1. {#1ಯೋಬನ ಕೊನೆಯ ಮಾತುಗಳು }
2. [PS]ಯೋಬನು ಮತ್ತೆ ತನ್ನ ಚರ್ಚೆಯನ್ನು ಮುಂದುವರಿಸಿ ಹೇಳಿದ್ದೇನೆಂದರೆ: [PE][QS]ನನ್ನ ನ್ಯಾಯವನ್ನು ತಪ್ಪಿಸಿದ ಜೀವಂತ ದೇವರಾಣೆ, [QE][QS2]ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತರ ಆಣೆ, [QE]
3. [QS]“ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ; [QE][QS2]ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಆಡುತ್ತಿದೆ. [QE]
4. [QS]ನನ್ನ ತುಟಿಗಳು ಸುಳ್ಳನ್ನು ನುಡಿಯುವುದೇ ಇಲ್ಲ. [QE][QS2]ನನ್ನ ನಾಲಿಗೆಯು ಎಷ್ಟು ಮಾತ್ರಕ್ಕೂ ಮೋಸದ ಮಾತುಗಳನ್ನಾಡುವುದಿಲ್ಲ. [QE]
5. [QS]ನೀವು ನ್ಯಾಯವಂತರೆಂದು ನಾನು ಒಪ್ಪುವುದಿಲ್ಲ; [QE][QS2]ನಾನು ಸಾಯುವ ತನಕ, ನನ್ನ ಪ್ರಾಮಾಣಿಕತ್ವವನ್ನು ಬಿಡುವುದಿಲ್ಲ. [QE]
6. [QS]ನನ್ನ ನಿಷ್ಕಪಟತೆಯನ್ನು ದೃಢವಾಗಿ ಹಿಡುಕೊಂಡಿದ್ದೇನೆ; [QE][QS2]ಅದನ್ನು ಎಂದಿಗೂ ನಾನು ಹೋಗಗೊಡಿಸುವುದಿಲ್ಲ; [QE][QS2]ನಾನು ಜೀವಂತವಾಗಿ ಇರುವವರೆಗೂ ನನ್ನ ಮನಸ್ಸಾಕ್ಷಿಯು ನನ್ನನ್ನು ನಿಂದಿಸುವುದಿಲ್ಲ. [QE][PBR]
7. [QS]“ನನ್ನ ಶತ್ರು ದುಷ್ಟನ ಹಾಗಿರಲಿ; [QE][QS2]ನನ್ನ ವಿರುದ್ಧ ಏಳುವವನು ಅನ್ಯಾಯವಂತನ ಹಾಗಿರಲಿ. [QE]
8. [QS]ದೇವರು ಭಕ್ತಿಹೀನನನ್ನು ಕಡಿದುಬಿಟ್ಟರೆ, ಅವನ ಪ್ರಾಣ ತೆಗೆದುಕೊಂಡರೆ, [QE][QS2]ಅವನಿಗೆ ನಿರೀಕ್ಷೆ ಎಲ್ಲಿ? [QE]
9. [QS]ಭಕ್ತಿಹೀನನಿಗೆ ಯಾತನೆ ಬಂದರೆ, [QE][QS2]ದೇವರು ಅವನ ಮೊರೆಯನ್ನು ಕೇಳುವರೋ? [QE]
10. [QS]ಭಕ್ತಿಹೀನನು ಸರ್ವಶಕ್ತರಲ್ಲಿ ಆನಂದವಾಗಿರುವನೋ? [QE][QS2]ಸರ್ವಕಾಲದಲ್ಲಿಯೂ ದೇವರನ್ನು ಕರೆಯುವನೋ? [QE][PBR]
11. [QS]“ನಾನು ದೇವರ ಶಕ್ತಿಯ ಬಗ್ಗೆ ನಿಮಗೆ ಬೋಧಿಸುವೆನು; [QE][QS2]ಸರ್ವಶಕ್ತರ ಮಾರ್ಗಗಳನ್ನು ನಾನು ಮರೆಮಾಡೆನು. [QE]
12. [QS]ನೀವೆಲ್ಲರೂ ಇದನ್ನು ನೋಡಿದ್ದರೂ, [QE][QS2]ಮತ್ತೆ ಏಕೆ ಈ ಪ್ರಕಾರ ವ್ಯರ್ಥವಾಗಿ ವಾದಿಸುತ್ತೀರಿ? [QE][PBR]
13. [QS]“ಇದು ದುಷ್ಟರಿಗೆ ದೇವರಿಂದ ಬಂದ ಪಾಲಾಗಿದೆ; [QE][QS2]ಹಿಂಸಕರಿಗೆ ಸರ್ವಶಕ್ತರಿಂದ ಹೊಂದುವ ಪಾಲು ಹೀಗಿರುತ್ತವೆ: [QE]
14. [QS]ಅವರ ಮಕ್ಕಳು ಹೆಚ್ಚಿದರೂ ಖಡ್ಗಕ್ಕೆ ಗುರಿಯಾಗುವರು; [QE][QS2]ಅವರ ಸಂತತಿಯವರಿಗೆ ಆಹಾರದ ಕೊರತೆ ಇರುವುದು. [QE]
15. [QS]ಅವರ ಮನೆಯಲ್ಲಿ ಯಾರಾದರೂ ಉಳಿದರೆ, ವ್ಯಾಧಿಯಿಂದ ಸತ್ತು ಸಮಾಧಿ ಸೇರುವರು; [QE][QS2]ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ. [QE]
16. [QS]ದುಷ್ಟರು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ, [QE][QS2]ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿಕೊಂಡಿದ್ದರೂ, [QE]
17. [QS]ಅವರು ಕೂಡಿಸಿಟ್ಟಿದ್ದನ್ನು ನೀತಿವಂತರು ಹಂಚಿಕೊಳ್ಳುವರು; [QE][QS2]ಅವರ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು. [QE]
18. [QS]ದುಷ್ಟರು ಕಟ್ಟಿಕೊಂಡ ಮನೆಯು ಜೇಡ ಹುಳದ ಗೂಡಿನಂತೆಯೂ, [QE][QS2]ಕಾವಲುಗಾರನ ಗುಡಿಸಿಲಂತೆಯೂ ದುರ್ಬಲವಾಗಿರುವುದು. [QE]
19. [QS]ದುಷ್ಟರು ಧನಿಕರಾಗಿ ನಿದ್ರಿಸಿದರೂ ಮತ್ತೆ ನಿದ್ರೆಬಾರದು; [QE][QS2]ಅವರು ತಮ್ಮ ಕಣ್ಣನ್ನು ತೆರೆಯುತ್ತಲೇ ಆಸ್ತಿ ಇಲ್ಲವಾಗಿರುವುದು. [QE]
20. [QS]ವಿಪತ್ತುಗಳು ಪ್ರವಾಹದಂತೆ ಅಂಥವರನ್ನು ಹಿಡಿಯುವುವು; [QE][QS2]ರಾತ್ರಿಯಲ್ಲಿ ಬಿರುಗಾಳಿ ಅಂಥವರನ್ನು ಅಪಹರಿಸುವುದು. [QE]
21. [QS]ಪೂರ್ವದಿಕ್ಕಿನ ಗಾಳಿ ದುಷ್ಟರನ್ನು ಬಡಿಯಲು, ಅವರು ಕೊಚ್ಚಿಕೊಂಡು ಹೋಗುವರು; [QE][QS2]ಅದು ಅವರನ್ನು ಅವರ ಸ್ಥಳದಿಂದ ಹಾರಿಸಿಬಿಡುವುದು. [QE]
22. [QS]ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು, [QE][QS2]ಅವರು ಅದರ ಶಕ್ತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವರು. [QE]
23. [QS]ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು; [QE][QS2]ಅನಂತರ ಅವರ ಸ್ಥಳದೊಳಗಿಂದ ಅವರನ್ನು ಹೊರಹಾಕುವರು.” [QE]