1. {#1ಬಿಲ್ದದನ ವಾದ }
2. [PS]ಆಗ, ಶೂಹ್ಯನಾದ ಬಿಲ್ದದನು ಈ ಪ್ರಕಾರ ಉತ್ತರಕೊಟ್ಟನು: [PE][QS]“ನೀನು ಎಷ್ಟರವರೆಗೆ ಇವುಗಳನ್ನು ನುಡಿಯುತ್ತಿರುವೆ? [QE][QS2]ನೀನು ಬಿರುಗಾಳಿಯಂಥ ಮಾತುಗಳನ್ನಾಡುತ್ತಿರುವೆ. [QE]
3. [QS]ದೇವರು ತೀರ್ಪಿಗೆ ವಿರುದ್ಧವಾದದ್ದನ್ನು ಮಾಡುತ್ತಾರೋ? [QE][QS2]ಸರ್ವಶಕ್ತರು ನೀತಿಗೆ ವಿರುದ್ಧವಾದದ್ದನ್ನು ಮಾಡುವರೋ? [QE]
4. [QS]ನಿನ್ನ ಮಕ್ಕಳು ದೇವರಿಗೆ ವಿರೋಧವಾಗಿ ಪಾಪಮಾಡಿದ್ದರೆ, [QE][QS2]ದೇವರು ಅವರ ಪಾಪಕ್ಕಾಗಿ ಅವರನ್ನು ದಂಡಿಸುವರು. [QE]
5. [QS]ಆದರೆ ನೀನೇ ದೇವರನ್ನು ಜಾಗ್ರತೆಯಾಗಿ ಹುಡುಕಿ, [QE][QS2]ಸರ್ವಶಕ್ತರಿಗೆ ಬಿನ್ನಹ ಮಾಡು. [QE]
6. [QS]ನೀನು ಶುದ್ಧನೂ, ಯಥಾರ್ಥನೂ ಆಗಿದ್ದರೆ, [QE][QS2]ನಿಶ್ಚಯವಾಗಿ ಈಗಲೇ ದೇವರು ನಿನಗೋಸ್ಕರ ಎಚ್ಚೆತ್ತು, [QE][QS2]ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವರು. [QE]
7. [QS]ನಿನ್ನ ಆರಂಭವು ಅಲ್ಪವಾಗಿದ್ದರೂ, [QE][QS2]ನಿನ್ನ ಅಂತ್ಯವು ಬಹಳವಾಗಿ ವೃದ್ಧಿ ಹೊಂದುವುದು. [QE][PBR]
8. [QS]“ಪೂರ್ವಿಕರನ್ನು ವಿಚಾರಿಸು; [QE][QS2]ಅವರ ಪಿತೃಗಳು ಕಲಿತಿದ್ದನ್ನು ಕಂಡುಕೊಳ್ಳುವುದಕ್ಕೆ ಸಿದ್ಧನಾಗು. [QE]
9. [QS]ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯದವರೂ ಆಗಿದ್ದೇವೆ; [QE][QS2]ಏಕೆಂದರೆ ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿನಂತಿವೆ. [QE]
10. [QS]ಪೂರ್ವಿಕರು ನಿನಗೆ ಬೋಧಿಸಿ ಬುದ್ಧಿ ಹೇಳಲಿಲ್ಲವೋ? [QE][QS2]ಅವರು ತಮ್ಮ ತಿಳುವಳಿಕೆಯನ್ನು ಹೊರತರಲಿಲ್ಲವೋ? [QE]
11. [QS]ಕೆಸರಿಲ್ಲದೆ ಆಪು ಹುಲ್ಲು ಬೆಳೆಯುವುದೋ? [QE][QS2]ನೀರಿಲ್ಲದೆ ಜಂಬು ಹುಲ್ಲು ಮೊಳೆಯುವುದೋ? [QE]
12. [QS]ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ, [QE][QS2]ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಒಣಗಿಹೋಗುವುದು. [QE]
13. [QS]ದೇವರನ್ನು ಮರೆಯುವವರೆಲ್ಲರ ದಾರಿ ಹಾಗೆಯೇ; [QE][QS2]ಭಕ್ತಿಹೀನರ ನಿರೀಕ್ಷೆಯು ನಾಶವಾಗುವುದು. [QE]
14. [QS]ಅಂಥವರ ಭರವಸೆಯು ಭಂಗವಾಗುವುದು[* ಈ ಪದಕ್ಕೆ ಹೀಬ್ರೂ ಭಾಷೆಯಲ್ಲಿ ಅರ್ಥವು ಅನಿಶ್ಚಿತವಾಗಿದೆ ]; [QE][QS2]ಅವರ ಆಶ್ರಯವು ಜೇಡರ ಹುಳದ ಮನೆಯಂತಿರುವುದು. [QE]
15. [QS]ಅಂಥಾ ಮನೆ ಮೇಲೆ ಒರಗಿಕೊಂಡರೆ, ಅದು ನಿಲ್ಲದು; [QE][QS2]ಅದನ್ನು ಬಿಗಿಹಿಡಿದರೆ, ಅದು ತಡೆಯಲಾರದು. [QE]
16. [QS]ಸೂರ್ಯನ ಮುಂದೆ ಭಕ್ತಿಹೀನರು ಹಸುರು ಬಳ್ಳಿಯಂತೆ ಇದ್ದಾರೆ; [QE][QS2]ಆ ಬಳ್ಳಿಯು ತೋಟದಲ್ಲೆಲ್ಲಾ ಹಬ್ಬುತ್ತಿದೆ. [QE]
17. [QS]ಅವರ ಬೇರುಗಳು ಬಂಡೆಗಳ ರಾಶಿಯ ಮೇಲೆ ಸುತ್ತಿ, [QE][QS2]ಕಲ್ಲುಗಳ ನಡುವೆ ನುಗ್ಗುತ್ತವೆ. [QE]
18. [QS]ಭಕ್ತಿಹೀನನನ್ನು ಅವನ ಸ್ಥಳದಿಂದ ಕಿತ್ತುಹಾಕಿದರೆ, [QE][QS2]‘ನಾನು ನಿನ್ನನ್ನು ಎಂದಿಗೂ ನೋಡಿಲ್ಲ,’ ಎಂದು ಆ ನೆಲವು ಅವನನ್ನು ಅಲ್ಲಗಳೆಯುವುದು. [QE]
19. [QS]ಹೀಗೆ ಭಕ್ತಿಹೀನನ ಜೀವವು ಒಣಗಿಹೋಗುವುದು; [QE][QS2]ಆದರೆ ಆ ಮಣ್ಣಿನ ನೆಲದಿಂದ ಬೇರೆ ಸಸಿಗಳು ಮೊಳೆಯುವುದು. [QE][PBR]
20. [QS]“ದೇವರು ನಿರ್ದೋಷಿಯನ್ನು ತಿರಸ್ಕರಿಸುವುದಿಲ್ಲ; [QE][QS2]ಕೆಡುಕರ ಕೈಗಳನ್ನು ದೇವರು ಬಲಪಡಿಸುವದಿಲ್ಲ. [QE]
21. [QS]ದೇವರು ನಿನ್ನ ಬಾಯನ್ನು ನಗೆಯಿಂದ ತುಂಬಿಸುವರು; [QE][QS2]ನಿನ್ನ ತುಟಿಗಳನ್ನು ಜಯ ಧ್ವನಿಯಿಂದಲೂ ತುಂಬಿಸುವರು. [QE]
22. [QS]ನಿನ್ನ ಶತ್ರುಗಳಿಗೆ ನಾಚಿಕೆಯಾಗುವುದು; [QE][QS2]ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವುದು.” [QE]