1. [QS]“ಇಗೋ, ನನ್ನ ಕಣ್ಣು ಎಲ್ಲವನ್ನು ನೋಡಿದೆ; [QE][QS2]ನನ್ನ ಕಿವಿ ಕೇಳಿ ಅದನ್ನು ಗ್ರಹಿಸಿಕೊಂಡಿದೆ. [QE]
2. [QS]ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದುಕೊಂಡಿದ್ದೇನೆ; [QE][QS2]ನಾನು ನಿಮಗಿಂತ ಕಡಿಮೆಯಾದವನಲ್ಲ. [QE]
3. [QS]ನಾನು ಸರ್ವಶಕ್ತರ ಸಂಗಡ ಖಂಡಿತವಾಗಿ ಮಾತನಾಡುವೆನು; [QE][QS2]ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು. [QE]
4. [QS]ಆದರೆ ನೀವು ಸುಳ್ಳನ್ನು ಕಲ್ಪಿಸುವವರು; [QE][QS2]ನೀವೆಲ್ಲರು ವ್ಯರ್ಥ ವೈದ್ಯರೇ. [QE]
5. [QS]ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು; [QE][QS2]ಮೌನವೇ ನಿಮಗೆ ಜ್ಞಾನವು. [QE]
6. [QS]ಈಗ ನನ್ನ ವಾದವನ್ನು ಕೇಳಿಸಿಕೊಳ್ಳಿರಿ; [QE][QS2]ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ. [QE]
7. [QS]ದೇವರ ಪರವಾಗಿ ಮಾತಾಡುವ ನೀವು ಅನ್ಯಾಯದಿಂದ ಮಾತಾಡುವಿರೋ? [QE][QS2]ದೇವರಿಗೋಸ್ಕರ ಮಾತಾಡುವ ನೀವು ವಂಚನೆಯಿಂದ ಮಾತಾಡುವಿರೋ? [QE]
8. [QS]ನೀವು ದೇವರಿಗೆ ಪಕ್ಷಪಾತವನ್ನು ತೋರಿಸುವಿರೋ? [QE][QS2]ದೇವರ ಪರವಾಗಿ ನೀವು ವಾದಿಸುವಿರೋ? [QE]
9. [QS]ದೇವರು ನಿಮ್ಮನ್ನು ಶೋಧಿಸಿದರೆ, ಅದು ನಿಮಗೆ ಒಳ್ಳೇದೋ? [QE][QS2]ಒಬ್ಬ ಮನುಷ್ಯನು ಇನ್ನೊಬ್ಬನನ್ನು ವಂಚಿಸುವ ಪ್ರಕಾರ, ನೀವೂ ದೇವರನ್ನು ವಂಚಿಸುವಿರೋ? [QE]
10. [QS]ನೀವು ರಹಸ್ಯವಾಗಿ ಪಕ್ಷಪಾತಮಾಡಿದರೂ, [QE][QS2]ದೇವರು ನಿಶ್ಚಯವಾಗಿಯೂ ನಿಮ್ಮನ್ನು ಖಂಡಿಸುವರು. [QE]
11. [QS]ದೇವರ ವೈಭವವು ನಿಮ್ಮನ್ನು ಹೆದರಿಸುವುದಿಲ್ಲವೋ? [QE][QS2]ದೈವಭಯವು ನಿಮ್ಮ ಮೇಲೆ ಬೀಳುವುದಿಲ್ಲವೋ? [QE]
12. [QS]ನಿಮ್ಮ ನೀತಿವಚನಗಳು ಬೂದಿಯ ಗಾದೆಗಳು; [QE][QS2]ನಿಮ್ಮ ವಾದಗಳು ಬರೀ ಮಣ್ಣಿನ ಗೋಡೆಯೇ. [QE][PBR]
13. [QS]“ಸುಮ್ಮನಿರಿ, ನನ್ನನ್ನು ಮಾತನಾಡಲು ಬಿಡಿರಿ; [QE][QS2]ನನಗೇನಾದರೂ ಆಗಲಿ. [QE]
14. [QS]ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು; [QE][QS2]ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು. [QE]
15. [QS]ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; [QE][QS2]ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು. [QE]
16. [QS]ಇದೇ ನನ್ನ ಬಿಡುಗಡೆಗೆ ಕಾರಣವಾಗಿರುವುದು; [QE][QS2]ಭಕ್ತಿಹೀನರು ದೇವರ ಮುಂದೆ ಬರಲು ಧೈರ್ಯಮಾಡುವುದಿಲ್ಲ. [QE]
17. [QS]ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ [QE][QS2]ಮತ್ತು ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ. [QE]
18. [QS]ಇಗೋ, ನನ್ನ ನ್ಯಾಯವನ್ನು ಕ್ರಮಪಡಿಸಿದೆನು; [QE][QS2]ನಾನು ನೀತಿವಂತನೆಂದು ನಿರ್ಣಯ ಹೊಂದುವುದು ನನಗೆ ಗೊತ್ತೇ ಇದೆ. [QE]
19. [QS]ಯಾರಾದರೂ ನನ್ನ ವಿರುದ್ಧ ದೂರನ್ನು ತರಬಹುದೋ? [QE][QS2]ಹಾಗಿದ್ದರೆ ನಾನು ಮೌನವಾಗಿದ್ದು ಸತ್ತು ಹೋಗುವೆನು. [QE][PBR]
20. [QS]“ದೇವರೇ, ಈ ಎರಡು ಸಂಗತಿಗಳನ್ನು ಮಾತ್ರ ನನಗೆ ದಯಪಾಲಿಸಿರಿ; [QE][QS2]ಆಗ ನಿಮ್ಮಿಂದ ನಾನು ಅಡಗಿಕೊಳ್ಳುವುದಿಲ್ಲ: [QE]
21. [QS]ನಿಮ್ಮ ಕೈಯನ್ನು ನನ್ನಿಂದ ದೂರಮಾಡಿರಿ; [QE][QS2]ನಿಮ್ಮ ಭಯವು ನನ್ನನ್ನು ಹೆದರಿಸದಿರಲಿ. [QE]
22. [QS]ಆಮೇಲೆ ನೀವು ನನ್ನನ್ನು ಕರೆದರೆ, ನಾನು ಉತ್ತರಿಸುವೆನು; [QE][QS2]ಅಥವಾ ನಾನು ಮಾತಾಡಿದರೆ, ನೀವು ಉತ್ತರಕೊಡಿರಿ. [QE]
23. [QS]ನಾನು ಎಷ್ಟೋ ಅಕ್ರಮಗಳನ್ನೂ, ಪಾಪಗಳನ್ನೂ ಮಾಡಿದ್ದೇನೆ. [QE][QS2]ನನ್ನ ಅಪರಾಧವನ್ನೂ, ಪಾಪವನ್ನೂ ನನಗೆ ತೋರಿಸಿಕೊಡಿರಿ. [QE]
24. [QS]ಏಕೆ ನಿಮ್ಮ ಮುಖವನ್ನು ಮರೆಮಾಡುತ್ತೀರಿ? [QE][QS2]ನನ್ನನ್ನು ನಿಮ್ಮ ಶತ್ರುವಿನ ಹಾಗೆ ಏಕೆ ಭಾವಿಸುತ್ತೀರಿ? [QE]
25. [QS]ಗಾಳಿಯಿಂದ ಹಾರಿಹೋಗುವ ಎಲೆಯನ್ನು ತೊಂದರೆಪಡಿಸುವಿರೋ? [QE][QS2]ಒಣಗಿದ ಕೊಳೆಯನ್ನು ಬೆನ್ನಟ್ಟುವಿರೋ? [QE]
26. [QS]ಏಕೆಂದರೆ ನನಗೆ ವಿರೋಧವಾಗಿ ಕಹಿಯಾದ ತೀರ್ಪನ್ನು ನೀವು ಬರೆದಿರುವಿರಿ; [QE][QS2]ನನ್ನ ಯೌವನದ ಪಾಪಗಳನ್ನು ನನ್ನ ಮೇಲೆ ಹೊರಿಸಿರುವಿರಿ. [QE]
27. [QS]ನನ್ನ ಪಾದಗಳನ್ನು ಸಂಕೋಲೆಗಳಿಂದ ಕಟ್ಟಿಹಾಕಿದ್ದೀರಿ, [QE][QS2]ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕಿದ್ದೀರಿ; [QE][QS2]ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡುತ್ತೀರಿ. [QE][PBR]
28. [QS]“ಆದ್ದರಿಂದ ಮಾನವನು ಕೊಳೆತ ವಸ್ತುವಿನಂತೆಯೂ, [QE][QS2]ನುಸಿಹಿಡಿದ ಬಟ್ಟೆಯಂತೆಯೂ ಅಳಿದು ಹೋಗುತ್ತಾನೆ. [QE][PBR]