ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೋಬನು
1. {#1ಬಿಲ್ದದನ ವಾದ }
2. [PS]ಆಗ ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೀಗೆಂದನು: [PE][QS]“ಯೋಬನೇ, ಈ ಮಾತುಗಳನ್ನು ನೀನು ಯಾವಾಗ ಕೊನೆಗೊಳಿಸುತ್ತೀ? [QE][QS2]ವಿವೇಕಿಯಾಗು, ಆಮೇಲೆ ಮಾತನಾಡೋಣ. [QE]
3. [QS]ನಮ್ಮನ್ನು ಮೃಗಗಳೆಂದು ಎಣಿಸಿರುವೆಯಾ? [QE][QS2]ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ? [QE]
4. [QS]ಕೋಪದಿಂದ ನಿನ್ನನ್ನು ನೀನೇ ಸೀಳಿಕೊಳ್ಳುವೆಯಾ? [QE][QS2]ನಿನ್ನ ನಿಮಿತ್ತ ಭೂಮಿ ಹಾಳಾಗಬೇಕೋ? [QE][QS2]ಬಂಡೆಯು ತನ್ನ ಸ್ಥಳದಿಂದ ತೊಲಗಬೇಕೋ? [QE][PBR]
5. [QS]“ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿಹೋಗುವುದು; [QE][QS2]ಅವನ ಬಾಳಿನ ಬೆಂಕಿಯ ಜ್ವಾಲೆಯು ಉರಿಯದೆ ಹೋಗುವುದು. [QE]
6. [QS]ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು; [QE][QS2]ಅವನ ಮೇಲಣ ತೂಗು ದೀಪವು ಆರಿಹೋಗುವುದು. [QE]
7. [QS]ಅವನ ಬಲವುಳ್ಳ ಹೆಜ್ಜೆಗಳು ದುರ್ಬಲಗೊಳ್ಳುವುದು; [QE][QS2]ಅವನ ಯೋಜನೆಗಳೇ ಅವನನ್ನು ಕೆಡವಿಹಾಕುವವು. [QE]
8. [QS]ಏಕೆಂದರೆ ದುಷ್ಟನು ತನ್ನ ಹೆಜ್ಜೆಗಳಿಂದಲೇ ಬಲೆಯಲ್ಲಿ ಬೀಳುವನು; [QE][QS2]ಅವನು ಕುಣಿಯಲ್ಲಿ ಬಿದ್ದು ಅಲೆದಾಡುವನು. [QE]
9. [QS]ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು; [QE][QS2]ಉರುಳು ಅವನನ್ನು ಬಿಗಿಯಾಗಿ ಹಿಡಿದಿಟ್ಟುಕೊಳ್ಳುವುದು. [QE]
10. [QS]ನೆಲದ ಮೇಲೆ ಪಾಶವೂ, [QE][QS2]ದಾರಿಯಲ್ಲಿ ಜಾಲವೂ ಅವನಿಗೆ ಹೊಂಚಿಕೊಂಡಿರುವುವು. [QE]
11. [QS]ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, [QE][QS2]ಅವನ ಕಾಲುಗಳನ್ನು ಓಡುವಂತೆ ಮಾಡುವುವು. [QE]
12. [QS]ಅವನ ಬಲವು ಕುಸಿಯುವುದು; [QE][QS2]ವಿನಾಶವು ಅವನ ಬೀಳುವಿಕೆಗಾಗಿ ಸಿದ್ಧವಾಗಿರುವುದು. [QE]
13. [QS]ಅದು ಅವನ ಚರ್ಮದ ಬಲವನ್ನು ತಿಂದುಬಿಡುವುದು; [QE][QS2]ಮರಣದ ಚೊಚ್ಚಲತನವು ಅವನ ಅಂಗಾಂಗಗಳನ್ನು ನುಂಗಿಬಿಡುವುದು. [QE]
14. [QS]ಅವನು ಭದ್ರತೆಯ ಗುಡಾರದಿಂದ ಹೊರಬೀಳುವನು. [QE][QS2]ಅವನು ಭಯಂಕರ ಅರಸನ ಬಳಿಗೆ ಸಾಗಬೇಕಾಗುವುದು. [QE]
15. [QS]ಬೆಂಕಿಯು ಅವನ ಮನೆಯನ್ನು ಸುಡುವುದು; [QE][QS2]ಅವನ ಮನೆಯ ಮೇಲೆ ಗಂಧಕವನ್ನು ಎರಚಲಾಗುವುದು. [QE]
16. [QS]ಬುಡದಿಂದ ಅವನ ಬೇರುಗಳು ಒಣಗುವುವು; [QE][QS2]ಮೇಲಿನಿಂದ ಅವನ ರೆಂಬೆಯು ಬಾಡುವುದು. [QE]
17. [QS]ಅವನ ಸ್ಮರಣೆಯು ಭೂಮಿಯಿಂದ ಅಳಿದುಹೋಗುವುದು; [QE][QS2]ನಾಡಿನಲ್ಲಿ ಅವನ ಹೆಸರು ಇಲ್ಲದೆ ಹೋಗುವುದು. [QE]
18. [QS]ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; [QE][QS2]ಅವನು ಲೋಕದಿಂದ ಬಹಿಷ್ಕರಿಸಲಾಗುವನು. [QE]
19. [QS]ಅವನ ಜನರಲ್ಲಿ ಅವನಿಗೆ ಮಗನೂ, ಮೊಮ್ಮಗನೂ ಇರುವುದಿಲ್ಲ, [QE][QS2]ಅವನು ವಾಸಿಸಿದ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ. [QE]
20. [QS]ಪಶ್ಚಿಮ ಜನರು ಅವನ ಸ್ಥಿತಿಯನ್ನು ನೋಡಿ ಆಶ್ಚರ್ಯಪಡುವರು; [QE][QS2]ಪೂರ್ವದ ಕಡೆಯವರನ್ನು ದಿಗಿಲು ಹಿಡಿಯುವುದು. [QE]
21. [QS]ನಿಶ್ಚಯವಾಗಿ ದುಷ್ಟರ ನೆಲೆಯು ಹೀಗೆಯೇ ಇರುವುದು; [QE][QS2]ದೇವರನ್ನು ಅರಿಯದವನ ಸ್ಥಿತಿ ಇದೇ.” [QE]
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 18 / 42
ಬಿಲ್ದದನ ವಾದ 1 2 ಆಗ ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೀಗೆಂದನು: “ಯೋಬನೇ, ಈ ಮಾತುಗಳನ್ನು ನೀನು ಯಾವಾಗ ಕೊನೆಗೊಳಿಸುತ್ತೀ? ವಿವೇಕಿಯಾಗು, ಆಮೇಲೆ ಮಾತನಾಡೋಣ. 3 ನಮ್ಮನ್ನು ಮೃಗಗಳೆಂದು ಎಣಿಸಿರುವೆಯಾ? ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ? 4 ಕೋಪದಿಂದ ನಿನ್ನನ್ನು ನೀನೇ ಸೀಳಿಕೊಳ್ಳುವೆಯಾ? ನಿನ್ನ ನಿಮಿತ್ತ ಭೂಮಿ ಹಾಳಾಗಬೇಕೋ? ಬಂಡೆಯು ತನ್ನ ಸ್ಥಳದಿಂದ ತೊಲಗಬೇಕೋ? 5 “ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿಹೋಗುವುದು; ಅವನ ಬಾಳಿನ ಬೆಂಕಿಯ ಜ್ವಾಲೆಯು ಉರಿಯದೆ ಹೋಗುವುದು. 6 ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು; ಅವನ ಮೇಲಣ ತೂಗು ದೀಪವು ಆರಿಹೋಗುವುದು. 7 ಅವನ ಬಲವುಳ್ಳ ಹೆಜ್ಜೆಗಳು ದುರ್ಬಲಗೊಳ್ಳುವುದು; ಅವನ ಯೋಜನೆಗಳೇ ಅವನನ್ನು ಕೆಡವಿಹಾಕುವವು. 8 ಏಕೆಂದರೆ ದುಷ್ಟನು ತನ್ನ ಹೆಜ್ಜೆಗಳಿಂದಲೇ ಬಲೆಯಲ್ಲಿ ಬೀಳುವನು; ಅವನು ಕುಣಿಯಲ್ಲಿ ಬಿದ್ದು ಅಲೆದಾಡುವನು. 9 ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು; ಉರುಳು ಅವನನ್ನು ಬಿಗಿಯಾಗಿ ಹಿಡಿದಿಟ್ಟುಕೊಳ್ಳುವುದು. 10 ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗೆ ಹೊಂಚಿಕೊಂಡಿರುವುವು. 11 ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, ಅವನ ಕಾಲುಗಳನ್ನು ಓಡುವಂತೆ ಮಾಡುವುವು. 12 ಅವನ ಬಲವು ಕುಸಿಯುವುದು; ವಿನಾಶವು ಅವನ ಬೀಳುವಿಕೆಗಾಗಿ ಸಿದ್ಧವಾಗಿರುವುದು. 13 ಅದು ಅವನ ಚರ್ಮದ ಬಲವನ್ನು ತಿಂದುಬಿಡುವುದು; ಮರಣದ ಚೊಚ್ಚಲತನವು ಅವನ ಅಂಗಾಂಗಗಳನ್ನು ನುಂಗಿಬಿಡುವುದು. 14 ಅವನು ಭದ್ರತೆಯ ಗುಡಾರದಿಂದ ಹೊರಬೀಳುವನು. ಅವನು ಭಯಂಕರ ಅರಸನ ಬಳಿಗೆ ಸಾಗಬೇಕಾಗುವುದು. 15 ಬೆಂಕಿಯು ಅವನ ಮನೆಯನ್ನು ಸುಡುವುದು; ಅವನ ಮನೆಯ ಮೇಲೆ ಗಂಧಕವನ್ನು ಎರಚಲಾಗುವುದು. 16 ಬುಡದಿಂದ ಅವನ ಬೇರುಗಳು ಒಣಗುವುವು; ಮೇಲಿನಿಂದ ಅವನ ರೆಂಬೆಯು ಬಾಡುವುದು. 17 ಅವನ ಸ್ಮರಣೆಯು ಭೂಮಿಯಿಂದ ಅಳಿದುಹೋಗುವುದು; ನಾಡಿನಲ್ಲಿ ಅವನ ಹೆಸರು ಇಲ್ಲದೆ ಹೋಗುವುದು. 18 ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; ಅವನು ಲೋಕದಿಂದ ಬಹಿಷ್ಕರಿಸಲಾಗುವನು. 19 ಅವನ ಜನರಲ್ಲಿ ಅವನಿಗೆ ಮಗನೂ, ಮೊಮ್ಮಗನೂ ಇರುವುದಿಲ್ಲ, ಅವನು ವಾಸಿಸಿದ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ. 20 ಪಶ್ಚಿಮ ಜನರು ಅವನ ಸ್ಥಿತಿಯನ್ನು ನೋಡಿ ಆಶ್ಚರ್ಯಪಡುವರು; ಪೂರ್ವದ ಕಡೆಯವರನ್ನು ದಿಗಿಲು ಹಿಡಿಯುವುದು. 21 ನಿಶ್ಚಯವಾಗಿ ದುಷ್ಟರ ನೆಲೆಯು ಹೀಗೆಯೇ ಇರುವುದು; ದೇವರನ್ನು ಅರಿಯದವನ ಸ್ಥಿತಿ ಇದೇ.”
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 18 / 42
×

Alert

×

Kannada Letters Keypad References