ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೋಬನು
1.
2. [PS]ಯೆಹೋವ ದೇವರು ಯೋಬನಿಗೆ ಮತ್ತೆ ಇಂತೆಂದರು: [PE][QS]“ಸರ್ವಶಕ್ತರಾದ ದೇವರೊಂದಿಗೇ ತಪ್ಪು ಕಂಡುಹಿಡಿಯುವ ನೀನು, [QE][QS2]ದೇವರಿಗೇ ಪಾಠ ಕಲಿಸಿಕೊಡುವೆಯಾ? [QE][QS2]ದೇವರ ಮೇಲೆಯೇ ಆರೋಪಿಸುವ ನೀನು ಈಗ ಉತ್ತರಕೊಡು!” [QE]
3.
4. [PS]ಆಗ ಯೋಬನು ಯೆಹೋವ ದೇವರಿಗೆ ಉತ್ತರವಾಗಿ, [PE][QS]“ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ? [QE][QS2]ಬಾಯಿಯ ಮೇಲೆ ಕೈಯಿಟ್ಟುಕೊಳ್ಳುತ್ತೇನೆ. [QE]
5. [QS]ಒಂದು ಸಾರಿ ಮಾತಾಡಿದೆ, ಈಗ ನನಗೆ ಕೊಡುವುದಕ್ಕೆ ಉತ್ತರ ಇಲ್ಲ; [QE][QS2]ಮತ್ತೆ ಮಾತಾಡುತ್ತಿದ್ದೇನೆ, ಆದರೆ ಮಾತಾಡಲು ನನಗೆ ಇನ್ನೇನೂ ಇಲ್ಲ,” ಎಂದನು. [QE]
6.
7. [PS]ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರಕೊಟ್ಟು ಹೇಳಿದ್ದೇನೆಂದರೆ: [PE][QS]“ಈಗ ಶೂರನಂತೆ ನಿನ್ನ ನಡು ಕಟ್ಟಿಕೋ; [QE][QS2]ನಾನು ನಿನಗೆ ಪ್ರಶ್ನೆಮಾಡುತ್ತೇನೆ; [QE][QS2]ನೀನು ನನಗೆ ಉತ್ತರಕೊಡು. [QE][PBR]
8. [QS]“ನನ್ನ ನ್ಯಾಯವನ್ನು ನೀನು ಅಪಕೀರ್ತಿ ಮಾಡುತ್ತೀಯೋ? [QE][QS2]ನೀನು ನಿನ್ನ ನ್ಯಾಯವನ್ನು ಸ್ಥಾಪಿಸಲು ನನ್ನನ್ನು ಅಪರಾಧಿ ಎಂದು ನಿರ್ಣಯಿಸುತ್ತೀಯೋ? [QE]
9. [QS]ದೇವರಾದ ನನಗಿರುವ ಭುಜಬಲ ನಿನಗಿದೆಯೋ? [QE][QS2]ನನ್ನ ಧ್ವನಿಯ ಹಾಗೆ ನೀನು ಗುಡುಗಬಲ್ಲೆಯೋ? [QE]
10. [QS]ಹಾಗಾದರೆ, ಮಹಿಮೆ ಘನತೆಗಳಿಂದ ನಿನ್ನನ್ನು ಅಲಂಕರಿಸಿಕೋ; [QE][QS2]ನೀನು ಗೌರವ ಪ್ರಭಾವಗಳನ್ನೂ ಧರಿಸಿಕೋ. [QE]
11. [QS]ನಿನ್ನ ಕಡುಕೋಪವನ್ನು ಎಲ್ಲಾ [QE][QS2]ಗರ್ವಿಷ್ಠರ ಮೇಲೆ ಸುರಿಸಿ, ಅವರನ್ನು ತಗ್ಗಿಸು. [QE]
12. [QS]ಹೌದು, ಗರ್ವಿಷ್ಠರನ್ನೆಲ್ಲಾ ನೋಡಿ ತಗ್ಗಿಸಿಬಿಡು; [QE][QS2]ದುಷ್ಟರನ್ನು ಅವರು ನಿಂತಿರುವ ಸ್ಥಳದಲ್ಲಿಯೇ ಕೆಡವಿಬಿಡು. [QE]
13. [QS]ಅವರೆಲ್ಲರನ್ನು ಒಟ್ಟಾಗಿ ಧೂಳಿನಲ್ಲಿ ಅಡಗಿಸಿಬಿಡು; [QE][QS2]ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕುಹಾಕು. [QE]
14. [QS]ನೀನು ಹಾಗೆ ಮಾಡಿದರೆ, ನಿನ್ನ ಬಲ ನಿನ್ನನ್ನು ರಕ್ಷಿಸಬಲ್ಲದೆಂದು [QE][QS2]ನಾನೇ ಒಪ್ಪಿಕೊಳ್ಳುವೆನು. [QE][PBR]
15. [QS]“ನಾನು ನಿನ್ನ ಹಾಗೆ ಸೃಷ್ಟಿಮಾಡಿದ [QE][QS2]ನೀರಾನೆಯನ್ನು ನೋಡು; [QE][QS2]ಅದು ಎತ್ತಿನ ಹಾಗೆ ಹುಲ್ಲನ್ನು ತಿನ್ನುತ್ತದೆ. [QE]
16. [QS]ಅದರ ಸೊಂಟದಲ್ಲಿ ಎಂಥಾ ಬಲ ಅಡಕವಾಗಿದೆ. [QE][QS2]ಅದರ ಹೊಟ್ಟೆಯ ನರಗಳಲ್ಲಿ ಸಹ ಎಂಥಾ ಶಕ್ತಿಯಿದೆ! [QE]
17. [QS]ನೀರಾನೆಯು ತನ್ನ ಬಾಲವನ್ನು ದೇವದಾರು ಮರದಂತೆ ಬಗ್ಗಿಸುತ್ತದೆ; [QE][QS2]ಅದರ ತೊಡೆಯ ನರಗಳೋ ಹೆಣೆದುಕೊಂಡಿವೆ. [QE]
18. [QS]ಅದರ ಮೂಳೆಗಳು ಕಂಚಿನ ಸಲಿಕೆಗಳಂತೆ ಬಲವಾಗಿವೆ; [QE][QS2]ಅದರ ಕೈಕಾಲುಗಳು ಕಬ್ಬಿಣದ ಕಂಬಿಗಳ ಹಾಗೆ ಇರುತ್ತವೆ. [QE]
19. [QS]ದೇವರ ಸೃಷ್ಟಿಗಳಲ್ಲಿ ಅದು ಮುಖ್ಯವಾದದ್ದು; [QE][QS2]ಸೃಷ್ಟಿಕರ್ತ ದೇವರು ಅದಕ್ಕೆ ಕೋರೆಹಲ್ಲಿನ ಖಡ್ಗವನ್ನು ಒದಗಿಸಿದ್ದಾರೆ. [QE]
20. [QS]ಪರ್ವತಗಳಲ್ಲಿ ಅದಕ್ಕೆ ಮೇವು ಸಿಗುತ್ತದೆ; [QE][QS2]ಎಲ್ಲಾ ಕಾಡುಮೃಗಗಳು ಅಲ್ಲಿ ಆಡುತ್ತವೆ. [QE]
21. [QS]ನೀರಾನೆಯು ತಾವರೆ ಗಿಡಗಳಡಿಯಲ್ಲಿಯೂ ಆಪಿನ ಮರೆಯಲ್ಲಿಯೂ, [QE][QS2]ಜವುಗು ಭೂಮಿಯಲ್ಲಿಯೂ ವಿಶ್ರಮಿಸಿಕೊಳ್ಳುತ್ತದೆ. [QE]
22. [QS]ತಾವರೆ ಎಲೆಗಳು ನೆರಳನ್ನು ಅದಕ್ಕೆ ಹರಡುತ್ತವೆ; [QE][QS2]ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ. [QE]
23. [QS]ಹೊಳೆ ಉಕ್ಕಿ ಬಂದರೂ ನೀರಾನೆಯು ಹೆದರುವುದಿಲ್ಲ. [QE][QS2]ಯೊರ್ದನ್ ನದಿ ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು. [QE]
24. [QS]ಅದು ನೋಡುತ್ತಿರುವಾಗ ಯಾರಾದರೂ ಅದನ್ನು ಹಿಡಿಯಬಲ್ಲರೋ? [QE][QS2]ಅದರ ಮೂಗನ್ನು ಗಾಳದಿಂದ ಚುಚ್ಚಬಲ್ಲರೋ? [QE][PBR]
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 40 / 42
1 2 ಯೆಹೋವ ದೇವರು ಯೋಬನಿಗೆ ಮತ್ತೆ ಇಂತೆಂದರು: “ಸರ್ವಶಕ್ತರಾದ ದೇವರೊಂದಿಗೇ ತಪ್ಪು ಕಂಡುಹಿಡಿಯುವ ನೀನು, ದೇವರಿಗೇ ಪಾಠ ಕಲಿಸಿಕೊಡುವೆಯಾ? ದೇವರ ಮೇಲೆಯೇ ಆರೋಪಿಸುವ ನೀನು ಈಗ ಉತ್ತರಕೊಡು!” 3 4 ಆಗ ಯೋಬನು ಯೆಹೋವ ದೇವರಿಗೆ ಉತ್ತರವಾಗಿ, “ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುತ್ತೇನೆ. 5 ಒಂದು ಸಾರಿ ಮಾತಾಡಿದೆ, ಈಗ ನನಗೆ ಕೊಡುವುದಕ್ಕೆ ಉತ್ತರ ಇಲ್ಲ; ಮತ್ತೆ ಮಾತಾಡುತ್ತಿದ್ದೇನೆ, ಆದರೆ ಮಾತಾಡಲು ನನಗೆ ಇನ್ನೇನೂ ಇಲ್ಲ,” ಎಂದನು. 6 7 ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರಕೊಟ್ಟು ಹೇಳಿದ್ದೇನೆಂದರೆ: “ಈಗ ಶೂರನಂತೆ ನಿನ್ನ ನಡು ಕಟ್ಟಿಕೋ; ನಾನು ನಿನಗೆ ಪ್ರಶ್ನೆಮಾಡುತ್ತೇನೆ; ನೀನು ನನಗೆ ಉತ್ತರಕೊಡು. 8 “ನನ್ನ ನ್ಯಾಯವನ್ನು ನೀನು ಅಪಕೀರ್ತಿ ಮಾಡುತ್ತೀಯೋ? ನೀನು ನಿನ್ನ ನ್ಯಾಯವನ್ನು ಸ್ಥಾಪಿಸಲು ನನ್ನನ್ನು ಅಪರಾಧಿ ಎಂದು ನಿರ್ಣಯಿಸುತ್ತೀಯೋ? 9 ದೇವರಾದ ನನಗಿರುವ ಭುಜಬಲ ನಿನಗಿದೆಯೋ? ನನ್ನ ಧ್ವನಿಯ ಹಾಗೆ ನೀನು ಗುಡುಗಬಲ್ಲೆಯೋ? 10 ಹಾಗಾದರೆ, ಮಹಿಮೆ ಘನತೆಗಳಿಂದ ನಿನ್ನನ್ನು ಅಲಂಕರಿಸಿಕೋ; ನೀನು ಗೌರವ ಪ್ರಭಾವಗಳನ್ನೂ ಧರಿಸಿಕೋ. 11 ನಿನ್ನ ಕಡುಕೋಪವನ್ನು ಎಲ್ಲಾ ಗರ್ವಿಷ್ಠರ ಮೇಲೆ ಸುರಿಸಿ, ಅವರನ್ನು ತಗ್ಗಿಸು. 12 ಹೌದು, ಗರ್ವಿಷ್ಠರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರು ನಿಂತಿರುವ ಸ್ಥಳದಲ್ಲಿಯೇ ಕೆಡವಿಬಿಡು. 13 ಅವರೆಲ್ಲರನ್ನು ಒಟ್ಟಾಗಿ ಧೂಳಿನಲ್ಲಿ ಅಡಗಿಸಿಬಿಡು; ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕುಹಾಕು. 14 ನೀನು ಹಾಗೆ ಮಾಡಿದರೆ, ನಿನ್ನ ಬಲ ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ಒಪ್ಪಿಕೊಳ್ಳುವೆನು. 15 “ನಾನು ನಿನ್ನ ಹಾಗೆ ಸೃಷ್ಟಿಮಾಡಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ತಿನ್ನುತ್ತದೆ. 16 ಅದರ ಸೊಂಟದಲ್ಲಿ ಎಂಥಾ ಬಲ ಅಡಕವಾಗಿದೆ. ಅದರ ಹೊಟ್ಟೆಯ ನರಗಳಲ್ಲಿ ಸಹ ಎಂಥಾ ಶಕ್ತಿಯಿದೆ! 17 ನೀರಾನೆಯು ತನ್ನ ಬಾಲವನ್ನು ದೇವದಾರು ಮರದಂತೆ ಬಗ್ಗಿಸುತ್ತದೆ; ಅದರ ತೊಡೆಯ ನರಗಳೋ ಹೆಣೆದುಕೊಂಡಿವೆ. 18 ಅದರ ಮೂಳೆಗಳು ಕಂಚಿನ ಸಲಿಕೆಗಳಂತೆ ಬಲವಾಗಿವೆ; ಅದರ ಕೈಕಾಲುಗಳು ಕಬ್ಬಿಣದ ಕಂಬಿಗಳ ಹಾಗೆ ಇರುತ್ತವೆ. 19 ದೇವರ ಸೃಷ್ಟಿಗಳಲ್ಲಿ ಅದು ಮುಖ್ಯವಾದದ್ದು; ಸೃಷ್ಟಿಕರ್ತ ದೇವರು ಅದಕ್ಕೆ ಕೋರೆಹಲ್ಲಿನ ಖಡ್ಗವನ್ನು ಒದಗಿಸಿದ್ದಾರೆ. 20 ಪರ್ವತಗಳಲ್ಲಿ ಅದಕ್ಕೆ ಮೇವು ಸಿಗುತ್ತದೆ; ಎಲ್ಲಾ ಕಾಡುಮೃಗಗಳು ಅಲ್ಲಿ ಆಡುತ್ತವೆ. 21 ನೀರಾನೆಯು ತಾವರೆ ಗಿಡಗಳಡಿಯಲ್ಲಿಯೂ ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ವಿಶ್ರಮಿಸಿಕೊಳ್ಳುತ್ತದೆ. 22 ತಾವರೆ ಎಲೆಗಳು ನೆರಳನ್ನು ಅದಕ್ಕೆ ಹರಡುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ. 23 ಹೊಳೆ ಉಕ್ಕಿ ಬಂದರೂ ನೀರಾನೆಯು ಹೆದರುವುದಿಲ್ಲ. ಯೊರ್ದನ್ ನದಿ ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು. 24 ಅದು ನೋಡುತ್ತಿರುವಾಗ ಯಾರಾದರೂ ಅದನ್ನು ಹಿಡಿಯಬಲ್ಲರೋ? ಅದರ ಮೂಗನ್ನು ಗಾಳದಿಂದ ಚುಚ್ಚಬಲ್ಲರೋ?
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 40 / 42
×

Alert

×

Kannada Letters Keypad References