ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಯೆಶಾಯ
1. [QS]ಆ ದಿವಸದಲ್ಲಿ ಏಳುಮಂದಿ ಹೆಂಗಸರು [QE][QS2]ಒಬ್ಬ ಮನುಷ್ಯನನ್ನು ಹಿಡಿದು, [QE][QS]“ನಾವು ಸ್ವಂತವಾಗಿ ದುಡಿದು ಉಣ್ಣುವೆವು, [QE][QS2]ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು, [QE][QS]ನಮ್ಮ ನಿಂದೆಯನ್ನು ನೀಗಿಸುವುದಕ್ಕೆ [QE][QS2]ನಿನ್ನ ಹೆಸರು ನಮಗಿದ್ದರೆ ಸಾಕು,” [QE][QS2]ಎಂದು ಕೇಳಿಕೊಳ್ಳುವರು. [QE]
2. {#1ಯೆಹೋವ ದೇವರ ಕೊಂಬೆ } [PS]ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.
3. ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು.
4. ಯೆಹೋವ ದೇವರು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಪುತ್ರಿಯರ ಕಲ್ಮಷವನ್ನು ತೊಳೆದು, ಯೆರೂಸಲೇಮಿನ ಮೇಲಿನ ರಕ್ತದ ಕಲೆಗಳನ್ನು ತೆಗೆದುಹಾಕುವರು.
5. ಆಗ ಯೆಹೋವ ದೇವರು ಚೀಯೋನ್ ಪರ್ವತದ ಪ್ರತಿಯೊಂದು ನಿವಾಸದ ಮೇಲೂ, ಅದರ ಸಭೆಗಳ ಮೇಲೂ, ಹಗಲಿನಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಿನಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ಏಕೆಂದರೆ ದೇವರ ಮಹಿಮೆ ಎಲ್ಲದರ ಮೇಲೆ ಚಪ್ಪರದಂತೆಯೂ ಆವರಿಸುವುದು.
6. ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ, ಬಿರುಗಾಳಿಗೂ, ಮಳೆಗೂ ಆಶ್ರಯವನ್ನು ಕೊಡುವ ಮಂಟಪವಾಗಿ ಇರುವುದು. [PE]
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 66
1 ಆ ದಿವಸದಲ್ಲಿ ಏಳುಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದು ಉಣ್ಣುವೆವು, ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು, ನಮ್ಮ ನಿಂದೆಯನ್ನು ನೀಗಿಸುವುದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು,” ಎಂದು ಕೇಳಿಕೊಳ್ಳುವರು. ಯೆಹೋವ ದೇವರ ಕೊಂಬೆ 2 ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು. 3 ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು. 4 ಯೆಹೋವ ದೇವರು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಪುತ್ರಿಯರ ಕಲ್ಮಷವನ್ನು ತೊಳೆದು, ಯೆರೂಸಲೇಮಿನ ಮೇಲಿನ ರಕ್ತದ ಕಲೆಗಳನ್ನು ತೆಗೆದುಹಾಕುವರು. 5 ಆಗ ಯೆಹೋವ ದೇವರು ಚೀಯೋನ್ ಪರ್ವತದ ಪ್ರತಿಯೊಂದು ನಿವಾಸದ ಮೇಲೂ, ಅದರ ಸಭೆಗಳ ಮೇಲೂ, ಹಗಲಿನಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಿನಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ಏಕೆಂದರೆ ದೇವರ ಮಹಿಮೆ ಎಲ್ಲದರ ಮೇಲೆ ಚಪ್ಪರದಂತೆಯೂ ಆವರಿಸುವುದು. 6 ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ, ಬಿರುಗಾಳಿಗೂ, ಮಳೆಗೂ ಆಶ್ರಯವನ್ನು ಕೊಡುವ ಮಂಟಪವಾಗಿ ಇರುವುದು.
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 66
×

Alert

×

Kannada Letters Keypad References