ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೋಬನು
1. {#1ಯೋಬನ ಉತ್ತರ }
2. [PS]ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ: [PE][QS]“ಇಂದಿಗೂ ನನ್ನ ದೂರು ಕಹಿಯಾಗಿದೆ; [QE][QS2]ನಾನು ನಿಟ್ಟುಸಿರಿಟ್ಟರೂ ದೇವರ ಹಸ್ತವು ಭಾರವಾಗಿದೆ. [QE]
3. [QS]ದೇವರನ್ನು ಎಲ್ಲಿ ಕಂಡುಕೊಳ್ಳಬೇಕೆಂದು ನನಗೆ ತಿಳಿದಿದ್ದರೆ, ಎಷ್ಟೋ ಒಳ್ಳೆಯದು! [QE][QS2]ಸಾಧ್ಯವಾದರೆ ನಾನು ದೇವರು ವಾಸಿಸುವ ಸ್ಥಳದ ತನಕ ಹೋಗುತ್ತಿದ್ದೆ. [QE]
4. [QS]ನನ್ನ ನ್ಯಾಯವನ್ನು ದೇವರ ಮುಂದೆ ವಿವರಿಸುತ್ತಿದ್ದೆ; [QE][QS2]ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುತ್ತಿದ್ದೆ. [QE]
5. [QS]ದೇವರು ನನಗೆ ಉತ್ತರವಾಗಿ ಕೊಡುವ ಮಾತುಗಳನ್ನು ಕಂಡುಹಿಡಿದು, [QE][QS2]ದೇವರು ನನಗೆ ಹೇಳುವುದನ್ನು ಪರಿಗಣಿಸುತ್ತಿದ್ದೆ. [QE]
6. [QS]ದೇವರು ನನ್ನನ್ನು ಕಠಿಣವಾಗಿ ವಿರೋಧಿಸುತ್ತಾರೋ? [QE][QS2]ಇಲ್ಲ, ಖಂಡಿತವಾಗಿ ಅವರು ನನ್ನ ವಿರುದ್ಧ ಆರೋಪಗಳನ್ನು ಹೊರಿಸುವುದಿಲ್ಲ. [QE]
7. [QS]ದೇವರ ಸನ್ನಿಧಿಯಲ್ಲಿ ಯಥಾರ್ಥವಂತನು ತಾನು ನಿರಪರಾಧಿ ಎಂದು ದೃಢಪಡಿಸಲು ಸಾಧ್ಯ; [QE][QS2]ಅಲ್ಲಿ ನನಗೆ ನನ್ನ ನ್ಯಾಯಾಧಿಪತಿಯಿಂದ ಶಾಶ್ವತವಾಗಿ ಬಿಡುಗಡೆಯಾಗುವುದು. [QE][PBR]
8. [QS]“ಒಂದು ವೇಳೆ ನಾನು ಪೂರ್ವದೆಡೆಗೆ ಹೋದರೂ ದೇವರು ನನಗೆ ಕಾಣಿಸುವುದಿಲ್ಲ; [QE][QS2]ಪಶ್ಚಿಮದೆಡೆಗೆ ಹೋದರೂ ದೇವರು ಕಾಣಿಸುವುದಿಲ್ಲ. [QE]
9. [QS]ಉತ್ತರದಲ್ಲಿ ಹುಡುಕಿದರೂ ದೇವರನ್ನು ನೋಡಲಾರೆನು; [QE][QS2]ದಕ್ಷಿಣದೆಡೆಗೆ ತಿರುಗಿಕೊಂಡರೂ ದೇವರು ಕಾಣಿಸುವುದಿಲ್ಲ. [QE]
10. [QS]ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; [QE][QS2]ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು. [QE]
11. [QS]ನನ್ನ ಪಾದಗಳು ದೇವರ ಹೆಜ್ಜೆಯ ಜಾಡಿನಲ್ಲಿ ನಿಕಟವಾಗಿ ಅನುಸರಿಸಿವೆ; [QE][QS2]ದೇವರ ಮಾರ್ಗವನ್ನು ಬಿಟ್ಟು ನಾನು ತೊಲಗದಂತೆ ನೋಡಿಕೊಂಡೆನು. [QE]
12. [QS]ದೇವರ ತುಟಿಗಳ ಆಜ್ಞೆಯಿಂದ ನಾನು ಹಿಂಜರಿಯಲಿಲ್ಲ; [QE][QS2]ನನ್ನ ದೈನಂದಿನ ಆಹಾರಕ್ಕಿಂತ ದೇವರ ಬಾಯಿಯ ಮಾತುಗಳನ್ನು [QE][QS2]ನನ್ನೆದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ. [QE][PBR]
13. [QS]“ಆದರೆ ದೇವರು ಬದಲಾಗದವರು; ದೇವರನ್ನು ಬದಲಾಯಿಸುವವರು ಯಾರು? [QE][QS2]ದೇವರು ತಾವು ಬಯಸಿದ್ದನ್ನು ಮಾಡುತ್ತಾರೆ. [QE]
14. [QS]ನನಗೆ ನೇಮಿಸಿದ್ದನ್ನು ದೇವರು ಈಡೇರಿಸುತ್ತಾರೆ. [QE][QS2]ಇಂಥ ಅನೇಕ ಯೋಜನೆಗಳು ದೇವರಲ್ಲಿವೆ. [QE]
15. [QS]ಆದ್ದರಿಂದ ನಾನು ದೇವರ ಮುಂದೆ ಗಾಬರಿಗೊಳ್ಳುತ್ತೇನೆ; [QE][QS2]ಇದನ್ನೆಲ್ಲಾ ಗ್ರಹಿಸಿಕೊಳ್ಳುವಾಗ ನಾನು ದೇವರಿಗೆ ಭಯಪಡುತ್ತೇನೆ. [QE]
16. [QS]ದೇವರು ನನ್ನ ಹೃದಯವನ್ನು ಹೆದರಿಸಿದ್ದಾರೆ; [QE][QS2]ಸರ್ವಶಕ್ತರು ನನ್ನನ್ನು ಗಾಬರಿಪಡಿಸಿದ್ದಾರೆ. [QE]
17. [QS]ಆದರೂ ನಾನು ಅಂಧಕಾರದಿಂದ ಮೌನವಾಗಲಿಲ್ಲ; [QE][QS2]ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲಿನ ನಿಮಿತ್ತ ನಾನು ಮಾತಾಡದೆ ಇರುವುದಿಲ್ಲ. [QE][PBR]
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 23 / 42
ಯೋಬನ ಉತ್ತರ 1 2 ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ: “ಇಂದಿಗೂ ನನ್ನ ದೂರು ಕಹಿಯಾಗಿದೆ; ನಾನು ನಿಟ್ಟುಸಿರಿಟ್ಟರೂ ದೇವರ ಹಸ್ತವು ಭಾರವಾಗಿದೆ. 3 ದೇವರನ್ನು ಎಲ್ಲಿ ಕಂಡುಕೊಳ್ಳಬೇಕೆಂದು ನನಗೆ ತಿಳಿದಿದ್ದರೆ, ಎಷ್ಟೋ ಒಳ್ಳೆಯದು! ಸಾಧ್ಯವಾದರೆ ನಾನು ದೇವರು ವಾಸಿಸುವ ಸ್ಥಳದ ತನಕ ಹೋಗುತ್ತಿದ್ದೆ. 4 ನನ್ನ ನ್ಯಾಯವನ್ನು ದೇವರ ಮುಂದೆ ವಿವರಿಸುತ್ತಿದ್ದೆ; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುತ್ತಿದ್ದೆ. 5 ದೇವರು ನನಗೆ ಉತ್ತರವಾಗಿ ಕೊಡುವ ಮಾತುಗಳನ್ನು ಕಂಡುಹಿಡಿದು, ದೇವರು ನನಗೆ ಹೇಳುವುದನ್ನು ಪರಿಗಣಿಸುತ್ತಿದ್ದೆ. 6 ದೇವರು ನನ್ನನ್ನು ಕಠಿಣವಾಗಿ ವಿರೋಧಿಸುತ್ತಾರೋ? ಇಲ್ಲ, ಖಂಡಿತವಾಗಿ ಅವರು ನನ್ನ ವಿರುದ್ಧ ಆರೋಪಗಳನ್ನು ಹೊರಿಸುವುದಿಲ್ಲ. 7 ದೇವರ ಸನ್ನಿಧಿಯಲ್ಲಿ ಯಥಾರ್ಥವಂತನು ತಾನು ನಿರಪರಾಧಿ ಎಂದು ದೃಢಪಡಿಸಲು ಸಾಧ್ಯ; ಅಲ್ಲಿ ನನಗೆ ನನ್ನ ನ್ಯಾಯಾಧಿಪತಿಯಿಂದ ಶಾಶ್ವತವಾಗಿ ಬಿಡುಗಡೆಯಾಗುವುದು. 8 “ಒಂದು ವೇಳೆ ನಾನು ಪೂರ್ವದೆಡೆಗೆ ಹೋದರೂ ದೇವರು ನನಗೆ ಕಾಣಿಸುವುದಿಲ್ಲ; ಪಶ್ಚಿಮದೆಡೆಗೆ ಹೋದರೂ ದೇವರು ಕಾಣಿಸುವುದಿಲ್ಲ. 9 ಉತ್ತರದಲ್ಲಿ ಹುಡುಕಿದರೂ ದೇವರನ್ನು ನೋಡಲಾರೆನು; ದಕ್ಷಿಣದೆಡೆಗೆ ತಿರುಗಿಕೊಂಡರೂ ದೇವರು ಕಾಣಿಸುವುದಿಲ್ಲ. 10 ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು. 11 ನನ್ನ ಪಾದಗಳು ದೇವರ ಹೆಜ್ಜೆಯ ಜಾಡಿನಲ್ಲಿ ನಿಕಟವಾಗಿ ಅನುಸರಿಸಿವೆ; ದೇವರ ಮಾರ್ಗವನ್ನು ಬಿಟ್ಟು ನಾನು ತೊಲಗದಂತೆ ನೋಡಿಕೊಂಡೆನು. 12 ದೇವರ ತುಟಿಗಳ ಆಜ್ಞೆಯಿಂದ ನಾನು ಹಿಂಜರಿಯಲಿಲ್ಲ; ನನ್ನ ದೈನಂದಿನ ಆಹಾರಕ್ಕಿಂತ ದೇವರ ಬಾಯಿಯ ಮಾತುಗಳನ್ನು ನನ್ನೆದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ. 13 “ಆದರೆ ದೇವರು ಬದಲಾಗದವರು; ದೇವರನ್ನು ಬದಲಾಯಿಸುವವರು ಯಾರು? ದೇವರು ತಾವು ಬಯಸಿದ್ದನ್ನು ಮಾಡುತ್ತಾರೆ. 14 ನನಗೆ ನೇಮಿಸಿದ್ದನ್ನು ದೇವರು ಈಡೇರಿಸುತ್ತಾರೆ. ಇಂಥ ಅನೇಕ ಯೋಜನೆಗಳು ದೇವರಲ್ಲಿವೆ. 15 ಆದ್ದರಿಂದ ನಾನು ದೇವರ ಮುಂದೆ ಗಾಬರಿಗೊಳ್ಳುತ್ತೇನೆ; ಇದನ್ನೆಲ್ಲಾ ಗ್ರಹಿಸಿಕೊಳ್ಳುವಾಗ ನಾನು ದೇವರಿಗೆ ಭಯಪಡುತ್ತೇನೆ. 16 ದೇವರು ನನ್ನ ಹೃದಯವನ್ನು ಹೆದರಿಸಿದ್ದಾರೆ; ಸರ್ವಶಕ್ತರು ನನ್ನನ್ನು ಗಾಬರಿಪಡಿಸಿದ್ದಾರೆ. 17 ಆದರೂ ನಾನು ಅಂಧಕಾರದಿಂದ ಮೌನವಾಗಲಿಲ್ಲ; ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲಿನ ನಿಮಿತ್ತ ನಾನು ಮಾತಾಡದೆ ಇರುವುದಿಲ್ಲ.
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 23 / 42
×

Alert

×

Kannada Letters Keypad References