ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಯೆರೆಮಿಯ
1. [PS]ಬೆನ್ಯಾಮೀನ್ ಸೀಮೆಗೆ ಸೇರಿ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.
2. ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವ ದೇವರ ವಾಕ್ಯವು ಇವನಿಗೆ ಕೇಳಿಬಂತು.
3. ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಕಾಲದ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆ ಹೋಗುವ ತನಕ ಯೆಹೋವ ದೇವರ ವಾಕ್ಯವು ಒದಗುತ್ತಿತ್ತು. [PE][PBR]
4. {#1ಯೆರೆಮೀಯನ ಕರೆ }
5. [PS]ಯೆಹೋವ ದೇವರು ಈ ವಾಕ್ಯವನ್ನು ನನಗೆ ದಯಪಾಲಿಸಿದರು, [PE][QS]“ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ [QE][QS2]ಮುಂಚೆಯೇ ನಿನ್ನನ್ನು ತಿಳಿದಿದ್ದೆನು. [QE][QS]ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; [QE][QS2]ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.” [QE]
6.
7. [PS]ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು,” ಎಂದೆನು. [PE][PS]ಆಗ ಯೆಹೋವ ದೇವರು ನನಗೆ, “ ‘ನಾನು ಚಿಕ್ಕವನೆಂದು ಹೇಳಬೇಡ.’ ಏಕೆಂದರೆ ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ನೀನು ಹೋಗಬೇಕು. ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾತನಾಡಬೇಕು.
8. ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ. [PE]
9. [PS]ಆಗ ಯೆಹೋವ ದೇವರು ಕೈಚಾಚಿ, ನನ್ನ ಬಾಯಿಯನ್ನು ಮುಟ್ಟಿ ನನಗೆ, “ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
10. ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು. [PE]
11.
12. [PS]ಇದಲ್ಲದೆ ಯೆಹೋವ ದೇವರ ವಾಕ್ಯವು ನನಗೆ, “ಯೆರೆಮೀಯನೇ, ನೀನು ಏನು ಕಾಣುತ್ತೀ?” ಎಂದು ಕೇಳಿದರು. [PE][PS]ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ,” ಎಂದೆನು. [PE]
13. [PS]ಆಗ ಯೆಹೋವ ದೇವರು ನನಗೆ, “ನೀನು ಚೆನ್ನಾಗಿ ನೋಡಿದ್ದೀ. ಏಕೆಂದರೆ ನನ್ನ ವಾಕ್ಯವನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆಂದು, ತಿಳಿದುಕೊ” ಎಂದರು. [PE]
14. [PS]ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ, “ನೀನು ಏನು ನೋಡುತ್ತೀ?” ಎಂದು ಕೇಳಿದ್ದಕ್ಕೆ, [PE][PS]ನಾನು, “ಬೇಯುವ ಮಡಕೆಯನ್ನು ನೋಡುತ್ತೇನೆ, ಅದರ ಬಾಯಿ ಉತ್ತರದ ಕಡೆಗೆ ಇದೆ,” ಎಂದೆನು. [PE][PS]ಆಗ ಯೆಹೋವ ದೇವರು ನನಗೆ, “ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವುದು.
15. ಏಕೆಂದರೆ ನಾನು ಉತ್ತರದಲ್ಲಿರುವ ರಾಜ್ಯಗಳ ಕುಲಗಳನ್ನೆಲ್ಲಾ ಕರೆಯುತ್ತೇನೆ. [PE][QS]“ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು [QE][QS2]ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ, [QE][QS]ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ [QE][QS2]ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು. [QE]
16. [QS]ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ [QE][QS2]ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. [QE][QS]ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ [QE][QS2]ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು. [QE]
17. [PS]“ಆದ್ದರಿಂದ ಈಗ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು, ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು. ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಗೆ ಭಯಪಡಬೇಡ.
18. ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ, ಅದರ ಪ್ರಧಾನರಿಗೆ ವಿರೋಧವಾಗಿಯೂ, ಅದರ ಯಾಜಕರಿಗೆ ವಿರೋಧವಾಗಿಯೂ, ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತ್ತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ, ಕಬ್ಬಿಣದ ಸ್ತಂಭವಾಗಿಯೂ, ಕಂಚಿನ ಗೋಡೆಗಳಾಗಿಯೂ ಮಾಡಿದ್ದೇನೆ.
19. ಅವರು ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಗೆಲ್ಲುವುದಿಲ್ಲ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಇದು ಯೆಹೋವ ದೇವರ ನುಡಿ. [PE]
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 52
1 ಬೆನ್ಯಾಮೀನ್ ಸೀಮೆಗೆ ಸೇರಿ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು. 2 ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವ ದೇವರ ವಾಕ್ಯವು ಇವನಿಗೆ ಕೇಳಿಬಂತು. 3 ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಕಾಲದ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆ ಹೋಗುವ ತನಕ ಯೆಹೋವ ದೇವರ ವಾಕ್ಯವು ಒದಗುತ್ತಿತ್ತು. ಯೆರೆಮೀಯನ ಕರೆ 4 5 ಯೆಹೋವ ದೇವರು ಈ ವಾಕ್ಯವನ್ನು ನನಗೆ ದಯಪಾಲಿಸಿದರು, “ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ ಮುಂಚೆಯೇ ನಿನ್ನನ್ನು ತಿಳಿದಿದ್ದೆನು. ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.” 6 7 ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು,” ಎಂದೆನು. ಆಗ ಯೆಹೋವ ದೇವರು ನನಗೆ, “ ‘ನಾನು ಚಿಕ್ಕವನೆಂದು ಹೇಳಬೇಡ.’ ಏಕೆಂದರೆ ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ನೀನು ಹೋಗಬೇಕು. ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾತನಾಡಬೇಕು. 8 ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ. 9 ಆಗ ಯೆಹೋವ ದೇವರು ಕೈಚಾಚಿ, ನನ್ನ ಬಾಯಿಯನ್ನು ಮುಟ್ಟಿ ನನಗೆ, “ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ. 10 ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು. 11 12 ಇದಲ್ಲದೆ ಯೆಹೋವ ದೇವರ ವಾಕ್ಯವು ನನಗೆ, “ಯೆರೆಮೀಯನೇ, ನೀನು ಏನು ಕಾಣುತ್ತೀ?” ಎಂದು ಕೇಳಿದರು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ,” ಎಂದೆನು. 13 ಆಗ ಯೆಹೋವ ದೇವರು ನನಗೆ, “ನೀನು ಚೆನ್ನಾಗಿ ನೋಡಿದ್ದೀ. ಏಕೆಂದರೆ ನನ್ನ ವಾಕ್ಯವನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆಂದು, ತಿಳಿದುಕೊ” ಎಂದರು. 14 ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ, “ನೀನು ಏನು ನೋಡುತ್ತೀ?” ಎಂದು ಕೇಳಿದ್ದಕ್ಕೆ, ನಾನು, “ಬೇಯುವ ಮಡಕೆಯನ್ನು ನೋಡುತ್ತೇನೆ, ಅದರ ಬಾಯಿ ಉತ್ತರದ ಕಡೆಗೆ ಇದೆ,” ಎಂದೆನು. ಆಗ ಯೆಹೋವ ದೇವರು ನನಗೆ, “ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವುದು. 15 ಏಕೆಂದರೆ ನಾನು ಉತ್ತರದಲ್ಲಿರುವ ರಾಜ್ಯಗಳ ಕುಲಗಳನ್ನೆಲ್ಲಾ ಕರೆಯುತ್ತೇನೆ. “ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ, ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು. 16 ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು. 17 “ಆದ್ದರಿಂದ ಈಗ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು, ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು. ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಗೆ ಭಯಪಡಬೇಡ. 18 ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ, ಅದರ ಪ್ರಧಾನರಿಗೆ ವಿರೋಧವಾಗಿಯೂ, ಅದರ ಯಾಜಕರಿಗೆ ವಿರೋಧವಾಗಿಯೂ, ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತ್ತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ, ಕಬ್ಬಿಣದ ಸ್ತಂಭವಾಗಿಯೂ, ಕಂಚಿನ ಗೋಡೆಗಳಾಗಿಯೂ ಮಾಡಿದ್ದೇನೆ. 19 ಅವರು ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಗೆಲ್ಲುವುದಿಲ್ಲ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಇದು ಯೆಹೋವ ದೇವರ ನುಡಿ.
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 52
×

Alert

×

Kannada Letters Keypad References