ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಯೆರೆಮಿಯ
1. {#1ಎಪ್ಪತ್ತು ವರ್ಷಗಳ ಸೆರೆಯ ಕಾಲ } [PS]ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.
2. ಪ್ರವಾದಿಯಾದ ಯೆರೆಮೀಯನು ಯೆಹೂದದ ಸಮಸ್ತ ಜನರಿಗೂ, ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನೆಂದರೆ:
3. ಆಮೋನನ ಮಗನೂ, ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿವಸದವರೆಗೆ ಅಂದರೆ, ಕಳೆದ ಇಪ್ಪತ್ತಮೂರು ವರ್ಷಗಳಿಂದ ಯೆಹೋವ ದೇವರು ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ. [PE]
4. [PS]ಇದಲ್ಲದೆ ಯೆಹೋವ ದೇವರು ತಮ್ಮ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾರೆ. ಬೆಳಿಗ್ಗೆ ಎದ್ದು ಕಳುಹಿಸಿದ್ದಾರೆ. ಆದರೆ ನೀವು ಕೇಳಲಿಲ್ಲ. ಕೇಳುವುದಕ್ಕೆ ನಿಮ್ಮ ಕಿವಿ ಕೊಡಲಿಲ್ಲ.
5. ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.
6. ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಆರಾಧಿಸುವುದಕ್ಕೂ ಹಿಂಬಾಲಿಸಬೇಡಿರಿ. ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ. ಆಗ ನಿಮಗೆ ಯಾವ ಕೇಡೂ ಮಾಡೆನು.” [PE]
7.
8. [PS]“ಆದರೂ ನೀವು ನನಗೆ ಕಿವಿಗೊಡದೆ, ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ. [PE][PS]ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ನನ್ನ ಮಾತುಗಳನ್ನು ಕೇಳದ ಕಾರಣ
9. ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.
10. ನಾನು ಈ ದೇಶಗಳಿಂದ ಸಂತೋಷದ ಶಬ್ದ ಮತ್ತು ಸಂತೋಷದ ಶಬ್ದವನ್ನು ಮಾತ್ರ ತೆಗೆದುಹಾಕುತ್ತೇನೆ, ವಧು ಅಥವಾ ವಧುವಿನ ಧ್ವನಿ ಅಲ್ಲಿ ಕೇಳಿಸುವುದಿಲ್ಲ, ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು.
11. ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು. [PE]
12. [PS]“ಎಪ್ಪತ್ತು ವರ್ಷ ತುಂಬಿದ ಮೇಲೆ ನಾನು ಬಾಬಿಲೋನಿನ ಅರಸನನ್ನೂ, ಆ ಜನಾಂಗವನ್ನೂ, ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
13. ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ, ಯೆರೆಮೀಯನು ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಸಿ, ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡುವೆನು.
14. ಅನೇಕ ಜನಾಂಗಗಳೂ, ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆಗಳ ಪ್ರಕಾರವೂ, ಅವರ ಕೈಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. [PE]
15. {#1ಯೆಹೋವ ದೇವರ ರೌದ್ರದ ಪಾತ್ರೆ } [PS]ಇಸ್ರಾಯೇಲಿನ ದೇವರಾದ ಯೆಹೋವ ದೇವರು ನನಗೆ ಹೀಗೆಂದರು: “ಈ ರೌದ್ರದ ದ್ರಾಕ್ಷಾರಸದ ಪಾತ್ರೆಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತೆಗೆದುಕೋ.
16. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತ ಕದಲಿ ಓಲಾಡುವರು.”
17. ಆಗ ನಾನು ಪಾತ್ರೆಯನ್ನು ಯೆಹೋವ ದೇವರ ಕೈಯಿಂದ ತೆಗೆದುಕೊಂಡು, ಯೆಹೋವ ದೇವರು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು. [PE][PBR]
18. [LS] ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು. [LE]
19. [LS] ಈಜಿಪ್ಟಿನ ಅರಸನಾದ ಫರೋಹನಿಗೂ, ಅವನ ಸೇವಕರಿಗೂ, ಅವನ ಅಧಿಕಾರಿಗಳಿಗೂ, ಅವನ ಎಲ್ಲಾ ಜನರಿಗೂ,
20. ವಿದೇಶೀಯ ಜನರೆಲ್ಲರಿಗೂ, [LE][LS]ಊಚ್ ದೇಶದ ಅರಸರೆಲ್ಲರಿಗೂ, [LE][LS]ಫಿಲಿಷ್ಟಿಯ ದೇಶದ ಅರಸರಾದ, ಅಷ್ಕೆಲೋನಿಗೂ, ಗಾಜಕ್ಕೂ, ಎಕ್ರೋನಿಗೂ, ಅಷ್ಡೋದಿನ ಉಳಿದವರಿಗೂ, [LE]
21. [LS] ಎದೋಮಿಗೂ, ಮೋವಾಬಿಗೂ, ಅಮ್ಮೋನ್ಯರಿಗೂ, [LE]
22. [LS] ಟೈರಿನ ಅರಸರೆಲ್ಲರಿಗೂ, ಸೀದೋನಿನ ಅರಸರೆಲ್ಲರಿಗೂ, [LE][LS]ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ, [LE]
23. [LS] ದೆದಾನಿಗೂ, ತೇಮಾಕ್ಕೂ, ಬೂಜಿಗೂ, ಕಟ್ಟಕಡೆಯ ಮೂಲೆಯವರೆಗೂ, [LE]
24. [LS] ಅರೇಬಿಯದ ಅರಸರೆಲ್ಲರಿಗೂ, ಮರುಭೂಮಿಯಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ, [LE]
25. [LS] ಜಿಮ್ರಿಯ ಅರಸರೆಲ್ಲರಿಗೂ, ಏಲಾಮಿನ ಅರಸರೆಲ್ಲರಿಗೂ, ಮೇದ್ಯದ ಅರಸರೆಲ್ಲರಿಗೂ, [LE]
26. [LS] ಹತ್ತಿರದಲ್ಲಿಯೂ, ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿರುವ ಉತ್ತರ ದಿಕ್ಕಿನ ಅರಸರೆಲ್ಲರಿಗೂ, ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯಗಳಿಗೂ ಕುಡಿಸಿದೆನು. [LE][LS]ಶೇಷಕಿನ ಅರಸನು ಅವರ ತರುವಾಯ ಕುಡಿಯುವನು. [LE][PBR]
27. [PS]“ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’
28. ಅವರು ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಂಡು ಕುಡಿಯಲು ತಿರಸ್ಕರಿಸಿದರೆ, ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀವು ನಿಶ್ಚಯವಾಗಿ ಕುಡಿಯಬೇಕು.
29. ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’ [PE]
30. [PS]“ಆದ್ದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ, ಅವರಿಗೆ ಹೇಳತಕ್ಕದ್ದೇನೆಂದರೆ, [PE][QS]“ ‘ಯೆಹೋವ ದೇವರು ಉನ್ನತದಿಂದ ಗರ್ಜಿಸಿ, [QE][QS2]ತಮ್ಮ ಪರಿಶುದ್ಧ ನಿವಾಸದೊಳಗಿಂದ ತಮ್ಮ ಶಬ್ದವನ್ನು ಕೊಡುವರು. [QE][QS2]ತಮ್ಮ ನಿವಾಸದ ಮೇಲೆ ಗಟ್ಟಿಯಾಗಿ ಗರ್ಜಿಸಿ, [QE][QS]ದ್ರಾಕ್ಷಿ ತುಳಿಯುವವರ ಹಾಗೆ [QE][QS2]ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವರು. [QE]
31. [QS]ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. [QE][QS2]ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. [QE][QS]ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. [QE][QS2]ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’ ” [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE]
32. [PS]ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: [PE][QS]“ಇಗೋ, ಜನಾಂಗದಿಂದ ಜನಾಂಗಕ್ಕೆ [QE][QS2]ಕೇಡು ಹೊರಡುವುದು. [QE][QS]ಭೂಮಿಯ ಮೇರೆಗಳಿಂದ [QE][QS2]ಮಹಾ ಬಿರುಗಾಳಿ ಏಳುವುದು.” [QE]
33. [MS] ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯವರೆಗೆ ಯೆಹೋವ ದೇವರಿಂದ ಹತರಾದವರು ಇರುವರು. ಅವರಿಗೋಸ್ಕರ ಗೋಳಾಡುವುದಿಲ್ಲ. ಅವರನ್ನು ಕೂಡಿಸುವುದಿಲ್ಲ. ಅವರನ್ನು ಹೂಳಿಡುವುದಿಲ್ಲ. ಅವರು ಭೂಮಿಯ ಮೇಲೆ ಗೊಬ್ಬರದಂತಿರುವರು. [ME]
34. [QS]ಕುರುಬರೇ, ಗೋಳಿಟ್ಟು ಕೂಗಿರಿ. [QE][QS2]ಮಂದೆಯಲ್ಲಿನ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ. [QE][QS]ಏಕೆಂದರೆ ನಿಮ್ಮನ್ನು ಕೊಲ್ಲುವುದಕ್ಕೂ, ಚದರಿಸುವುದಕ್ಕೂ ದಿನಗಳು ತುಂಬಿ ಇವೆ. [QE][QS2]ಆಗ ನೀವು ಒಡೆದುಹೋದ ಅಂದವಾದ ಪಾತ್ರೆಯಂತೆ ಬೀಳುವಿರಿ. [QE]
35. [QS]ಆಗ ಕುರುಬರಿಗೆ ಓಡಿ ಹೋಗುವುದಕ್ಕೂ, [QE][QS2]ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವುದಕ್ಕೂ ಮಾರ್ಗವಿಲ್ಲದೆ ಹೋಗುವುದು. [QE]
36. [QS]ಕುರುಬರ ಕೂಗಿನ ಶಬ್ದವು, [QE][QS2]ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳಿಸುತ್ತಿದೆ. [QE][QS2]ಏಕೆಂದರೆ ಯೆಹೋವ ದೇವರು ಅವರ ಮೇವಿನ ಸ್ಥಳವನ್ನು ಹಾಳು ಮಾಡಿದ್ದಾರೆ. [QE]
37. [QS]ಸಮಾಧಾನವುಳ್ಳ ಗೋಮಾಳಗಳು [QE][QS2]ಯೆಹೋವ ದೇವರ ಕೋಪದ ದೆಸೆಯಿಂದ ಕೆಡವಿಬಿದ್ದವು. [QE]
38. [QS]ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. [QE][QS2]ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, [QE][QS]ಅವರ ಕೋಪದ ಉರಿಯ ನಿಮಿತ್ತವೂ [QE][QS2]ಅವರ ದೇಶವು ಹಾಳಾಯಿತು. [QE]
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 25 / 52
ಎಪ್ಪತ್ತು ವರ್ಷಗಳ ಸೆರೆಯ ಕಾಲ 1 ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು. 2 ಪ್ರವಾದಿಯಾದ ಯೆರೆಮೀಯನು ಯೆಹೂದದ ಸಮಸ್ತ ಜನರಿಗೂ, ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನೆಂದರೆ: 3 ಆಮೋನನ ಮಗನೂ, ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿವಸದವರೆಗೆ ಅಂದರೆ, ಕಳೆದ ಇಪ್ಪತ್ತಮೂರು ವರ್ಷಗಳಿಂದ ಯೆಹೋವ ದೇವರು ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ. 4 ಇದಲ್ಲದೆ ಯೆಹೋವ ದೇವರು ತಮ್ಮ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾರೆ. ಬೆಳಿಗ್ಗೆ ಎದ್ದು ಕಳುಹಿಸಿದ್ದಾರೆ. ಆದರೆ ನೀವು ಕೇಳಲಿಲ್ಲ. ಕೇಳುವುದಕ್ಕೆ ನಿಮ್ಮ ಕಿವಿ ಕೊಡಲಿಲ್ಲ. 5 ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ. 6 ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಆರಾಧಿಸುವುದಕ್ಕೂ ಹಿಂಬಾಲಿಸಬೇಡಿರಿ. ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ. ಆಗ ನಿಮಗೆ ಯಾವ ಕೇಡೂ ಮಾಡೆನು.” 7 8 “ಆದರೂ ನೀವು ನನಗೆ ಕಿವಿಗೊಡದೆ, ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ. ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ನನ್ನ ಮಾತುಗಳನ್ನು ಕೇಳದ ಕಾರಣ 9 ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು. 10 ನಾನು ಈ ದೇಶಗಳಿಂದ ಸಂತೋಷದ ಶಬ್ದ ಮತ್ತು ಸಂತೋಷದ ಶಬ್ದವನ್ನು ಮಾತ್ರ ತೆಗೆದುಹಾಕುತ್ತೇನೆ, ವಧು ಅಥವಾ ವಧುವಿನ ಧ್ವನಿ ಅಲ್ಲಿ ಕೇಳಿಸುವುದಿಲ್ಲ, ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು. 11 ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು. 12 “ಎಪ್ಪತ್ತು ವರ್ಷ ತುಂಬಿದ ಮೇಲೆ ನಾನು ಬಾಬಿಲೋನಿನ ಅರಸನನ್ನೂ, ಆ ಜನಾಂಗವನ್ನೂ, ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು. 13 ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ, ಯೆರೆಮೀಯನು ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಸಿ, ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡುವೆನು. 14 ಅನೇಕ ಜನಾಂಗಗಳೂ, ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆಗಳ ಪ್ರಕಾರವೂ, ಅವರ ಕೈಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಯೆಹೋವ ದೇವರ ರೌದ್ರದ ಪಾತ್ರೆ 15 ಇಸ್ರಾಯೇಲಿನ ದೇವರಾದ ಯೆಹೋವ ದೇವರು ನನಗೆ ಹೀಗೆಂದರು: “ಈ ರೌದ್ರದ ದ್ರಾಕ್ಷಾರಸದ ಪಾತ್ರೆಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತೆಗೆದುಕೋ. 16 ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತ ಕದಲಿ ಓಲಾಡುವರು.” 17 ಆಗ ನಾನು ಪಾತ್ರೆಯನ್ನು ಯೆಹೋವ ದೇವರ ಕೈಯಿಂದ ತೆಗೆದುಕೊಂಡು, ಯೆಹೋವ ದೇವರು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು. 18 ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು. 19 ಈಜಿಪ್ಟಿನ ಅರಸನಾದ ಫರೋಹನಿಗೂ, ಅವನ ಸೇವಕರಿಗೂ, ಅವನ ಅಧಿಕಾರಿಗಳಿಗೂ, ಅವನ ಎಲ್ಲಾ ಜನರಿಗೂ, 20 ವಿದೇಶೀಯ ಜನರೆಲ್ಲರಿಗೂ, ಊಚ್ ದೇಶದ ಅರಸರೆಲ್ಲರಿಗೂ, ಫಿಲಿಷ್ಟಿಯ ದೇಶದ ಅರಸರಾದ, ಅಷ್ಕೆಲೋನಿಗೂ, ಗಾಜಕ್ಕೂ, ಎಕ್ರೋನಿಗೂ, ಅಷ್ಡೋದಿನ ಉಳಿದವರಿಗೂ, 21 ಎದೋಮಿಗೂ, ಮೋವಾಬಿಗೂ, ಅಮ್ಮೋನ್ಯರಿಗೂ, 22 ಟೈರಿನ ಅರಸರೆಲ್ಲರಿಗೂ, ಸೀದೋನಿನ ಅರಸರೆಲ್ಲರಿಗೂ, ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ, 23 ದೆದಾನಿಗೂ, ತೇಮಾಕ್ಕೂ, ಬೂಜಿಗೂ, ಕಟ್ಟಕಡೆಯ ಮೂಲೆಯವರೆಗೂ, 24 ಅರೇಬಿಯದ ಅರಸರೆಲ್ಲರಿಗೂ, ಮರುಭೂಮಿಯಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ, 25 ಜಿಮ್ರಿಯ ಅರಸರೆಲ್ಲರಿಗೂ, ಏಲಾಮಿನ ಅರಸರೆಲ್ಲರಿಗೂ, ಮೇದ್ಯದ ಅರಸರೆಲ್ಲರಿಗೂ, 26 ಹತ್ತಿರದಲ್ಲಿಯೂ, ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿರುವ ಉತ್ತರ ದಿಕ್ಕಿನ ಅರಸರೆಲ್ಲರಿಗೂ, ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯಗಳಿಗೂ ಕುಡಿಸಿದೆನು. ಶೇಷಕಿನ ಅರಸನು ಅವರ ತರುವಾಯ ಕುಡಿಯುವನು. 27 “ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’ 28 ಅವರು ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಂಡು ಕುಡಿಯಲು ತಿರಸ್ಕರಿಸಿದರೆ, ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀವು ನಿಶ್ಚಯವಾಗಿ ಕುಡಿಯಬೇಕು. 29 ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’ 30 “ಆದ್ದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ, ಅವರಿಗೆ ಹೇಳತಕ್ಕದ್ದೇನೆಂದರೆ, “ ‘ಯೆಹೋವ ದೇವರು ಉನ್ನತದಿಂದ ಗರ್ಜಿಸಿ, ತಮ್ಮ ಪರಿಶುದ್ಧ ನಿವಾಸದೊಳಗಿಂದ ತಮ್ಮ ಶಬ್ದವನ್ನು ಕೊಡುವರು. ತಮ್ಮ ನಿವಾಸದ ಮೇಲೆ ಗಟ್ಟಿಯಾಗಿ ಗರ್ಜಿಸಿ, ದ್ರಾಕ್ಷಿ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವರು. 31 ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’ ” ಎಂದು ಯೆಹೋವ ದೇವರು ಹೇಳುತ್ತಾರೆ. 32 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವುದು. ಭೂಮಿಯ ಮೇರೆಗಳಿಂದ ಮಹಾ ಬಿರುಗಾಳಿ ಏಳುವುದು.” 33 ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯವರೆಗೆ ಯೆಹೋವ ದೇವರಿಂದ ಹತರಾದವರು ಇರುವರು. ಅವರಿಗೋಸ್ಕರ ಗೋಳಾಡುವುದಿಲ್ಲ. ಅವರನ್ನು ಕೂಡಿಸುವುದಿಲ್ಲ. ಅವರನ್ನು ಹೂಳಿಡುವುದಿಲ್ಲ. ಅವರು ಭೂಮಿಯ ಮೇಲೆ ಗೊಬ್ಬರದಂತಿರುವರು. 34 ಕುರುಬರೇ, ಗೋಳಿಟ್ಟು ಕೂಗಿರಿ. ಮಂದೆಯಲ್ಲಿನ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ. ಏಕೆಂದರೆ ನಿಮ್ಮನ್ನು ಕೊಲ್ಲುವುದಕ್ಕೂ, ಚದರಿಸುವುದಕ್ಕೂ ದಿನಗಳು ತುಂಬಿ ಇವೆ. ಆಗ ನೀವು ಒಡೆದುಹೋದ ಅಂದವಾದ ಪಾತ್ರೆಯಂತೆ ಬೀಳುವಿರಿ. 35 ಆಗ ಕುರುಬರಿಗೆ ಓಡಿ ಹೋಗುವುದಕ್ಕೂ, ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವುದಕ್ಕೂ ಮಾರ್ಗವಿಲ್ಲದೆ ಹೋಗುವುದು. 36 ಕುರುಬರ ಕೂಗಿನ ಶಬ್ದವು, ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳಿಸುತ್ತಿದೆ. ಏಕೆಂದರೆ ಯೆಹೋವ ದೇವರು ಅವರ ಮೇವಿನ ಸ್ಥಳವನ್ನು ಹಾಳು ಮಾಡಿದ್ದಾರೆ. 37 ಸಮಾಧಾನವುಳ್ಳ ಗೋಮಾಳಗಳು ಯೆಹೋವ ದೇವರ ಕೋಪದ ದೆಸೆಯಿಂದ ಕೆಡವಿಬಿದ್ದವು. 38 ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 25 / 52
×

Alert

×

Kannada Letters Keypad References