1. {#1ಹಿಜ್ಕೀಯನ ಅಸ್ವಸ್ಥತೆ }
2. [PS]ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು. [PE][PS]ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವ ದೇವರನ್ನು ಪ್ರಾರ್ಥಿಸಿದನು.
3. “ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು. [PE]
4. [PS]ಆಗ ಯೆಹೋವ ದೇವರ ವಾಕ್ಯವು ಯೆಶಾಯನಿಗೆ ಬಂದಿತು,
5. “ನೀನು ಹೋಗಿ ಹಿಜ್ಕೀಯನಿಗೆ ಹೀಗೆ ಹೇಳು, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ.
6. ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಯಿಂದ ಬಿಡಿಸುವೆನು. ಈ ಪಟ್ಟಣವನ್ನು ಕಾಪಾಡುವೆನು. [PE]
7. [PS]“ ‘ಯೆಹೋವ ದೇವರು ತಾವು ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಈ ಗುರುತನ್ನು ಕಾಣುವೆ.
8. ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವುದು,’ ” ಎಂದನು. ಅದರಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು. [PE][PBR]
9.
10. [PS]ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣಹೊಂದಿದ ನಂತರ ಬರೆದದ್ದು: [PE][QS]“ನನ್ನ ಜೀವನದ ಮಧ್ಯಪ್ರಾಯದಲ್ಲೇ [QE][QS2]ನಾನು ಪಾತಾಳದ ದ್ವಾರದೊಳಗೆ ಹೋಗಬೇಕು. [QE][QS]ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರುಷಗಳು ನನಗೆ ತಪ್ಪಿಹೋಯಿತು,” [QE][QS2]ಎಂದು ನಾನು ಅಂದುಕೊಂಡೆನು. [QE]
11. [QS]ನಾನು ಹೀಗೆ ಯೋಚಿಸಿದೆ, “ಯೆಹೋವ ದೇವರನ್ನು ಜೀವಿತರ [QE][QS2]ದೇಶದಲ್ಲಿ ಯೆಹೋವ ದೇವರನ್ನು ಕಾಣೆನೆಂದುಕೊಂಡೆನು; [QE][QS]ಭೂಲೋಕ ನಿವಾಸಿಗಳಲ್ಲಿ [QE][QS2]ಒಬ್ಬ ಮನುಷ್ಯನನ್ನೂ ಕಾಣೆನೆಂದುಕೊಂಡೆನು. [QE]
12. [QS]ನನ್ನ ಆಶ್ರಯವು ಕುರುಬನ ಗುಡಾರದಂತೆ [QE][QS2]ಕಿತ್ತು ನನ್ನ ಕಡೆಯಿಂದ ಒಯ್ಯಲಾಗಿದೆ. [QE][QS]ದೇವರು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ [QE][QS2]ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; [QE][QS2]ಹಗಲುರಾತ್ರಿ ದೇವರೇ, ನೀವು ನನ್ನನ್ನು ಅಂತ್ಯಗೊಳಿಸುತ್ತೀರಿ. [QE]
13. [QS]ಹೌದು, ದೇವರು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, [QE][QS2]ಬೆಳಗಿನತನಕ ತಡೆದುಕೊಂಡೇ ಇದ್ದೆನು. [QE][QS2]ನೀವು ನನ್ನನ್ನು ಅಂತ್ಯಗೊಳಿಸುತ್ತೀರಲ್ಲಾ ಎಂದು ಹಗಲುರಾತ್ರಿ ಪ್ರಲಾಪಿಸಿದೆನು. [QE]
14. [QS]ನಾನು ಬಾನಕ್ಕಿಯಂತೆಯೂ, [QE][QS2]ಬಕದಂತೆಯೂ ಕೀಚುಗುಟ್ಟಿದೆನು. ಪಾರಿವಾಳದಂತೆ ಗುಬ್ಬಳಿಸುತ್ತಿದ್ದೆನು. [QE][QS]ನನ್ನ ಕಣ್ಣುಗಳು ಮೇಲಕ್ಕೆ ನೋಡುವುದರಿಂದ ಕ್ಷೀಣವಾದವು. [QE][QS2]ಕರ್ತದೇವರೇ, ನಾನು ಬಾಧೆಪಡುತ್ತಿದ್ದೇನೆ, ನೀವು ನನಗೆ ಆಶ್ರಯರಾಗಿರಿ.” [QE][PBR]
15. [QS]ಆದರೆ, ನಾನು ಏನು ಹೇಳಲಿ, [QE][QS2]ಆತನು ನನಗೆ ಮಾತುಕೊಟ್ಟು, ತಾನೇ ಅದನ್ನು ನೆರವೇರಿಸಿದ್ದಾನೆ. [QE][QS]ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ [QE][QS2]ನನ್ನ ವರುಷಗಳಲ್ಲೆಲ್ಲಾ ವಿನಯದಿಂದ ನಡೆಯುವೆನು. [QE]
16. [QS]ಕರ್ತದೇವರೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ. [QE][QS2]ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು. [QE][QS]ಹೀಗೆ ನನ್ನನ್ನು ನೀವು ಸ್ವಸ್ಥಮಾಡಿ [QE][QS2]ಬದುಕುವಂತೆ ಮಾಡಿದಿರಿ. [QE]
17. [QS]ಆ ಬಹು ವ್ಯಥೆಯು ನನ್ನ [QE][QS2]ಸಮಾಧಾನಕ್ಕಾಗಿಯೇ ಆಯಿತು. [QE][QS]ಆದರೆ ನನ್ನ ಆತ್ಮವನ್ನು ನಾಶದಿಂದ [QE][QS2]ಬಿಡುಗಡೆ ಮಾಡಿದ್ದು ನಿಮ್ಮ ಪ್ರೀತಿಯೇ. [QE][QS]ನನ್ನ ಪಾಪಗಳನ್ನೆಲ್ಲಾ ನಿನ್ನ [QE][QS2]ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ. [QE]
18. [QS]ಸಮಾಧಿಯು ನಿನ್ನನ್ನು ಹೊಗಳುವುದಿಲ್ಲ. [QE][QS2]ಮರಣವು ನಿನ್ನನ್ನು ಕೊಂಡಾಡುವುದಿಲ್ಲ. [QE][QS]ಕುಣಿಯೊಳಕ್ಕೆ ಹೋಗುವವರು [QE][QS2]ನಿಮ್ಮ ಸತ್ಯತೆಯಲ್ಲಿ ಭರವಸವಿಡಲಾರರು. [QE]
19. [QS]ಜೀವಂತನು; ಜೀವಂತನೇ ನಿನ್ನನ್ನು ಸ್ತುತಿಸುವೆನು. [QE][QS2]ಹೌದು, ಜೀವಂತನಾದ [QE][QS]ನಾನೇ ಈ ಹೊತ್ತು ನಿಮ್ಮನ್ನು ಹೊಗಳುವೆನು. [QE][QS2]ತಂದೆಯು ಮಕ್ಕಳಿಗೆ ನಿಮ್ಮ ನಿಷ್ಠೆಯನ್ನು ಬೋಧಿಸುವನು. [QE][PBR]
20. [QS]ಯೆಹೋವ ದೇವರು ನನ್ನನ್ನು ರಕ್ಷಿಸುವರು. [QE][QS2]ಆದ್ದರಿಂದ ಯೆಹೋವ ದೇವರ ಆಲಯದಲ್ಲಿ [QE][QS]ನಮ್ಮ ಜೀವಮಾನದ ದಿವಸಗಳಲ್ಲೆಲ್ಲಾ [QE][QS2]ತಂತಿವಾದ್ಯಗಳಿಂದ ನಮ್ಮ ಹಾಡುಗಳನ್ನು ನಾವು ಹಾಡುವೆವು. [QE]
21.
22. [PS]“ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ, ಹುಣ್ಣಿನ ಮೇಲೆ ಇಟ್ಟರೆ, ಅವನು ಗುಣಹೊಂದುವನು,” ಎಂದು ಯೆಶಾಯನು ಹೇಳಿದನು. [PE][PS]ಇದಲ್ಲದೆ ಹಿಜ್ಕೀಯನು, “ನಾನು ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದ್ದನು. [PE]