1. {#1ನೀತಿಯ ರಾಜ್ಯ } [QS]ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. [QE][QS2]ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು. [QE]
2. [QS]ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, [QE][QS2]ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, [QE][QS]ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, [QE][QS2]ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು. [QE][PBR]
3. [QS]ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, [QE][QS2]ಕೇಳುವವರ ಕಿವಿಗಳು ಮಂದವಾಗವು. [QE]
4. [QS]ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವುದು. [QE][QS2]ತೊದಲು ಮಾತನಾಡುವವರ ನಾಲಿಗೆ ಸ್ವಚ್ಛವಾಗಿ ಮಾತನಾಡುವುದಕ್ಕೆ ಸಿದ್ಧವಾಗಿರುವುದು. [QE]
5. [QS]ಇನ್ನು ಮೇಲೆ ಮೂರ್ಖನು ಘನವಂತನೆನಿಸಿಕೊಳ್ಳನು. [QE][QS2]ಮೋಸಗಾರನು ಮಹನೀಯನೆನಿಸಿಕೊಳ್ಳನು. [QE]
6. [QS]ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. [QE][QS2]ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, [QE][QS]ಯೆಹೋವ ದೇವರಿಗೆ ವಿರೋಧವಾಗಿ [QE][QS2]ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, [QE][QS]ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. [QE][QS2]ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು. [QE]
7. [QS]ಮೋಸಗಾರನ ಆಯುಧಗಳು ಕೆಟ್ಟವುಗಳೇ, [QE][QS2]ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, [QE][QS]ಅವನು ಬಡವರನ್ನು ಸುಳ್ಳು ಮಾತುಗಳಿಂದ [QE][QS2]ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು. [QE]
8. [QS]ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. [QE][QS2]ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು. [QE]
9. {#1ಯೆರೂಸಲೇಮಿನ ಮಹಿಳೆಯರು } [QS]ನಿಶ್ಚಿಂತೆಯರಾದ ಮಹಿಳೆಯರೇ, ಏಳಿರಿ. [QE][QS2]ನನ್ನ ಸ್ವರವನ್ನು ಕೇಳಿರಿ. [QE][QS]ಭಯವಿಲ್ಲದ ಹೆಣ್ಣು ಮಕ್ಕಳೇ, [QE][QS2]ನನ್ನ ಮಾತಿಗೆ ಕಿವಿಗೊಡಿರಿ. [QE]
10. [QS]ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. [QE][QS2]ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. [QE][QS]ಏಕೆಂದರೆ, ಆಗ ದ್ರಾಕ್ಷಿ ಕೊಯಿಲು ನಿಂತುಹೋಗುವುದು. [QE][QS2]ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ. [QE]
11. [QS]ನಿಶ್ಚಿಂತೆಯುಳ್ಳ ಸ್ತ್ರೀಯರೇ, ನೀವು ನಡುಗಿರಿ. [QE][QS2]ನಿರ್ಭೀತ ಪುತ್ರಿಯರೇ, ಕಳವಳಗೊಳ್ಳಿರಿ. [QE][QS]ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ, [QE][QS2]ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. [QE]
12. [QS]ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಳ ನಿಮಿತ್ತವೂ [QE][QS2]ನಿಮ್ಮ ಎದೆ ಬಡಿದುಕೊಳ್ಳಿರಿ. [QE]
13. [QS]ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. [QE][QS2]ಉಲ್ಲಾಸದಿಂದ ಕೂಡಿದ್ದ ಮನೆಗಳೂ [QE][QS2]ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ. [QE]
14. [QS]ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, [QE][QS2]ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. [QE][QS]ಕಾಡುಕತ್ತೆಗಳಿಗೆ ಬಯಲಾಗಿಯೂ, [QE][QS2]ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು. [QE]
15. [QS]ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; [QE][QS2]ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, [QE][QS2]ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು. [QE]
16. [QS]ನ್ಯಾಯವು ಮರುಭೂಮಿಯಲ್ಲಿ ನೆಲೆಗೊಳ್ಳುವುದು, [QE][QS2]ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವುದು. [QE]
17. [QS]ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು [QE][QS2]ನಿತ್ಯವಾದ ಶಾಂತಿಯೂ, ಭರವಸೆಯೂ ಆಗಿರುವುದು. [QE]
18. [QS]ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ, [QE][QS2]ಭದ್ರವಾದ ಸ್ಥಳಗಳಲ್ಲಿಯೂ, [QE][QS2]ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು. [QE]
19. [QS]ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗುವುದು. [QE][QS2]ಪಟ್ಟಣವು ಸಂಪೂರ್ಣವಾಗಿ ನೆಲಸಮವಾಗುವುದು. [QE]
20. [QS]ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ, [QE][QS2]ದನಕತ್ತೆಗಳನ್ನು ಮೇಯಲು ಬಿಡುವ ನೀವು ಧನ್ಯರೇ ಸರಿ. [QE]