1. {#1ಯೆಹೋವ ದೇವರ ದಯೆಯ ವರ್ಷ } [QS]ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. [QE][QS2]ಏಕೆಂದರೆ ಯೆಹೋವ ದೇವರು [QE][QS2]ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. [QE][QS]ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, [QE][QS2]ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು [QE][QS2]ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು [QE]
2. [QS]ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ, [QE][QS2]ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ, [QE][QS]ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ, [QE]
2. [QS2]ಚೀಯೋನಿನಲ್ಲಿ ದುಃಖಿಸುವವರಿಗೆ [QE][QS]ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, [QE][QS2]ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, [QE][QS]ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು [QE][QS2]ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. [QE][QS]ಆಗ ಅವರಿಗೆ ನೀತಿವೃಕ್ಷಗಳೆಂದೂ, [QE][QS2]ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ [QE][QS2]ನೆಟ್ಟ ಗಿಡಗಳೆಂದೂ ಹೆಸರಾಗುವುದು. [QE][PBR]
4. [QS]ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ, [QE][QS2]ಮುಂಚೆ ಹಾಳುಬಿದ್ದವುಗಳನ್ನು ಎಬ್ಬಿಸುವರು. [QE][QS]ಅನೇಕ ತಲಾಂತರಗಳಿಂದ ಹಾಳಾದ ಪಟ್ಟಣಗಳನ್ನೂ, [QE][QS2]ನೂತನ ಪಡಿಸುವರು. [QE]
5. [QS]ಪರನಾಡಿನವರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು. [QE][QS2]ಇತರರು ನಿಮಗೆ ನೇಗಿಲು ಹೂಡುವವರೂ, ದ್ರಾಕ್ಷಿತೋಟ ಕಾಯುವವರೂ ಆಗಿರುವರು. [QE]
6. [QS]ಆದರೆ ನೀವು ಯೆಹೋವ ದೇವರ ಯಾಜಕರೆಂಬ ಬಿರುದನ್ನು ಹೊಂದುವಿರಿ. [QE][QS2]ನಮ್ಮ ದೇವರ ಸೇವಕರೆಂದು ನಿಮಗೆ ಹೆಸರಾಗುವುದು, [QE][QS]ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ. [QE][QS2]ಅವರ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ. [QE][PBR]
7. [QS]ನಿಮ್ಮ ನಾಚಿಕೆಗೆ ಬದಲಾಗಿ ಮಾನವು ಎರಡರಷ್ಟಾಗುವುದು. [QE][QS2]ಅವಮಾನಕ್ಕೆ ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು. [QE][QS]ಆದ್ದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನಮಾಡಿಕೊಳ್ಳುವರು. [QE][QS2]ನಿತ್ಯವಾದ ಸಂತೋಷವು ನಿಮಗೆ ಆಗುವುದು. [QE][PBR]
8. [QS]ಏಕೆಂದರೆ ಯೆಹೋವನಾದ ನಾನು ನ್ಯಾಯವನ್ನು ಪ್ರೀತಿಮಾಡುತ್ತೇನೆ. [QE][QS2]ಸುಲಿಗೆಯನ್ನೂ ಅನ್ಯಾಯವನ್ನೂ ಹಗೆಮಾಡುತ್ತೇನೆ. [QE][QS]ನನ್ನ ನಿಷ್ಠೆಯಲ್ಲಿ ನಾನು ನನ್ನ ಜನರಿಗೆ ಪ್ರತಿಫಲ ನೀಡುತ್ತೇನೆ [QE][QS2]ಮತ್ತು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. [QE]
9. [QS]ಆಗ ಅವರ ಸಂತಾನವು ಇತರ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು. [QE][QS2]ಅವರಿಂದಾದ ಉತ್ಪತ್ತಿ ಜನರ ಮಧ್ಯದಲ್ಲಿ ತಿಳಿಸಲಾಗುವುದು. [QE][QS]ಅವರನ್ನು ನೋಡುವವರೆಲ್ಲರೂ, [QE][QS2]ಅವರೇ ಯೆಹೋವ ದೇವರು ಆಶೀರ್ವದಿಸಿದ ಸಂತಾನ ಎಂದು ಒಪ್ಪಿಕೊಳ್ಳುವರು. [QE][PBR]
10. [QS]ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. [QE][QS2]ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. [QE][QS]ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, [QE][QS2]ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, [QE][QS]ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. [QE][QS2]ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ. [QE]
11. [QS]ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, [QE][QS2]ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, [QE][QS]ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, [QE][QS2]ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು. [QE]