1. [QS]“ಆದ್ದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು. [QE][QS2]ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ. [QE]
2. [QS]ಈಗ ನಾನು ಮಾತಾಡಲು ಪ್ರಾರಂಭಿಸಿದ್ದೇನೆ; [QE][QS2]ನನ್ನ ಮಾತುಗಳು ನನ್ನ ನಾಲಿಗೆಯ ತುದಿಯಲ್ಲಿವೆ. [QE]
3. [QS]ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುತ್ತವೆ; [QE][QS2]ನನ್ನ ತುಟಿಗಳು ನಾನು ತಿಳಿದುಕೊಂಡಿದ್ದನ್ನೇ ಯಥಾರ್ಥವಾಗಿ ಹೇಳುತ್ತವೆ. [QE]
4. [QS]ದೇವರ ಆತ್ಮರು ನನ್ನನ್ನು ಉಂಟುಮಾಡಿದರು. [QE][QS2]ಸರ್ವಶಕ್ತರ ಶ್ವಾಸವೇ ನನಗೆ ಜೀವವನ್ನು ಕೊಟ್ಟಿತು. [QE]
5. [QS]ನಿನಗೆ ಸಾಧ್ಯವಾದರೆ ನನಗೆ ಉತ್ತರಕೊಡು; [QE][QS2]ನನ್ನ ಎದುರಿನಲ್ಲೇ ನಿನ್ನ ವ್ಯಾಜ್ಯವನ್ನು ವಾದಿಸು. [QE]
6. [QS]ನೋಡು, ದೇವರ ದೃಷ್ಟಿಯಲ್ಲಿ ನಾನು ನಿನ್ನಂತೆಯೇ ಇದ್ದೇನೆ; [QE][QS2]ನಾನು ಸಹ ಜೇಡಿಮಣ್ಣಿನಿಂದ ರೂಪಿತವಾಗಿದ್ದೇನೆ. [QE]
7. [QS]ಆದ್ದರಿಂದ ನನ್ನ ಭೀತಿ ನಿನ್ನನ್ನು ಎಚ್ಚರಿಸದಿರಲಿ; [QE][QS2]ನನ್ನ ಒತ್ತಾಯ ನಿನ್ನ ಮೇಲೆ ಭಾರವಾಗಿರಬಾರದು. [QE][PBR]
8. [QS]“ನಿಶ್ಚಯವಾಗಿ, ನೀನು ಆಡಿದ್ದೆಲ್ಲಾ ನನ್ನ ಕಿವಿಗೆ ಬಿದ್ದಿವೆ. [QE][QS2]ನಾನೇ ಈ ರೀತಿಯಾಗಿ ನೀನು ಆಡಿದ ಮಾತುಗಳನ್ನು ಕೇಳಿದ್ದೇನೆ: [QE]
9. [QS]‘ನಾನು ಶುದ್ಧನು, ನಾನು ತಪ್ಪುಮಾಡಲಿಲ್ಲ; [QE][QS2]ನಾನು ನಿರ್ದೋಷಿ, ನನ್ನಲ್ಲಿ ಏನೂ ಪಾಪವಿಲ್ಲ. [QE]
10. [QS]ಆದರೂ ದೇವರು ನನ್ನಲ್ಲಿ ತಪ್ಪು ಕಂಡುಹಿಡಿಯುತ್ತಿದ್ದಾರೆ; [QE][QS2]ದೇವರು ನನ್ನನ್ನು ಶತ್ರುವೆಂದು ಎಣಿಸುತ್ತಿದ್ದಾರೆ. [QE]
11. [QS]ದೇವರು ನನ್ನ ಕಾಲುಗಳಿಗೆ ಕೋಳ ಹಾಕಿದ್ದಾರೆ; [QE][QS2]ದೇವರು ನನ್ನ ಎಲ್ಲಾ ಹಾದಿಗಳನ್ನೂ ಪರಿಶೋಧಿಸುತ್ತಿದ್ದಾರೆ.’ [QE][PBR]
12. [QS]“ಹೀಗೆಲ್ಲಾ ನೀನು ಮಾತಾಡಿದ್ದು ಸರಿಯಲ್ಲವೆಂದು ನಾನು ನಿನಗೆ ಹೇಳುತ್ತೇನೆ. [QE][QS2]ಏಕೆಂದರೆ ದೇವರು ಮನುಷ್ಯರಿಗಿಂತ ಬಹಳ ದೊಡ್ಡವರು. [QE]
13. [QS]ದೇವರು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ಕೊಡಲಿಲ್ಲ ಎಂದು [QE][QS2]ನೀನು ದೇವರೊಂದಿಗೆ ವ್ಯಾಜ್ಯವಾಡುವುದೇಕೆ? [QE]
14. [QS]ಏಕೆಂದರೆ ದೇವರು ಮಾತನಾಡುತ್ತಾರೆ. ಹೌದು, ವಿವಿಧ ರೀತಿಯಿಂದ ಮಾತನಾಡುತ್ತಾರೆ; [QE][QS2]ಆದರೂ ಯಾರು ದೇವರ ಸ್ವರವನ್ನು ಗ್ರಹಿಸಿಕೊಳ್ಳುವುದಿಲ್ಲ. [QE]
15. [QS]ಸ್ವಪ್ನದಲ್ಲಿ, ರಾತ್ರಿಯ ದರ್ಶನದಲ್ಲಿ, [QE][QS2]ಗಾಢನಿದ್ರೆಯು ಮನುಷ್ಯರಿಗೆ ಬಂದಾಗ, [QE][QS2]ಹಾಸಿಗೆಯ ಮೇಲಿನ ತೂಕಡಿಕೆಗಳಲ್ಲಿ ಸಹ, [QE]
16. [QS]ದೇವರು ಮನುಷ್ಯರ ಕಿವಿಗಳನ್ನು ತೆರೆದು, [QE][QS2]ಎಚ್ಚರಿಕೆಗಳಿಂದ ಮುದ್ರೆಹಾಕಿ ಮಾತಾಡುತ್ತಾರೆ. [QE]
17. [QS]ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವದಕ್ಕೂ, [QE][QS2]ಅವನ ಗರ್ವವನ್ನು ಅಡಗಿಸುವುದಕ್ಕೂ ದೇವರು ಹಾಗೆ ಮಾಡುತ್ತಾರೆ. [QE]
18. [QS]ಮನುಷ್ಯನ ಪ್ರಾಣವನ್ನು ಕುಣಿಯಿಂದ ತಡೆಯುತ್ತಾರೆ, [QE][QS2]ಅವನ ಜೀವವನ್ನು ಖಡ್ಗದಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾರೆ. [QE][PBR]
19. [QS]“ಇದಲ್ಲದೆ ಮನುಷ್ಯನು ತನ್ನ ಹಾಸಿಗೆಯಲ್ಲಿ ನೋವಿನಿಂದ ಬಿದ್ದಿರುವಾಗ, [QE][QS2]ಅವನ ಎಲುಬುಗಳಿಗೆ ನೋವು ಉಂಟಾದಾಗ, ದೇವರು ಅವನನ್ನು ತಿದ್ದುತ್ತಾರೆ. [QE]
20. [QS]ಆಗ ಮನುಷ್ಯನು ತನ್ನ ಹಸಿವನ್ನು ಕಳೆದುಕೊಳ್ಳುತ್ತಾನೆ, [QE][QS2]ಅವನ ಜೀವಕ್ಕೆ ಸವಿ ಊಟವೂ ಅಸಹ್ಯವಾಗುವುದು. [QE]
21. [QS]ಅವನ ಶರೀರವು ಕಾಣದ ಹಾಗೆ ಸವೆಯುವುದು; [QE][QS2]ಕಾಣದಿದ್ದ ಅವನ ಎಲುಬುಗಳು ಸಹ ಬಯಲಾಗುತ್ತವೆ. [QE]
22. [QS]ಹೀಗೆ ಮನುಷ್ಯನ ಆತ್ಮವು ಸಮಾಧಿಗೆ ಸಮೀಪಿಸುವುದು. [QE][QS2]ಅವನ ಪ್ರಾಣವು ಸಾವಿನ ಸಂದೇಶವಾಹಕರ ಹತ್ತಿರವಾಗುವುದು. [QE]
23. [QS]ಆಗ ಸಹಸ್ರ ದೂತರಲ್ಲಿ ಒಬ್ಬನು ಮಧ್ಯಸ್ಥನಾಗಿ ಆ ಮನುಷ್ಯನ [QE][QS2]ಯಥಾರ್ಥತೆಯನ್ನು ತಿಳಿಸುವುದಕ್ಕೆ [QE][QS2]ಅವನ ಬಳಿಯಲ್ಲಿದ್ದರೆ, [QE]
24. [QS]ಆ ಮಧ್ಯಸ್ಥನು ಅವನನ್ನು ಕರುಣಿಸಿ ದೇವರಿಗೆ, [QE][QS2]‘ಅಧೋಲೋಕವೆಂಬ ಕುಣಿಗೆ ಇಳಿಯುವುದರಿಂದ ಇವನನ್ನು ಕಾಪಾಡಿರಿ; [QE][QS2]ನಾನು ಇವನಿಗಾಗಿ ವಿಮೋಚನೆಯ ಕ್ರಯವನ್ನು ಕಂಡುಹಿಡಿದಿದ್ದೇನೆ. [QE]
25. [QS]ಅವನ ದೇಹವು ಮಗುವಿನ ದೇಹಕ್ಕಿಂತ ಮೃದುವಾಗಿರಲಿ; [QE][QS2]ಅವನು ಪುನಃ ತನ್ನ ಯೌವನದ ದಿನಗಳಿಗೆ ಹಿಂದಿರುಗಲಿ,’ ಎಂದು ಹೇಳುತ್ತಿದ್ದನು. [QE]
26. [QS]ಆಗ ಆ ಮನುಷ್ಯನು ದೇವರಿಗೆ ಪ್ರಾರ್ಥನೆಮಾಡುವನು; [QE][QS2]ದೇವರು ಅವನಿಗೆ ತಮ್ಮ ಮೆಚ್ಚುಗೆಯನ್ನು ನೀಡುವರು; [QE][QS]ಅವನು ಆನಂದ ಧ್ವನಿಯಿಂದ ದೇವರ ಮುಖವನ್ನು ನೋಡುವನು; [QE][QS2]ದೇವರು ಅವನನ್ನು ನೀತಿವಂತನೆಂದು ಪುನಃಸ್ಥಾಪಿಸುವರು. [QE]
27. [QS]ಅವನು ಜನರ ಮುಂದೆ ಹಾಡುತ್ತಾ ಹೀಗೆ ಹೇಳುವನು: [QE][QS2]‘ನಾನು ಪಾಪಮಾಡಿದೆ, ನ್ಯಾಯವನ್ನು ಬಿಟ್ಟು ನಡೆದೆ. [QE][QS]ಆದರೂ ದೇವರು ನನ್ನ ಪಾಪಕ್ಕೆ ತಕ್ಕಂತೆ ದಂಡಿಸಲಿಲ್ಲ. [QE][QS2]ದೇವರು ಮುಯ್ಯಿತೀರಿಸಲಿಲ್ಲ, [QE]
28. [QS]ದೇವರು ನನ್ನನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾರೆ; [QE][QS2]ನಾನು ಜೀವ ಬೆಳಕನ್ನು ಆನಂದಿಸಲು ಬಾಳುವೆನು.’ [QE][PBR]
29. [QS]“ನೋಡು, ದೇವರು ಎರಡು ಸಾರಿಯಲ್ಲದೆ, [QE][QS2]ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮನುಷ್ಯರಿಗಾಗಿ ಮಾಡುವರು. [QE]
30. [QS]ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ ಬಂದು, [QE][QS2]ಜೀವ ಬೆಳಕನ್ನು ಅನುಭವಿಸುವಂತೆಯೇ ದೇವರು ಹೀಗೆ ಮಾಡುವರು. [QE][PBR]
31. [QS]“ಯೋಬನೇ, ನನ್ನ ಮಾತನ್ನು ಗಮನಕೊಟ್ಟು ಕೇಳು. [QE][QS2]ಮೌನವಾಗಿದ್ದು ಕೇಳು, ಈಗ ನಾನು ಮಾತನಾಡುತ್ತೇನೆ. [QE]
32. [QS]ನಿನಗೆ ಹೇಳುವುದಕ್ಕೆ ಏನಾದರೂ ಇದ್ದರೆ ಹೇಳು, ನನಗೆ ಉತ್ತರಕೊಡು, ಮಾತನಾಡು, [QE][QS2]ಏಕೆಂದರೆ ನಾನು ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ. [QE]
33. [QS]ಇಲ್ಲವಾದರೆ ನಾನು ಹೇಳುವುದನ್ನು ಕೇಳು; [QE][QS2]ಮೌನವಾಗಿರು, ಈಗ ನಾನು ನಿನಗೆ ಜ್ಞಾನವನ್ನು ಬೋಧಿಸುತ್ತೇನೆ.” [QE]