ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆಶಾಯ
1. {#1ಚೀಯೋನಿಗೆ ಹೊಸ ಹೆಸರು } [QS]ಚೀಯೋನಿಗೋಸ್ಕರ ನಾನು ಮೌನವಾಗಿರುವುದಿಲ್ಲ! [QE][QS2]ಯೆರೂಸಲೇಮಿಗೋಸ್ಕರ ಅದರ ವಿಮೋಚನೆಯು ಪ್ರಕಾಶದಂತೆಯೂ, [QE][QS]ಅದರ ರಕ್ಷಣೆಯು ಉರಿಯುವ ದೀವಿಟಿಗೆಯಂತೆಯೂ [QE][QS2]ಹೊರಡುವವರೆಗೆ ನಾನು ವಿಶ್ರಾಂತಿಯಿಂದ ಇರುವುದಿಲ್ಲ. [QE]
2. [QS]ಆಗ ಇತರ ಜನಾಂಗಗಳು ನಿನ್ನ ವಿಮೋಚನೆಯನ್ನೂ, [QE][QS2]ಅರಸರೆಲ್ಲರು ನಿನ್ನ ಮಹಿಮೆಯನ್ನೂ ನೋಡುವರು. [QE][QS]ಯೆಹೋವ ದೇವರ ಬಾಯಿ ನೇಮಿಸುವ [QE][QS2]ಹೊಸ ಹೆಸರು ನಿನಗೆ ದೊರೆಯುವುದು. [QE]
3. [QS]ಯೆಹೋವ ದೇವರ ಕೈಯಲ್ಲಿ ಮಹಿಮೆಯ ಕಿರೀಟವಾಗಿಯೂ, [QE][QS2]ನಿನ್ನ ದೇವರ ಅಂಗೈಯಲ್ಲಿ ರಾಜ ಮುಕುಟವಾಗಿಯೂ ಇರುವೆ. [QE]
4. [QS]ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ [QE][QS2]ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. [QE][QS]ಆದರೆ ನೀನು ಹೆಪ್ಸಿಬಾ[* ಹೆಪ್ಸಿಬಾ ಅಂದರೆ ಮೆಚ್ಚಿದವಳು ] ಎಂದೂ [QE][QS2]ನಿನ್ನ ದೇಶಕ್ಕೆ ಬ್ಯೂಲಾ [† ಬ್ಯೂಲಾ ಅಂದರೆ ವಿವಾಹಿತೆ ] ಎಂದೂ ಹೆಸರಾಗುವುದು. [QE][QS]ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, [QE][QS2]ನಿನ್ನ ದೇಶಕ್ಕೆ ವಿವಾಹವಾಗುವುದು. [QE]
5. [QS]ಯುವಕನು ಕನ್ಯೆ ಯುವತಿಯನ್ನು ವರಿಸುವಂತೆ, [QE][QS2]ನಿನ್ನ ಜನರು ದೇಶವನ್ನು ಸ್ವಾಧೀನಪಡಿಸಿಕೊಳ್ಳುವರು. [QE][QS]ವರನು ವಧುವಿನ ಮೇಲೆ ಆನಂದ ಪಡುವ ಪ್ರಕಾರ, [QE][QS2]ನಿನ್ನ ದೇವರು ನಿನ್ನ ಮೇಲೆ ಆನಂದಿಸುವರು. [QE][PBR]
6. [QS]ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ. [QE][QS2]ಅವರು ಹಗಲಿರುಳು ಮೌನವಾಗಿರುವುದೇ ಇಲ್ಲ. [QE][QS]ಯೆಹೋವ ದೇವರಿಗೆ ಜ್ಞಾಪಕಪಡಿಸುವವರೇ, [QE][QS2]ನೀವೂ ಸುಮ್ಮನಿರಬೇಡಿರಿ. [QE]
7. [QS]ಯೆರೂಸಲೇಮನ್ನು ಸ್ಥಾಪಿಸಿ, [QE][QS2]ಲೋಕಪ್ರಸಿದ್ಧಿಗೆ ತರುವ ತನಕ ಆತನಿಗೂ ವಿಶ್ರಾಂತಿ ಕೊಡಬೇಡಿರಿ. [QE][PBR]
8. [QS]ಯೆಹೋವ ದೇವರು ತನ್ನ ಬಲಗೈಯಿಂದಲೂ, [QE][QS2]ತನ್ನ ಬಲವುಳ್ಳ ತೋಳಿನಿಂದಲೂ ಆಣೆಯಿಟ್ಟು ಹೇಳಿದ್ದೇನೆಂದರೆ: [QE][QS]“ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು [QE][QS2]ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವುದಿಲ್ಲ. [QE][QS]ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು [QE][QS2]ವಿದೇಶಿಯರು ಕುಡಿಯುವುದಿಲ್ಲ. [QE]
9. [QS]ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆ ಹಾಕಿದವರೇ, [QE][QS2]ಅದನ್ನು ಉಂಡು ಯೆಹೋವ ದೇವರನ್ನು ಸ್ತುತಿಸುವರು. [QE][QS]ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ [QE][QS2]ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು.” [QE][PBR]
10. [QS]ಹಾದುಹೋಗಿರಿ, ಬಾಗಿಲುಗಳಲ್ಲಿ ಹಾದುಹೋಗಿರಿ, [QE][QS2]ಜನರಿಗೆ ದಾರಿಯನ್ನು ಸಿದ್ಧಮಾಡಿರಿ, ಎತ್ತರಿಸಿರಿ, [QE][QS]ರಾಜಮಾರ್ಗವನ್ನು ಎತ್ತರಿಸಿ, ಕಲ್ಲುಗಳನ್ನು ಆಯ್ದು ಕೂಡಿಸಿರಿ. [QE][QS2]ಜನಾಂಗಗಳಿಗೋಸ್ಕರ ಧ್ವಜವನ್ನು ಎತ್ತಿರಿ. [QE][PBR]
11. [QS]ಇಗೋ, ಯೆಹೋವ ದೇವರು ಭೂಮಿಯ [QE][QS2]ಅಂತ್ಯದವರೆಗೆ ಹೀಗೆ ಘೋಷಣೆ ಮಾಡಿದ್ದಾರೆ: [QE][QS]“ಚೀಯೋನಿನ ಪುತ್ರಿ ಇಗೋ, [QE][QS2]‘ನಿನ್ನ ರಕ್ಷಣೆಯು ಬರುತ್ತದೆ. [QE][QS]ಆತನ ಬಹುಮಾನವು ಆತನ ಸಂಗಡ, [QE][QS2]ಆತನ ಪ್ರತಿಫಲವು ಆತನ ಮುಂದೆಯೂ ಇದೆ ಎಂದು ಹೇಳಿರಿ.’ ” [QE]
12. [QS]ಆಗ ಅವರು, ಪರಿಶುದ್ಧ ಜನರೂ, [QE][QS2]ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು [QE][QS]ನಿನಗೆ ಹುಡುಕಿದ ಹಾಗೂ [QE][QS2]ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು. [QE]
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 62 / 66
ಚೀಯೋನಿಗೆ ಹೊಸ ಹೆಸರು 1 ಚೀಯೋನಿಗೋಸ್ಕರ ನಾನು ಮೌನವಾಗಿರುವುದಿಲ್ಲ! ಯೆರೂಸಲೇಮಿಗೋಸ್ಕರ ಅದರ ವಿಮೋಚನೆಯು ಪ್ರಕಾಶದಂತೆಯೂ, ಅದರ ರಕ್ಷಣೆಯು ಉರಿಯುವ ದೀವಿಟಿಗೆಯಂತೆಯೂ ಹೊರಡುವವರೆಗೆ ನಾನು ವಿಶ್ರಾಂತಿಯಿಂದ ಇರುವುದಿಲ್ಲ. 2 ಆಗ ಇತರ ಜನಾಂಗಗಳು ನಿನ್ನ ವಿಮೋಚನೆಯನ್ನೂ, ಅರಸರೆಲ್ಲರು ನಿನ್ನ ಮಹಿಮೆಯನ್ನೂ ನೋಡುವರು. ಯೆಹೋವ ದೇವರ ಬಾಯಿ ನೇಮಿಸುವ ಹೊಸ ಹೆಸರು ನಿನಗೆ ದೊರೆಯುವುದು. 3 ಯೆಹೋವ ದೇವರ ಕೈಯಲ್ಲಿ ಮಹಿಮೆಯ ಕಿರೀಟವಾಗಿಯೂ, ನಿನ್ನ ದೇವರ ಅಂಗೈಯಲ್ಲಿ ರಾಜ ಮುಕುಟವಾಗಿಯೂ ಇರುವೆ. 4 ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ* ಹೆಪ್ಸಿಬಾ ಅಂದರೆ ಮೆಚ್ಚಿದವಳು ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಬ್ಯೂಲಾ ಅಂದರೆ ವಿವಾಹಿತೆ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು. 5 ಯುವಕನು ಕನ್ಯೆ ಯುವತಿಯನ್ನು ವರಿಸುವಂತೆ, ನಿನ್ನ ಜನರು ದೇಶವನ್ನು ಸ್ವಾಧೀನಪಡಿಸಿಕೊಳ್ಳುವರು. ವರನು ವಧುವಿನ ಮೇಲೆ ಆನಂದ ಪಡುವ ಪ್ರಕಾರ, ನಿನ್ನ ದೇವರು ನಿನ್ನ ಮೇಲೆ ಆನಂದಿಸುವರು. 6 ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ. ಅವರು ಹಗಲಿರುಳು ಮೌನವಾಗಿರುವುದೇ ಇಲ್ಲ. ಯೆಹೋವ ದೇವರಿಗೆ ಜ್ಞಾಪಕಪಡಿಸುವವರೇ, ನೀವೂ ಸುಮ್ಮನಿರಬೇಡಿರಿ. 7 ಯೆರೂಸಲೇಮನ್ನು ಸ್ಥಾಪಿಸಿ, ಲೋಕಪ್ರಸಿದ್ಧಿಗೆ ತರುವ ತನಕ ಆತನಿಗೂ ವಿಶ್ರಾಂತಿ ಕೊಡಬೇಡಿರಿ. 8 ಯೆಹೋವ ದೇವರು ತನ್ನ ಬಲಗೈಯಿಂದಲೂ, ತನ್ನ ಬಲವುಳ್ಳ ತೋಳಿನಿಂದಲೂ ಆಣೆಯಿಟ್ಟು ಹೇಳಿದ್ದೇನೆಂದರೆ: “ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವುದಿಲ್ಲ. ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ವಿದೇಶಿಯರು ಕುಡಿಯುವುದಿಲ್ಲ. 9 ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆ ಹಾಕಿದವರೇ, ಅದನ್ನು ಉಂಡು ಯೆಹೋವ ದೇವರನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು.” 10 ಹಾದುಹೋಗಿರಿ, ಬಾಗಿಲುಗಳಲ್ಲಿ ಹಾದುಹೋಗಿರಿ, ಜನರಿಗೆ ದಾರಿಯನ್ನು ಸಿದ್ಧಮಾಡಿರಿ, ಎತ್ತರಿಸಿರಿ, ರಾಜಮಾರ್ಗವನ್ನು ಎತ್ತರಿಸಿ, ಕಲ್ಲುಗಳನ್ನು ಆಯ್ದು ಕೂಡಿಸಿರಿ. ಜನಾಂಗಗಳಿಗೋಸ್ಕರ ಧ್ವಜವನ್ನು ಎತ್ತಿರಿ. 11 ಇಗೋ, ಯೆಹೋವ ದೇವರು ಭೂಮಿಯ ಅಂತ್ಯದವರೆಗೆ ಹೀಗೆ ಘೋಷಣೆ ಮಾಡಿದ್ದಾರೆ: “ಚೀಯೋನಿನ ಪುತ್ರಿ ಇಗೋ, ‘ನಿನ್ನ ರಕ್ಷಣೆಯು ಬರುತ್ತದೆ. ಆತನ ಬಹುಮಾನವು ಆತನ ಸಂಗಡ, ಆತನ ಪ್ರತಿಫಲವು ಆತನ ಮುಂದೆಯೂ ಇದೆ ಎಂದು ಹೇಳಿರಿ.’ ” 12 ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 62 / 66
×

Alert

×

Kannada Letters Keypad References