ಮ ನಾಮವನ್ನು ಕೊಂಡಾಡುವೆನು. [QE]
2. [QS]ಏಕೆಂದರೆ ನೀವು ದುರ್ಗವನ್ನು ನಾಶಪಡಿಸಿ, [QE][QS2]ಪಟ್ಟಣವನ್ನು ಹಾಳುದಿಬ್ಬವನ್ನಾಗಿಯೂ [QE][QS]ವಿದೇಶಿಯರ ಕೋಟೆಯನ್ನು ಯಾರೂ ಎಂದಿಗೂ [QE][QS2]ಕಟ್ಟಬಾರದಂತೆ ಮಾಡಿದ್ದೀರಿ. [QE]
3. [QS]ಬಲಿಷ್ಠವಾದ ಜನಾಂಗವು ನಿಮ್ಮನ್ನು ಘನಪಡಿಸುವರು, [QE][QS2]ಭಯಂಕರವಾದ ಜನರ ಪಟ್ಟಣವು ನಿಮಗೆ ಅಂಜುವುದು. [QE]
4. [QS]ನೀವು ದೀನರಿಗೆ ಕೋಟೆಯೂ, [QE][QS2]ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ, [QE][QS]ಭೀಕರರ ಶ್ವಾಸವು ಬಿಸಿಲಿಗೆ ನೆರಳೂ, [QE][QS2]ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ [QE][QS]ಬಿರುಗಾಳಿಗೋಸ್ಕರ ಆಶ್ರಯವೂ ಆಗಿದ್ದೀರಿ. [QE]
2. [QS2]ಮೇಘವು ಒಣನೆಲದ ಕಾವನ್ನು ಆರಿಸುವ ಹಾಗೆ, [QE][QS]ನೀವು ವಿದೇಶಿಯರ ಗದ್ದಲವನ್ನು ಅಡಗಿಸುವಿರಿ; [QE][QS2]ಮೋಡದ ನೆರಳಿನಿಂದ ಬಿಸಿಲು ತಡೆಯುವ ಹಾಗೆಯೇ, [QE][QS2]ನೀವು ಕ್ರೂರಿಗಳ ಉತ್ಸಾಹಗಾನವನ್ನು ನಿಲ್ಲಿಸಿಬಿಡುವಿರಿ. [QE][PBR]
6. [QS]ಸೇನಾಧೀಶ್ವರ ಯೆಹೋವ ದೇವರು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ [QE][QS2]ಸಾರವತ್ತಾದ ಕೊಬ್ಬಿದ ಔತಣವನ್ನೂ, [QE][QS]ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ, [QE][QS2]ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸವನ್ನೂ ಸಿದ್ಧಮಾಡುವರು. [QE]
7. [QS]ಸಮಸ್ತ ಜನಾಂಗಗಳನ್ನು ಮುಚ್ಚಿರುವ ಪರದೆಯನ್ನೂ, [QE][QS2]ಸಕಲ ದೇಶದವರ ಮೇಲೆ ಹರಡಿರುವ ತೆರೆಯನ್ನೂ [QE][QS]ಇದೇ ಪರ್ವತದಲ್ಲಿ ತೆಗೆದುಹಾಕುವರು. [QE]
2. [QS2]ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. [QE][QS]ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. [QE][QS2]ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. [QE][QS2]ಯೆಹೋವ ದೇವರೇ ಇದನ್ನು ನುಡಿದಿದ್ದಾರೆ. [QE]
9. [PS]ಆ ದಿನದಲ್ಲಿ ಜನರು, [PE][QS]“ಇಗೋ, ಇವರೇ ನಮ್ಮ ದೇವರು, [QE][QS2]ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. [QE][QS]ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, [QE][QS2]ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” [QE][QS2]ಎಂದು ಹೇಳುವರು. [QE][PBR]
10. [QS]ಈ ಪರ್ವತದಲ್ಲಿ ಯೆಹೋವ ದೇವರ ಕೈ ವಿಶ್ರಮಿಸಿಕೊಳ್ಳುವುದು. [QE][QS2]ಒಣಹುಲ್ಲನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ [QE][QS2]ಮೋವಾಬು ತುಳಿತಕ್ಕೆ ಈಡಾಗುವುದು. [QE]
11. [QS]ಈಜುವವನು ಈಜುವುದಕ್ಕೆ ಕೈಗಳನ್ನು ಹರಡಿಕೊಂಡ ಹಾಗೆ, [QE][QS2]ಅವರು ತಮ್ಮ ಕೈಗಳನ್ನು ಚಾಚುವರು. [QE][QS]ಆದರೆ ದೇವರು ಅವರ ಗರ್ವವನ್ನೂ ಅವರ [QE][QS2]ಕೈ ಕೆಲಸವನ್ನೂ ತಗ್ಗಿಸಿಬಿಡುವರು. [QE]
12. [QS]ದುರ್ಗದಂತೆ ಎತ್ತರವಾಗಿರುವ [QE][QS2]ನಿನ್ನ ಕೋಟೆಗಳನ್ನು ಕೆಡವಿ, [QE][QS]ತಗ್ಗಿಸಿ, ನೆಲಸಮಮಾಡುವರು, [QE][QS2]ಅದು ಧೂಳುಪಾಲಾಗುವುದು. [QE]