1. [QS]“ಈಗ ನೀನು ಕರೆದರೆ, ನಿನಗೆ ಉತ್ತರ ಕೊಡುವವರು ಇದ್ದಾರೋ? [QE][QS2]ಪರಿಶುದ್ಧರಲ್ಲಿ ಯಾರ ಕಡೆಗೆ ನೀನು ತಿರುಗಿಕೊಳ್ಳುವೆ? [QE]
2. [QS]ಮೂಢನನ್ನು ಅಸಮಾಧಾನವು ಕೊಲ್ಲುವುದು; [QE][QS2]ಮುಗ್ಧನನ್ನು ಅಸುಹೆ ಸಾಯುವಂತೆ ಮಾಡುವುದು. [QE]
3. [QS]ಮೂಢನು ಬೇರೂರುವುದನ್ನು ನಾನು ನೋಡಿದೆನು, [QE][QS2]ಕೂಡಲೇ ಅವನ ಮನೆ ಶಾಪಕ್ಕಿಡಾಗುವುದನ್ನು ಕಂಡೆನು. [QE]
4. [QS]ಅವನ ಮಕ್ಕಳು ಭದ್ರತೆಯಿಲ್ಲದವರಾಗುವರು; [QE][QS2]ಬಿಡಿಸತಕ್ಕವರಿಲ್ಲದೆ ಅವರು ನ್ಯಾಯಸ್ಥಾನದಲ್ಲಿ ಸೋತುಹೋಗುವರು. [QE]
5. [QS]ಹಸಿದವರು ಅವನ ಪೈರನ್ನು ತಿಂದುಬಿಡುವರು; [QE][QS2]ಮುಳ್ಳುಬೇಲಿ ಹಾಕಿದ್ದರೂ ಅದನ್ನು ತೆಗೆದುಕೊಳ್ಳುವರು; [QE][QS2]ಅವನ ಆಸ್ತಿಯನ್ನು ಬಾಯಾರಿಕೆಯಾದವರು ನುಂಗಿಬಿಡುವರು. [QE]
6. [QS]ಮಣ್ಣಿನಿಂದ ಕಷ್ಟಗಳು ಹುಟ್ಟುವುದಿಲ್ಲ; [QE][QS2]ಭೂಮಿಯಿಂದ ತೊಂದರೆ ಮೊಳೆಯುವುದಿಲ್ಲ. [QE]
7. [QS]ಆದರೂ ಕಿಡಿಗಳು ಹಾರುವ ಪ್ರಕಾರವೇ, [QE][QS2]ಮನುಷ್ಯನು ಶ್ರಮೆಹೊಂದಲು ಹುಟ್ಟುತ್ತಾನೆ. [QE][PBR]
8. [QS]“ನಾನು ನೀನಾಗಿದ್ದರೆ ದೇವರಿಗೇ ಬೇಡಿಕೊಳ್ಳುತ್ತಿದ್ದೆ; [QE][QS2]ನನ್ನ ವಿಷಯವನ್ನು ದೇವರ ಮುಂದೆಯೇ ಇಡುತ್ತಿದ್ದೆ. [QE]
9. [QS]ದೇವರು ಸಂಶೋಧನೆ ಮಾಡಲಾಗದಷ್ಟು ಮಹಾಕಾರ್ಯಗಳನ್ನೂ, [QE][QS2]ಅಸಂಖ್ಯವಾದ ಅದ್ಭುತ ಕೃತ್ಯಗಳನ್ನೂ ಮಾಡುತ್ತಾರೆ. [QE]
10. [QS]ಭೂಮಿಯ ಮೇಲೆ ಮಳೆಯನ್ನು ಕೊಡುತ್ತಾರೆ; [QE][QS2]ಹೊಲಗಳ ಮೇಲೆ ನೀರನ್ನು ಸುರಿಸುತ್ತಾರೆ. [QE]
11. [QS]ದೇವರು ತಗ್ಗಿದವರನ್ನು ಉನ್ನತದಲ್ಲಿಡುತ್ತಾರೆ; [QE][QS2]ದುಃಖವುಳ್ಳವರನ್ನು ಭದ್ರತೆಗೆ ಒಯ್ಯುತ್ತಾರೆ. [QE]
12. [QS]ದೇವರು ವಂಚಕರ ಯೋಜನೆಗಳನ್ನು ಭಂಗಪಡಿಸುತ್ತಾರೆ. [QE][QS2]ಕುಯುಕ್ತಿಯುಳ್ಳವರ ಕೈಗಳು ಯಾವುದೇ ಯಶಸ್ಸನ್ನು ಸಾಧಿಸದಂತೆ ಮಾಡುತ್ತಾರೆ. [QE]
13. [QS]ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುತ್ತಾರೆ, [QE][QS2]ಮತ್ತು ಕುತಂತ್ರಿಯ ಯೋಜನೆಗಳನ್ನು ನಿರರ್ಥಕಮಾಡುತ್ತಾರೆ. [QE]
14. [QS]ಕುತಂತ್ರರು ಹಗಲಿನಲ್ಲಿಯೇ ಕತ್ತಲೆಯನ್ನು ಸಂಧಿಸುತ್ತಾರೆ; [QE][QS2]ಮಧ್ಯಾಹ್ನದಲ್ಲಿ ರಾತ್ರಿಯಂತೆ ತಡಕಾಡುತ್ತಾರೆ. [QE]
15. [QS]ದೇವರು ದಿಕ್ಕಿಲ್ಲದವರನ್ನು ದಬ್ಬಾಳಿಕೆಮಾಡುವವರ ಬಾಯಿಯೆಂಬ ಖಡ್ಗದಿಂದಲೂ, [QE][QS2]ಬಲಿಷ್ಠರ ಕೈಯೊಳಗಿಂದಲೂ ರಕ್ಷಿಸುತ್ತಾರೆ. [QE]
16. [QS]ಆದ್ದರಿಂದ ಬಡವರಿಗೆ ನಿರೀಕ್ಷೆಯುಂಟಾಗುವುದು; [QE][QS2]ಅನ್ಯಾಯವು ತನ್ನ ಬಾಯಿ ಮುಚ್ಚಿಕೊಳ್ಳುವುದು. [QE][PBR]
17. [QS]“ಇಗೋ, ದೇವರು ಗದರಿಸುವ ಮನುಷ್ಯನು ಧನ್ಯನು; [QE][QS2]ಸರ್ವಶಕ್ತರ ಶಿಕ್ಷೆಯನ್ನು ತಿರಸ್ಕರಿಸಬೇಡ. [QE]
18. [QS]ಗಾಯ ಮಾಡುವವರೂ ಗಾಯ ಕಟ್ಟುವವರೂ ದೇವರೇ; [QE][QS2]ಹೊಡೆಯುವುದೂ ಗುಣಪಡಿಸುವುದೂ ದೇವರ ಕೈಯೇ. [QE]
19. [QS]ದೇವರು ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವರು; [QE][QS2]ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು. [QE]
20. [QS]ಬರದಲ್ಲಿ ನಿನ್ನನ್ನು ಮರಣದೊಳಗಿಂದಲೂ, [QE][QS2]ಯುದ್ಧದಲ್ಲಿ ಖಡ್ಗದ ಬಲದಿಂದಲೂ ದೇವರು ವಿಮೋಚಿಸುವರು. [QE]
21. [QS]ನೀನು ನಾಲಿಗೆಯೆಂಬ ಚಾಟಿಹೊಡೆತಕ್ಕೆ ಮರೆಯಾಗಿರುವೆ; [QE][QS2]ನಾಶ ಬಂದಾಗ ನೀನು ಭಯಪಡುವುದಿಲ್ಲ. [QE]
22. [QS]ನೀನು ನಾಶಕ್ಕೂ, ಕ್ಷಾಮಕ್ಕೂ ನಗುವೆ; [QE][QS2]ಕಾಡುಮೃಗಗಳಿಗೂ ನೀನು ಭಯಪಡುವುದಿಲ್ಲ. [QE]
23. [QS]ಹೊಲದ ಕಲ್ಲುಗಳ ಸಂಗಡ ನಿನಗೆ ಒಪ್ಪಂದ ಇರುವುದು; [QE][QS2]ಕಾಡು ಮೃಗಗಳೂ ನಿನ್ನೊಂದಿಗೆ ಸಮಾಧಾನವಾಗಿರುವವು. [QE]
24. [QS]ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ನೀನು ತಿಳಿದುಕೊಳ್ಳುವೆ, [QE][QS2]ನಿನ್ನ ಆಸ್ತಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವುದಿಲ್ಲ. [QE]
25. [QS]ನಿನ್ನ ಸಂತತಿಯು ಬಹಳವಾಗಿದೆ ಎಂದೂ, [QE][QS2]ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವೆ. [QE]
26. [QS]ಸಿವುಡು ತನ್ನ ಕಾಲದಲ್ಲಿ ಮನೆಗೆ ಸೇರುವಂತೆ [QE][QS2]ನೀನು ಪೂರ್ಣ ಪ್ರಾಯದವನಾಗಿ ಸಮಾಧಿ ಸೇರುವೆ. [QE][PBR]
27. [QS]“ಇದನ್ನು ನಾವು ಪರಿಶೋಧಿಸಿದ್ದೇವೆ; ಇದು ಸತ್ಯವಾದದ್ದು, [QE][QS2]ಇದನ್ನು ನೀನು ಕೇಳಿ ತಿಳಿದುಕೋ, ಇದನ್ನು ನೀನು ಅನ್ವಯಿಸು.” [QE]