1. {#1ವಿಪತ್ತಿನ ದಿನ } [PS]ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,
2. “ನೀನು ಮದುವೆಯಾಗಬೇಡ. ನಿನಗೆ ಪುತ್ರರಾಗಲಿ, ಪುತ್ರಿಯರಾಗಲಿ ಈ ಸ್ಥಳದಲ್ಲಿ ಹುಟ್ಟದಿರಲಿ.”
3. ಏಕೆಂದರೆ ಈ ಸ್ಥಳದಲ್ಲಿ ಹುಟ್ಟಿರುವ ಪುತ್ರಪುತ್ರಿಯರನ್ನು ಕುರಿತು ಮತ್ತು ಅವರ ತಾಯಂದಿರನ್ನೂ, ಅವರನ್ನು ಪಡೆದ ತಂದೆಗಳನ್ನೂ ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ:
4. “ಅವರು ಮರಣಕರವಾದ ಬೇನೆಗಳಿಂದ ಸಾಯುವರು. ಅವರಿಗೋಸ್ಕರ ಗೋಳಾಟ ಆಗುವುದಿಲ್ಲ. ಅವರಿಗೆ ಸಮಾಧಿಯಾಗುವುದಿಲ್ಲ. ಭೂಮಿಯ ಮೇಲೆ ಅವರು ಗೊಬ್ಬರವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು.” [PE]
5. [PS]ಯೆಹೋವ ದೇವರು ಹೀಗೆ ಹೇಳುತ್ತಾರೆ: “ದುಃಖದ ಮನೆಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡುವುದಕ್ಕೂ, ದುಃಖ ಪಡುವುದಕ್ಕೂ ಹೋಗಬೇಡ. ಏಕೆಂದರೆ ನಾನು ನನ್ನ ಸಮಾಧಾನವನ್ನೂ, ಪ್ರೀತಿಯನ್ನೂ, ಕನಿಕರವನ್ನೂ ಈ ಜನರಿಂದ ತೆಗೆದುಹಾಕಿದ್ದೇನೆ.
6. ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು. ಅವರಿಗೆ ಸಮಾಧಿಯಾಗುವುದಿಲ್ಲ, ಅವರಿಗೋಸ್ಕರ ಯಾರೂ ತಮ್ಮನ್ನು ಕೊಯ್ದುಕೊಳ್ಳುವುದಿಲ್ಲ, ತಮ್ಮ ತಲೆ ಬೋಳಿಸಿಕೊಳ್ಳುವುದೂ ಇಲ್ಲ.
7. ಸತ್ತವನಿಗಾಗಿ ದುಃಖ ಪಡುವವರನ್ನು ಸಂತೈಸುವುದಕ್ಕೋಸ್ಕರ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ, ತಾಯಿಯನ್ನಾಗಲಿ ಕಳೆದುಕೊಂಡವರಿಗೂ ಕೂಡ ಯಾರೂ ಸಾಂತ್ವನದ ಪಾನಪಾತ್ರೆಯನ್ನು ನೀಡುವುದಿಲ್ಲ. [PE]
8. [PS]“ಅವರ ಸಂಗಡ ಕೂತುಕೊಂಡು ಉಣ್ಣುವುದಕ್ಕೂ ಕುಡಿಯುವುದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸಬೇಡ.
9. ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸದ ಸ್ವರವನ್ನೂ, ಸಂತೋಷದ ಸ್ವರವನ್ನೂ, ಮದುಮಗನ ಸ್ವರವನ್ನೂ, ಮದುಮಗಳ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿಬಿಡುವೆನು. [PE]
10. [PS]“ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ, ‘ಏಕೆ ಯೆಹೋವ ದೇವರು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಮಾತಾಡಿದ್ದಾರೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಮಾಡಿರುವ ಪಾಪವೇನು?’ ಎಂದು ಹೇಳಿದರೆ, ನೀನು ಅವರಿಗೆ ಹೀಗೆ ಹೇಳಬೇಕು:
11. ‘ನಿಮ್ಮ ಪಿತೃಗಳು ನನ್ನನ್ನು ಬಿಟ್ಟುಬಿಟ್ಟದ್ದರಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಅವರು ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳನ್ನು ಆರಾಧಿಸಿ, ನನ್ನನ್ನು ತೊರೆದುಬಿಟ್ಟು, ನನ್ನ ನಿಯಮವನ್ನು ಕೈಗೊಳ್ಳಲಿಲ್ಲ.
12. ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ. ಏಕೆಂದರೆ ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.
13. ಆದ್ದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ, ನಿಮಗೂ, ನಿಮ್ಮ ಪಿತೃಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು. ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆ ಮಾಡುವಿರಿ ಮತ್ತು ನಾನು ನಿಮಗೆ ಕನಿಕರ ತೋರಿಸುವುದಿಲ್ಲ.’ [PE]
14. [PS]“ಆದ್ದರಿಂದ ಇಗೋ, ಯೆಹೋವ ದೇವರು ಹೇಳುವುದೇನೆಂದರೆ: ‘ಇಗೋ, ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಇನ್ನು ಹೇಳುವುದಿಲ್ಲ.
15. ‘ಆದರೆ ಯೆಹೋವ ದೇವರ ಜೀವದಾಣೆ, ಇಸ್ರಾಯೇಲರನ್ನು ಉತ್ತರ ದೇಶದಿಂದಲೂ, ನಾನು ಅವರನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ ಬರಮಾಡಿ, ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು,’ ಎಂದು ಹೇಳುವ ದಿನಗಳು ಬರುವುವು. [PE]
16. [PS]“ಇಗೋ, ನಾನು ಅನೇಕ ಮೀನುಗಾರರನ್ನು ಕಳುಹಿಸುತ್ತೇನೆ. ಇವರು ಅವರನ್ನು ಹಿಡಿಯುವರು. ಆಮೇಲೆ ಅನೇಕ ಬೇಟೆಗಾರರನ್ನು ಕಳುಹಿಸುವೆನು. ಇವರು ಎಲ್ಲಾ ಬೆಟ್ಟಗಳ ಮೇಲೆಯೂ, ಎಲ್ಲಾ ಗುಡ್ಡಗಳ ಮೇಲೆಯೂ, ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡುವರು.
17. ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಇವೆ. ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ, ಅವರ ಅಕ್ರಮವು ನನ್ನ ದೃಷ್ಟಿಗೆ ಅಡಗಿರುವುದಿಲ್ಲ.
18. ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ. [PE]
19. [QS]ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, [QE][QS2]ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, [QE][QS]ಭೂಮಿಯ ಅಂತ್ಯಗಳಿಂದ [QE][QS2]ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. [QE][QS]“ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. [QE][QS2]ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ. [QE]
20. [QS]ಮನುಷ್ಯನು ದೇವರುಗಳನ್ನು ತನಗೆ ಮಾಡುವುದುಂಟೇ? [QE][QS2]ಹಾಗೆ ಮಾಡಿಕೊಂಡರೂ ಅವು ದೇವರುಗಳಲ್ಲ!” [QE][PBR]
21. [QS]“ಆದ್ದರಿಂದ ಇಗೋ, ನಾನು ಇದೊಂದು ಸಾರಿ [QE][QS2]ಅವರಿಗೆ ತಿಳಿಯುವಂತೆ ಮಾಡುವೆನು. [QE][QS2]ನನ್ನ ಕೈಯನ್ನೂ, ನನ್ನ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. [QE][QS]ನನ್ನ ಹೆಸರು ಯೆಹೋವ ದೇವರೇ, [QE][QS2]ಎಂದು ಅವರು ತಿಳಿದುಕೊಳ್ಳುವರು. [QE][PBR]