1. {#1ಯೋಬನ ಉತ್ತರ }
2. [PS]ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು: [PE][QS]“ನಿಸ್ಸಂದೇಹವಾಗಿ ನೀವೇ ಆ ಜನರು; [QE][QS2]ನಿಮ್ಮ ಸಂಗಡಲೇ ಜ್ಞಾನವು ಸಾಯುವುದು. [QE]
3. [QS]ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; [QE][QS2]ನಾನು ನಿಮಗಿಂತ ಕಡಿಮೆ ಇಲ್ಲ; [QE][QS2]ಇಂಥಾ ವಿಷಯಗಳನ್ನು ತಿಳಿಯದಿರುವವನು ಯಾರು? [QE][PBR]
4. [QS]“ನಾನು ನೀತಿವಂತನೂ, ನಿರ್ದೋಷಿಯಾದರೂ ಗೆಳೆಯರ ಗೇಲಿ ಪರಿಹಾಸ್ಯಕ್ಕೆ ಗುರಿಯಾದೆನು; [QE][QS2]ನಾನು ದೇವರಿಗೆ ಪ್ರಾರ್ಥಿಸಿದೆ; [QE][QS2]ದೇವರು ನನಗೆ ಉತ್ತರಕೊಟ್ಟರು; [QE]
5. [QS]ಸುಖಜೀವಿಗಳಾಗಿರುವ ಜನರು ತೊಂದರೆಯಲ್ಲಿ ಇರುವವರನ್ನು ಅಪಹಾಸ್ಯ ಮಾಡುತ್ತಾರೆ, [QE][QS2]ಎಡವಿ ಬೀಳುವ ಜನರಿಗೆ ಕಾದಿದೆ ಆಪತ್ತು. [QE]
6. [QS]ಕಳ್ಳರ ಗುಡಾರಗಳು ವೃದ್ಧಿಯಾಗಿವೆ; [QE][QS2]ದೇವರನ್ನು ಕೆರಳಿಸುವವರು ನಿಶ್ಚಿಂತರಾಗಿದ್ದಾರೆ; [QE][QS2]ದೇವರೇ ತಮ್ಮ ಕೈಯಲ್ಲಿ ಇರುವುದಾಗಿ ತಿಳಿಯುತ್ತಾರೆ. [QE][PBR]
7. [QS]“ಆದರೂ ಮೃಗಗಳನ್ನು ಕೇಳು, ಅವು ನಿನಗೆ ಬೋಧಿಸುವುವು; [QE][QS2]ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವುವು. [QE]
8. [QS]ಭೂಮಿಯ ಸಂಗಡ ಮಾತನಾಡು, ಅದು ನಿನಗೆ ಬೋಧಿಸುವುದು, [QE][QS2]ಸಮುದ್ರದ ಮೀನುಗಳು ನಿನಗೆ ವಿವರಿಸುವುವು. [QE]
9. [QS]ಯೆಹೋವ ದೇವರ ಕೈ ಇವುಗಳನ್ನೆಲ್ಲಾ ಮಾಡಿತೆಂದು [QE][QS2]ಇವುಗಳಲ್ಲಿ ತಿಳಿಯದಿರುವುದು ಯಾವುದು? [QE]
10. [QS]ದೇವರ ಕೈಯಲ್ಲಿ ಎಲ್ಲಾ ಜೀವಿಗಳ ಪ್ರಾಣವೂ [QE][QS2]ಎಲ್ಲಾ ಮನುಷ್ಯರ ಶ್ವಾಸವೂ ಇವೆ. [QE]
11. [QS]ಬಾಯಿಯು ಆಹಾರವನ್ನು ರುಚಿ ನೋಡುವಂತೆ [QE][QS2]ಕಿವಿಯು ನುಡಿಗಳನ್ನು ವಿವೇಚಿಸುವುದಿಲ್ಲವೇ? [QE]
12. [QS]ಮುದುಕರಲ್ಲಿ ಜ್ಞಾನವು ಇರುವುದಿಲ್ಲವೋ? [QE][QS2]ದೀರ್ಘಾಯುಷ್ಯರಲ್ಲಿ ತಿಳುವಳಿಕೆಯನ್ನು ತರುವುದಿಲ್ಲವೋ? [QE][PBR]
13. [QS]“ಜ್ಞಾನವೂ, ಶಕ್ತಿಯೂ ದೇವರಲ್ಲಿವೆ; [QE][QS2]ಸಮಾಲೋಚನೆಯೂ, ಗ್ರಹಿಕೆಯೂ ದೇವರವೇ. [QE]
14. [QS]ದೇವರು ಕೆಡವಿದ್ದನ್ನು ತಿರುಗಿ ಕಟ್ಟಲಾಗುವುದಿಲ್ಲ; [QE][QS2]ದೇವರು ಸೆರೆಯಲ್ಲಿ ಹಾಕುವ ಮನುಷ್ಯನನ್ನು ಯಾರೂ ಬಿಡಿಸಲಾಗುವುದಿಲ್ಲ. [QE]
15. [QS]ದೇವರು ಮಳೆಯನ್ನು ತಡೆಹಿಡಿಯುತ್ತಾರೆ, ಭೂಮಿ ಒಣಗುತ್ತದೆ; [QE][QS2]ದೇವರು ನೀರನ್ನು ಬಿಟ್ಟರೆ, ಭೂಮಿಯನ್ನು ಹಾಳುಮಾಡುತ್ತದೆ. [QE]
16. [QS]ಬಲವೂ, ಜ್ಞಾನವೂ ದೇವರಲ್ಲಿವೆ; [QE][QS2]ವಂಚಕ ಹಾಗು ವಂಚಿತ ದೇವರಿಗೆ ಒಳಪಟ್ಟವರು. [QE]
17. [QS]ದೇವರು ಸಲಹೆಗಾರರನ್ನು ಸೆರೆಹಿಡಿಯುತ್ತಾರೆ; [QE][QS2]ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾರೆ. [QE]
18. [QS]ದೇವರು ಅರಸರಿಂದ ಹಾಕಲಾದ ಬಂಧನಗಳನ್ನು ಬಿಚ್ಚಿ, [QE][QS2]ಅವರ ನಡುಗಳಿಗೆ ವಸ್ತ್ರವನ್ನು ಕಟ್ಟುತ್ತಾರೆ. [QE]
19. [QS]ದೇವರು ಯಾಜಕರನ್ನು ಅಧಿಕಾರದಿಂದ ತೆಗೆದುಹಾಕುತ್ತಾರೆ; [QE][QS2]ಪ್ರಧಾನರನ್ನು ಕೆಡವಿಬಿಡುತ್ತಾರೆ. [QE]
20. [QS]ದೇವರು ವಿಶ್ವಾಸಾರ್ಹ ಸಲಹೆಗಾರರನ್ನು ಮೌನಗೊಳಿಸುತ್ತಾರೆ; [QE][QS2]ವೃದ್ಧರ ವಿವೇಚನೆಯನ್ನು ತೆಗೆದುಬಿಡುತ್ತಾರೆ. [QE]
21. [QS]ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾರೆ; [QE][QS2]ಬಲಿಷ್ಠರ ಬಲವನ್ನು ಸಡಿಲಿಸುತ್ತಾರೆ. [QE]
22. [QS]ದೇವರು ಕತ್ತಲೆಯೊಳಗಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾರೆ, [QE][QS2]ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾರೆ. [QE]
23. [QS]ದೇಶಗಳನ್ನು ಬೆಳೆಸುವುದೂ, ದಂಡಿಸುವುದೂ ದೇವರ ಕೈಯಲ್ಲಿದೆ; [QE][QS2]ದೇಶಗಳನ್ನು ವಿಸ್ತಾರಮಾಡುವುದೂ, ಚದರಿಸುವುದೂ ದೇವರ ಅಧಿಕಾರದಲ್ಲಿದೆ. [QE]
24. [QS]ದೇವರು ಭೂಮಿಯ ಮುಖ್ಯಸ್ಥರ ವಿವೇಚನೆಯನ್ನು ತೆಗೆದುಬಿಡುತ್ತಾರೆ; [QE][QS2]ಅಂಥವರು ಮಾರ್ಗವಿಲ್ಲದ ಅಲೆಯ ಮಾಡುವುದೂ ದೇವರಿಗೆ ಸಾಧ್ಯ. [QE]
25. [QS]ನಾಯಕರು ಬೆಳಕು ಇಲ್ಲದ ಕತ್ತಲೆಯಲ್ಲಿ ತಡಕಾಡುವಂತೆಯೂ [QE][QS2]ಅವರು ಮತ್ತೇರಿದವರಂತೆ ದಿಗ್ಭ್ರಮೆಗೊಳಿಸುವಂತೆಯೂ ಮಾಡಲು ದೇವರು ಶಕ್ತರು. [QE][PBR]