1. {#1ನ್ಯಾಯತೀರ್ಪು ಮತ್ತು ರಕ್ಷಣೆ } [QS]“ಕೇಳದವರಿಗೂ ನಾನು ನನ್ನನ್ನು ಪ್ರಕಟಿಸಿಕೊಂಡಿದ್ದೇನೆ. [QE][QS2]ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. [QE][QS]ನನ್ನ ಹೆಸರನ್ನು ಕರೆಯದ ಜನಾಂಗಕ್ಕೆ, [QE][QS2]‘ಇಗೋ, ಇದ್ದೇನೆ; ಇಗೋ, ಇದ್ದೇನೆ,’ ಎಂದು ಹೇಳಿದೆನು. [QE]
2. [QS]ಒಳ್ಳೆಯದಲ್ಲದ ಮಾರ್ಗದಲ್ಲಿ [QE][QS2]ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು [QE][QS]ತಿರುಗಿಬೀಳುವ ಜನರಿಗೆ ದಿನವೆಲ್ಲಾ [QE][QS2]ನಾನು ಕೈಚಾಚಿ ಕರೆದೆನು. [QE]
3. [QS]ಇವರು ಯಾವಾಗಲೂ ನನ್ನ ಮುಖದ ಮುಂದೆ [QE][QS2]ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು. [QE][QS]ತೋಟಗಳಲ್ಲಿ ಬಲಿ ಅರ್ಪಿಸಿ, [QE][QS2]ಇಟ್ಟಿಗೆಯ ಬಲಿಪೀಠದ ಮೇಲೆ ಧೂಪ ಸುಡುವರು. [QE]
4. [QS]ಸಮಾಧಿಗಳಲ್ಲಿ ಉಳಿದು, [QE][QS2]ಗವಿಗಳಲ್ಲಿ ತಂಗುವರು. [QE][QS]ಹಂದಿಯ ಮಾಂಸವನ್ನು ತಿನ್ನುವರು [QE][QS2]ತಮ್ಮ ಪಾತ್ರೆಗಳಲ್ಲಿ ಅಶುದ್ಧ ಪದಾರ್ಥಗಳ ಸಾರನ್ನು ಇಟ್ಟುಕೊಂಡು, [QE]
5. [QS]‘ನಿನ್ನಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ. [QE][QS2]ಏಕೆಂದರೆ ನಿನಗಿಂತ ಪರಿಶುದ್ಧನಾಗಿದ್ದೇನೆ,’ ಎಂದು ಹೇಳುವರು. [QE][QS]ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ, [QE][QS2]ದಿನವೆಲ್ಲಾ ಉರಿಯುವ ಬೆಂಕಿಯಾಗಿಯೂ ಇದ್ದಾರೆ. [QE][PBR]
6. [QS]“ನನ್ನ ಮುಂದೆ ಅದು ಬರೆಯಲಾಗಿದೆ. [QE][QS2]ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ. [QE][QS2]ಅವರ ಮಡಿಲಲ್ಲಿ ಪ್ರತಿಫಲ ಕೊಡುತ್ತೇನೆ. [QE]
7. [QS]ನಿಮ್ಮ ಪಾಪಗಳಿಗೂ, ನಿಮ್ಮ ತಂದೆಗಳ ಪಾಪಗಳಿಗೂ ಕೂಡ ಪ್ರತಿಫಲ ಕೊಡುತ್ತೇನೆ” [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE][QS]“ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು, [QE][QS2]ಗುಡ್ಡಗಳ ಮೇಲೆ ನನ್ನನ್ನು ಪರಿಹಾಸ್ಯ ಮಾಡಿದರಲ್ಲಾ. [QE][QS]ಹೀಗಿರುವುದರಿಂದ ಅವರ ಹಿಂದಿನ ಕೆಲಸಗಳನ್ನು [QE][QS2]ಅವರ ಮಡಿಲಲ್ಲಿ ಅಳೆದು ಸುರಿಸುವೆನು.” [QE]
8. [PS]ಯೆಹೋವ ದೇವರು ಹೀಗೆನ್ನುತ್ತಾರೆ: [PE][QS]“ರಸ ದೊರೆಯಬಹುದಾದ ದ್ರಾಕ್ಷಿ ಗೊಂಚಲನ್ನು [QE][QS2]ಒಬ್ಬನು ನೋಡಿ, ‘ಹಾಳು ಮಾಡಬೇಡ, [QE][QS2]ಅದರಲ್ಲಿ ಪ್ರಯೋಜನವಿದೆ,’ [QE][QS]ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು [QE][QS2]ಇವರನ್ನೆಲ್ಲಾ ಹಾಳುಮಾಡಬಾರದು ಎಂದುಕೊಳ್ಳುವೆನು. [QE]
9. [QS]ಯಾಕೋಬಿನೊಳಗಿಂದ ಒಂದು ಸಂತಾನವನ್ನೂ, [QE][QS2]ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನು ಹೊರಗೆ ಬರಮಾಡುವೆನು. [QE][QS]ನಾನು ಆಯ್ದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು. [QE][QS2]ನನ್ನ ಸೇವಕರು ಅದರಲ್ಲಿ ವಾಸವಾಗುವರು. [QE]
10. [QS]ನನ್ನನ್ನು ಹುಡುಕುವ ನನ್ನ ಜನರಿಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ, [QE][QS2]ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾಗಿಯೂ ಇರುವುದು, [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE][PBR]
11. [QS]“ಆದರೆ ಯೆಹೋವನಾದ ನನ್ನನ್ನು ತೊರೆದು, [QE][QS2]ನನ್ನ ಪವಿತ್ರ ಪರ್ವತವನ್ನು ಮರೆತು, [QE][QS]ಶುಭದಾಯಕ ದೇವತೆಗೆ ಔತಣವನ್ನು ಅಣಿಮಾಡಿ, [QE][QS2]ಗಾದ್ ಎಂಬ ಅದೃಷ್ಟ ದೇವತೆಗೆ ಮದ್ಯವನ್ನು ತುಂಬಾ ಬೆರೆಸಿದ ನಿಮಗೆ [QE]
12. [QS]ಖಡ್ಗವನ್ನೇ ಗತಿಯಾಗ ಮಾಡುವೆನು. [QE][QS2]ಆದ್ದರಿಂದ ನಿಮ್ಮನ್ನು ಖಡ್ಗಕ್ಕೆ ನೇಮಿಸುವೆನು. [QE][QS2]ನೀವೆಲ್ಲರು ಕೊಲೆಗೆ ಬೊಗ್ಗಿಕೊಳ್ಳುವಿರಿ. [QE][QS]ಏಕೆಂದರೆ, ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ ನೀವು ಕೇಳಲಿಲ್ಲ. [QE][QS2]ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ. [QE][QS2]ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.” [QE]
13. [PS]ಹೀಗಿರುವುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: [PE][QS]“ನನ್ನ ಸೇವಕರು ತಿನ್ನುವರು. [QE][QS2]ಆದರೆ ನೀವು ಹಸಿದಿರುವಿರಿ. [QE][QS]ನನ್ನ ಸೇವಕರು ಕುಡಿಯುವರು, [QE][QS2]ಆದರೆ ನೀವು ಬಾಯಾರಿ ಇರುವಿರಿ. [QE][QS]ಇಗೋ, ನನ್ನ ಸೇವಕರು ಸಂತೋಷಪಡುವರು, [QE][QS2]ಆದರೆ ನೀವು ನಾಚಿಕೆ ಪಡುವಿರಿ. [QE]
14. [QS]ಇಗೋ, ನನ್ನ ಸೇವಕರು [QE][QS2]ಹೃದಯದ ಆನಂದದಿಂದ ಹಾಡುವರು, [QE][QS]ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ [QE][QS2]ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ. [QE]
15. [QS]ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ [QE][QS2]ಶಾಪವಾಗಿ ಉಳಿಸುವಿರಿ. [QE][QS]ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, [QE][QS2]ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು. [QE]
16. [QS]ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸುವವನು, [QE][QS2]ಸತ್ಯ ದೇವರಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವನು; [QE][QS]ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು, ಸತ್ಯ ದೇವರಲ್ಲಿ ಆಣೆ ಇಟ್ಟುಕೊಳ್ಳುವನು. [QE][QS2]ಏಕೆಂದರೆ ಮುಂಚಿನ ಕಷ್ಟಗಳು ಮರೆತು ಹೋಗಿವೆ, [QE][QS2]ಮತ್ತು ಅವು ನನ್ನ ಕಣ್ಣಿಗೆ ಮರೆಯಾಗಿವೆ. [QE]
17. {#1ಹೊಸ ಆಕಾಶವೂ, ಹೊಸ ಭೂಮಿಯೂ } [QS]“ನಾನು ಹೊಸ ಆಕಾಶವನ್ನೂ, [QE][QS2]ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. [QE][QS]ಮುಂಚಿನವುಗಳು ಜ್ಞಾಪಕದಲ್ಲಿರುವುದಿಲ್ಲ [QE][QS2]ಇಲ್ಲವೆ ಅವು ಸ್ಮರಣೆಗೆ ಬರುವುದಿಲ್ಲ. [QE]
18. [QS]ಆದರೆ ನಾನು ಸೃಷ್ಟಿಸುವುದರ ವಿಷಯದಲ್ಲಿ ಸಂತೋಷಿಸಿ, [QE][QS2]ಎಂದೆಂದಿಗೂ ಉಲ್ಲಾಸಪಡಿರಿ. [QE][QS]ಏಕೆಂದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸವನ್ನೂ, [QE][QS2]ನನ್ನ ಜನರಲ್ಲಿ ಸಂತೋಷವನ್ನೂ ಸೃಷ್ಟಿಸುತ್ತೇನೆ. [QE]
19. [QS]ಯೆರೂಸಲೇಮಿನಲ್ಲಿ ಉಲ್ಲಾಸಿಸಿ, [QE][QS2]ನನ್ನ ಜನರಲ್ಲಿ ಸಂತೋಷ ಪಡುವೆನು. [QE][QS]ಅದರಲ್ಲಿ ಅಳುವ ಧ್ವನಿಯೂ, [QE][QS2]ಪ್ರಲಾಪದ ಧ್ವನಿಯೂ ಇನ್ನು ಕೇಳಿಬರುವುದಿಲ್ಲ. [QE][PBR]
20. [QS]“ಅಲ್ಲಿ ಕೆಲವು ದಿನಗಳು ಮಾತ್ರ ಬದುಕತಕ್ಕ ಕೂಸೂ, [QE][QS2]ವೃದ್ಧನೂ ಇರುವುದಿಲ್ಲ. [QE][QS]ಮಗುವು ನೂರು ವರುಷದವನಾಗಿ ಸಾಯುವುದು. [QE][QS2]ಆದರೆ ನೂರು ವರುಷವನ್ನು ತಲುಪಲು ವಿಫಲನಾದವನನ್ನು ಶಾಪಗ್ರಸ್ತ ಎಂದು ಪರಿಗಣಿಸಲಾಗುತ್ತದೆ. [QE]
21. [QS]ಇದಲ್ಲದೆ ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; [QE][QS2]ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು. [QE]
22. [QS]ಅವರು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಿಲ್ಲ. [QE][QS2]ಅವರು ನೆಟ್ಟ ತೋಟದ ಫಲವನ್ನು ಇನ್ನೊಬ್ಬರು ತಿನ್ನುವುದಿಲ್ಲ. [QE][QS]ಏಕೆಂದರೆ, ಮರಗಳ ಹಾಗೆ ನನ್ನ ಜನರು ಬಹುಕಾಲ ಬಾಳುವರು. [QE][QS2]ನಾನು ಆಯ್ದುಕೊಂಡವರು ತಮ್ಮ ಕೈಕೆಲಸಗಳನ್ನು ಅನುಭವಿಸುವರು. [QE]
23. [QS]ಅವರು ವ್ಯರ್ಥವಾಗಿ ದುಡಿಯರು. [QE][QS2]ಕಷ್ಟವನ್ನು ಎದುರುಗೊಳ್ಳುವುದಿಲ್ಲ. [QE][QS]ಏಕೆಂದರೆ ಅವರು ಯೆಹೋವ ದೇವರ ಆಶೀರ್ವಾದ ಹೊಂದಿದವರ ಸಂತಾನವಾಗಿದ್ದಾರೆ. [QE][QS2]ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವಾದ ಹೊಂದುವುದು. [QE]
24. [QS]ಅವರು ಕರೆಯುವುದಕ್ಕಿಂತ ಮುಂಚೆ ನಾನು ಉತ್ತರಕೊಡುವೆನು. [QE][QS2]ಅವರು ಇನ್ನೂ ಮಾತನಾಡುತ್ತಿರುವಾಗಲೇ ನಾನು ಕೇಳುವೆನು. [QE]
25. [QS]ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; [QE][QS2]ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವುದು; [QE][QS2]ಹಾವಿಗೆ ಮಣ್ಣೇ ಆಹಾರವಾಗುವುದು; [QE][QS]ಅವು ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ [QE][QS2]ಯಾವ ಕೇಡೂ ಮಾಡುವುದಿಲ್ಲ, ನಾಶವೂ ಮಾಡುವುದಿಲ್ಲ,” [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE]