ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಯೆಶಾಯ
1. {#1ಬಾಬಿಲೋನಿನ ದೇವರುಗಳು } [QS]ಬೇಲ್ ದೇವತೆಯು ತಗ್ಗಿದೆ, ನೆಬೋ ದೇವತೆಯು ಕುಗ್ಗಿದೆ. [QE][QS2]ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು. [QE][QS]ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. [QE][QS2]ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು. [QE]
2. [QS]ಒಟ್ಟಿಗೆ ಕುಗ್ಗಿ ಬಗ್ಗಿವೆ. [QE][QS2]ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, [QE][QS2]ತಾವೇ ಸೆರೆಗೆ ಹೋದವು. [QE][PBR]
3. [QS]ಯಾಕೋಬನ ಮನೆತನದವರೇ, [QE][QS2]ಇಸ್ರಾಯೇಲ್ ಮನೆತನದಲ್ಲಿ ಉಳಿದಿರುವವರೇ, [QE][QS]ನಿಮ್ಮನ್ನು ಗರ್ಭದಲ್ಲಿ ಹೊತ್ತು, [QE][QS2]ಹುಟ್ಟಿದಂದಿನಿಂದ ಪಾಲಿಸುತ್ತಿದ್ದಾತನ ಮಾತನ್ನು ಕೇಳಿರಿ. [QE]
4. [QS]ನಿಮ್ಮ ಮುಪ್ಪಿನ ತನಕ ನಾನೇ ಆಧಾರ; [QE][QS2]ನೆರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು; [QE][QS]ನಾನೇ ಉಂಟುಮಾಡಿದೆನು; ನಾನೇ ಹೊರುವೆನು; [QE][QS2]ಹೌದು, ನಿಮ್ಮನ್ನು ಹೊತ್ತು, ಸಹಿಸಿ, ನಿರ್ವಹಿಸುವೆನು. [QE][PBR]
5. [QS]ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸುತ್ತೀರಿ? [QE][QS2]ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮಮಾಡುವಿರಿ? [QE]
6. [QS]ಚೀಲದಿಂದ ಚಿನ್ನವನ್ನು ಸುರಿದು, [QE][QS2]ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, [QE][QS]ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು, [QE][QS2]ಅವರು ಅದಕ್ಕೆ ಎರಗಿ ಪೂಜೆ ಮಾಡುವರು. [QE]
7. [QS]ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, [QE][QS2]ಪೀಠದ ಮೇಲೆ ಇಳಿಸಿ ನಿಲ್ಲಿಸುವರು. [QE][QS2]ಅದು ಅದರ ಸ್ಥಳದಿಂದ ಜರುಗದು. [QE][QS]ಹೌದು, ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರ ಕೊಡಲಾರದು ಇಲ್ಲವೆ [QE][QS2]ಅವನನ್ನು ಕಷ್ಟದಿಂದ ರಕ್ಷಿಸಲಾರದು. [QE][PBR]
8. [QS]ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, [QE][QS2]ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. [QE]
9. [QS]ಪುರಾತನ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ. [QE][QS2]ಏಕೆಂದರೆ ನಾನೇ ದೇವರು, ಮತ್ತೊಬ್ಬನಿಲ್ಲ. [QE][QS2]ನಾನೇ ದೇವರು, ನನಗೆ ಸರಿಸಮಾನನು ಇಲ್ಲ. [QE]
10. [QS]ಆರಂಭದಲ್ಲಿಯೇ ಅಂತ್ಯವನ್ನೂ, [QE][QS2]ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. [QE][QS]ನನ್ನ ಆಲೋಚನೆಯು ನಿಲ್ಲುವುದೆಂದೂ, [QE][QS2]ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ. [QE]
11. [QS]ಪೂರ್ವದಿಂದ ಒಂದು ಕ್ರೂರವಾದ ಪಕ್ಷಿಯೂ, [QE][QS2]ದೂರದೇಶದಿಂದ ನನ್ನ ಆಜ್ಞೆಯನ್ನು ನಡೆಸುವ ಮನುಷ್ಯನೂ ಬರಲಿ, ಎಂದು ಕರೆದಿದ್ದೇನೆ. [QE][QS]ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು. [QE][QS2]ಆಲೋಚಿಸಿದ್ದೇನೆ, ನಾನು ಅದನ್ನು ಮಾಡುವೆನು. [QE]
12. [QS]ಕಠಿಣ ಹೃದಯವುಳ್ಳವರೇ, [QE][QS2]ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ. [QE]
13. [QS]ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. [QE][QS2]ಅದು ಇನ್ನು ದೂರವಾಗಿರದು. [QE][QS2]ನನ್ನ ರಕ್ಷಣೆಯು ಇನ್ನು ತಡವಾಗದು, [QE][QS]ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ [QE][QS2]ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು. [QE]
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 46 / 66
ಬಾಬಿಲೋನಿನ ದೇವರುಗಳು 1 ಬೇಲ್ ದೇವತೆಯು ತಗ್ಗಿದೆ, ನೆಬೋ ದೇವತೆಯು ಕುಗ್ಗಿದೆ. ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು. ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು. 2 ಒಟ್ಟಿಗೆ ಕುಗ್ಗಿ ಬಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ತಾವೇ ಸೆರೆಗೆ ಹೋದವು. 3 ಯಾಕೋಬನ ಮನೆತನದವರೇ, ಇಸ್ರಾಯೇಲ್ ಮನೆತನದಲ್ಲಿ ಉಳಿದಿರುವವರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದಾತನ ಮಾತನ್ನು ಕೇಳಿರಿ. 4 ನಿಮ್ಮ ಮುಪ್ಪಿನ ತನಕ ನಾನೇ ಆಧಾರ; ನೆರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು; ನಾನೇ ಉಂಟುಮಾಡಿದೆನು; ನಾನೇ ಹೊರುವೆನು; ಹೌದು, ನಿಮ್ಮನ್ನು ಹೊತ್ತು, ಸಹಿಸಿ, ನಿರ್ವಹಿಸುವೆನು. 5 ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸುತ್ತೀರಿ? ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮಮಾಡುವಿರಿ? 6 ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆ ಮಾಡುವರು. 7 ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರ ಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು. 8 ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. 9 ಪುರಾತನ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ. ಏಕೆಂದರೆ ನಾನೇ ದೇವರು, ಮತ್ತೊಬ್ಬನಿಲ್ಲ. ನಾನೇ ದೇವರು, ನನಗೆ ಸರಿಸಮಾನನು ಇಲ್ಲ. 10 ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ. 11 ಪೂರ್ವದಿಂದ ಒಂದು ಕ್ರೂರವಾದ ಪಕ್ಷಿಯೂ, ದೂರದೇಶದಿಂದ ನನ್ನ ಆಜ್ಞೆಯನ್ನು ನಡೆಸುವ ಮನುಷ್ಯನೂ ಬರಲಿ, ಎಂದು ಕರೆದಿದ್ದೇನೆ. ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಮಾಡುವೆನು. 12 ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ. 13 ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 46 / 66
×

Alert

×

Kannada Letters Keypad References