ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೋಬನು
1. {#1ಯೋಬನ ಉತ್ತರ }
2. [PS]ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು: [PE][QS]“ಶಕ್ತಿ ಇಲ್ಲದವನಿಗೆ ನೀನು ಹೇಗೆ ಸಹಾಯ ಮಾಡಿದೆ? [QE][QS2]ತ್ರಾಣವಿಲ್ಲದ ಕೈಯನ್ನು ಹೇಗೆ ರಕ್ಷಿಸಿದೆ? [QE]
3. [QS]ಜ್ಞಾನವಿಲ್ಲದವನಿಗೆ ಏನು ಬುದ್ಧಿವಾದ ಹೇಳಿರುವೆ? [QE][QS2]ನೀನು ಯಾವ ವಿವೇಕದ ಮಾತುಗಳನ್ನು ಬಹಳವಾಗಿ ಪ್ರದರ್ಶಿಸಿದೆ. [QE]
4. [QS]ಈ ಮಾತುಗಳನ್ನು ಹೇಳಲು ನಿನಗೆ ಯಾರು ಸಹಾಯ ಮಾಡಿದರು? [QE][QS2]ಯಾರ ಆತ್ಮವು ನಿನ್ನ ಬಾಯಿಂದ ಮಾತಾಡಿದ್ದು? [QE][PBR]
5. [QS]“ಸಾಗರದ ಕೆಳಗಿನ ಲೋಕದಲ್ಲಿ ವಾಸಿಸುವ [QE][QS2]ಸತ್ತವರ ಆತ್ಮಗಳು ಆಳವಾದ ಯಾತನೆಯಲ್ಲಿವೆ. [QE]
6. [QS]ಪಾತಾಳವು ದೇವರ ದೃಷ್ಟಿಗೆ ತೆರೆದಿದೆ; [QE][QS2]ನಾಶಲೋಕವು ದೇವರಿಗೆ ಮರೆಯಾಗಿಲ್ಲ. [QE]
7. [QS]ದೇವರು ಉತ್ತರ ದಿಕ್ಕಿನ ಆಕಾಶವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾರೆ; [QE][QS2]ದೇವರು ಭೂಮಿಯನ್ನು ಏನೂ ಇಲ್ಲದರ ಮೇಲೆ ತೂಗು ಹಾಕಿದ್ದಾರೆ. [QE]
8. [QS]ತಮ್ಮ ಮೇಘಗಳಲ್ಲಿ ನೀರನ್ನು ತುಂಬಿ ಕಟ್ಟುತ್ತಾರೆ; [QE][QS2]ಆದರೂ ಮೋಡವು ಅದರ ಭಾರದಿಂದ ಒಡೆದುಹೋಗುವುದಿಲ್ಲ. [QE]
9. [QS]ದೇವರು ತಮ್ಮ ಪೂರ್ಣಚಂದ್ರ ಸಿಂಹಾಸನವನ್ನು ಮರೆಮಾಡುತ್ತಾರೆ. [QE][QS2]ಅದರ ಮುಂದೆ ಮೋಡವನ್ನು ಕವಿಸುತ್ತಾರೆ. [QE]
10. [QS]ಬೆಳಕು ಮತ್ತು ಕತ್ತಲುಗಳ ಸಂಧಿಸುವ ಸ್ಥಾನದಲ್ಲಿ, [QE][QS2]ಸಮುದ್ರದ ಮೇಲೆ ಸುತ್ತಲೂ ವೃತ್ತ ಮೇರೆಯನ್ನು ಹಾಕಿದ್ದಾರೆ. [QE]
11. [QS]ಆಕಾಶಮಂಡಲದ ಸ್ತಂಭಗಳು ಕಂಪಿಸುತ್ತವೆ; [QE][QS2]ದೇವರ ಗದರಿಕೆಗೆ ಅವು ಬೆರಗಾಗಿ ಕದಲುತ್ತವೆ. [QE]
12. [QS]ದೇವರು ತಮ್ಮ ಶಕ್ತಿಯಿಂದ ಸಮುದ್ರವನ್ನು ಕಲಕಿದ್ದಾರೆ; [QE][QS2]ದೇವರು ತಮ್ಮ ಜ್ಞಾನದಿಂದ ಘಟಸರ್ಪನಾದ ರಹಾಬನನ್ನು ಹೊಡೆದುಹಾಕುತ್ತಾರೆ. [QE]
13. [QS]ದೇವರ ಶ್ವಾಸದಿಂದ ಆಕಾಶಮಂಡಲವು ಶುಭ್ರವಾಗಿದೆ; [QE][QS2]ದೇವರು ಹಸ್ತವು ಹರಿದೋಡುವ ಸರ್ಪವನ್ನು ಇರಿಯುತ್ತದೆ. [QE]
14. [QS]ಇಗೋ, ಇವು ದೇವರ ಕಾರ್ಯಗಳಲ್ಲಿ ಕೆಲವು ಮಾತ್ರ; [QE][QS2]ದೇವರನ್ನು ಕುರಿತು ಪಿಸುಧ್ವನಿ ಮಾತ್ರ ಕೇಳಿದ್ದೇವೆ; [QE][QS2]ಹಾಗಾದರೆ, ದೇವರ ಪರಾಕ್ರಮದ ಗುಡುಗನ್ನು ಯಾರು ಗ್ರಹಿಸಿಕೊಳ್ಳುವರು?” [QE]
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 26 / 42
ಯೋಬನ ಉತ್ತರ 1 2 ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು: “ಶಕ್ತಿ ಇಲ್ಲದವನಿಗೆ ನೀನು ಹೇಗೆ ಸಹಾಯ ಮಾಡಿದೆ? ತ್ರಾಣವಿಲ್ಲದ ಕೈಯನ್ನು ಹೇಗೆ ರಕ್ಷಿಸಿದೆ? 3 ಜ್ಞಾನವಿಲ್ಲದವನಿಗೆ ಏನು ಬುದ್ಧಿವಾದ ಹೇಳಿರುವೆ? ನೀನು ಯಾವ ವಿವೇಕದ ಮಾತುಗಳನ್ನು ಬಹಳವಾಗಿ ಪ್ರದರ್ಶಿಸಿದೆ. 4 ಈ ಮಾತುಗಳನ್ನು ಹೇಳಲು ನಿನಗೆ ಯಾರು ಸಹಾಯ ಮಾಡಿದರು? ಯಾರ ಆತ್ಮವು ನಿನ್ನ ಬಾಯಿಂದ ಮಾತಾಡಿದ್ದು? 5 “ಸಾಗರದ ಕೆಳಗಿನ ಲೋಕದಲ್ಲಿ ವಾಸಿಸುವ ಸತ್ತವರ ಆತ್ಮಗಳು ಆಳವಾದ ಯಾತನೆಯಲ್ಲಿವೆ. 6 ಪಾತಾಳವು ದೇವರ ದೃಷ್ಟಿಗೆ ತೆರೆದಿದೆ; ನಾಶಲೋಕವು ದೇವರಿಗೆ ಮರೆಯಾಗಿಲ್ಲ. 7 ದೇವರು ಉತ್ತರ ದಿಕ್ಕಿನ ಆಕಾಶವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾರೆ; ದೇವರು ಭೂಮಿಯನ್ನು ಏನೂ ಇಲ್ಲದರ ಮೇಲೆ ತೂಗು ಹಾಕಿದ್ದಾರೆ. 8 ತಮ್ಮ ಮೇಘಗಳಲ್ಲಿ ನೀರನ್ನು ತುಂಬಿ ಕಟ್ಟುತ್ತಾರೆ; ಆದರೂ ಮೋಡವು ಅದರ ಭಾರದಿಂದ ಒಡೆದುಹೋಗುವುದಿಲ್ಲ. 9 ದೇವರು ತಮ್ಮ ಪೂರ್ಣಚಂದ್ರ ಸಿಂಹಾಸನವನ್ನು ಮರೆಮಾಡುತ್ತಾರೆ. ಅದರ ಮುಂದೆ ಮೋಡವನ್ನು ಕವಿಸುತ್ತಾರೆ. 10 ಬೆಳಕು ಮತ್ತು ಕತ್ತಲುಗಳ ಸಂಧಿಸುವ ಸ್ಥಾನದಲ್ಲಿ, ಸಮುದ್ರದ ಮೇಲೆ ಸುತ್ತಲೂ ವೃತ್ತ ಮೇರೆಯನ್ನು ಹಾಕಿದ್ದಾರೆ. 11 ಆಕಾಶಮಂಡಲದ ಸ್ತಂಭಗಳು ಕಂಪಿಸುತ್ತವೆ; ದೇವರ ಗದರಿಕೆಗೆ ಅವು ಬೆರಗಾಗಿ ಕದಲುತ್ತವೆ. 12 ದೇವರು ತಮ್ಮ ಶಕ್ತಿಯಿಂದ ಸಮುದ್ರವನ್ನು ಕಲಕಿದ್ದಾರೆ; ದೇವರು ತಮ್ಮ ಜ್ಞಾನದಿಂದ ಘಟಸರ್ಪನಾದ ರಹಾಬನನ್ನು ಹೊಡೆದುಹಾಕುತ್ತಾರೆ. 13 ದೇವರ ಶ್ವಾಸದಿಂದ ಆಕಾಶಮಂಡಲವು ಶುಭ್ರವಾಗಿದೆ; ದೇವರು ಹಸ್ತವು ಹರಿದೋಡುವ ಸರ್ಪವನ್ನು ಇರಿಯುತ್ತದೆ. 14 ಇಗೋ, ಇವು ದೇವರ ಕಾರ್ಯಗಳಲ್ಲಿ ಕೆಲವು ಮಾತ್ರ; ದೇವರನ್ನು ಕುರಿತು ಪಿಸುಧ್ವನಿ ಮಾತ್ರ ಕೇಳಿದ್ದೇವೆ; ಹಾಗಾದರೆ, ದೇವರ ಪರಾಕ್ರಮದ ಗುಡುಗನ್ನು ಯಾರು ಗ್ರಹಿಸಿಕೊಳ್ಳುವರು?”
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 26 / 42
×

Alert

×

Kannada Letters Keypad References