ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಯೆಹೋಶುವ
1. {#1ರಾಹಾಬಳು ಮತ್ತು ಗೂಢಚಾರರು }
2. [PS]ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಶಿಟ್ಟೀಮಿನಿಂದ ಗುಪ್ತವಾಗಿ ಕಳುಹಿಸಿ, ಅವರಿಗೆ, “ನೀವು ಹೋಗಿ ದೇಶವನ್ನೂ, ವಿಶೇಷವಾಗಿ ಯೆರಿಕೋ ಪಟ್ಟಣವನ್ನೂ ಸುತ್ತಿ ನೋಡಿರಿ,” ಎಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದು ಅಲ್ಲಿಯೇ ಉಳಿದುಕೊಂಡರು. [PE][PS]ಯೆರಿಕೋವಿನ ಅರಸನಿಗೆ, “ಇಗೋ, ಇಸ್ರಾಯೇಲರಲ್ಲಿ ಕೆಲವರು ದೇಶವನ್ನು ಗೂಢಚಾರ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾರೆ,” ಎಂದು ತಿಳಿಸಲಾಯಿತು.
3. ಆಗ ಯೆರಿಕೋವಿನ ಅರಸನು ರಾಹಾಬಳಿಗೆ, “ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರೆದುಕೊಂಡು ಬಾ. ಏಕೆಂದರೆ ಅವರು ದೇಶವನ್ನೆಲ್ಲಾ ಗೂಢಚಾರ ಮಾಡಲು ಬಂದಿದ್ದಾರೆ,” ಎಂದನು. [PE]
4. [PS]ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು, “ನನ್ನ ಬಳಿಗೆ ಇಬ್ಬರು ಮನುಷ್ಯರು ಬಂದಿದ್ದರು. ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.
5. ಪಟ್ಟಣದ ಬಾಗಿಲು ಮುಚ್ಚುವ ಮುಸ್ಸಂಜೆ ವೇಳೆಯಲ್ಲಿ ಆ ಮನುಷ್ಯರು ಹೊರಟು ಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ. ಅವರನ್ನು ಬೇಗ ಹಿಂದಟ್ಟಿರಿ. ನಿಮಗೆ ಸಿಕ್ಕುವರು,” ಎಂದಳು.
6. ಆದರೆ ಆಕೆಯು ಅವರನ್ನು ಮಾಳಿಗೆಯ ಮೇಲೆ ಏರಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನೊಳಗೆ ಬಚ್ಚಿಟ್ಟಿದ್ದಳು.
7. ಆ ಮನುಷ್ಯರು ಯೊರ್ದನ್ ನದಿ ದಾರಿ ಹಿಡಿದು ಹೋಗಿ ನದಿ ದಾಟುವ ಸ್ಥಳದವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ, ಪಟ್ಟಣದ ಹೆಬ್ಬಾಗಿಲು ಮುಚ್ಚಿದರು. [PE]
8. [PS]ಗೂಢಚಾರರು ಮಲಗುವುದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ, ಅವರ ಬಳಿಗೆ ಬಂದು,
9. “ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
10. ನೀವು ಈಜಿಪ್ಟಿನಿಂದ ಹೊರಡುವಾಗ ಯೆಹೋವ ದೇವರು ಹೇಗೆ ನಿಮಗೋಸ್ಕರ ಕೆಂಪುಸಮುದ್ರದ ನೀರನ್ನು ಬತ್ತಿಹೋಗಮಾಡಿದ್ದನ್ನೂ, ನೀವು ಸಂಪೂರ್ಣ ನಿರ್ಮೂಲ ಮಾಡಿದ ಯೊರ್ದನ್ ನದಿ ಆಚೆಯಲ್ಲಿದ್ದ ಅಮೋರಿಯರ ಇಬ್ಬರು ಅರಸುಗಳಾದ ಸೀಹೋನನಿಗೂ, ಓಗನಿಗೂ ಮಾಡಿದ್ದನ್ನೂ ನಾವು ಕೇಳಿದ್ದೇವೆ.
11. ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕುಂದಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ನಿಮ್ಮ ದೇವರಾದ ಯೆಹೋವ ದೇವರೇ ಮೇಲಿರುವ ಪರಲೋಕದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾರೆ. [PE]
12. [PS]“ಈಗ ನೀವು ನನಗೊಂದು ಪ್ರಮಾಣಮಾಡಬೇಕು. ನಾನು ನಿಮಗೆ ದಯೆ ತೋರಿಸಿದ್ದರಿಂದ ನೀವು ನನಗೂ ನನ್ನ ತಂದೆಯ ಮನೆಗೂ ದಯೆ ತೋರಿಸಬೇಕು. ನನಗೆ ನಿಶ್ಚಯವಾದ ಗುರುತನ್ನು ಕೊಡಬೇಕು.
13. ನನ್ನ ತಂದೆಯನ್ನೂ ನನ್ನ ತಾಯಿಯನ್ನೂ, ನನ್ನ ಸಹೋದರರನ್ನೂ ನನ್ನ ಸಹೋದರಿಯರನ್ನೂ, ಅವರಲ್ಲಿರುವ ಎಲ್ಲರನ್ನೂ ಜೀವದಿಂದಿರಿಸಿ, ನಮ್ಮ ಪ್ರಾಣವನ್ನು ಸಾವಿನಿಂದ ತಪ್ಪಿಸಬೇಕು ಎಂದು ಯೆಹೋವ ದೇವರ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದಳು. [PE]
14.
15. [PS]ಆಗ ಅವರು ಆಕೆಗೆ, “ನೀನು ಈ ನಮ್ಮ ಕಾರ್ಯವನ್ನು ಬಹಿರಂಗ ಮಾಡದೆ ಇದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿ ಇರುವೆವು. ಯೆಹೋವ ದೇವರು ನಮಗೆ ದೇಶವನ್ನು ಕೊಟ್ಟಾಗ, ಸತ್ಯದಿಂದಲೂ, ದಯೆಯಿಂದಲೂ ನಡೆದುಕೊಳ್ಳುವೆವು,” ಎಂದರು. [PE][PS]ಆಗ ಆಕೆಯು ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿಬಿಟ್ಟಳು. ಏಕೆಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು.
16. ಆಕೆಯು ಅವರಿಗೆ, “ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ, ಅವರು ತಿರುಗಿ ಬರುವವರೆಗೂ ಅಲ್ಲಿ ಮೂರು ದಿವಸ ಅಡಗಿಕೊಂಡಿದ್ದು, ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ,” ಎಂದಳು. [PE]
17. [PS]ಆಗ ಆ ಮನುಷ್ಯರು ಆಕೆಗೆ, “ನೀನು ನಮ್ಮಿಂದ ಮಾಡಿಸಿದ ಈ ನಿನ್ನ ಪ್ರಮಾಣದಿಂದ ಬಿಡುಗಡೆಯಾಗಿರುವೆವು.
18. ಇಗೋ, ನಾವು ಈ ದೇಶದಲ್ಲಿ ಪ್ರವೇಶಿಸುವಾಗ, ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ ಈ ಕಡುಗೆಂಪು ಹಗ್ಗವನ್ನು ಕಟ್ಟಿ, ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ, ನಿನ್ನ ಸಹೋದರರನ್ನೂ, ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.
19. ಯಾವನಾದರೂ ನಿನ್ನ ಮನೆಯ ಬಾಗಿಲಿನಿಂದ ಹೊರಗೆ ಹೊರಟು ಬೀದಿಗೆ ಬಂದರೆ, ಅವನ ರಕ್ತವು ಅವನ ತಲೆಯ ಮೇಲೆ ಇರುವುದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಮಾಡಿದರೆ, ಅವನ ರಕ್ತ ಅಪರಾಧವು ನಮ್ಮ ತಲೆಯ ಮೇಲೆ ಇರುವುದು.
20. ಆದರೆ ನೀನು ಈ ನಮ್ಮ ಕಾರ್ಯವನ್ನು ಬಹಿರಂಗಪಡಿಸಿದರೆ, ನೀನು ನಮಗೆ ಇಟ್ಟ ಆಣೆಯಿಂದ ನಾವು ಬಿಡುಗಡೆಯಾಗಿರುವೆವು,” ಎಂದರು. [PE]
21.
22. [PS]ಅದಕ್ಕೆ ಆಕೆಯು, “ನಿಮ್ಮ ಮಾತುಗಳ ಪ್ರಕಾರವೇ ಆಗಲಿ,” ಎಂದು ಹೇಳಿದಳು. [PE][PS]ಅನಂತರ ಅವರನ್ನು ಕಳುಹಿಸಿಬಿಟ್ಟಳು. ಅವರು ಹೋದಾಗ, ಆ ಕಡುಗೆಂಪು ಹಗ್ಗವನ್ನು ಕಿಟಿಕಿಯಲ್ಲಿ ಕಟ್ಟಿದಳು. [PE][PS]ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರುಗಿ ಬರುವವರೆಗೂ ಮೂರು ದಿನ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವರನ್ನು ಹುಡುಕಿ ಕಾಣದೆ ಹೋದರು.
23. ಆಗ ಅವರಿಬ್ಬರು ಹಿಂದಿರುಗಿ ಬೆಟ್ಟದಿಂದ ಇಳಿದು, ನದಿಯನ್ನು ದಾಟಿ, ನೂನನ ಮಗ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವರಿಗೆ ವಿವರಿಸಿದರು.
24. ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು. [PE]
ಒಟ್ಟು 24 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 24
ರಾಹಾಬಳು ಮತ್ತು ಗೂಢಚಾರರು 1 2 ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಶಿಟ್ಟೀಮಿನಿಂದ ಗುಪ್ತವಾಗಿ ಕಳುಹಿಸಿ, ಅವರಿಗೆ, “ನೀವು ಹೋಗಿ ದೇಶವನ್ನೂ, ವಿಶೇಷವಾಗಿ ಯೆರಿಕೋ ಪಟ್ಟಣವನ್ನೂ ಸುತ್ತಿ ನೋಡಿರಿ,” ಎಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದು ಅಲ್ಲಿಯೇ ಉಳಿದುಕೊಂಡರು. ಯೆರಿಕೋವಿನ ಅರಸನಿಗೆ, “ಇಗೋ, ಇಸ್ರಾಯೇಲರಲ್ಲಿ ಕೆಲವರು ದೇಶವನ್ನು ಗೂಢಚಾರ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾರೆ,” ಎಂದು ತಿಳಿಸಲಾಯಿತು. 3 ಆಗ ಯೆರಿಕೋವಿನ ಅರಸನು ರಾಹಾಬಳಿಗೆ, “ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರೆದುಕೊಂಡು ಬಾ. ಏಕೆಂದರೆ ಅವರು ದೇಶವನ್ನೆಲ್ಲಾ ಗೂಢಚಾರ ಮಾಡಲು ಬಂದಿದ್ದಾರೆ,” ಎಂದನು. 4 ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು, “ನನ್ನ ಬಳಿಗೆ ಇಬ್ಬರು ಮನುಷ್ಯರು ಬಂದಿದ್ದರು. ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು. 5 ಪಟ್ಟಣದ ಬಾಗಿಲು ಮುಚ್ಚುವ ಮುಸ್ಸಂಜೆ ವೇಳೆಯಲ್ಲಿ ಆ ಮನುಷ್ಯರು ಹೊರಟು ಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ. ಅವರನ್ನು ಬೇಗ ಹಿಂದಟ್ಟಿರಿ. ನಿಮಗೆ ಸಿಕ್ಕುವರು,” ಎಂದಳು. 6 ಆದರೆ ಆಕೆಯು ಅವರನ್ನು ಮಾಳಿಗೆಯ ಮೇಲೆ ಏರಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನೊಳಗೆ ಬಚ್ಚಿಟ್ಟಿದ್ದಳು. 7 ಆ ಮನುಷ್ಯರು ಯೊರ್ದನ್ ನದಿ ದಾರಿ ಹಿಡಿದು ಹೋಗಿ ನದಿ ದಾಟುವ ಸ್ಥಳದವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ, ಪಟ್ಟಣದ ಹೆಬ್ಬಾಗಿಲು ಮುಚ್ಚಿದರು. 8 ಗೂಢಚಾರರು ಮಲಗುವುದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ, ಅವರ ಬಳಿಗೆ ಬಂದು, 9 “ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು. 10 ನೀವು ಈಜಿಪ್ಟಿನಿಂದ ಹೊರಡುವಾಗ ಯೆಹೋವ ದೇವರು ಹೇಗೆ ನಿಮಗೋಸ್ಕರ ಕೆಂಪುಸಮುದ್ರದ ನೀರನ್ನು ಬತ್ತಿಹೋಗಮಾಡಿದ್ದನ್ನೂ, ನೀವು ಸಂಪೂರ್ಣ ನಿರ್ಮೂಲ ಮಾಡಿದ ಯೊರ್ದನ್ ನದಿ ಆಚೆಯಲ್ಲಿದ್ದ ಅಮೋರಿಯರ ಇಬ್ಬರು ಅರಸುಗಳಾದ ಸೀಹೋನನಿಗೂ, ಓಗನಿಗೂ ಮಾಡಿದ್ದನ್ನೂ ನಾವು ಕೇಳಿದ್ದೇವೆ. 11 ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕುಂದಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ನಿಮ್ಮ ದೇವರಾದ ಯೆಹೋವ ದೇವರೇ ಮೇಲಿರುವ ಪರಲೋಕದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾರೆ. 12 “ಈಗ ನೀವು ನನಗೊಂದು ಪ್ರಮಾಣಮಾಡಬೇಕು. ನಾನು ನಿಮಗೆ ದಯೆ ತೋರಿಸಿದ್ದರಿಂದ ನೀವು ನನಗೂ ನನ್ನ ತಂದೆಯ ಮನೆಗೂ ದಯೆ ತೋರಿಸಬೇಕು. ನನಗೆ ನಿಶ್ಚಯವಾದ ಗುರುತನ್ನು ಕೊಡಬೇಕು. 13 ನನ್ನ ತಂದೆಯನ್ನೂ ನನ್ನ ತಾಯಿಯನ್ನೂ, ನನ್ನ ಸಹೋದರರನ್ನೂ ನನ್ನ ಸಹೋದರಿಯರನ್ನೂ, ಅವರಲ್ಲಿರುವ ಎಲ್ಲರನ್ನೂ ಜೀವದಿಂದಿರಿಸಿ, ನಮ್ಮ ಪ್ರಾಣವನ್ನು ಸಾವಿನಿಂದ ತಪ್ಪಿಸಬೇಕು ಎಂದು ಯೆಹೋವ ದೇವರ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದಳು. 14 15 ಆಗ ಅವರು ಆಕೆಗೆ, “ನೀನು ಈ ನಮ್ಮ ಕಾರ್ಯವನ್ನು ಬಹಿರಂಗ ಮಾಡದೆ ಇದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿ ಇರುವೆವು. ಯೆಹೋವ ದೇವರು ನಮಗೆ ದೇಶವನ್ನು ಕೊಟ್ಟಾಗ, ಸತ್ಯದಿಂದಲೂ, ದಯೆಯಿಂದಲೂ ನಡೆದುಕೊಳ್ಳುವೆವು,” ಎಂದರು. ಆಗ ಆಕೆಯು ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿಬಿಟ್ಟಳು. ಏಕೆಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. 16 ಆಕೆಯು ಅವರಿಗೆ, “ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ, ಅವರು ತಿರುಗಿ ಬರುವವರೆಗೂ ಅಲ್ಲಿ ಮೂರು ದಿವಸ ಅಡಗಿಕೊಂಡಿದ್ದು, ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ,” ಎಂದಳು. 17 ಆಗ ಆ ಮನುಷ್ಯರು ಆಕೆಗೆ, “ನೀನು ನಮ್ಮಿಂದ ಮಾಡಿಸಿದ ಈ ನಿನ್ನ ಪ್ರಮಾಣದಿಂದ ಬಿಡುಗಡೆಯಾಗಿರುವೆವು. 18 ಇಗೋ, ನಾವು ಈ ದೇಶದಲ್ಲಿ ಪ್ರವೇಶಿಸುವಾಗ, ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ ಈ ಕಡುಗೆಂಪು ಹಗ್ಗವನ್ನು ಕಟ್ಟಿ, ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ, ನಿನ್ನ ಸಹೋದರರನ್ನೂ, ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು. 19 ಯಾವನಾದರೂ ನಿನ್ನ ಮನೆಯ ಬಾಗಿಲಿನಿಂದ ಹೊರಗೆ ಹೊರಟು ಬೀದಿಗೆ ಬಂದರೆ, ಅವನ ರಕ್ತವು ಅವನ ತಲೆಯ ಮೇಲೆ ಇರುವುದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಮಾಡಿದರೆ, ಅವನ ರಕ್ತ ಅಪರಾಧವು ನಮ್ಮ ತಲೆಯ ಮೇಲೆ ಇರುವುದು. 20 ಆದರೆ ನೀನು ಈ ನಮ್ಮ ಕಾರ್ಯವನ್ನು ಬಹಿರಂಗಪಡಿಸಿದರೆ, ನೀನು ನಮಗೆ ಇಟ್ಟ ಆಣೆಯಿಂದ ನಾವು ಬಿಡುಗಡೆಯಾಗಿರುವೆವು,” ಎಂದರು. 21 22 ಅದಕ್ಕೆ ಆಕೆಯು, “ನಿಮ್ಮ ಮಾತುಗಳ ಪ್ರಕಾರವೇ ಆಗಲಿ,” ಎಂದು ಹೇಳಿದಳು. ಅನಂತರ ಅವರನ್ನು ಕಳುಹಿಸಿಬಿಟ್ಟಳು. ಅವರು ಹೋದಾಗ, ಆ ಕಡುಗೆಂಪು ಹಗ್ಗವನ್ನು ಕಿಟಿಕಿಯಲ್ಲಿ ಕಟ್ಟಿದಳು. ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರುಗಿ ಬರುವವರೆಗೂ ಮೂರು ದಿನ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವರನ್ನು ಹುಡುಕಿ ಕಾಣದೆ ಹೋದರು. 23 ಆಗ ಅವರಿಬ್ಬರು ಹಿಂದಿರುಗಿ ಬೆಟ್ಟದಿಂದ ಇಳಿದು, ನದಿಯನ್ನು ದಾಟಿ, ನೂನನ ಮಗ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವರಿಗೆ ವಿವರಿಸಿದರು. 24 ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು.
ಒಟ್ಟು 24 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 24
×

Alert

×

Kannada Letters Keypad References