ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಯೆಹೋಶುವ
1. {#1ಯೊರ್ದನ್ ನದಿಯನ್ನು ದಾಟಿದ್ದು } [PS]ಯೆಹೋಶುವನು ಬೆಳಿಗ್ಗೆ ಎದ್ದು, ಅವನೂ, ಇಸ್ರಾಯೇಲರೆಲ್ಲರೂ ಶಿಟ್ಟೀಮಿನಿಂದ ಪ್ರಯಾಣಮಾಡಿ, ಯೊರ್ದನ್ ನದಿ ಬಳಿಗೆ ಬಂದು, ದಾಟುವುದಕ್ಕಿಂತ ಮುಂಚೆ ಅಲ್ಲಿ ಇಳಿದುಕೊಂಡರು.
2. ಮೂರು ದಿನಗಳಾದ ಮೇಲೆ ಅಧಿಕಾರಿಗಳು ಪಾಳೆಯದೊಳಗೆ ಹಾದು ಹೋಗಿ,
3. ಜನರಿಗೆ ಆಜ್ಞಾಪಿಸಿ, “ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷ ಹೊರುವುದನ್ನು ಕಾಣುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು.
4. ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ[* ಸುಮಾರು 900 ಮೀಟರ್ ] ಅಂತರ ಇರಬೇಕು. ಅದರ ಹತ್ತಿರ ಬರಬೇಡಿರಿ. ನೀವು ಹೋಗಬೇಕಾದ ಮಾರ್ಗ ನಿಮಗೆ ತಿಳಿಯುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇದುವರೆಗೆ ಪ್ರಯಾಣ ಮಾಡಿರುವುದಿಲ್ಲ,” ಎಂದರು. [PE]
5.
6. [PS]ಯೆಹೋಶುವನು ಜನರಿಗೆ, “ಇಂದು ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ, ನಾಳೆ ಯೆಹೋವ ದೇವರು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವರು,” ಎಂದನು. [PE]
7. [PS]ಆಗ ಯೆಹೋಶುವನು ಯಾಜಕರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋಗಿರಿ,” ಎಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದೆ ಹೊರಟರು. [PE][PS]ಯೆಹೋವ ದೇವರು ಯೆಹೋಶುವನಿಗೆ, “ನಾನು ಮೋಶೆಯ ಸಂಗಡ ಇದ್ದ ಪ್ರಕಾರ, ನಿನ್ನ ಸಂಗಡ ಇರುವುದನ್ನು ಇಸ್ರಾಯೇಲರೆಲ್ಲರೂ ತಿಳಿಯುವಂತೆ, ನಾನು ಈ ದಿನ ನಿನ್ನನ್ನು ಅವರ ಮುಂದೆ ಉನ್ನತಗೊಳಿಸುವೆನು.
8. ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನ್ ನದಿಯ ಅಂಚಿಗೆ ಬಂದಾಗ, ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು. [PE]
9. [PS]ಆಗ ಯೆಹೋಶುವನು ಇಸ್ರಾಯೇಲರಿಗೆ, “ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯಗಳನ್ನು ಕೇಳಿರಿ.
10. ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ.
11. ಇಗೋ, ಸಮಸ್ತ ಭೂಮಿಗೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನ್ ನದಿಯನ್ನು ದಾಟಿ ಹೋಗುವುದು.
12. ಆದ್ದರಿಂದ ಈಗ ಇಸ್ರಾಯೇಲ್ ಗೋತ್ರಗಳಲ್ಲಿ ಹನ್ನೆರಡು ಮಂದಿಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬರಾಗಿ ತೆಗೆದುಕೊಳ್ಳಿರಿ.
13. ಸಮಸ್ತ ಭೂಮಿಗೂ ಒಡೆಯರಾಗಿರುವ ಯೆಹೋವ ದೇವರ ಮಂಜೂಷವನ್ನು ಹೊರುವ ಯಾಜಕರ ಪಾದಗಳು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ, ಮೇಲಿನಿಂದ ಹರಿದು ಬರುವ ನೀರು ಮುಂದೆ ಹರಿಯದೆ ಅಲ್ಲಿಯೇ ರಾಶಿಯಾಗಿ ನಿಲ್ಲುವುದು,” ಎಂದು ಹೇಳಿದನು. [PE]
14. [PS]ಆದ್ದರಿಂದ ಜನರು ಯೊರ್ದನ್ ನದಿಯನ್ನು ದಾಟಲು ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಜನರಿಗೆ ಮುಂದಾಗಿ ಹೊತ್ತುಕೊಂಡು ಹೋದರು.
15. ಎಂದಿನಂತೆ ಯೊರ್ದನ್ ನದಿಯು ಸುಗ್ಗಿಕಾಲದಲ್ಲಿ ದಡ ತುಂಬಿ ಹರಿಯುತ್ತಾ ಇತ್ತು. ಮಂಜೂಷವನ್ನು ಹೊರುವ ಯಾಜಕರ ಕಾಲುಗಳು ನೀರಿನ ಅಂಚಿನಲ್ಲಿ ಇಡುತ್ತಲೇ,
16. ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ[† ಅಥವಾ ಮೃತ ಸಮುದ್ರ ] ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.
17. ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿಯ ಮಧ್ಯದಲ್ಲಿ ಒಣನೆಲದಲ್ಲಿ ದೃಢವಾಗಿ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲರೆಲ್ಲರೂ ಒಣನೆಲದ ಮೇಲೆ ನಡೆದರು. ಹೀಗೆ ಇಡೀ ರಾಷ್ಟ್ರವು ಯೊರ್ದನ್ ನದಿ ಆಚೆ ಸೇರಿತು. [PE]
ಒಟ್ಟು 24 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 24
ಯೊರ್ದನ್ ನದಿಯನ್ನು ದಾಟಿದ್ದು 1 ಯೆಹೋಶುವನು ಬೆಳಿಗ್ಗೆ ಎದ್ದು, ಅವನೂ, ಇಸ್ರಾಯೇಲರೆಲ್ಲರೂ ಶಿಟ್ಟೀಮಿನಿಂದ ಪ್ರಯಾಣಮಾಡಿ, ಯೊರ್ದನ್ ನದಿ ಬಳಿಗೆ ಬಂದು, ದಾಟುವುದಕ್ಕಿಂತ ಮುಂಚೆ ಅಲ್ಲಿ ಇಳಿದುಕೊಂಡರು. 2 ಮೂರು ದಿನಗಳಾದ ಮೇಲೆ ಅಧಿಕಾರಿಗಳು ಪಾಳೆಯದೊಳಗೆ ಹಾದು ಹೋಗಿ, 3 ಜನರಿಗೆ ಆಜ್ಞಾಪಿಸಿ, “ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷ ಹೊರುವುದನ್ನು ಕಾಣುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು. 4 ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ* ಸುಮಾರು 900 ಮೀಟರ್ ಅಂತರ ಇರಬೇಕು. ಅದರ ಹತ್ತಿರ ಬರಬೇಡಿರಿ. ನೀವು ಹೋಗಬೇಕಾದ ಮಾರ್ಗ ನಿಮಗೆ ತಿಳಿಯುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇದುವರೆಗೆ ಪ್ರಯಾಣ ಮಾಡಿರುವುದಿಲ್ಲ,” ಎಂದರು. 5 6 ಯೆಹೋಶುವನು ಜನರಿಗೆ, “ಇಂದು ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ, ನಾಳೆ ಯೆಹೋವ ದೇವರು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವರು,” ಎಂದನು. 7 ಆಗ ಯೆಹೋಶುವನು ಯಾಜಕರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋಗಿರಿ,” ಎಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದೆ ಹೊರಟರು. ಯೆಹೋವ ದೇವರು ಯೆಹೋಶುವನಿಗೆ, “ನಾನು ಮೋಶೆಯ ಸಂಗಡ ಇದ್ದ ಪ್ರಕಾರ, ನಿನ್ನ ಸಂಗಡ ಇರುವುದನ್ನು ಇಸ್ರಾಯೇಲರೆಲ್ಲರೂ ತಿಳಿಯುವಂತೆ, ನಾನು ಈ ದಿನ ನಿನ್ನನ್ನು ಅವರ ಮುಂದೆ ಉನ್ನತಗೊಳಿಸುವೆನು. 8 ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನ್ ನದಿಯ ಅಂಚಿಗೆ ಬಂದಾಗ, ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು. 9 ಆಗ ಯೆಹೋಶುವನು ಇಸ್ರಾಯೇಲರಿಗೆ, “ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯಗಳನ್ನು ಕೇಳಿರಿ. 10 ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ. 11 ಇಗೋ, ಸಮಸ್ತ ಭೂಮಿಗೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನ್ ನದಿಯನ್ನು ದಾಟಿ ಹೋಗುವುದು. 12 ಆದ್ದರಿಂದ ಈಗ ಇಸ್ರಾಯೇಲ್ ಗೋತ್ರಗಳಲ್ಲಿ ಹನ್ನೆರಡು ಮಂದಿಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬರಾಗಿ ತೆಗೆದುಕೊಳ್ಳಿರಿ. 13 ಸಮಸ್ತ ಭೂಮಿಗೂ ಒಡೆಯರಾಗಿರುವ ಯೆಹೋವ ದೇವರ ಮಂಜೂಷವನ್ನು ಹೊರುವ ಯಾಜಕರ ಪಾದಗಳು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ, ಮೇಲಿನಿಂದ ಹರಿದು ಬರುವ ನೀರು ಮುಂದೆ ಹರಿಯದೆ ಅಲ್ಲಿಯೇ ರಾಶಿಯಾಗಿ ನಿಲ್ಲುವುದು,” ಎಂದು ಹೇಳಿದನು. 14 ಆದ್ದರಿಂದ ಜನರು ಯೊರ್ದನ್ ನದಿಯನ್ನು ದಾಟಲು ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಜನರಿಗೆ ಮುಂದಾಗಿ ಹೊತ್ತುಕೊಂಡು ಹೋದರು. 15 ಎಂದಿನಂತೆ ಯೊರ್ದನ್ ನದಿಯು ಸುಗ್ಗಿಕಾಲದಲ್ಲಿ ದಡ ತುಂಬಿ ಹರಿಯುತ್ತಾ ಇತ್ತು. ಮಂಜೂಷವನ್ನು ಹೊರುವ ಯಾಜಕರ ಕಾಲುಗಳು ನೀರಿನ ಅಂಚಿನಲ್ಲಿ ಇಡುತ್ತಲೇ, 16 ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಅಥವಾ ಮೃತ ಸಮುದ್ರ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು. 17 ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿಯ ಮಧ್ಯದಲ್ಲಿ ಒಣನೆಲದಲ್ಲಿ ದೃಢವಾಗಿ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲರೆಲ್ಲರೂ ಒಣನೆಲದ ಮೇಲೆ ನಡೆದರು. ಹೀಗೆ ಇಡೀ ರಾಷ್ಟ್ರವು ಯೊರ್ದನ್ ನದಿ ಆಚೆ ಸೇರಿತು.
ಒಟ್ಟು 24 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 24
×

Alert

×

Kannada Letters Keypad References