1. {#1ಎಲೀಫಜನ ವಾದ }
2. [PS]ಆಮೇಲೆ ತೇಮಾನ್ಯನಾದ ಎಲೀಫಜನು ಹೀಗೆಂದನು: [PE][QS]“ಮನುಷ್ಯನಿಂದ ದೇವರಿಗೆ ಪ್ರಯೋಜನವೇನು? [QE][QS2]ಒಬ್ಬನು ಜ್ಞಾನಿಯಾಗಿದ್ದರೂ ದೇವರಿಗೆ ಪ್ರಯೋಜನವಾಗಿರುವನೇ? [QE]
3. [QS]ನೀನು ನೀತಿವಂತನಾಗಿದ್ದರೆ, ಸರ್ವಶಕ್ತರಿಗೆ ಮೆಚ್ಚಿಕೆಯೋ? [QE][QS2]ನಿನ್ನ ಮಾರ್ಗಗಳು ನಿರ್ದೋಷವಾಗಿದ್ದರೆ, ದೇವರಿಗೆ ಲಾಭವೇನು? [QE][PBR]
4. [QS]“ನಿನ್ನ ಭಕ್ತಿಗಾಗಿ ದೇವರು ನಿನ್ನನ್ನು ಗದರಿಸುತ್ತಾರೋ? [QE][QS2]ನಿನ್ನ ಭಕ್ತಿಗಾಗಿ ದೇವರು ನ್ಯಾಯತೀರ್ಪಿಗೆ ಗುರಿಪಡಿಸುತ್ತಾರೆಯೇ? [QE]
5. [QS]ನಿನ್ನ ದುಷ್ಟತನವು ಬಹಳವಲ್ಲವೋ? [QE][QS2]ನಿನ್ನ ಪಾಪಗಳಿಗೆ ಅಂತ್ಯವೇ ಇಲ್ಲಾ. [QE]
6. [QS]ನೀನು ಕಾರಣವಿಲ್ಲದೆ ನಿನ್ನ ಸಹೋದರರಿಂದ ಈಡು ತೆಗೆದುಕೊಂಡಿದ್ದೀ; [QE][QS2]ಅವರ ವಸ್ತ್ರಗಳನ್ನು ಸಹ ನೀನು ಕಿತ್ತುಕೊಂಡಿರುವೆ. [QE]
7. [QS]ನೀನು ದಣಿದವರಿಗೆ ನೀರು ಕೊಡಲಿಲ್ಲ; [QE][QS2]ಹಸಿದವರಿಗೆ ಆಹಾರವನ್ನು ಬಡಿಸಲಿಲ್ಲ. [QE]
8. [QS]ನೀನು ಬಲಿಷ್ಠನಾಗಿದ್ದರೂ, ಜಮೀನು ಬಹಳವಾಗಿದ್ದರೂ, [QE][QS2]ಗೌರವಕ್ಕೆ ಯೋಗ್ಯನಾದ ಮನುಷ್ಯನಾಗಿ ಊರಲ್ಲಿ ವಾಸಿಸಿದರೂ, [QE]
9. [QS]ವಿಧವೆಯರನ್ನು ಬರಿದಾಗಿ ಕಳುಹಿಸಿಬಿಟ್ಟೆ; [QE][QS2]ದಿಕ್ಕಿಲ್ಲದವರ ತೋಳುಗಳನ್ನು ಮುರಿದುಬಿಟ್ಟೆ. [QE]
10. [QS]ಆದ್ದರಿಂದ ನಿನ್ನ ಸುತ್ತಲೂ ಉರುಲುಗಳು ಕಾದಿವೆ; [QE][QS2]ಹಠಾತ್ತಾಗಿ ಬರುವ ವಿಪತ್ತು ನಿನ್ನನ್ನು ತಲ್ಲಣಗೊಳಿಸುತ್ತದೆ. [QE]
11. [QS]ಇದಲ್ಲದೆ ನೀನು ಕಾಣದಷ್ಟು ಕತ್ತಲು ನಿನಗಿರುವುದು; [QE][QS2]ಜಲಪ್ರವಾಹವೂ ನಿನ್ನನ್ನು ಮುಳುಗಿಸುವುದು. [QE][PBR]
12. [QS]“ದೇವರು ಸ್ವರ್ಗದಲ್ಲಿ ಇದ್ದಾರಲ್ಲವೇ? [QE][QS2]ನಕ್ಷತ್ರಮಂಡಲವನ್ನು ನೋಡು, ಅವು ಎಷ್ಟು ಉನ್ನತ! [QE]
13. [QS]ನೀನಾದರೋ, ‘ದೇವರಿಗೆ ಏನು ಗೊತ್ತು? [QE][QS2]ಕಾರ್ಗತ್ತಲಿರುವಾಗ ದೇವರು ನ್ಯಾಯತೀರಿಸಲು ಸಾಧ್ಯವೇ? [QE]
14. [QS]ದಟ್ಟವಾದ ಮೋಡಗಳು ದೇವರಿಗೆ ಪರದೆಯ ಹಾಗಿರುವುದರಿಂದ [QE][QS2]ದೇವರು ನಮ್ಮನ್ನು ನೋಡಲು ಸಾಧ್ಯವಿಲ್ಲ. [QE][QS]ದೇವರು ಆಕಾಶಮಂಡಲದ ಮೇಲ್ಗಡೆಯಲ್ಲಿ ನಡೆದಾಡುತ್ತಾರೆ,’ [QE][QS2]ಎಂದು ಹೇಳಿಕೊಂಡಿರುವೆ ಅಲ್ಲವೇ? [QE]
15. [QS]ದುಷ್ಟರು ಮೊದಲಿನಿಂದಲೂ ನಡೆದ [QE][QS2]ದಾರಿಯಲ್ಲಿ ನೀನು ನಡೆಯುವಿಯಾ? [QE]
16. [QS]ಅಕಾಲ ಮರಣವು ಅವರನ್ನು ಅಪಹರಿಸಿತು; [QE][QS2]ಅವರ ಅಡಿಪಾಯವು ಪ್ರವಾಹದಿಂದ ಕೊಚ್ಚಿಹೋಯಿತು. [QE]
17. [QS]ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು! [QE][QS2]ಸರ್ವಶಕ್ತ ನಮಗೇನು ಮಾಡಲು ಸಾಧ್ಯ?’ ಎಂದು ಹೇಳಿಕೊಳ್ಳುತ್ತಿದ್ದರು. [QE]
18. [QS]ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರು. [QE][QS2]ಅಬ್ಬಾ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ! [QE]
19. [QS]ನೀತಿವಂತರು ದುಷ್ಟರ ದುರ್ಗತಿಯನ್ನು ನೋಡಿ ಹಿಗ್ಗುವರು. [QE][QS2]ನಿರ್ದೋಷಿಗಳು ಹೀಗೆಂದು ದುಷ್ಟರನ್ನು ಅಣಕಿಸುವರು: [QE]
20. [QS]‘ನಮಗೆ ವಿರುದ್ಧವಾಗಿ ಎದ್ದವರು ಹಾಳಾಗಿ ಹೋದರು. [QE][QS2]ಅವರ ಸೊತ್ತನ್ನು ಬೆಂಕಿಯು ನಾಶಮಾಡಿತು!’ [QE][PBR]
21. [QS]“ದೇವರಿಗೆ ಅಧೀನವಾಗಿ, ದೇವರೊಂದಿಗೆ ಸಮಾಧಾನದಿಂದಿರು; [QE][QS2]ಇದರಿಂದ ನಿನಗೆ ಸಮೃದ್ಧಿ ಬರುವುದು. [QE]
22. [QS]ದೇವರ ಬಾಯಿಂದಲೇ ಶಿಕ್ಷಣವನ್ನು ಸ್ವೀಕರಿಸು; [QE][QS2]ದೇವರ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ. [QE]
23. [QS]ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರಮಾಡಿ, [QE][QS2]ಸರ್ವಶಕ್ತರ ಕಡೆಗೆ ನೀನು ತಿರುಗಿಕೊಂಡರೆ, [QE][QS2]ನೀನು ಪುನಃಸ್ಥಾಪಿತವಾಗುವೆ. [QE]
24. [QS]ನೀನು ಬಂಗಾರವನ್ನು ಧೂಳಿನಂತೆಯೂ, [QE][QS2]ಓಫೀರ್ ದೇಶದ ಬಂಗಾರವನ್ನು ನದಿಯ ಕಲ್ಲುಗಳಂತೆಯೂ ಎಣಿಸು. [QE]
25. [QS]ಆಗ ಸರ್ವಶಕ್ತರು ನಿನಗೆ ಬಂಗಾರವಾಗಿರುವರು. [QE][QS2]ದೇವರು ನಿನಗೆ ಸಮೃದ್ಧಿಯಾದ ಬೆಳ್ಳಿಯೂ ಆಗಿರುವರು. [QE]
26. [QS]ನಿಶ್ಚಯವಾಗಿ ಸರ್ವಶಕ್ತರಲ್ಲಿ ನೀನು ಆನಂದಗೊಳ್ಳುವೆ. [QE][QS2]ನಿನ್ನ ಮುಖವನ್ನು ದೇವರ ಕಡೆಗೆ ಎತ್ತುವೆ. [QE]
27. [QS]ನೀನು ದೇವರಿಗೆ ಪ್ರಾರ್ಥನೆಮಾಡುವೆ, [QE][QS2]ನಿನ್ನ ಪ್ರಾರ್ಥನೆಯನ್ನು ದೇವರು ಕೇಳುವರು; [QE][QS2]ನೀನು ಮಾಡಿದ ಹರಕೆಗಳನ್ನು ಸಲ್ಲಿಸುವೆ. [QE]
28. [QS]ನೀನು ಏನಾದರೂ ನಿರ್ಣಯಿಸಿದ್ದರೆ, [QE][QS2]ಅದು ನಿನಗೆ ನೆರವೇರುವುದು ಮತ್ತು ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು. [QE]
29. [QS]ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, [QE][QS2]‘ಮೇಲಕ್ಕೆ ಎತ್ತು!’ ಎಂದು ನೀನು ದೇವರಿಗೆ ಮೊರೆಯಿಡಲು, [QE][QS2]ದೇವರು ಬಿದ್ದವರನ್ನು ರಕ್ಷಿಸುವರು. [QE]
30. [QS]ನಿರ್ದೋಷಿಯಾಗಿ ಇಲ್ಲದವರನ್ನು ಸಹ ದೇವರು ವಿಮೋಚಿಸುತ್ತಾರೆ; [QE][QS2]ನಿನ್ನ ಕೈಗಳ ಶುದ್ಧತ್ವದಿಂದ ಅಂಥವರು ಬಿಡುಗಡೆಯಾಗುವರು.” [QE]