1. {#1ಬಾಬಿಲೋನಿನ ವಿಷಯವಾಗಿ ಸಂದೇಶ }
2. [PS]ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಯೆಹೋವ ದೇವರು ನುಡಿಸಿದ ವಾಕ್ಯ ಇದು: [PE][QS]“ಜನಾಂಗಗಳಲ್ಲಿ ಪ್ರಚುರಪಡಿಸಿರಿ, [QE][QS2]ಧ್ವಜವನ್ನೆತ್ತಿ ಪ್ರಕಟಿಸಿರಿ; [QE][QS2]ಮರೆಮಾಡದೇ ಹೀಗೆ ಸಾರಿರಿ, [QE][QS]‘ಬಾಬಿಲೋನ್ ಶತ್ರುವಶವಾಯಿತು; [QE][QS2]ಬೇಲ್ ದೇವತೆಗೆ ನಾಚಿಕೆಯಾಯಿತು; [QE][QS2]ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. [QE][QS]ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. [QE][QS2]ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’ [QE]
3. [QS]ಏಕೆಂದರೆ ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; [QE][QS2]ಅದು ಅವಳ ದೇಶವನ್ನು ಹಾಳುಮಾಡಿಬಿಡುವುದು; [QE][QS]ಅವಳಲ್ಲಿ ಯಾರೂ ವಾಸಿಸುವುದಿಲ್ಲ; [QE][QS2]ಮನುಷ್ಯರೂ, ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ. [QE][PBR]
4. [QS]“ಆ ದಿವಸಗಳಲ್ಲಿಯೂ ಆ ಕಾಲದಲ್ಲಿಯೂ [QE][QS]ಇಸ್ರಾಯೇಲರು ಬರುವರು; ಅವರೂ, ಯೆಹೂದ್ಯರೂ ಒಟ್ಟಾಗಿ ಕೂಡಿಕೊಳ್ಳುವರು,” [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE][QS]“ಅವರು ಅಳುತ್ತಾ ಹೋಗಿ, [QE][QS2]ತಮ್ಮ ದೇವರಾದ ಯೆಹೋವ ದೇವರನ್ನು ಹುಡುಕುವರು. [QE]
5. [QS]ಚೀಯೋನಿನ ಕಡೆಗೆ ಅಭಿಮುಖರಾಗಿ [QE][QS2]ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; [QE][QS]ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ [QE][QS2]ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು. [QE][PBR]
6. [QS]“ನನ್ನ ಜನರು ಕಳೆದುಹೋದ ಕುರಿಗಳಾಗಿದ್ದಾರೆ; [QE][QS2]ಅವರ ಕುರುಬರು ಅವರನ್ನು ತಪ್ಪಿಹೋಗುವಂತೆ ಮಾಡಿದರು; [QE][QS2]ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; [QE][QS]ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; [QE][QS2]ಮಲಗುವ ಸ್ಥಳವನ್ನು ಮರೆತುಬಿಟ್ಟರು. [QE]
7. [QS]ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟಿದ್ದಾರೆ; [QE][QS2]ಅವರ ಎದುರಾಳಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ; [QE][QS]ಏಕೆಂದರೆ ನೀತಿಯ ನಿವಾಸವಾದ ಯೆಹೋವ ದೇವರಿಗೆ, [QE][QS2]ಹೌದು, ಅವರ ಪೂರ್ವಜರ ನಿರೀಕ್ಷೆಯಾದ ಯೆಹೋವ ದೇವರಿಗೆ [QE][QS2]ವಿರೋಧವಾಗಿ ಪಾಪಮಾಡಿದ್ದಾರೆ,’ ಎಂದುಕೊಂಡರು. [QE][PBR]
8. [QS]“ಬಾಬಿಲೋನಿನೊಳಗಿಂದ ಓಡಿಹೋಗಿರಿ; [QE][QS2]ಬಾಬಿಲೋನಿನ ಸೀಮೆಯಿಂದ ಹೊರಡಿರಿ; [QE][QS2]ಮಂದೆಯ ಮುಂದೆ ಹೋತಗಳ ಹಾಗೆ ಇರಿ. [QE]
9. [QS]ಏಕೆಂದರೆ ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ, [QE][QS2]ಬಾಬಿಲೋನಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. [QE][QS]ಅವರು ಅದಕ್ಕೆ ವಿರೋಧವಾಗಿ ಯುದ್ಧ ಸಿದ್ಧಮಾಡುವರು. [QE][QS2]ಅಲ್ಲಿಂದ ಅದು ಹಿಡಿಯಲಾಗುವುದು. [QE][QS]ಅವರ ಬಾಣಗಳು ಬಲಿಷ್ಠನಾದ ಪ್ರವೀಣ ಶೂರನಂತಿರುವುವು. [QE][QS2]ಯಾವುದೂ ವ್ಯರ್ಥವಾಗಿ ತಿರುಗದು. [QE]
10. [QS]ಬಾಬಿಲೋನಿನ[* ಬಾಬಿಲೋನಿನ ಅಥವಾ ಕಸ್ದೀಯ ] ದೇಶವು ಸುಲಿಗೆಯಾಗುವುದು; [QE][QS2]ಅದನ್ನು ಸುಲಿದುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವುದು, [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE][PBR]
11. [QS]“ಏಕೆಂದರೆ ನನ್ನ ಸೊತ್ತನ್ನು ನಾಶಮಾಡಿದವರೇ, [QE][QS2]ನೀವು ಸಂತೋಷಿಸಿದ್ದರಿಂದಲೂ, [QE][QS]ನೀವು ಉಲ್ಲಾಸಿಸಿದ್ದರಿಂದಲೂ, ಕೊಬ್ಬಿದ ಕಡಸಿನ ಹಾಗೆ ಗರ್ವ ಪಟ್ಟದ್ದರಿಂದಲೂ, [QE][QS2]ಗಂಡು ಕುದುರೆಗಳ ಹಾಗೆ ಹೂಂಕರಿಸಿದ್ದರಿಂದಲೂ, [QE]
12. [QS]ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; [QE][QS2]ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; [QE][QS]ಇಗೋ, ಜನಾಂಗಗಳಲ್ಲಿ ಅಂತ್ಯವಾದದ್ದು ಕಾಡೂ, [QE][QS2]ಒಣ ಭೂಮಿಯೂ, ಮರುಭೂಮಿಯೂ ಆಗುವುದು. [QE]
13. [QS]ಯೆಹೋವ ದೇವರ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವುದಿಲ್ಲ; [QE][QS2]ಸಂಪೂರ್ಣ ಹಾಳಾಗುವುದು; [QE][QS]ಬಾಬಿಲೋನನ್ನು ಹಾದುಹೋಗುವವರೆಲ್ಲರು [QE][QS2]ಅದರ ಎಲ್ಲಾ ಗಾಯಗಳ ವಿಷಯ ವಿಸ್ಮಯಪಟ್ಟು ಸಿಳ್ಳುಹಾಕುವರು. [QE][PBR]
14. [QS]“ಬಿಲ್ಲನ್ನು ಬಗ್ಗಿಸುವವರೇ, [QE][QS2]ಬಾಬಿಲೋನಿಗೆ ವಿರೋಧವಾಗಿ ಸುತ್ತಲೂ ಯುದ್ಧ ಸಿದ್ಧಮಾಡಿರಿ; [QE][QS]ಅದಕ್ಕೆ ಎಸೆಯಿರಿ; ಬಾಣಗಳನ್ನು ಕಡಿಮೆ ಮಾಡಬೇಡಿರಿ; [QE][QS2]ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿತಲ್ಲಾ. [QE]
15. [QS]ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; [QE][QS2]ಅದರ ಬುರುಜುಗಳು ಬಿದ್ದು ಹೋದವು; [QE][QS2]ಅದರ ಪೌಳಿಗೋಡೆಯನ್ನು ಕೆಡವಲಾಯಿತು. [QE][QS]ಅದು ಯೆಹೋವ ದೇವರ ಪ್ರತಿದಂಡನೆ; [QE][QS2]ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. [QE][QS2]ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ. [QE]
16. [QS]ಬಿತ್ತುವವನನ್ನೂ, ಸುಗ್ಗಿಕಾಲದಲ್ಲಿ ಕುಡುಗೋಲು [QE][QS2]ಹಿಡಿಯುವವನನ್ನೂ ಬಾಬಿಲೋನಿನೊಳಗಿಂದ ಕಡಿದುಬಿಡಿರಿ; [QE][QS]ಕಷ್ಟಪಡುವ ಖಡ್ಗದ ಭಯದಿಂದ [QE][QS2]ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; [QE][QS2]ತಮ್ಮ ತಮ್ಮ ದೇಶಗಳಿಗೆ ಓಡಿಹೋಗುವರು. [QE][PBR]
17. [QS]“ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; [QE][QS2]ಸಿಂಹಗಳು ಅವನನ್ನು ಓಡಿಸಿಬಿಟ್ಟವು; [QE][QS]ಮೊದಲು ಅಸ್ಸೀರಿಯನ ಅರಸನು [QE][QS2]ಅವನನ್ನು ತಿಂದುಬಿಟ್ಟನು. [QE][QS]ಕಡೆಯಲ್ಲಿ ಬಾಬಿಲೋನಿನ ಅರಸನಾದ [QE][QS2]ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.” [QE]
18. [PS]ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: [PE][QS]“ಇಗೋ, ನಾನು ಅಸ್ಸೀರಿನ ಅರಸನನ್ನು ಶಿಕ್ಷಿಸಿದ ಹಾಗೆ [QE][QS2]ಬಾಬಿಲೋನಿನ ಅರಸನನ್ನೂ, ಅವನ ದೇಶವನ್ನೂ ಶಿಕ್ಷಿಸುತ್ತೇನೆ. [QE]
19. [QS]ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರುಗಿ ಬರಮಾಡುತ್ತೇನೆ; [QE][QS2]ಅವನು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವನು; [QE][QS]ಅವನ ಪ್ರಾಣವು ಎಫ್ರಾಯೀಮ್ ಬೆಟ್ಟದಲ್ಲಿಯೂ, [QE][QS2]ಗಿಲ್ಯಾದಿನಲ್ಲಿಯೂ ತೃಪ್ತಿ ಹೊಂದುವುದು.” [QE]
20. [QS]ಯೆಹೋವ ದೇವರು ಹೇಳುತ್ತಾರೆ, [QE][QS2]“ಆ ದಿವಸಗಳಲ್ಲಿಯೂ, [QE][QS]ಆ ಕಾಲದಲ್ಲಿಯೂ ಇಸ್ರಾಯೇಲಿನ ಅಕ್ರಮವನ್ನು ಹುಡುಕಿದರೂ, [QE][QS2]ಅಲ್ಲಿ ಏನೂ ಇರದು; [QE][QS]ಯೆಹೂದದ ಪಾಪಗಳನ್ನು ಹುಡುಕಿದರೂ [QE][QS2]ಅವು ಸಿಕ್ಕುವುದಿಲ್ಲ. [QE][QS2]ಏಕೆಂದರೆ ನಾನು ಉಳಿಸುವವರನ್ನು ಮನ್ನಿಸುತ್ತೇನೆ. [QE][PBR]
21. [QS]“ಮೆರಾಥಯಿಮ್ ದೇಶಕ್ಕೆ ವಿರೋಧವಾಗಿ, [QE][QS2]ಪೆಕೋದಿನ ನಿವಾಸಿಗಳಿಗೆ ವಿರೋಧವಾಗಿಯೂ ದಂಡೆತ್ತಿ ಹೋಗು; [QE][QS]ಅವರನ್ನು ಹಿಂದಟ್ಟಿ ಸಂಹರಿಸು. ಸಂಪೂರ್ಣ ನಾಶಮಾಡು.” [QE][QS2]“ನಾನು ನಿನಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾಡು, [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE]
22. [QS]ಯುದ್ಧದ ಶಬ್ದವೂ, [QE][QS2]ದೊಡ್ಡ ನಾಶನವೂ ದೇಶದಲ್ಲಿ ಇರುವುದು. [QE]
23. [QS]ಇಗೋ, ಲೋಕವನ್ನೆಲ್ಲಾ ಹೊಡೆದ [QE][QS2]ಸುತ್ತಿಗೆಯು ಮುರಿದು ತುಂಡುತುಂಡಾಯಿತು! [QE][QS]ಹೇಗೆ ಬಾಬೆಲ್ ರಾಜ್ಯವು [QE][QS2]ಜನಾಂಗಗಳ ನಡುವೆ ಹಾಳಾಯಿತಲ್ಲಾ! [QE]
24. [QS]ನಾನು ಬೋನನ್ನು ಇಟ್ಟೆನು; [QE][QS2]ಹೌದು, ಬಾಬಿಲೋನೇ ನೀನು ಸಿಕ್ಕಿಕೊಂಡೆ. [QE][QS]ಆದರೆ ನಿನಗೆ ತಿಳಿಯದೆ ಇತ್ತು. [QE][QS2]ನೀನು ಯೆಹೋವ ದೇವರಿಗೆ ವಿರೋಧವಾಗಿ ಜಗಳವಾಡಿದ್ದರಿಂದಲೇ ಸಿಕ್ಕಿಕೊಂಡೆ ಮತ್ತು ವಶವಾದೆ. [QE]
25. [QS]ಯೆಹೋವ ದೇವರು ತನ್ನ ಆಯುಧ ಶಾಲೆಯನ್ನು ತೆರೆದು, [QE][QS2]ತನ್ನ ರೋಷದ ಆಯುಧಗಳನ್ನು ಹೊರಗೆ ತಂದಿದ್ದಾರೆ. [QE][QS]ಏಕೆಂದರೆ ಬಾಬಿಲೋನಿನ ದೇಶದಲ್ಲಿ [QE][QS2]ಸಾರ್ವಭೌಮ ಸೇನಾಧೀಶ್ವರ ಯೆಹೋವ ದೇವರಿಗೆ ಕೆಲಸವಿದೆ. [QE]
26. [QS]ಕಟ್ಟಕಡೆಯ ಮೇರೆಯಿಂದ ಅದಕ್ಕೆ ವಿರೋಧವಾಗಿ ಬನ್ನಿ. [QE][QS2]ಅದರ ಕಣಜಗಳನ್ನು ತೆರೆಯಿರಿ. [QE][QS2]ಅದನ್ನು ದಿಬ್ಬಗಳಂತೆ ತುಳಿಯಿರಿ. [QE][QS]ಸಂಪೂರ್ಣವಾಗಿ ನಾಶಮಾಡಿರಿ. [QE][QS2]ಅದಕ್ಕೆ ಒಂದೂ ಉಳಿಯದಿರಲಿ. [QE]
27. [QS]ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, [QE][QS2]ಅವು ವಧ್ಯಸ್ಥಾನಕ್ಕೆ ಹೋಗಲಿ, [QE][QS]ಅವುಗಳ ಗತಿಯನ್ನು ಏನೆಂದು ಹೇಳಲಿ! [QE][QS2]ಅವುಗಳಿಗೆ ವಿಪತ್ಕಾಲವು ಒದಗಿದೆ. ದಂಡನೆಯ ದಿನವು ಸಂಭವಿಸಿದೆ. [QE]
28. [QS]ಅವರು ಚೀಯೋನಿನಲ್ಲಿ [QE][QS2]ನಮ್ಮ ದೇವರಾದ ಯೆಹೋವ ದೇವರ ಪ್ರತಿದಂಡನೆಯನ್ನೂ, [QE][QS]ಆತನ ಆಲಯದ ಪ್ರತಿದಂಡನೆಯನ್ನೂ ತಿಳಿಸುತ್ತಾ, [QE][QS2]ಬಾಬಿಲೋನಿನ ದೇಶದಿಂದ ತಪ್ಪಿಸಿಕೊಂಡು ಓಡಿ ಹೋಗುವವರ ಸ್ವರವನ್ನು ಕೇಳಿರಿ. [QE][PBR]
29. [QS]“ಬಾಬಿಲೋನಿಗೆ ವಿರೋಧವಾಗಿ [QE][QS2]ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; [QE][QS]ಅದರ ಸುತ್ತಲು ದಂಡಿಳಿಸಿರಿ [QE][QS2]ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. [QE][QS]ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ [QE][QS2]ಅದು ಮಾಡಿದಂತೆಯೇ ಅದಕ್ಕೆ ಮಾಡಿ. [QE][QS]ಏಕೆಂದರೆ ಅದು ಅಹಂಕಾರದಿಂದ [QE][QS2]ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು. [QE]
30. [QS]ಆದ್ದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; [QE][QS2]ಅದರ ಸೈನಿಕರೆಲ್ಲಾ ಆ ದಿವಸದಲ್ಲಿ ಸುಮ್ಮನಾಗುವರು,” [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE]
31. [QS]“ಅತಿ ಗರ್ವಿಷ್ಠನೇ, ಇಗೋ, [QE][QS2]ನಾನು ನಿನಗೆ ವಿರೋಧವಾಗಿದ್ದೇನೆ,” [QE][QS]ಎಂದು ಸೈನ್ಯಗಳ ದೇವರಾದ [QE][QS2]ಯೆಹೋವ ದೇವರು ಹೇಳುತ್ತಾರೆ. [QE][QS]“ಏಕೆಂದರೆ ನಿನ್ನ ದಿವಸವೂ, [QE][QS2]ನಿನ್ನ ಶಿಕ್ಷೆಯ ಕಾಲವೂ ಬಂತು. [QE]
32. [QS]ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು. [QE][QS2]ಅದನ್ನು ಯಾರೂ ಎತ್ತರು. [QE][QS]ಅದರ ನಗರಗಳಿಗೆ ಬೆಂಕಿ ಹೊತ್ತಿಸುವೆನು. [QE][QS2]ಅದು ಸುತ್ತಮುತ್ತಣದನ್ನೆಲ್ಲ ನುಂಗಿಬಿಡುವುದು.” [QE]
33. [PS]ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, [PE][QS]“ಇಸ್ರಾಯೇಲರೂ, ಯೆಹೂದ್ಯರೂ ಕೂಡ ಹಿಂಸೆಗೆ ಗುರಿಯಾಗಿದ್ದಾರೆ; [QE][QS2]ಅವರನ್ನು ಸೆರೆಗೆ ಒಯ್ಯುವವರೆಲ್ಲರು [QE][QS]ಅವರನ್ನು ಬಿಟ್ಟುಬಿಡುವುದಿಲ್ಲವೆಂದು, [QE][QS2]ಬಲವಾಗಿ ಪಟ್ಟುಹಿಡಿದಿದ್ದಾರೆ. [QE]
34. [QS]ಅವರ ವಿಮೋಚಕನು ಬಲಿಷ್ಠನೇ, [QE][QS2]ಸೇನಾಧೀಶ್ವರ ಯೆಹೋವ ದೇವರೆಂಬುದೇ ಅವರ ಹೆಸರು; [QE][QS]ಅವರು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ, [QE][QS2]ಬಾಬಿಲೋನಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ, [QE][QS2]ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವರು. [QE][PBR]
35. [QS]“ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ,” [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE][QS]“ಅದರ ಜನಸಾಮಾನ್ಯರನ್ನು, ಪ್ರಧಾನರನ್ನು, [QE][QS2]ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಖಡ್ಗ, [QE]
36. [QS]ಸುಳ್ಳು ಪ್ರವಾದಿಗಳ ವಿರೋಧವಾಗಿ ಖಡ್ಗ ಉಂಟು; [QE][QS2]ಅವರು ಮೂರ್ಖರಾಗುವರು; [QE][QS]ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; [QE][QS2]ಅವರು ಭಯಭ್ರಾಂತಿ ಪಡುವರು. [QE]
37. [QS]ಅದರ ಕುದುರೆಗಳಿಗೆ ವಿರೋಧವಾಗಿಯೂ, [QE][QS2]ಅವರ ರಥಗಳಿಗೆ ವಿರೋಧವಾಗಿಯೂ, [QE][QS2]ಅವರೊಳಗಿರುವ ಎಲ್ಲಾ ಸಕಲ ಜನರಿಗೆ ವಿರೋಧವಾಗಿಯೂ ಖಡ್ಗ ಉಂಟು; [QE][QS]ಅವರ ಹೆಂಗಸರಂತೆ ಅಶಕ್ತರಾಗುವರು; [QE][QS2]ಅದರ ಬೊಕ್ಕಸಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವು ಕೊಳ್ಳೆಯಾಗುವುವು. [QE]
38. [QS]ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; [QE][QS2]ಅದು ಬತ್ತಿಹೋಗುವುದು; [QE][QS]ಏಕೆಂದರೆ ಅದು ವಿಗ್ರಹಗಳ ದೇಶವೇ, [QE][QS2]ಅವರು ಭಯಂಕರವಾದ ವಿಗ್ರಹಗಳಿಂದ ಹುಚ್ಚರಾದರು. [QE][PBR]
39. [QS]“ಆದ್ದರಿಂದ ಅರಣ್ಯದ ಕಾಡುಮೃಗಗಳು, [QE][QS2]ನರಿಗಳು ಕೂಡ ಅಲ್ಲಿ ವಾಸಮಾಡುವುವು; [QE][QS]ಉಷ್ಟ್ರಪಕ್ಷಿಗಳೂ ಸಹ ಅದರಲ್ಲಿ ವಾಸಮಾಡುವುವು; [QE][QS2]ತಲತಲಾಂತರಗಳವರೆಗೂ ಯಾರೂ ಅದರಲ್ಲಿ ತಂಗುವುದಿಲ್ಲ. [QE]
40. [QS]ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ [QE][QS2]ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, [QE][QS]ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; [QE][QS2]ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ” [QE][QS2]ಎಂದು ಯೆಹೋವ ದೇವರು ಅನ್ನುತ್ತಾರೆ. [QE][PBR]
41. [QS]“ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು [QE][QS2]ಅನೇಕ ಅರಸರು ಎಚ್ಚರಗೊಳ್ಳುವರು. ಅವರು ಲೋಕದ ಕಟ್ಟಕಡೆಯಿಂದ ಬರುತ್ತಾರೆ. [QE]
42. [QS]ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ. [QE][QS2]ಅವರು ಕ್ರೂರರು, ಕನಿಕರ ತೋರಿಸುವುದಿಲ್ಲ. [QE][QS]ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. [QE][QS2]ಬಾಬಿಲೋನಿನ ಮಗಳೇ, [QE][QS]ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ [QE][QS2]ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ. [QE]
43. [QS]ಬಾಬಿಲೋನಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ; [QE][QS2]ಅವನ ಕೈಗಳು ನಿತ್ರಾಣವಾದವು; [QE][QS]ಸಂಕಟವೂ, ಹೆರುವ ಸ್ತ್ರೀಯ ಹಾಗೆ [QE][QS2]ನೋವೂ ಅವನನ್ನು ಹಿಡಿದವು. [QE]
44. [QS]ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ [QE][QS2]ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; [QE][QS]ಆದರೆ ನಾನು ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು; [QE][QS2]ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? [QE][QS]ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? [QE][QS2]ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?” [QE][PBR]
45. [QS]ಆದ್ದರಿಂದ ಯೆಹೋವ ದೇವರು ಬಾಬಿಲೋನಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, [QE][QS2]ಅವರು ಬಾಬಿಲೋನಿಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ; [QE][QS]ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; [QE][QS2]ಖಂಡಿತವಾಗಿ, ಅವುಗಳ ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು. [QE]
46. [QS]ಬಾಬಿಲೋನು ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುವುದು; [QE][QS2]ಅದರ ಕೂಗು ಜನಾಂಗಗಳೊಳಗೆ ಕೇಳಬಂತು. [QE]