1. {#1ಎಲೀಫಜನ ಪ್ರತಿವಾದ }
2. [PS]ಆಗ ತೇಮಾನ್ಯನಾದ ಎಲೀಫಜನು ಹೀಗೆಂದನು: [PE][QS]“ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು [QE][QS2]ಪೂರ್ವದಿಕ್ಕಿನ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವುದು ಉಂಟೋ? [QE]
3. [QS]ನಿಷ್ಪ್ರಯೋಜಕವಾದ ನುಡಿಗಳಿಂದಲೂ, [QE][QS2]ಕೆಲಸಕ್ಕೆ ಬಾರದ ಮಾತುಗಳಿಂದಲೂ ಜ್ಞಾನಿಯು ವಾದಿಸುವನೋ? [QE]
4. [QS]ನೀನಾದರೋ ದೇವರ ಭಯಭಕ್ತಿಯನ್ನು ಹಾಳುಮಾಡುತ್ತಿರುವೆ. [QE][QS2]ದೇವರ ಮೇಲಿನ ಭಕ್ತಿಯನ್ನು ಕಡಿಮೆ ಮಾಡುತ್ತಿರುವೆ. [QE]
5. [QS]ಏಕೆಂದರೆ ನಿನ್ನ ಪಾಪವೇ ನಿನ್ನ ಬಾಯಿಯನ್ನು ಪ್ರೇರೇಪಿಸುತ್ತದೆ; [QE][QS2]ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆಯ್ದುಕೊಳ್ಳುತ್ತಿರುವೆ. [QE]
6. [QS]ನಾನಲ್ಲ, ನಿನ್ನ ಬಾಯಿಯೇ ನಿನ್ನನ್ನು ಖಂಡಿಸುತ್ತದೆ; [QE][QS2]ಹೌದು, ನಿನ್ನ ತುಟಿಗಳೇ ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ. [QE][PBR]
7. [QS]“ನೀನು ಮೊದಲು ಹುಟ್ಟಿದ ಪುರುಷನೋ? [QE][QS2]ಬೆಟ್ಟಗಳಿಗೆ ಮುಂಚಿತವಾಗಿ ಹುಟ್ಟಿದವನೋ? [QE]
8. [QS]ನೀನು ದೇವರ ಆಲೋಚನಾ ಸಭೆಯಲ್ಲಿ ಸದಸ್ಯನೋ? [QE][QS2]ಜ್ಞಾನವು ನಿನಗೆ ಮಾತ್ರ ಮೀಸಲೋ? [QE]
9. [QS]ನಮಗೆ ತಿಳಿಯದೆ ಇರುವುದನ್ನು ನೀನು ಏನು ತಿಳಿದುಕೊಂಡಿರುವೆ? [QE][QS2]ನಮ್ಮಲ್ಲಿ ಇಲ್ಲದ ಯಾವ ಒಳನೋಟವನ್ನು ನೀನು ಅರ್ಥಮಾಡಿಕೊಂಡಿರುವೆ? [QE]
10. [QS]ತಲೆ ನರೆತವರೂ, ಹೆಚ್ಚು ಮುದುಕರಾದವರೂ, [QE][QS2]ನಿನ್ನ ತಂದೆಗಿಂತ ವೃದ್ಧರಾದವರೂ ನಮ್ಮಲ್ಲಿ ಇದ್ದಾರೆ. [QE]
11. [QS]ದೇವರ ಸಂತೈಸುವಿಕೆಗಳೂ [QE][QS2]ಮೃದುವಾದ ಹಿತವಚನಗಳು ನಿನಗೆ ಸಾಕಾಗಿರುವುದಿಲ್ಲವೋ? [QE]
12. [QS]ನಿನ್ನ ಹೃದಯವು ನಿನ್ನನ್ನು ಸೆಳೆದಿರುವುದು ಏಕೆ? [QE][QS2]ಏಕೆ ನಿನ್ನ ಕಣ್ಣು ಕಿಡಿಕಾರುತ್ತಿದೆ? [QE]
13. [QS]ನೀನು ದೇವರ ವಿರುದ್ಧ ನಿನ್ನ ಕೋಪವನ್ನು ಹೊರಹಾಕುತ್ತಿರುವೆ? [QE][QS2]ನಿನ್ನ ಬಾಯಿಂದ ಕೋಪದ ಮಾತುಗಳನ್ನು ಹೊರಡಿಸುತ್ತೀಯಲ್ಲಾ? [QE][PBR]
14. [QS]“ಮನುಷ್ಯನು ಎಷ್ಟರವನು? ಅವನು ಶುದ್ಧನಿರಲು ಸಾಧ್ಯವೇ? [QE][QS2]ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ? [QE]
15. [QS]ದೇವರು ತಮ್ಮ ಪರಿಶುದ್ಧರನ್ನು ಆತುಕೊಂಡಿರುವುದಿಲ್ಲ; [QE][QS2]ಆಕಾಶಗಳೂ ದೇವರ ದೃಷ್ಟಿಯಲ್ಲಿ ಶುದ್ಧವಲ್ಲ. [QE]
16. [QS]ಹಾಗಿರುವಾಗ, ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು, [QE][QS2]ದೇವರ ದೃಷ್ಟಿಯಲ್ಲಿ ಎಷ್ಟು ಅಲ್ಪನೂ ಅಶುದ್ಧನೂ ಆಗಿದ್ದಾನಲ್ಲವೇ? [QE][PBR]
17. [QS]“ಕೇಳು, ನಾನು ನಿನಗೆ ವಿವರಿಸುತ್ತೇನೆ, [QE][QS2]ನಾನು ನೋಡಿದ್ದನ್ನು ನಿನಗೆ ಹೇಳುತ್ತೇನೆ, [QE]
18. [QS]ಜ್ಞಾನಿಗಳು ತಮ್ಮ ಪೂರ್ವಜರಿಂದ ಕಲಿತಿದ್ದನ್ನೇ [QE][QS2]ಮರೆಮಾಡದೆ ನಮಗೆ ಪ್ರಕಟಿಸಿದರು. [QE]
19. [QS]ಅವರಿಗೆ ದೇಶವು ಕೊಡಲಾಗಿತ್ತು; [QE][QS2]ಅವರ ಮಧ್ಯದಲ್ಲಿ ಅಂದು ಪರದೇಶೀಯರು ಹಾದುಹೋಗುವಂತಿರಲಿಲ್ಲ. [QE]
20. [QS]ಜ್ಞಾನಿಗಳು ಹೇಳಿದ್ದೇನೆಂದರೆ: ದುಷ್ಟನು ತನ್ನ ಜೀವಮಾನವೆಲ್ಲಾ ವೇದನೆಪಡುತ್ತಾನೆ; [QE][QS2]ನಿರ್ದಯನು ತನ್ನ ವರ್ಷಗಳೆಲ್ಲ ತೊಂದರೆಗಳನ್ನು ಸಂಗ್ರಹಿಸುತ್ತಾನೆ. [QE]
21. [QS]ಭಯಂಕರವಾದ ಸಂಗತಿಗಳು ಅವನ ಕಿವಿಗೆ ಬೀಳುತ್ತವೆ; [QE][QS2]ಎಲ್ಲವು ಸುಖವಾಗಿರುವಾಗ ಸುಲಿಗೆ ಮಾಡುವವನು ದುಷ್ಟನ ಮೇಲೆ ದಾಳಿ ಮಾಡುತ್ತಾನೆ. [QE]
22. [QS]ಕತ್ತಲೆಯೊಳಗಿಂದ ಪಾರಾಗುತ್ತೇನೆಂದು ದುಷ್ಟನು ನಂಬುವುದಿಲ್ಲ; [QE][QS2]ಅವನ ಖಡ್ಗವು ಅವನಿಗಾಗಿ ಕಾದಿದೆ. [QE]
23. [QS]ಅವನು ಆಹಾರ ಎಲ್ಲಿ ಎಂದು ರಣಹದ್ದಿನ ಹಾಗೆ ಅಲೆಯುತ್ತಾನೆ; [QE][QS2]ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ. [QE]
24. [QS]ಇಕ್ಕಟ್ಟೂ, ಸಂಕಟವೂ ಅವನನ್ನು ಹೆದರಿಸಿ, [QE][QS2]ಆಕ್ರಮಣ ಮಾಡಲು ಸಿದ್ಧನಾದ ರಾಜನಂತೆ ತೊಂದರೆಗಳು ಅವನನ್ನು ಆವರಿಸುತ್ತವೆ, [QE]
25. [QS]ಏಕೆಂದರೆ ದುಷ್ಟನು ದೇವರಿಗೆ ವಿರೋಧವಾಗಿ ಮುಷ್ಠಿ ತೋರಿಸಿದನಲ್ಲಾ, [QE][QS2]ಸರ್ವಶಕ್ತರ ಎದುರು ನಿಂತು ಶೂರನಂತೆ ಮೆರೆದನಲ್ಲಾ. [QE]
26. [QS]ದೇವರ ವಿರೋಧವಾಗಿ ಬಲವುಳ್ಳ ದೊಡ್ಡ [QE][QS2]ಗುರಾಣಿಯೊಂದಿಗೆ ಓಡುತ್ತಾನೆ. [QE][PBR]
27. [QS]“ದುಷ್ಟನು ತನ್ನ ಮುಖದಲ್ಲಿ ಕೊಬ್ಬೇರಿಸಿಕೊಂಡು, [QE][QS2]ತನ್ನ ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದಾನೆ. [QE]
28. [QS]ಹಾಳಾದ ಪಟ್ಟಣಗಳಲ್ಲಿಯೂ, [QE][QS2]ಯಾರೂ ವಾಸಿಸದ, [QE][QS2]ಕುಸಿಯಲು ಸಿದ್ಧವಾದಂಥ ಮನೆಗಳಲ್ಲಿಯೂ ವಾಸಮಾಡಿಕೊಂಡಿದ್ದಾನೆ. [QE]
29. [QS]ದುಷ್ಟನು ಐಶ್ವರ್ಯವಂತನಾಗುವುದಿಲ್ಲ; ಆದರೂ ಅವನ ಆಸ್ತಿಯು ಸ್ಥಿರವಲ್ಲ; [QE][QS2]ಅವನ ಸೊತ್ತು ಭೂಮಿಯ ಮೇಲೆ ವಿಸ್ತಾರವಾಗುವುದಿಲ್ಲ. [QE]
30. [QS]ಕತ್ತಲೆಯೊಳಗಿಂದ ಅವನು ಪಾರಾಗುವದಿಲ್ಲ; [QE][QS2]ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು; [QE][QS2]ದೇವರ ಬಾಯಿಯ ಶ್ವಾಸದಿಂದ ಅವನು ತೊಲಗಿ ಹೋಗುವನು. [QE]
31. [QS]ದುಷ್ಟನು ವ್ಯರ್ಥವಾದದ್ದನ್ನು ನಂಬಿ ಮೋಸಹೋಗದಿರಲಿ. [QE][QS2]ಏಕೆಂದರೆ, ವ್ಯರ್ಥವಾದವುಗಳಿಂದ ಅವನಿಗಾಗುವ ಪ್ರತಿಫಲವು ಶೂನ್ಯವೇ. [QE]
32. [QS]ದುಷ್ಟನು ತನ್ನ ಸಮಯಕ್ಕಿಂತ ಮೊದಲು ಬತ್ತಿ ಹೋಗುವನು; [QE][QS2]ಅವನ ಕೊಂಬೆಯು ಹಸಿರಾಗಿರುವುದಿಲ್ಲ. [QE]
33. [QS]ದ್ರಾಕ್ಷೆಯ ಬಳ್ಳಿಯಂತೆ ಅವನು ತನ್ನ ಮಾಗದ ಫಲವನ್ನು ಹಾಳುಮಾಡಿಕೊಳ್ಳುವನು; [QE][QS2]ದುಷ್ಟನು ಹೂವುಗಳನ್ನು ಉದುರಿಸುವ ಓಲಿವ್ ಎಣ್ಣೆಯ ಮರದ ಹಾಗೆ ಇರುವನು. [QE]
34. [QS]ದೇವರಿಲ್ಲದವರ ಸಹವಾಸ ಬಂಜರು, [QE][QS2]ಬೆಂಕಿಯು ಲಂಚಕೋರರ ಮನೆಗಳನ್ನು ಸುಟ್ಟುಹಾಕುವುದು. [QE]
35. [QS]ಅವರು ಹಿಂಸೆಯನ್ನು ಗರ್ಭಧರಿಸಿ, ಕೆಟ್ಟದ್ದನ್ನು ಹೆರುವರು; [QE][QS2]ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.” [QE]