1.
2. [PS]ಎಲೀಹು ಮುಂದುವರಿದು ಹೇಳಿದ್ದೇನೆಂದರೆ: [PE][QS]“ನನ್ನನ್ನು ಸ್ವಲ್ಪ ತಾಳಿಕೋ, ನಾನು ನಿನಗೆ ತೋರಿಸಿಕೊಡುತ್ತೇನೆ. [QE][QS2]ಏಕೆಂದರೆ ದೇವರ ಪರವಾಗಿ ಇನ್ನೂ ಹೇಳತಕ್ಕ ಮಾತುಗಳು ಇವೆ. [QE]
3. [QS]ನಾನು ನನ್ನ ತಿಳುವಳಿಕೆಯನ್ನು ದೂರದಿಂದ ಪಡೆದುಕೊಳ್ಳುತ್ತೇನೆ. [QE][QS2]ನನ್ನ ಸೃಷ್ಟಿಕರ್ತ ನ್ಯಾಯವಂತರು ಎಂದು ನಿರೂಪಿಸುವೆನು. [QE]
4. [QS]ನಿಜವಾಗಿ ನನ್ನ ಮಾತುಗಳು ಸುಳ್ಳಲ್ಲ; [QE][QS2]ತಿಳುವಳಿಕೆಯಲ್ಲಿ ಸಂಪೂರ್ಣನಾದ ಒಬ್ಬನಾಗಿ ನಾನು ನಿನ್ನ ಬಳಿಯಲ್ಲಿಯೇ ಇದ್ದೇನೆ. [QE][PBR]
5. [QS]“ನೋಡು, ದೇವರು ಸರ್ವಶಕ್ತರು, [QE][QS2]ಆದರೂ ಯಾರನ್ನೂ ತಿರಸ್ಕಾರ ಮಾಡುವುದಿಲ್ಲ. [QE][QS2]ಶಕ್ತಿವಂತರಾದ ದೇವರು ತಮ್ಮ ಉದ್ದೇಶದಲ್ಲಿ ದೃಢವಾಗಿದ್ದಾರೆ. [QE]
6. [QS]ದುಷ್ಟರು ಬಹುಕಾಲ ಬಾಳಲು ದೇವರು ಅನುಮತಿಸುವುದಿಲ್ಲ; [QE][QS2]ಆದರೆ ದೇವರು ಬಾಧೆಪಡುವವರಿಗೆ ಅವರ ಹಕ್ಕುಗಳನ್ನು ಕೊಡುತ್ತಾರೆ. [QE]
7. [QS]ದೇವರು ನೀತಿವಂತರಿಂದ ತಮ್ಮ ಕಣ್ಣುಗಳನ್ನು ತೊಲಗಿಸುವುದಿಲ್ಲ; [QE][QS2]ದೇವರು ನೀತಿವಂತರನ್ನು ಅರಸುಗಳ ಸಂಗಡ ಸಿಂಹಾಸನದಲ್ಲಿ ಕುಳ್ಳಿರಿಸುವರು; [QE][QS2]ಹೌದು, ದೇವರು ಅವರನ್ನು ಎಂದೆಂದಿಗೂ ಉನ್ನತಕ್ಕೇರಿಸುವರು. [QE]
8. [QS]ಒಂದು ವೇಳೆ ಜನರು ಸಂಕಟದ ಸಂಕೋಲೆಗಳಿಂದ ಬಂಧಿತರಾಗಿ, [QE][QS2]ಬಾಧೆಯ ಹಗ್ಗಗಳಿಂದ ಹಿಡಿಯಲಾಗಿದ್ದರೆ, [QE]
9. [QS]ದೇವರು ಅವರ ಕೃತ್ಯವನ್ನೂ [QE][QS2]ಸೊಕ್ಕಿನ ದ್ರೋಹಗಳನ್ನೂ ಅವರಿಗೆ ಹೇಳುವರು. [QE]
10. [QS]ದೇವರು ಅವರ ಕಿವಿಯನ್ನು ತಿದ್ದುವಿಕೆಗಾಗಿ ತೆರೆದು, [QE][QS2]ಜನರು ದುಷ್ಟತನವನ್ನು ಬಿಟ್ಟು ತಿರುಗಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುವರು. [QE]
11. [QS]ಒಂದು ವೇಳೆ, ಜನರು ವಿಧೇಯರಾಗಿ ದೇವರನ್ನು ಸೇವಿಸಿದರೆ, [QE][QS2]ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿ ಕಳೆಯುವರು. [QE][QS2]ತಮ್ಮ ವರ್ಷಗಳನ್ನು ಸಂತೃಪ್ತಿಯಲ್ಲಿಯೂ ಪೂರೈಸುವರು. [QE]
12. [QS]ಅವರು ವಿಧೇಯರಾಗದಿದ್ದರೆ, [QE][QS2]ಸಂಕಟದ ಸಾಗರದಲ್ಲಿ ಸಾಗಿಹೋಗುವರು; [QE][QS2]ತಿಳುವಳಿಕೆಯಿಲ್ಲದ ಬಾಳನ್ನು ಬಾಳುವರು. [QE][PBR]
13. [QS]“ಹೃದಯದಲ್ಲಿ ಭಕ್ತಿಹೀನರಾಗಿರುವವರು ಕೋಪವನ್ನು ಕೂಡಿಸುವರು; [QE][QS2]ದೇವರು ಅವರನ್ನು ಬಂಧಿಸಿದರೂ, ಅವರು ದೇವರಿಗೆ ಮೊರೆ ಇಡುವುದಿಲ್ಲ. [QE]
14. [QS]ಅವರು ತಮ್ಮ ಯೌವನದಲ್ಲಿ, [QE][QS2]ಪುರುಷಗಾಮಿಗಳ ಮಂದಿರದಲ್ಲಿ ಗತಿಸಿಹೋಗುವರು. [QE]
15. [QS]ಶ್ರಮೆ ಪಡುವವರನ್ನು ದೇವರು ಅವರ ಶ್ರಮೆಯ ಮೂಲಕವೇ ಬಿಡುಗಡೆ ಮಾಡುವರು; [QE][QS2]ದೇವರು ಅವರ ಹಿಂಸೆಯ ಮೂಲಕವೇ ಅವರೊಂದಿಗೆ ಮಾತನಾಡುವರು. [QE][PBR]
16. [QS]“ದೇವರು ನಿನ್ನನ್ನು ಇಕ್ಕಟ್ಟಿನೊಳಗಿಂದ ಬಿಡಿಸುವರು; [QE][QS2]ಇಕ್ಕಟ್ಟಿಲ್ಲದ ವಿಶಾಲ ಸ್ಥಳವು ನಿನಗೆ ದೊರೆಯುವುದು; [QE][QS2]ನಿನ್ನ ಆದರಣೆಗಾಗಿ ನಿನ್ನ ಮೇಜು ಉತ್ತಮ ಆಹಾರಗಳಿಂದ ತುಂಬಿರುವುದು. [QE]
17. [QS]ಆದರೆ ಈಗ ನೀನು ದುಷ್ಟರಿಗೆ ಬರಬೇಕಾದ ತೀರ್ಪಿನಿಂದ ತುಂಬಿರುವೆ. [QE][QS2]ನ್ಯಾಯವಿಚಾರಣೆಯೂ, ತೀರ್ಪೂ ನಿನ್ನನ್ನು ಹಿಡಿದಿರುತ್ತವೆ. [QE]
18. [QS]ಯಾರೂ ನಿನ್ನನ್ನು ಸಂಪತ್ತಿನಿಂದ ಆಕರ್ಷಿಸದಂತೆ ಜಾಗರೂಕನಾಗಿರು; [QE][QS2]ದೊಡ್ಡ ಲಂಚತನವು ನಿನ್ನನ್ನು ವಂಚಿಸಬಾರದು. [QE]
19. [QS]ನಿನ್ನ ಐಶ್ವರ್ಯವೂ, ಶಕ್ತಿಸಾಮರ್ಥ್ಯವೂ [QE][QS2]ಕಷ್ಟಾನುಭವವಿಲ್ಲದೆ ಸಾಗಿಸಲು ಸಾಧ್ಯವೇ? [QE]
20. [QS]ಜನರನ್ನು ಅವರ ಮನೆಗಳಿಂದ ಎಳೆದುಕೊಂಡು [QE][QS2]ಹೋಗುವುದಕ್ಕೆ ರಾತ್ರಿಯನ್ನು ಬಯಸಬೇಡ. [QE]
21. [QS]ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! [QE][QS2]ನೀನು ಕಷ್ಟಕ್ಕಿಂತಲೂ ಕೇಡನ್ನು ಆರಿಸಿಕೊಂಡಿದ್ದೀ. [QE][PBR]
22. [QS]“ದೇವರು ತಮ್ಮ ಶಕ್ತಿಯಲ್ಲಿ ಉನ್ನತರಾಗಿದ್ದಾರೆ. [QE][QS2]ದೇವರಂಥ ಬೋಧಕರು ಯಾರಿದ್ದಾರೆ? [QE]
23. [QS]ದೇವರ ಮಾರ್ಗವನ್ನು ದೇವರಿಗೆ ನೇಮಿಸಿದವರ‍್ಯಾರು? [QE][QS2]‘ನೀವು ಮಾಡಿರುವುದು ಅನ್ಯಾಯ,’ ಎಂದು ದೇವರಿಗೆ ಹೇಳುವವರು ಯಾರು? [QE]
24. [QS]ಮನುಷ್ಯರು ಹೊಗಳಿ ಹಾಡುವ ಹಾಡುಗಳಿಂದ, [QE][QS2]ದೇವರ ಕೃತ್ಯಗಳನ್ನು ಉನ್ನತಪಡಿಸಲು ನೆನಸಿಕೋ. [QE]
25. [QS]ಎಲ್ಲಾ ಮನುಷ್ಯರು ದೇವರ ಕೃತ್ಯಗಳನ್ನು ಕಂಡಿದ್ದಾರೆ; [QE][QS2]ಹೌದು, ಮನುಷ್ಯರು ದೂರದಿಂದ ನೋಡುತ್ತಾರೆ. [QE]
26. [QS]ದೇವರು ಮಹೋನ್ನತರು; ದೇವರು ನಮ್ಮ ಅರಿವಿಗೆ ನಿಲುಕರು. [QE][QS2]ದೇವರ ವರ್ಷಗಳು ಅಸಂಖ್ಯಾತವಾಗಿವೆ. [QE][PBR]
27. [QS]“ದೇವರು ನೀರಿನ ಹನಿಗಳನ್ನು ಕೂಡಿಸಿದಾಗ, [QE][QS2]ಮಂಜಿನಿಂದ ತಿಳಿಮಳೆ ಸುರಿಯುತ್ತವೆ. [QE]
28. [QS]ಮೋಡಗಳು ಮಳೆಗರೆಯುತ್ತವೆ. [QE][QS2]ಮನುಷ್ಯರ ಮೇಲೆ ಸಮೃದ್ಧಿಯಾಗಿ ಚಿಮುಕಿಸುತ್ತವೆ. [QE]
29. [QS]ಮೋಡಗಳ ವಿಸ್ತೀರ್ಣತೆಯನ್ನೂ, [QE][QS2]ದೇವರ ಗುಡಾರದಿಂದ ಗುಡುಗುವುದನ್ನೂ ಗ್ರಹಿಸಿಕೊಳ್ಳುವವರು ಯಾರು? [QE]
30. [QS]ಇಗೋ, ದೇವರು ಮಿಂಚನ್ನು ತಮ್ಮ ಸುತ್ತಲು ಚದರಿಸುತ್ತಾರೆ. [QE][QS2]ಸಮುದ್ರದ ಆಳವನ್ನು ಸಹ ಆವರಿಸುತ್ತಾರೆ. [QE]
31. [QS]ಈ ರೀತಿಯಾಗಿ ದೇವರು ದೇಶಗಳನ್ನು ಆಳುತ್ತಾರೆ[* ಆಳುತ್ತಾರೆ ಅಥವಾ ಪೋಷಿಸುತ್ತಾರೆ ] [QE][QS2]ಸಮೃದ್ಧಿಯಾಗಿ ದೇವರು ಆಹಾರ ಕೊಡುತ್ತಾರೆ. [QE]
32. [QS]ದೇವರು ತಮ್ಮ ಕೈಯಲ್ಲಿ ಮಿಂಚನ್ನು ಹಿಡಿದುಕೊಂಡು, [QE][QS2]ಅದನ್ನು ಗುರಿಮುಟ್ಟುವಂತೆ ಆಜ್ಞಾಪಿಸುತ್ತಾರೆ. [QE]
33. [QS]ಬಿರುಗಾಳಿಯು ಬರುತ್ತಿದೆ ಎಂದು ದೇವರ ಸಿಡಿಲು ತಿಳಿಸುತ್ತದೆ; [QE][QS2]ದನಕರುಗಳು ಸಹ ದೇವರ ಆಗಮನವನ್ನು ತಿಳಿಸುತ್ತವೆ. [QE][PBR]