1. {#1ಸಂಸೋನ ಮತ್ತು ದೆಲೀಲ } [PS]ಸಂಸೋನನು ಗಾಜಕ್ಕೆ ಹೋಗಿ, ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು, ಅವಳ ಬಳಿಗೆ ಹೋದನು.
2. ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ತಿಳಿದಿದ್ದರಿಂದ, ಅವರು ಅವನನ್ನು ಸುತ್ತಿಕೊಂಡು, ಪಟ್ಟಣದ ಬಾಗಿಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು, ರಾತ್ರಿಯೆಲ್ಲಾ ಕಾದುಕೊಂಡಿದ್ದರು. ಅವರು, “ಹೊತ್ತಾರೆ ಬೆಳಕಾದಾಗ ಅವನನ್ನು ಕೊಂದು ಹಾಕುವೆವು,” ಎಂದರು. [PE]
3.
4. [PS]ಸಂಸೋನನು ಅರ್ಧ ರಾತ್ರಿಯವರೆಗೆ ಮಲಗಿದ್ದು, ಮಧ್ಯರಾತ್ರಿಯಲ್ಲಿ ಎದ್ದು, ಪಟ್ಟಣದ ಬಾಗಿಲ ಕದಗಳನ್ನೂ, ಅದರ ಎರಡು ತೋಳುಗಳನ್ನೂ ಹಿಡಿದು, ಅಗುಳಿ ಸಹ ಕಿತ್ತು, ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ, ಹೆಬ್ರೋನಿಗೆ ಎದುರಾಗಿರುವ ಪರ್ವತದ ಶಿಖರದ ಮೇಲಕ್ಕೆ ಹೋದನು. [PE][PS]ಇದರ ತರುವಾಯ, ಸೊರೇಕ್ ತಗ್ಗಿನಲ್ಲಿದ್ದ ದೆಲೀಲ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು.
5. ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ, “ನೀನು ಅವನನ್ನು ಮರಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು, ಕಟ್ಟಿ, ಬಾಧಿಸಬಹುದೆಂದೂ ಅವನ ದೊಡ್ಡ ಶಕ್ತಿ ಯಾವುದರಲ್ಲಿ ಇದೆ ಎಂದೂ ನೋಡು. ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು[* ಸುಮಾರು 13 ಕಿಲೋಗ್ರಾಂ ಬೆಳ್ಳಿ ] ಕೊಡುವೆವು,” ಎಂದರು. [PE]
6.
7. [PS]ಆಗ ದೆಲೀಲಳು ಸಂಸೋನನಿಗೆ, “ನಿನ್ನ ದೊಡ್ಡ ಶಕ್ತಿ ಯಾವುದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವುದಕ್ಕೆ ಹೇಗೆ ಕಟ್ಟಬಹುದೆಂದೂ ನನಗೆ ದಯಮಾಡಿ ತಿಳಿಸು,” ಎಂದಳು. [PE]
8. [PS]ಸಂಸೋನನು ಅವಳಿಗೆ, “ಅವರು ನನ್ನನ್ನು ಒಣಗದೆ ಇರುವ ಹಸುರಾದ ಏಳು ನಾರಿನ ಬರಲುಗಳಿಂದ ಕಟ್ಟಿದರೆ, ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದನು. [PE][PS]ಆಗ ಫಿಲಿಷ್ಟಿಯರ ಅಧಿಪತಿಗಳು ಒಣಗದೆ ಇರುವ ಹಸಿಯಾದ ಏಳು ನಾರಿನ ಬರಲುಗಳನ್ನು ಅವಳಿಗೆ ಕೊಟ್ಟರು. ಅವಳು ಅವನನ್ನು ಅವುಗಳಿಂದ ಬಂಧಿಸಿದಳು.
9. ಹೊಂಚುಗಾರರು ಅವಳಿಗೋಸ್ಕರ ಕೊಠಡಿಯಲ್ಲಿದ್ದರು. ಅವಳು ಅವನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ,” ಎಂದಳು. ಆಗ ಅವನು ಬೆಂಕಿ ತಗುಲಿದ ಸೆಣಬಿನ ದಾರ ಹರಿದು ಹೋಗುವ ಹಾಗೆಯೇ ನಾರಿನ ಬರಲುಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿಯ ರಹಸ್ಯ ತಿಳಿಯದೆ ಹೋಯಿತು. [PE]
10.
11. [PS]ಆಗ ದೆಲೀಲಳು ಸಂಸೋನನಿಗೆ, “ನೀನು ನನ್ನನ್ನು ವಂಚನೆಮಾಡಿ, ನನಗೆ ಸುಳ್ಳು ಹೇಳಿದೆ. ಈಗ ನಿನ್ನನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ನನಗೆ ದಯಮಾಡಿ ತಿಳಿಸು,” ಎಂದಳು. [PE]
12. [PS]ಸಂಸೋನನು ಅವಳಿಗೆ, “ಯಾವ ಕೆಲಸಕ್ಕೆ ಬಳಸದೆ ಇರುವ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ, ನಾನು ಬಲಹೀನನಾಗಿ, ಬೇರೆ ಮನುಷ್ಯನಂತಾಗುವೆನು,” ಎಂದನು. [PE]
13. [PS]ಆಗ ದೆಲೀಲಳು ಹೊಸ ಹಗ್ಗಗಳನ್ನು ತೆಗೆದುಕೊಂಡು, ಅವುಗಳಿಂದ ಅವನನ್ನು ಕಟ್ಟಿ, ಅವನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆಯೇ ಹರಿದುಬಿಟ್ಟನು. [PE][PS]ದೆಲೀಲಳು ಸಂಸೋನನಿಗೆ, “ಈವರೆಗೂ ನನ್ನನ್ನು ವಂಚನೆಮಾಡಿ, ನನಗೆ ಸುಳ್ಳುಗಳನ್ನು ಹೇಳಿದೆ. ನಿನ್ನನ್ನು ಯಾವುದರಿಂದ ಕಟ್ಟಬಹುದೋ ತಿಳಿಸು,” ಎಂದಳು. [PE][PS]ಅವನು ಅವಳಿಗೆ, “ನೀನು ನನ್ನ ತಲೆಯ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದರೆ ಆಗುವುದು,” ಎಂದನು.
14. ಸಂಸೋನನು ಮಲಗಿರುವಾಗ ದೆಲೀಲಳು ಅವನ ತಲೆಗೂದಲಿನ ಏಳು ಜಡೆಗಳನ್ನು ಆಗ ಅವುಗಳನ್ನು ಗೂಟದಿಂದ ಭದ್ರಮಾಡಿ, [PE]
15. [PS]ಅವನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಎದ್ದು, ಮಗ್ಗದ ಗೂಟವನ್ನೂ ಮಗ್ಗವನ್ನೂ ತೆಗೆದುಕೊಂಡು ಹೋದನು. [PE][PS]ಅವಳು ಅವನಿಗೆ, “ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ, ನಿನ್ನನ್ನು ಪ್ರೀತಿಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆ ಮಾಡಿದೆ; ನಿನ್ನ ದೊಡ್ಡ ಶಕ್ತಿಯ ರಹಸ್ಯ ಯಾವುದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ,” ಎಂದಳು.
16. ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ, ತೊಂದರೆ ಪಡಿಸಿದ್ದರಿಂದ, ಅವನ ಪ್ರಾಣವು ಸಾಯುವಷ್ಟು ವ್ಯಸನಪಟ್ಟಿತು. [PE]
17.
18. [PS]ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ, ಅವಳಿಗೆ, “ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ಏಕೆಂದರೆ ನಾನು ನನ್ನ ತಾಯಿಯ ಗರ್ಭದಲ್ಲಿಂದ ದೇವರಿಗೆ ಪ್ರತಿಷ್ಠಿತನಾದ ನಾಜೀರನಾಗಿದ್ದೇನೆ. ನನ್ನ ತಲೆಯನ್ನು ಬೋಳಿಸಿದರೆ, ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವುದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು,” ಎಂದನು. [PE][PS]ಆಗ ದೆಲೀಲಳು, ಅವನು ತನಗೆ ತನ್ನ ಹೃದಯಲ್ಲಿರುವುದನ್ನೆಲ್ಲಾ ತಿಳಿಸಿದ್ದಾನೆಂದು ಕಂಡು, ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ, “ನೀವು ಈ ಸಾರಿ ಬನ್ನಿರಿ. ಏಕೆಂದರೆ ಅವನು ತನ್ನ ಹೃದಯದಲ್ಲಿರುವುದನ್ನೆಲ್ಲಾ ನನಗೆ ತಿಳಿಸಿದನು,” ಎಂದು ಕರೆಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಅವಳ ಬಳಿಗೆ ಹಣವನ್ನು ತಮ್ಮ ಕೈಯಲ್ಲಿ ತೆಗೆದುಕೊಂಡು ಬಂದರು.
19. ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆ ಹೋಗುವಂತೆ ಮಾಡಿ, ಒಬ್ಬನನ್ನು ಕರೆದು, ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ, ಅವನನ್ನು ದುರ್ಬಲಪಡಿಸಿದಳು. ಆಗ ಅವನ ಶಕ್ತಿ ಅವನನ್ನು ಬಿಟ್ಟುಹೋಯಿತು. [PE]
20.
21. [PS]ಅವಳು, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. [PE][PS]ಅವನು ತನ್ನ ನಿದ್ರೆಯಿಂದ ಎಚ್ಚತ್ತು, “ಮೊದಲಿನಂತೆಯೇ ನಾನು ಹೊರಗೆ ಹೋಗಿ ಬಿಡುಗಡೆಯಾಗುವೆನು,” ಎಂದುಕೊಂಡನು. ಆದರೆ ಯೆಹೋವ ದೇವರು ತನ್ನನ್ನು ಬಿಟ್ಟು ಹೋಗಿದ್ದಾರೆಂದು ಅವನು ಅರಿಯಲಿಲ್ಲ. [PE][PS]ಆದರೆ ಫಿಲಿಷ್ಟಿಯರು ಅವನನ್ನು ಹಿಡಿದು, ಅವನ ಕಣ್ಣುಗಳನ್ನು ಕಿತ್ತು, ಅವನನ್ನು ಗಾಜಕ್ಕೆ ಒಯ್ದು ಎರಡು ಕಂಚಿನ ಸಂಕೋಲೆಗಳನ್ನು ಹಾಕಿದರು. ಸೆರೆಮನೆಯಲ್ಲಿ ಅವನನ್ನು ಬೀಸುವುದಕ್ಕೆ ಹಚ್ಚಿದರು.
22. ಆದರೆ ಕ್ಷೌರ ಮಾಡಿದ ತರುವಾಯ ಅವನ ತಲೆಯ ಕೂದಲು ತಿರುಗಿ ಬೆಳೆಯಲಾರಂಭಿಸಿತು. [PE]
23. {#1ಸಂಸೋನನ ಮರಣ }
24. [PS]ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವುದಕ್ಕೂ ಸಂತೋಷಪಡುವುದಕ್ಕೂ ಕೂಡಿಬಂದರು. “ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು,” ಎಂದು ಅವರು ಹೇಳಿಕೊಂಡರು. [PE][PS]ಜನರು ಸಂಸೋನನನ್ನು ನೋಡಿದಾಗ ತಮ್ಮ ದೇವರನ್ನು ಹೊಗಳಿದರು. ಏಕೆಂದರೆ, [PE][QS]“ನಮ್ಮ ದೇಶವನ್ನು ಹಾಳು ಮಾಡಿ, [QE][QS2]ನಮ್ಮಲ್ಲಿ ಅನೇಕರನ್ನು ಕೊಂದ [QE][QS]ನಮ್ಮ ವೈರಿಯನ್ನು [QE][QS2]ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು,” [QE][MS]ಎಂದು ಅವರು ಹೇಳಿಕೊಂಡರು. [ME]
25. [PS]ಅಲ್ಲಿ ಅವರು ಸಂಭ್ರಮವಾಗಿರುವಾಗ, “ನಮ್ಮ ಮುಂದೆ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿರಿ,” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರೆತಂದಾಗ, ಅವನು ಅವರ ಮುಂದೆ ವಿನೋದ ಮಾಡಬೇಕಾಯಿತು. [PE][PS]ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.
26. ಆದರೆ ಸಂಸೋನನು ತನ್ನ ಕೈಹಿಡಿದ ಹುಡುಗನಿಗೆ, “ಈ ಕಟ್ಟಡದ ಆಧಾರ ಸ್ತಂಭಗಳನ್ನು ನಾನು ಸ್ಪರ್ಶಿಸಿ, ಅವುಗಳ ಮೇಲೆ ಆತುಕೊಳ್ಳುವ ಹಾಗೆ ನನ್ನನ್ನು ಬಿಡು,” ಎಂದನು.
27. ಆ ಮನೆಯು ಸ್ತ್ರೀಪುರುಷರಿಂದ ತುಂಬಿತ್ತು. ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡುವುದನ್ನು ಕಾಣುವುದಕ್ಕೆ ಮಾಳಿಗೆಯ ಮೇಲೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಸ್ತ್ರೀ ಪುರುಷರಿದ್ದರು.
28. ಆಗ ಸಂಸೋನನು ಯೆಹೋವ ದೇವರನ್ನು ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನಾನು ನನ್ನ ಎರಡು ಕಣ್ಣುಗಳಿಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸಿ ದೇವರೇ,”
29. ಎಂದು ಹೇಳಿ ಸಂಸೋನನು ಆ ಕಟ್ಟಡ ನಿಲ್ಲುವುದಕ್ಕೆ ಆಧಾರವಾದ ಎರಡು ನಡುವಿನ ಸ್ತಂಭಗಳನ್ನು ಒಂದನ್ನು ತನ್ನ ಬಲಗೈಯಿಂದ ಮತ್ತೊಂದನ್ನು ತನ್ನ ಎಡಗೈಯಿಂದ ಹಿಡಿದುಕೊಂಡು,
30. “ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ,” ಎಂದು ಹೇಳಿ ತನ್ನ ಶಕ್ತಿಯಿದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ, ಅದರಲ್ಲಿದ್ದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಸಂಸೋನನು ಬದುಕಿದ್ದಾಗ ಕೊಂದ ಜನರಿಗಿಂತಲೂ ಮರಣಹೊಂದುವಾಗ ಕೊಂದ ಜನರ ಸಂಖ್ಯೆಯೇ ಹೆಚ್ಚಾಗಿತ್ತು. [PE]
31. [PS]ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತೆಗೆದುಕೊಂಡು ಬಂದು, ಚೊರ್ಗಕ್ಕೂ, ಎಷ್ಟಾವೋಲಿಗೂ ನಡುವೆ ಅವನ ತಂದೆ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರ್ಷ ನ್ಯಾಯತೀರಿಸಿದನು. [PE]