ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆಶಾಯ
1. {#1ಆರಿಸಿಕೊಂಡ ಇಸ್ರಾಯೇಲು } [QS]“ಈಗಲಾದರೋ ನನ್ನ ಸೇವಕನಾದ ಯಾಕೋಬೇ [QE][QS2]ಮತ್ತು ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು: [QE]
2. [QS]ನಿನ್ನ ನಿರ್ಮಾಣ ಮಾಡಿ, [QE][QS2]ಗರ್ಭದಿಂದಲೂ ರೂಪಿಸುತ್ತಾ ಬಂದು, [QE][QS2]ನಿನಗೆ ಸಹಾಯ ಮಾಡುವವರಾದ ಯೆಹೋವ ದೇವರು ಹೇಳುವುದೇನೆಂದರೆ: [QE][QS]ನನ್ನ ಸೇವಕನಾದ ಯಾಕೋಬೇ, [QE][QS2]ನಾನು ಆಯ್ದುಕೊಂಡ ಯೆಶುರೂನೇ, ಭಯಪಡಬೇಡ. [QE]
3. [QS]ಏಕೆಂದರೆ ನಾನು ಬಾಯಾರಿದ [QE][QS2]ಭೂಮಿಯ ಮೇಲೆ ನೀರನ್ನು ಸುರಿಸುವೆನು. [QE][QS]ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, [QE][QS2]ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು. [QE]
4. [QS]ನೀರಿನ ಕಾಲುವೆಗಳ ಬಳಿಯಲ್ಲಿ, [QE][QS2]ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು. [QE]
5. [QS]ಒಬ್ಬನು, ‘ನಾನು ಯೆಹೋವನವನು,’ [QE][QS2]ಅನ್ನುವನು, ಇನ್ನೊಬ್ಬನು ನಾನು, ‘ಯಾಕೋಬನ ಹೆಸರಿನವನು,’ ಎಂದು ಹೇಳಿಕೊಳ್ಳುವನು. [QE][QS]ಮತ್ತೊಬ್ಬನು ತನ್ನ ಕೈಯ ಮೇಲೆ, ‘ಯೆಹೋವ ದೇವರಿಗೆ ಸ್ವಂತ,’ ಎಂದು ಬರೆಯಿಸಿಕೊಂಡು, [QE][QS2]ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡಹೆಸರನ್ನು ಇಟ್ಟುಕೊಳ್ಳುವನು. [QE]
6. {#1ವಿಗ್ರಹಗಳಲ್ಲ ಆದರೆ ಯೆಹೋವ ದೇವರೇ } [QS]“ಇಸ್ರಾಯೇಲಿನ ಅರಸನೂ ವಿಮೋಚಕನೂ, [QE][QS2]ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: [QE][QS]ನಾನೇ ಮೊದಲನೆಯವನು, ನಾನೇ ಕಡೆಯವನು. [QE][QS2]ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ. [QE]
7. [QS]ನಾನು ಪುರಾತನ ಕಾಲದವರನ್ನು [QE][QS2]ಸೃಷ್ಟಿಸಿದಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ, [QE][QS]ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? [QE][QS2]ಮುಂದೆ ಬರಬೇಕಾದದ್ದನ್ನು [QE][QS2]ಅವರು ನನಗೆ ತಿಳಿಸಲಿ. [QE]
8. [QS]ಹೆದರಬೇಡ, ಇಲ್ಲವೆ ಭಯಪಡಬೇಡ! [QE][QS2]ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ ಮತ್ತು ಅದನ್ನು ಪ್ರಕಟಿಸಲಿಲ್ಲವೋ? [QE][QS]ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? [QE][QS2]ಇಲ್ಲ, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.” [QE][PBR]
9. [QS]ವಿಗ್ರಹಗಳನ್ನು ಕೆತ್ತುವವರು ನಿರರ್ಥಕರು. [QE][QS2]ಅವರ ಇಷ್ಟ ಬೊಂಬೆಗಳು ಏತಕ್ಕೂ ಬಾರವು. [QE][QS]ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, [QE][QS2]ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು. [QE]
10. [QS]ದೇವರನ್ನು ರೂಪಿಸಿದವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು [QE][QS2]ಎರಕ ಹೊಯ್ಯುವವರು ಎಂಥವರು? [QE]
11. [QS]ಅವನೂ, ಅವನ ಸಂಗಡಿಗರೂ ನಾಚಿಕೆಗೆ ಒಳಗಾಗುವರು [QE][QS2]ಮತ್ತು ಆ ಕೆತ್ತನೆಯ ಕೆಲಸದವರು ಮನುಷ್ಯ ಮಾತ್ರದವರೇ. [QE][QS]ಅವರೆಲ್ಲರೂ ಒಟ್ಟುಗೂಡಿ ನಿಂತುಕೊಳ್ಳಲಿ. [QE][QS2]ಅವರು ಭಯಪಟ್ಟು, ಒಟ್ಟಿಗೆ ಲಜ್ಜೆಪಡುವರು. [QE][PBR]
12. [QS]ಕಮ್ಮಾರನು ಸಲಕರಣೆಯನ್ನು ತೆಗೆದುಕೊಂಡು [QE][QS2]ಕೆಂಡದಲ್ಲಿ ಕೆಲಸ ಮಾಡುತ್ತಾನೆ; [QE][QS]ಅವನು ಸುತ್ತಿಗೆ ಹಿಡಿದು ತನ್ನ ತೋಳಿನ ಬಲದಿಂದ [QE][QS2]ವಿಗ್ರಹವನ್ನು ರೂಪಿಸುತ್ತಾನೆ; [QE][QS]ಅವನು ಹಸಿದು ಬಲಹೀನನಾಗಿದ್ದರೂ, [QE][QS2]ನೀರು ಕುಡಿಯದೇ ದಣಿಯುತ್ತಾನೆ. [QE]
13. [QS]ಬಡಗಿಯು ಮರಕ್ಕೆ ನೂಲನ್ನು ಹಿಡಿದು, [QE][QS2]ಮೊಳೆಯಿಂದ ಗೆರೆ ಎಳೆಯುತ್ತಾನೆ. [QE][QS]ಉಳಿಬಾಚಿಗಳಿಂದ ಕೆತ್ತುತ್ತಾನೆ. [QE][QS2]ಕೈವಾರದಿಂದ ಗುರುತಿಸಿ, [QE][QS]ಆಮೇಲೆ ಮನುಷ್ಯನ ಆಕಾರಕ್ಕೆ ತಂದು, [QE][QS2]ಮಂದಿರದಲ್ಲಿ ಇಡಲು [QE][QS2]ಮನುಷ್ಯನ ಅಂದದಂತೆ ರೂಪಿಸುತ್ತಾನೆ. [QE]
14. [QS]ಅರಣ್ಯದ ಮಧ್ಯದಲ್ಲಿ ಇರುವ ಮರಗಳಲ್ಲಿ ದೇವದಾರುಗಳನ್ನು ಕಡಿದು, ತುರಾಯಿ, [QE][QS2]ಸೈಪ್ರಸ್ ಮತ್ತು ಏಲಾ ಮರಗಳನ್ನು ತನ್ನ ಕೆಲಸಕ್ಕೋಸ್ಕರ ತೆಗೆದುಕೊಳ್ಳುತ್ತಾನೆ. [QE][QS]ಪೀತದಾರ ಮರವನ್ನು ಅವನು ನೆಡಲು, [QE][QS2]ಮಳೆಯು ಅದನ್ನು ಬೆಳೆಯಿಸುವುದು. [QE]
15. [QS]ಆಗ ಅದು ಮನುಷ್ಯರು ಉರಿಸುವುದಕ್ಕಾಗುವುದು. [QE][QS2]ಏಕೆಂದರೆ ಅದರಿಂದ ಚಳಿಕಾಯಿಸಿಕೊಳ್ಳುತ್ತಾನೆ. [QE][QS2]ಅದನ್ನು ಬೆಂಕಿ ಹಚ್ಚಿ, ರೊಟ್ಟಿಯನ್ನು ಸುಡುತ್ತಾನೆ. [QE][QS]ಅವನು ಅದರಿಂದ ಒಂದು ದೇವರನ್ನು ಮಾಡಿ, ಅದಕ್ಕೆ ನಮಸ್ಕರಿಸುತ್ತಾನೆ. [QE][QS2]ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡ ಬೀಳುವನು. [QE]
16. [QS]ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು. [QE][QS2]ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು. [QE][QS2]ಮಾಂಸವನ್ನು ಸುಟ್ಟು ತೃಪ್ತಿಹೊಂದುವನು. [QE][QS]ಅವನು ಚಳಿಕಾಯಿಸಿಕೊಳ್ಳುತ್ತಾ, [QE][QS2]ಬೆಂಕಿಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು. [QE]
17. [QS]ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ, [QE][QS2]ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ, [QE][QS]ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, [QE][QS2]“ನೀನೇ ನನ್ನ ದೇವರು, ನನ್ನನ್ನು ಕಾಪಾಡು,” ಎಂದು ಬೇಡಿಕೊಳ್ಳುವನು. [QE]
18. [QS]ಅವರು ಏನೂ ತಿಳಿಯದವರು ಇಲ್ಲವೆ ಏನೂ ಗ್ರಹಿಸಲಾರದವರು. [QE][QS2]ಏಕೆಂದರೆ ಆತನು ಅವರ ಕಣ್ಣು ಕಾಣದಂತೆಯೂ, [QE][QS2]ಹೃದಯಗಳು ಗ್ರಹಿಸದಂತೆಯೂ ಮುಚ್ಚಿಬಿಟ್ಟಿದ್ದಾನೆ. [QE]
19. [QS]“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. [QE][QS2]ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, [QE][QS]ಮಾಂಸವನ್ನು ಸುಟ್ಟು ತಿಂದೆನಲ್ಲಾ. [QE][QS2]ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ? [QE][QS2]ಮರದ ತುಂಡಿಗೆ ಅಡ್ಡಬೀಳಬಹುದೋ?” [QE][QS]ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, [QE][QS2]ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ. [QE]
20. [QS]ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, [QE][QS2]ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. [QE][QS2]ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು. [QE][PBR]
21. [QS]“ಯಾಕೋಬೇ, ಇಸ್ರಾಯೇಲೇ! ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, [QE][QS2]ನೀನು ನನ್ನ ಸೇವಕನಾಗಿದ್ದೀ. [QE][QS]ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು. [QE][QS2]ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು. [QE]
22. [QS]ನಾನು ನಿನ್ನ ದ್ರೋಹಗಳನ್ನು ಮೋಡದಂತೆ ಅಳಿಸಿಬಿಟ್ಟಿದ್ದೇನೆ. [QE][QS2]ನಿನ್ನ ಪಾಪಗಳನ್ನು ಮುಂಜಾನೆಯ ಮಂಜಿನಂತೆ ಹಾರಿಸಿದ್ದೇನೆ. [QE][QS]ನನ್ನ ಕಡೆಗೆ ತಿರುಗಿಕೋ. [QE][QS2]ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದ್ದೇನೆ.” [QE][PBR]
23. [QS]ಆಕಾಶಗಳೇ, ಹರ್ಷಧ್ವನಿಗೈಯಿರಿ. [QE][QS2]ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. [QE][QS]ಭೂಮಿಯ ಕೆಳಭಾಗವೇ ಆರ್ಭಟಿಸು. [QE][QS2]ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. [QE][QS]ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. [QE][QS2]ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ. [QE]
24. {#1ಯೆರೂಸಲೇಮು ಜನರಿಂದ ತುಂಬಿಕೊಳ್ಳುವುದು } [QS]“ನಿನ್ನನ್ನು ಗರ್ಭದಿಂದ ರೂಪಿಸಿದವರೂ [QE][QS2]ನಿನ್ನ ವಿಮೋಚಕರೂ ಆದ ಯೆಹೋವ ದೇವರು ಇಂತೆನ್ನುತ್ತಾರೆ: [QE][PBR] [QS]“ಎಲ್ಲವನ್ನು ಉಂಟುಮಾಡಿದ [QE][QS2]ಯೆಹೋವ ದೇವರು ನಾನೇ. [QE][QS2]ನಾನೊಬ್ಬನೇ ಆಕಾಶವನ್ನು ವಿಸ್ತರಿಸಿ, [QE][QS2]ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ. [QE]
25. [QS]ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ [QE][QS2]ಮತ್ತು ಕಣಿ ಹೇಳುವವರನ್ನು ಹುಚ್ಚರನ್ನಾಗಿ ಮಾಡುವವನೂ [QE][QS]ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ, [QE][QS2]ಅವರ ತಿಳುವಳಿಕೆಯನ್ನು ಬುದ್ಧಿಹೀನವಾಗ ಮಾಡುವವನೂ [QE]
26. [QS]ತನ್ನ ಸೇವಕನ ಮಾತುಗಳನ್ನು ಸ್ಥಾಪಿಸುವವನು, [QE][QS2]ಮತ್ತು ತನ್ನ ದೂತರ ಆಲೋಚನೆಯನ್ನು ಪೂರೈಸುವವನು. [QE][PBR] [QS]“ಯೆರೂಸಲೇಮಿಗೆ, ‘ನೀನು ನಿವಾಸವಾಗುವೆ,’ [QE][QS2]ಯೆಹೂದ ಪಟ್ಟಣಗಳಿಗೆ, ‘ಅವು ಪುನಃ ಕಟ್ಟಲಾಗುವುದು,’ [QE][QS2]ಮತ್ತು ಅದರ ಹಾಳು ಸ್ಥಳಗಳಿಗೆ, ‘ನಾನು ಪುನಃಸ್ಥಾಪಿಸುವೆನು,’ ಎಂದು ಹೇಳುವವನು, [QE]
27. [QS]ಅಗಾಧಕ್ಕೆ, ‘ಒಣಗಿಸಿಬಿಡುವೆನು,’ [QE][QS2]‘ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು,’ ಎಂದು ಅನ್ನುವವನೂ; [QE]
28. [QS]ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, [QE][QS2]ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, [QE][QS]ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” [QE][QS2]ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’ [QE][PBR] [PBR]
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 44 / 66
ಆರಿಸಿಕೊಂಡ ಇಸ್ರಾಯೇಲು 1 “ಈಗಲಾದರೋ ನನ್ನ ಸೇವಕನಾದ ಯಾಕೋಬೇ ಮತ್ತು ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು: 2 ನಿನ್ನ ನಿರ್ಮಾಣ ಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು, ನಿನಗೆ ಸಹಾಯ ಮಾಡುವವರಾದ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಸೇವಕನಾದ ಯಾಕೋಬೇ, ನಾನು ಆಯ್ದುಕೊಂಡ ಯೆಶುರೂನೇ, ಭಯಪಡಬೇಡ. 3 ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು. 4 ನೀರಿನ ಕಾಲುವೆಗಳ ಬಳಿಯಲ್ಲಿ, ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು. 5 ಒಬ್ಬನು, ‘ನಾನು ಯೆಹೋವನವನು,’ ಅನ್ನುವನು, ಇನ್ನೊಬ್ಬನು ನಾನು, ‘ಯಾಕೋಬನ ಹೆಸರಿನವನು,’ ಎಂದು ಹೇಳಿಕೊಳ್ಳುವನು. ಮತ್ತೊಬ್ಬನು ತನ್ನ ಕೈಯ ಮೇಲೆ, ‘ಯೆಹೋವ ದೇವರಿಗೆ ಸ್ವಂತ,’ ಎಂದು ಬರೆಯಿಸಿಕೊಂಡು, ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡಹೆಸರನ್ನು ಇಟ್ಟುಕೊಳ್ಳುವನು. ವಿಗ್ರಹಗಳಲ್ಲ ಆದರೆ ಯೆಹೋವ ದೇವರೇ 6 “ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ. 7 ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ, ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರಬೇಕಾದದ್ದನ್ನು ಅವರು ನನಗೆ ತಿಳಿಸಲಿ. 8 ಹೆದರಬೇಡ, ಇಲ್ಲವೆ ಭಯಪಡಬೇಡ! ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ ಮತ್ತು ಅದನ್ನು ಪ್ರಕಟಿಸಲಿಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಇಲ್ಲ, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.” 9 ವಿಗ್ರಹಗಳನ್ನು ಕೆತ್ತುವವರು ನಿರರ್ಥಕರು. ಅವರ ಇಷ್ಟ ಬೊಂಬೆಗಳು ಏತಕ್ಕೂ ಬಾರವು. ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು. 10 ದೇವರನ್ನು ರೂಪಿಸಿದವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಎಂಥವರು? 11 ಅವನೂ, ಅವನ ಸಂಗಡಿಗರೂ ನಾಚಿಕೆಗೆ ಒಳಗಾಗುವರು ಮತ್ತು ಆ ಕೆತ್ತನೆಯ ಕೆಲಸದವರು ಮನುಷ್ಯ ಮಾತ್ರದವರೇ. ಅವರೆಲ್ಲರೂ ಒಟ್ಟುಗೂಡಿ ನಿಂತುಕೊಳ್ಳಲಿ. ಅವರು ಭಯಪಟ್ಟು, ಒಟ್ಟಿಗೆ ಲಜ್ಜೆಪಡುವರು. 12 ಕಮ್ಮಾರನು ಸಲಕರಣೆಯನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಅವನು ಸುತ್ತಿಗೆ ಹಿಡಿದು ತನ್ನ ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುತ್ತಾನೆ; ಅವನು ಹಸಿದು ಬಲಹೀನನಾಗಿದ್ದರೂ, ನೀರು ಕುಡಿಯದೇ ದಣಿಯುತ್ತಾನೆ. 13 ಬಡಗಿಯು ಮರಕ್ಕೆ ನೂಲನ್ನು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ. ಉಳಿಬಾಚಿಗಳಿಂದ ಕೆತ್ತುತ್ತಾನೆ. ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾರಕ್ಕೆ ತಂದು, ಮಂದಿರದಲ್ಲಿ ಇಡಲು ಮನುಷ್ಯನ ಅಂದದಂತೆ ರೂಪಿಸುತ್ತಾನೆ. 14 ಅರಣ್ಯದ ಮಧ್ಯದಲ್ಲಿ ಇರುವ ಮರಗಳಲ್ಲಿ ದೇವದಾರುಗಳನ್ನು ಕಡಿದು, ತುರಾಯಿ, ಸೈಪ್ರಸ್ ಮತ್ತು ಏಲಾ ಮರಗಳನ್ನು ತನ್ನ ಕೆಲಸಕ್ಕೋಸ್ಕರ ತೆಗೆದುಕೊಳ್ಳುತ್ತಾನೆ. ಪೀತದಾರ ಮರವನ್ನು ಅವನು ನೆಡಲು, ಮಳೆಯು ಅದನ್ನು ಬೆಳೆಯಿಸುವುದು. 15 ಆಗ ಅದು ಮನುಷ್ಯರು ಉರಿಸುವುದಕ್ಕಾಗುವುದು. ಏಕೆಂದರೆ ಅದರಿಂದ ಚಳಿಕಾಯಿಸಿಕೊಳ್ಳುತ್ತಾನೆ. ಅದನ್ನು ಬೆಂಕಿ ಹಚ್ಚಿ, ರೊಟ್ಟಿಯನ್ನು ಸುಡುತ್ತಾನೆ. ಅವನು ಅದರಿಂದ ಒಂದು ದೇವರನ್ನು ಮಾಡಿ, ಅದಕ್ಕೆ ನಮಸ್ಕರಿಸುತ್ತಾನೆ. ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡ ಬೀಳುವನು. 16 ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು. ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು. ಮಾಂಸವನ್ನು ಸುಟ್ಟು ತೃಪ್ತಿಹೊಂದುವನು. ಅವನು ಚಳಿಕಾಯಿಸಿಕೊಳ್ಳುತ್ತಾ, ಬೆಂಕಿಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು. 17 ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ, ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ಕಾಪಾಡು,” ಎಂದು ಬೇಡಿಕೊಳ್ಳುವನು. 18 ಅವರು ಏನೂ ತಿಳಿಯದವರು ಇಲ್ಲವೆ ಏನೂ ಗ್ರಹಿಸಲಾರದವರು. ಏಕೆಂದರೆ ಆತನು ಅವರ ಕಣ್ಣು ಕಾಣದಂತೆಯೂ, ಹೃದಯಗಳು ಗ್ರಹಿಸದಂತೆಯೂ ಮುಚ್ಚಿಬಿಟ್ಟಿದ್ದಾನೆ. 19 “ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸವನ್ನು ಸುಟ್ಟು ತಿಂದೆನಲ್ಲಾ. ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ. 20 ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು. 21 “ಯಾಕೋಬೇ, ಇಸ್ರಾಯೇಲೇ! ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನೀನು ನನ್ನ ಸೇವಕನಾಗಿದ್ದೀ. ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು. ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು. 22 ನಾನು ನಿನ್ನ ದ್ರೋಹಗಳನ್ನು ಮೋಡದಂತೆ ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಮುಂಜಾನೆಯ ಮಂಜಿನಂತೆ ಹಾರಿಸಿದ್ದೇನೆ. ನನ್ನ ಕಡೆಗೆ ತಿರುಗಿಕೋ. ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದ್ದೇನೆ.” 23 ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ. ಯೆರೂಸಲೇಮು ಜನರಿಂದ ತುಂಬಿಕೊಳ್ಳುವುದು 24 “ನಿನ್ನನ್ನು ಗರ್ಭದಿಂದ ರೂಪಿಸಿದವರೂ ನಿನ್ನ ವಿಮೋಚಕರೂ ಆದ ಯೆಹೋವ ದೇವರು ಇಂತೆನ್ನುತ್ತಾರೆ: “ಎಲ್ಲವನ್ನು ಉಂಟುಮಾಡಿದ ಯೆಹೋವ ದೇವರು ನಾನೇ. ನಾನೊಬ್ಬನೇ ಆಕಾಶವನ್ನು ವಿಸ್ತರಿಸಿ, ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ. 25 ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ ಮತ್ತು ಕಣಿ ಹೇಳುವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ, ಅವರ ತಿಳುವಳಿಕೆಯನ್ನು ಬುದ್ಧಿಹೀನವಾಗ ಮಾಡುವವನೂ 26 ತನ್ನ ಸೇವಕನ ಮಾತುಗಳನ್ನು ಸ್ಥಾಪಿಸುವವನು, ಮತ್ತು ತನ್ನ ದೂತರ ಆಲೋಚನೆಯನ್ನು ಪೂರೈಸುವವನು. “ಯೆರೂಸಲೇಮಿಗೆ, ‘ನೀನು ನಿವಾಸವಾಗುವೆ,’ ಯೆಹೂದ ಪಟ್ಟಣಗಳಿಗೆ, ‘ಅವು ಪುನಃ ಕಟ್ಟಲಾಗುವುದು,’ ಮತ್ತು ಅದರ ಹಾಳು ಸ್ಥಳಗಳಿಗೆ, ‘ನಾನು ಪುನಃಸ್ಥಾಪಿಸುವೆನು,’ ಎಂದು ಹೇಳುವವನು, 27 ಅಗಾಧಕ್ಕೆ, ‘ಒಣಗಿಸಿಬಿಡುವೆನು,’ ‘ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು,’ ಎಂದು ಅನ್ನುವವನೂ; 28 ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 44 / 66
×

Alert

×

Kannada Letters Keypad References