1. {#1ಈಜಿಪ್ಟನ್ನು ಆಶ್ರಯಿಸುವವರಿಗೆ ವಿಪತ್ತು } [QS]ಸಹಾಯಕ್ಕಾಗಿ ಈಜಿಪ್ಟನ್ನು ಸೇರಿ, ಅಶ್ವಬಲವನ್ನು, [QE][QS2]ಆಶ್ರಯಿಸುವವರಿಗೆ ಕಷ್ಟ! [QE][QS]ಏಕೆಂದರೆ ರಥಗಳು ಬಹಳವೆಂದೂ, [QE][QS2]ಅವರ ನಂಬಿಕೆಯು ರಥಗಳ ಮೇಲೆ ಏಕೆಂದರೆ ಅವರು ಅನೇಕರು, [QE][QS]ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವುದಿಲ್ಲ. [QE][QS2]ಇಲ್ಲವೆ ಯೆಹೋವ ದೇವರಿಂದ ಸಹಾಯವನ್ನು ಬಯಸುವುದಿಲ್ಲ. [QE]
2. [QS]ಆದರೂ ಅವರು ಜ್ಞಾನಿ, ಕೇಡನ್ನು ಬರಮಾಡುವರು. [QE][QS2]ಅವರು ತಮ್ಮ ಮಾತನ್ನು ಹಿಂದೆಗೆಯುವುದಿಲ್ಲ. [QE][QS]ಆದರೆ ಕೆಡುಕರ ಮನೆತನಕ್ಕೂ, [QE][QS2]ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. [QE]
3. [QS]ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; [QE][QS2]ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. [QE][QS]ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ [QE][QS2]ಸಹಾಯ ಮಾಡಿದವನು [QE][QS2]ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. [QE][QS2]ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು. [QE]
4. [PS]ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ: [PE][QS]ಸಿಂಹವು, ಪ್ರಾಯದ ಸಿಂಹವು [QE][QS2]ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, [QE][QS]ಕಾವಲುಗಾರನ ಕೂಗನ್ನು ಕೇಳಿ, [QE][QS2]ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ, [QE][QS]ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ [QE][QS2]ಅವರ ಗದ್ದಲಕ್ಕೆ ಕುಂದಿಹೋಗದೆ ಇರುವುದೋ, [QE][QS]ಹಾಗೆಯೇ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತಕ್ಕೋಸ್ಕರವೂ, [QE][QS2]ಅದರ ಗುಡ್ಡಕ್ಕೋಸ್ಕರವೂ ಯುದ್ಧಮಾಡಲು ಇಳಿದು ಬರುವರು. [QE]
5. [QS]ರೆಕ್ಕೆಗಳನ್ನು ಚಾಚಿದ ಪಕ್ಷಿಗಳಂತೆ ಸೇನಾಧೀಶ್ವರ ಯೆಹೋವ ದೇವರು [QE][QS2]ಯೆರೂಸಲೇಮನ್ನು ಕಾಪಾಡುವರು. [QE][QS]ಅದನ್ನು ರಕ್ಷಿಸಿ ಕಾಯುವರು. [QE][QS2]ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವರು. [QE]
6. [PS]ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ, ಆತನ ಕಡೆಗೆ ತಿರುಗಿಕೊಳ್ಳಿರಿ.
7. ಏಕೆಂದರೆ ನೀವು ನಿಮ್ಮ ಸ್ವಂತ ಕೈಗಳು ಪಾಪಕ್ಕೋಸ್ಕರ ಮಾಡಿದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು. [PE]
8. [QS]ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ, [QE][QS2]ಖಡ್ಗವು ಅವರನ್ನು ನುಂಗುವುದು. ಅದು ಮಾನವ ಖಡ್ಗವಲ್ಲ. [QE][QS]ಅವರು ಖಡ್ಗದಿಂದ ತಪ್ಪಿಸಿಕೊಳ್ಳಲು ಓಡುವರು. [QE][QS2]ಅವರ ಯೌವನಸ್ಥರು ಜೀತದಾಳುಗಳಾಗುವರು. [QE]
9. [QS]ಭಯಾನಕತೆಯಿಂದ ಅವರ ಕೋಟೆ ಬೀಳುವುದು, [QE][QS2]ಯುದ್ಧದ ದೃಶ್ಯವನ್ನು ನೋಡಿ ಅವರ ಸೇನಾಪತಿಗಳು ಧ್ವಜಸ್ಥಾನದಿಂದ ದಿಕ್ಕುಪಾಲಾಗುವರು. [QE][QS]ಚೀಯೋನಿನಲ್ಲಿ ಅಗ್ನಿಯನ್ನೂ, [QE][QS2]ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ [QE][QS2]ಯೆಹೋವ ದೇವರು ಘೋಷಿಸುತ್ತಾರೆ. [QE]