1. {#1ಎಫ್ರಾಯೀಮ್ ಮತ್ತು ಯೆಹೂದದ ನಾಯಕರಿಗೆ ಕಷ್ಟ } [QS]ಕುಡುಕರಿಂದ ಕೂಡಿದ ಎಫ್ರಾಯೀಮಿನ ಕಿರೀಟದಂತಿರುವ ನಗರಕ್ಕೆ ಕಷ್ಟ! [QE][QS2]ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ [QE][QS]ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, [QE][QS2]ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಕಷ್ಟ! [QE]
2. [QS]ಇಗೋ, ಕರ್ತರಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. [QE][QS2]ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, [QE][QS]ಹೊಡೆದು ಬಿಡುವ ಬಿರುಗಾಳಿಯಂತೆಯೂ, ಪ್ರಳಯ ಮಾಡುವ [QE][QS2]ದೊಡ್ಡ ನೀರನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈಯಿಂದ ಬೀಳಿಸುವನು. [QE]
3. [QS]ಕುಡುಕರಾದ ಎಫ್ರಾಯೀಮ್ಯರ ಗರ್ವದ ಕಿರೀಟವು [QE][QS2]ಕಾಲಿನ ತುಳಿತಕ್ಕೆ ಈಡಾಗುವುದು. [QE]
4. [QS]ಫಲವತ್ತಾದ ಕಣಿವೆಗೆ ತಲೆಯ ಮೇಲಿರುವ [QE][QS2]ಅಲಂಕಾರದ ಶೃಂಗಾರವಾಗಿದ್ದು, [QE][QS]ಬೇಸಿಗೆ ಮುಂಚೆ ಮಾಗಿದ ಅಂಜೂರದ ಹಣ್ಣಿನ ಹಾಗೆ ಇರುವುದು. [QE][QS2]ಜನರು ಅವರನ್ನು ನೋಡಿ ಕೈಗೆ ತೆಗೆದುಕೊಂಡ ತಕ್ಷಣ [QE][QS2]ಅವರು ನುಂಗುತ್ತಾರೆ. [QE][PBR]
5. [QS]ಆ ದಿನದಲ್ಲಿ ಸೇನಾಧೀಶ್ವರ ಯೆಹೋವ ದೇವರು [QE][QS2]ತನ್ನ ಜನರಲ್ಲಿ ಉಳಿದವರಿಗೆ [QE][QS]ಮಹಿಮೆಯ ಕಿರೀಟವೂ [QE][QS2]ಮತ್ತು ಸುಂದರವಾದ ಮಕುಟವೂ ಆಗಿರುವರು. [QE]
6. [QS]ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ [QE][QS2]ನ್ಯಾಯದ ಆತ್ಮವೂ, [QE][QS]ಬಾಗಿಲಿನ ಕಡೆಗೆ ಯುದ್ಧವನ್ನು ತಿರುಗಿಸುವವನಿಗೆ [QE][QS2]ಪರಾಕ್ರಮವೂ ಆಗಿರುವನು. [QE][PBR]
7. [QS]ಇವರು ಸಹ ದ್ರಾಕ್ಷಾರಸದಿಂದ ಮತ್ತರಾಗಿದ್ದಾರೆ. [QE][QS2]ಮದ್ಯದಿಂದಲೂ ಓಲಾಡುತ್ತಿದ್ದಾರೆ. [QE][QS]ಯಾಜಕನೂ ಪ್ರವಾದಿಯೂ ಮದ್ಯದಿಂದ ಮತ್ತರಾಗಿದ್ದಾರೆ. [QE][QS2]ದ್ರಾಕ್ಷಾರಸದಿಂದ ತೂರಾಡುತ್ತಿದ್ದಾರೆ. [QE][QS]ಮದ್ಯದಿಂದ ಓಲಾಡುತ್ತಿದ್ದಾರೆ. [QE][QS2]ದರ್ಶನವಾಗುತ್ತಿರುವಾಗಲೂ ಅವರು ತಪ್ಪುತ್ತಾರೆ. [QE][QS2]ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ. [QE]
8. [QS]ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ [QE][QS2]ಕಕ್ಕುವಿಕೆಯಿಂದ ತುಂಬಿವೆ. [QE][PBR]
9. [QS]ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? [QE][QS2]ಮತ್ತು ಯಾರಿಗೆ ಬೋಧನೆಯನ್ನು ತಿಳಿದುಕೊಳ್ಳುವ ಹಾಗೆ ಮಾಡುತ್ತಾನೆ? [QE][QS]ಆಗತಾನೇ ಹಾಲು ಬಿಟ್ಟ [QE][QS2]ಕೂಸುಗಳಿಗೋ, ಎಳೆಯ ಮಕ್ಕಳಿಗೋ? [QE]
10. [QS]ಆಜ್ಞೆಯ ಮೇಲೆ ಆಜ್ಞೆ, [QE][QS2]ಸೂತ್ರದ ಮೇಲೆ ಸೂತ್ರ, [QE][QS2]ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ. [QE][PBR]
11. [QS]ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ [QE][QS2]ಆತನು ಈ ಜನರೊಡನೆ ಮಾತನಾಡುತ್ತಾನೆ. [QE]
12. [QS]ಆತನು ಮೊದಲು, [QE][QS2]“ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ. [QE][QS]ನಿಮಗೆ ಅನುಕೂಲವಾದ ಉಪಶಮನ ಇದೇ,” [QE][QS2]ಎಂದು ಹೇಳಿದಾಗಲೂ ಅವರು ಕೇಳಲಿಲ್ಲ. [QE]
13. [QS]ಆಗ ಯೆಹೋವ ದೇವರು ಅವರಿಗೆ ಹೀಗೆ ಹೇಳಿದರು: [QE][QS2]ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, [QE][QS2]ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, [QE][QS2]ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ [QE][QS]ಇದರಿಂದ ಅವರು ಎಡವಿಬಿದ್ದು ಗಾಯಗೊಳ್ಳಬಹುದು. [QE][QS2]ಮತ್ತು ಬಲೆಯಲ್ಲಿ ಸಿಕ್ಕಿ ಬೀಳುವರು. [QE][PBR]
14. [QS]ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನರನ್ನು ಆಳುವ [QE][QS2]ಹಾಸ್ಯದ ಜನರಾದ ನೀವು ಯೆಹೋವ ದೇವರ ಮಾತನ್ನು ಕೇಳಿರಿ. [QE]
15. [QS]“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. [QE][QS2]ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. [QE][QS]ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, [QE][QS2]ಅದು ನಮ್ಮನ್ನು ಮುಟ್ಟದು; [QE][QS]ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, [QE][QS2]ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ? [QE]
16. [PS]ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: [PE][QS]“ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ [QE][QS2]ಮೂಲೆಗಲ್ಲನ್ನು ಚೀಯೋನಿನಲ್ಲಿ [QE][QS]ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. [QE][QS2]ಭರವಸೆ ಇಡುವವನು ಆತುರಪಡನು. [QE]
17. [QS]ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ [QE][QS2]ಮತ್ತು ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು. [QE][QS]ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು. [QE][QS2]ಅಡಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿ ಬಿಡುವುದು. [QE]
18. [QS]ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವುದು. [QE][QS2]ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವುದಿಲ್ಲ. [QE][QS]ವಿಪರೀತ ಬಾಧೆಯು ಹಾದುಹೋಗುವಾಗ [QE][QS2]ನಿಮ್ಮನ್ನು ತುಳಿದುಹಾಕುವುದು. [QE]
19. [QS]ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು. [QE][QS2]ಏಕೆಂದರೆ ಅದು ಹೊತ್ತಾರೆಯಿಂದ ಹೊತ್ತಾರೆಗೆ, [QE][QS2]ಹಗಲು ರಾತ್ರಿಯೂ ಹಾದುಹೋಗುವುದು.” [QE][PBR] [QS]ಆಗ ದೇವರ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ [QE][QS2]ಭಯಭ್ರಾಂತಿ ಉಂಟಾಗುವುದು. [QE]
20. [QS]ಮೈ ಚಾಚುವುದಕ್ಕೆ ಹಾಸಿಗೆ ಚಿಕ್ಕದಾಗಿರುವುದು. [QE][QS2]ಮುದುರಿಕೊಂಡು ಮಲಗುವುದಕ್ಕೆ, ಹೊದಿಕೆಯ ಅಗಲ ಸಾಲದು. [QE]
21. [QS]ಯೆಹೋವ ದೇವರು ಪೆರಾಚೀಮ್ ಪರ್ವತದಲ್ಲಿ ಎದ್ದಂತೆ ಏಳುವರು. [QE][QS2]ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ, [QE][QS]ಅಪರೂಪವಾದ ತಮ್ಮ ಕೆಲಸವನ್ನು ನಡಿಸಿ, [QE][QS2]ಅಪೂರ್ವವಾದ ತಮ್ಮ ಕಾರ್ಯವನ್ನು ನೆರವೇರಿಸುವನು. [QE]
22. [QS]ಹೀಗಿರುವುದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗಬೇಡಿರಿ. [QE][QS2]ಸರ್ವಶಕ್ತ ಆಗಿರುವ ಕರ್ತ ಯೆಹೋವ ದೇವರ ಕಡೆಯಿಂದ [QE][QS2]ಭೂಮಂಡಲದಲ್ಲೆಲ್ಲಾ ಸಂಹಾರ ತರಲು ನಿರ್ಣಯಿಸಿದೆ, ಎಂಬ ತೀರ್ಪನ್ನು ನಾನು ಕೇಳಿದ್ದೇನೆ. [QE][PBR]
23. [QS]ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ, [QE][QS2]ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ. [QE]
24. [QS]ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? [QE][QS2]ತನ್ನ ಭೂಮಿಯ ಮಣ್ಣುಹೆಂಟೆಯನ್ನು ತೆಗೆದು, ದಿನವೆಲ್ಲಾ ಹೊಡೆಯುವನೋ? [QE]
25. [QS]ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ [QE][QS2]ಅಗಸೆಯನ್ನು ಚೆಲ್ಲಿ, ಜೀರಿಗೆಯನ್ನು ಚದರಿಸಿ [QE][QS]ಮತ್ತು ಗೋಧಿಯನ್ನು ಸಾಲುಸಾಲಾಗಿಯೂ, [QE][QS2]ಜವೆಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ, [QE][QS2]ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ. [QE]
26. [QS]ಏಕೆಂದರೆ ಅವನ ದೇವರು ಅವನಿಗೆ ಸೂಚಿಸುತ್ತಾರೆ. [QE][QS2]ಮತ್ತು ಸರಿಯಾದ ಮಾರ್ಗವನ್ನು ಕಲಿಸುತ್ತಾರೆ. [QE][PBR]
27. [QS]ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವುದಿಲ್ಲ. [QE][QS2]ಜೀರಿಗೆಯನ್ನು ಒಕ್ಕುವುದು ಬಂಡಿಯ ಚಕ್ರ ತಿರುಗಿಸುವುದರಿಂದ ಅಲ್ಲ. [QE][QS]ಅಗಸೆಯು ಕೋಲಿನಿಂದಲೂ, [QE][QS2]ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದ ಆಗಿರುತ್ತದೆ. [QE]
28. [QS]ರೊಟ್ಟಿಗಾಗಿ ಗೋಧಿಯ ಕಾಳನ್ನು ಪುಡಿಮಾಡಬೇಕು; [QE][QS2]ಯಾವಾಗಲೂ ಅದನ್ನು ಒಕ್ಕುತ್ತಿರುವುದಿಲ್ಲ. [QE][QS]ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವುದಿಲ್ಲ [QE][QS2]ಅವನ ಕುದುರೆ ಸವಾರದಿಂದ ಒಕ್ಕುತ್ತಿರುವುದಿಲ್ಲ. [QE]
29. [QS]ಈ ವಿವೇಕವು ಸಹ ಅತಿಶಯ ಆಲೋಚನಾಪರರೂ, [QE][QS2]ಕಾರ್ಯಸಾಧಕ ಜ್ಞಾನ ಶ್ರೇಷ್ಠರೂ ಆಗಿರುವ [QE][QS2]ಸೇನಾಧೀಶ್ವರ ಯೆಹೋವ ದೇವರಿಂದಲೇ ಹೊರಡುತ್ತದೆ. [QE]