ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಯೆರೆಮಿಯ
1. [PS]ಯೆಹೋವ ದೇವರು ನನಗೆ ಹೀಗೆಂದನು: “ಹೋಗಿ, ಕುಂಬಾರನ ಮಣ್ಣಿನ ಮಡಕೆಯನ್ನು ತೆಗೆದುಕೊಂಡು, ಜನರ ಹಿರಿಯರಿಂದಲೂ, ಯಾಜಕರ ಹಿರಿಯರಿಂದಲೂ ಕೆಲವರನ್ನು ಕರೆದುಕೊಂಡು,
2. ಮುರಿದ ಪಾತ್ರೆಗಳ ಪ್ರವೇಶದ್ವಾರದ ಮೂಲಕ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.
3. ‘ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ. ಅದನ್ನು ಕೇಳುವವರೆಲ್ಲರ ಕಿವಿಗೆ ಜುಮ್ಮೆನ್ನುವುದು.
4. ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,
5. ತಮ್ಮ ಮಕ್ಕಳನ್ನು ಬಾಳನಿಗೆ ದಹನಬಲಿಗಳಾಗಿ ಬೆಂಕಿಯಲ್ಲಿ ಸುಡುವುದಕ್ಕೆ ಬಾಳನ ಉನ್ನತ ಪೂಜಾಸ್ಥಳಗಳನ್ನು ಕಟ್ಟಿದ್ದಾರೆ. ಇಂಥಾದ್ದನ್ನು ನಾನು ಆಜ್ಞಾಪಿಸಲಿಲ್ಲ. ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.
6. ಹೀಗಿರುವುದರಿಂದ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ದಿನಗಳು ಬರುವುವು. ಆಗ ಈ ಸ್ಥಳವು ಇನ್ನು ತೋಫೆತೆಂದು ಇಲ್ಲವೆ ಬೆನ್ ಹಿನ್ನೋಮ್ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲಾಗುವುದು. [PE]
7. [PS]“ ‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು.
8. ಈ ಪಟ್ಟಣವನ್ನು ಭಯಾನಕವಾಗಿಯೂ, ಹಾಸ್ಯಾಸ್ಪದವಾಗಿಯೂ ಮಾಡುವೆನು. ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.
9. ಅವರು ತಮ್ಮ ಪುತ್ರಪುತ್ರಿಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಮುತ್ತಿಗೆಯಲ್ಲಿಯೂ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.’ [PE]
10. [PS]“ಆಗ ನೀನು, ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಮಡಕೆಯನ್ನು ಒಡೆದು,
11. ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ಯಾವ ಪ್ರಕಾರ ಒಬ್ಬನು ಕುಂಬಾರನ ಮಡಕೆಯನ್ನು ಅದು ತಿರುಗಿ ಒಂದುಗೂಡದ ಹಾಗೆ ಒಡೆಯುತ್ತಾನೋ, ಅದೇ ಪ್ರಕಾರ ನಾನು ಈ ಜನರನ್ನೂ, ಈ ಪಟ್ಟಣವನ್ನೂ ಒಡೆದುಬಿಡುವೆನು. ಆಗ ಹೂಳಿಡುವುದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಳಿಡುವರು.
12. ಹೀಗೆ ಈ ಸ್ಥಳಕ್ಕೂ, ಅದರ ನಿವಾಸಿಗಳಿಗೂ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.
13. ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪ ಸುಟ್ಟು, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ, ಆ ಎಲ್ಲಾ ಮನೆಗಳ ನಿಮಿತ್ತವಾಗಿ ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವುವು, ಎಂಬುದೇ.’ ” [PE]
14. [PS]ಆಗ ಯೆರೆಮೀಯನು, ಯೆಹೋವ ದೇವರು ಅವನನ್ನು ಪ್ರವಾದಿಸುವುದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಯೆಹೋವ ದೇವರ ಆಲಯದ ಅಂಗಳದಲ್ಲಿ ನಿಂತುಕೊಂಡು, ಜನರಿಗೆಲ್ಲಾ ಹೇಳಿದ್ದೇನೆಂದರೆ:
15. “ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ಇಗೋ, ನಾನು ಈ ಪಟ್ಟಣದ ಮೇಲೆಯೂ, ಅದರ ಎಲ್ಲಾ ಊರುಗಳ ಮೇಲೆಯೂ, ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ತರಿಸುತ್ತೇನೆ. ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಹೃದಯಗಳನ್ನು ಕಠಿಣ ಮಾಡಿಕೊಂಡಿದ್ದಾರೆ, ಎಂಬುದೇ.’ ” [PE]
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 19 / 52
1 ಯೆಹೋವ ದೇವರು ನನಗೆ ಹೀಗೆಂದನು: “ಹೋಗಿ, ಕುಂಬಾರನ ಮಣ್ಣಿನ ಮಡಕೆಯನ್ನು ತೆಗೆದುಕೊಂಡು, ಜನರ ಹಿರಿಯರಿಂದಲೂ, ಯಾಜಕರ ಹಿರಿಯರಿಂದಲೂ ಕೆಲವರನ್ನು ಕರೆದುಕೊಂಡು, 2 ಮುರಿದ ಪಾತ್ರೆಗಳ ಪ್ರವೇಶದ್ವಾರದ ಮೂಲಕ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು. 3 ‘ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ. ಅದನ್ನು ಕೇಳುವವರೆಲ್ಲರ ಕಿವಿಗೆ ಜುಮ್ಮೆನ್ನುವುದು. 4 ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ, 5 ತಮ್ಮ ಮಕ್ಕಳನ್ನು ಬಾಳನಿಗೆ ದಹನಬಲಿಗಳಾಗಿ ಬೆಂಕಿಯಲ್ಲಿ ಸುಡುವುದಕ್ಕೆ ಬಾಳನ ಉನ್ನತ ಪೂಜಾಸ್ಥಳಗಳನ್ನು ಕಟ್ಟಿದ್ದಾರೆ. ಇಂಥಾದ್ದನ್ನು ನಾನು ಆಜ್ಞಾಪಿಸಲಿಲ್ಲ. ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ. 6 ಹೀಗಿರುವುದರಿಂದ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ದಿನಗಳು ಬರುವುವು. ಆಗ ಈ ಸ್ಥಳವು ಇನ್ನು ತೋಫೆತೆಂದು ಇಲ್ಲವೆ ಬೆನ್ ಹಿನ್ನೋಮ್ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲಾಗುವುದು. 7 “ ‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. 8 ಈ ಪಟ್ಟಣವನ್ನು ಭಯಾನಕವಾಗಿಯೂ, ಹಾಸ್ಯಾಸ್ಪದವಾಗಿಯೂ ಮಾಡುವೆನು. ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು. 9 ಅವರು ತಮ್ಮ ಪುತ್ರಪುತ್ರಿಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಮುತ್ತಿಗೆಯಲ್ಲಿಯೂ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.’ 10 “ಆಗ ನೀನು, ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಮಡಕೆಯನ್ನು ಒಡೆದು, 11 ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ಯಾವ ಪ್ರಕಾರ ಒಬ್ಬನು ಕುಂಬಾರನ ಮಡಕೆಯನ್ನು ಅದು ತಿರುಗಿ ಒಂದುಗೂಡದ ಹಾಗೆ ಒಡೆಯುತ್ತಾನೋ, ಅದೇ ಪ್ರಕಾರ ನಾನು ಈ ಜನರನ್ನೂ, ಈ ಪಟ್ಟಣವನ್ನೂ ಒಡೆದುಬಿಡುವೆನು. ಆಗ ಹೂಳಿಡುವುದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಳಿಡುವರು. 12 ಹೀಗೆ ಈ ಸ್ಥಳಕ್ಕೂ, ಅದರ ನಿವಾಸಿಗಳಿಗೂ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು. 13 ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪ ಸುಟ್ಟು, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ, ಆ ಎಲ್ಲಾ ಮನೆಗಳ ನಿಮಿತ್ತವಾಗಿ ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವುವು, ಎಂಬುದೇ.’ ” 14 ಆಗ ಯೆರೆಮೀಯನು, ಯೆಹೋವ ದೇವರು ಅವನನ್ನು ಪ್ರವಾದಿಸುವುದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಯೆಹೋವ ದೇವರ ಆಲಯದ ಅಂಗಳದಲ್ಲಿ ನಿಂತುಕೊಂಡು, ಜನರಿಗೆಲ್ಲಾ ಹೇಳಿದ್ದೇನೆಂದರೆ: 15 “ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ಇಗೋ, ನಾನು ಈ ಪಟ್ಟಣದ ಮೇಲೆಯೂ, ಅದರ ಎಲ್ಲಾ ಊರುಗಳ ಮೇಲೆಯೂ, ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ತರಿಸುತ್ತೇನೆ. ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಹೃದಯಗಳನ್ನು ಕಠಿಣ ಮಾಡಿಕೊಂಡಿದ್ದಾರೆ, ಎಂಬುದೇ.’ ”
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 19 / 52
×

Alert

×

Kannada Letters Keypad References