1. [QS]ನಮ್ಮ ಸುದ್ದಿಯನ್ನು ಯಾರು ನಂಬಿದ್ದಾರೆ? [QE][QS2]ಯೆಹೋವ ದೇವರ ಬಾಹುವು ಯಾರಿಗೆ ಪ್ರಕಟವಾಯಿತು? [QE]
2. [QS]ಅವನು ಚಿಗುರಿನಂತೆಯೂ, ಒಣ ನೆಲದಿಂದ ಹುಟ್ಟಿಬರುವ [QE][QS2]ಬೇರಿನಂತೆಯೂ ಯೆಹೋವ ದೇವರ ಮುಂದೆ ಬೆಳೆಯುವನು. [QE][QS]ಅವನಿಗೆ ಯಾವ ಸೌಂದರ್ಯವಾಗಲಿ ಇಲ್ಲವೆ ಘನತೆಯಾಗಲಿ ಇರಲಿಲ್ಲ. [QE][QS2]ನಾವು ಅವನನ್ನು ನೋಡಿದಾಗ, ಅವನಲ್ಲಿ ಆಕರ್ಷಿಸತಕ್ಕ ಯಾವ ಚಂದವು ಇರಲಿಲ್ಲ. [QE]
3. [QS]ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, [QE][QS2]ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. [QE][QS]ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. [QE][QS2]ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು. [QE][PBR]
4. [QS]ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು; [QE][QS2]ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು. [QE][QS]ಆದರೂ ನಾವು ಆತನನ್ನು ಪೆಟ್ಟು ತಿಂದವನು, [QE][QS2]ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು. [QE]
5. [QS]ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು. [QE][QS2]ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು. [QE][QS]ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು. [QE][QS2]ಆತನ ಗಾಯಗಳಿಂದ ನಮಗೆ ಗುಣವಾಯಿತು. [QE]
6. [QS]ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. [QE][QS2]ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. [QE][QS]ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು [QE][QS2]ಆತನ ಮೇಲೆ ಹಾಕಿದರು. [QE][PBR]
7. [QS]ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು. [QE][QS2]ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. [QE][QS]ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ, [QE][QS2]ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ [QE][QS2]ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. [QE]
8. [QS]ಆತನನ್ನು ದಬ್ಬಾಳಿಕೆಯಿಂದಲೂ, ನ್ಯಾಯತೀರ್ಪಿನಿಂದಲೂ ಎಳೆದುಕೊಂಡು ಹೋದರು. [QE][QS2]ಆತನ ಕಾಲದವರಲ್ಲಿ ಯಾರು ಮರುಗಿದರು? [QE][QS]ಏಕೆಂದರೆ ಆತನನ್ನು ಜೀವಿತರ ಲೋಕದಿಂದ ತೆಗೆದುಹಾಕಿದರು. [QE][QS2]ನನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಶಿಕ್ಷೆಯನ್ನು ಹೊಂದಿದನು. [QE]
9. [QS]ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, [QE][QS2]ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, [QE][QS]ಅವನು ಸತ್ತಾಗ ದುಷ್ಟರ ಮಧ್ಯೆ [QE][QS2]ಪುಷ್ಟರ ನಡುವೆ ಅವನನ್ನು ಹೂಣಿಟ್ಟರು. [QE][PBR]
10. [QS]ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. [QE][QS2]ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. [QE][QS2]ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, [QE][QS]ಆತನು ತನ್ನ ಸಂತಾನವನ್ನು ಕಾಣುವನು. [QE][QS2]ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ [QE][QS2]ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು. [QE]
11. [QS]ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, [QE][QS2]ಜೀವದ ಬೆಳಕನ್ನು ಕಂಡು ತೃಪ್ತನಾಗುವನು. [QE][QS]ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. [QE][QS2]ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು. [QE]
12. [QS]ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು [QE][QS2]ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. [QE][QS]ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, [QE][QS2]ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. [QE][QS]ಅನೇಕರ ಪಾಪವನ್ನು ಹೊತ್ತುಕೊಂಡು [QE][QS2]ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು. [QE]