1. {#1ದೆಬೋರಳ ಗೀತೆ }
2. [PS]ಆ ದಿವಸದಲ್ಲಿ ದೆಬೋರಳೂ, ಅಬೀನೋವಮನ ಮಗ ಬಾರಾಕನೂ ಹಾಡಿದ್ದೇನೆಂದರೆ: [PE][QS]“ಇಸ್ರಾಯೇಲಿನ ನಾಯಕರು ಮುನ್ನಡೆದಾಗ, [QE][QS2]ಜನರು ಸ್ವಇಚ್ಛೆಯಿಂದ ಅವರನ್ನು ಹಿಂಬಾಲಿಸಿದಾಗ [QE][QS2]ಯೆಹೋವ ದೇವರನ್ನು ಸ್ತುತಿಸಿರಿ! [QE][PBR]
3. [QS]“ಅರಸರೇ ಕೇಳಿರಿ, ಪ್ರಭುಗಳೇ ಕೇಳಿರಿ, ಕಿವಿಗೊಡಿರಿ; [QE][QS2]ನಾನು, ನಾನೇ ಯೆಹೋವ ದೇವರಿಗೆ ಹಾಡುವೆನು. [QE][QS2]ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತುತಿಗೀತೆ ಹಾಡುವೆನು. [QE][PBR] [PBR]
4. [QS]“ಯೆಹೋವ ದೇವರೇ, ನೀವು ಸೇಯೀರಿನಿಂದ ಹೊರಟು, [QE][QS2]ಎದೋಮಿನ ಹೊಲದಿಂದ ಮುನ್ನಡೆಯುವಾಗ, [QE][QS]ಭೂಮಿ ನಡುಗಿತು. ಆಕಾಶವು ಸಹ ಸುರಿಸಿತು. [QE][QS2]ಮೇಘಗಳು ಸಹ ನೀರು ಸುರಿಸಿದವು. [QE]
5. [QS]ಯೆಹೋವ ದೇವರ ಮುಂದೆ ಬೆಟ್ಟಗಳು ಕಂಪಿಸಿದವು. [QE][QS2]ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮುಂದೆ ಸೀನಾಯಿ ಪರ್ವತವು ಸಹ ಕಂಪಿಸಿತು. [QE][PBR]
6. [QS]“ಅನಾತನ ಮಗ ಶಮ್ಗರನ ಕಾಲದಲ್ಲಿಯೂ, [QE][QS2]ಯಾಯೇಲಳ ದಿವಸಗಳಲ್ಲಿಯೂ ಹೆದ್ದಾರಿಯ ಸಂಚಾರ ನಿಂತುಹೋಯಿತು. [QE][QS2]ಪ್ರಯಾಣಿಕರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು. [QE]
7. [QS]ದೆಬೋರಳಾದ ನಾನು ಏಳುವವರೆಗೂ, [QE][QS2]ಇಸ್ರಾಯೇಲಿನಲ್ಲಿ ತಾಯಿಯಾಗಿ ನಾನು ಏಳುವವರೆಗೂ [QE][QS2]ಇಸ್ರಾಯೇಲಿನ ಹಳ್ಳಿಗಳ ನಿವಾಸಿಗಳು ಯುದ್ಧಮಾಡಲಿಲ್ಲ. [QE]
8. [QS]ಅವರು ಹೊಸ ದೇವರುಗಳನ್ನು ಆಯ್ದುಕೊಂಡರು. [QE][QS2]ಆಗ ಯುದ್ಧವು ಬಾಗಿಲುಗಳಲ್ಲಿ ಆಯಿತು. [QE][QS]ಇಸ್ರಾಯೇಲಿನಲ್ಲಿ ನಲವತ್ತು ಸಾವಿರ ಸೈನಿಕರಲ್ಲಿ ಗುರಾಣಿಯೂ, [QE][QS2]ಕಠಾರಿಯೂ ಇರಲಿಲ್ಲ. [QE]
9. [QS]ನಾನು ಇಸ್ರಾಯೇಲ್ ನಾಯಕರೊಂದಿಗೂ [QE][QS2]ಸ್ವೇಚ್ಛೆಯಿಂದ ಬಂದ ಜನರೊಂದಿಗೆ ನನ್ನ ಹೃದಯವಿದೆ. [QE][QS2]ಯೆಹೋವ ದೇವರನ್ನು ಸ್ತುತಿಸಿರಿ. [QE][PBR]
10. [QS]“ಬಿಳಿ ಕತ್ತೆಗಳ ಮೇಲೆ ಸವಾರಿ ಮಾಡುವವರೇ, [QE][QS2]ರತ್ನಗಂಬಳಿಗಳ ಮೇಲೆ ಕುಳಿತಿರುವವರೇ, [QE][QS2]ಮಾರ್ಗದಲ್ಲಿ ನಡೆಯುವವರೇ, ಗಾನಮಾಡಿರಿ. [QE]
11. [QS]ನೀರು ಸೇದುವ ಸ್ಥಳಗಳ ಹತ್ತಿರ ಗಾಯಕರ ಶಬ್ದದಿಂದ [QE][QS2]ಯೆಹೋವ ದೇವರ ನೀತಿಸಾಧನೆಗಳನ್ನು ವರ್ಣಿಸುತ್ತಾರೆ. [QE][QS]ಇಸ್ರಾಯೇಲಿನಲ್ಲಿ ಅವರ ಹಳ್ಳಿಗಳ ನಿವಾಸಿಗಳಿಗೆ [QE][QS2]ಮಾಡಿದ ಮಹತ್ಕಾರ್ಯಗಳನ್ನು ತಿರುಗಿ ಪ್ರಕಟಿಸುವರು. [QE][PBR] [QS]“ಆಗ ಯೆಹೋವ ದೇವರ ಜನರು [QE][QS2]ಪಟ್ಟಣದ ಬಾಗಿಲುಗಳಿಗೆ ಇಳಿದು ಬರುವರು. [QE]
12. [QS]‘ಎಚ್ಚರವಾಗು, ಎಚ್ಚರವಾಗು, ದೆಬೋರಳೇ, [QE][QS2]ಎಚ್ಚರವಾಗು, ಎಚ್ಚರವಾಗಿ ಹಾಡನ್ನು ಹಾಡು; [QE][QS]ಬಾರಾಕನೇ, ಏಳು; [QE][QS2]ಅಬೀನೋವಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡೆಸು.’ [QE][PBR]
13. [QS]“ಆಗ ಉಳಿದವನನ್ನು ಅವರು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದರು. [QE][QS2]ಯೆಹೋವ ದೇವರ ಜನರು ನನ್ನ ಸಹಾಯಕ್ಕಾಗಿ ಬಂದು, [QE][QS2]ಪರಾಕ್ರಮಶಾಲಿಗಳ ವಿರುದ್ಧ ಯುದ್ಧಮಾಡಿದರು. [QE]
14. [QS]ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯೀಮಿನಿಂದ ಉಂಟಾಯಿತು. [QE][QS2]ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾಮೀನನು [QE][QS]ಮಾಕೀರನಲ್ಲಿಂದ ಅಧಿಪತಿಗಳೂ, [QE][QS2]ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವವರೂ ಬಂದರು. [QE]
15. [QS]ಇಸ್ಸಾಕಾರನ ಪ್ರಧಾನರು ದೆಬೋರಳ ಸಂಗಡ ಇದ್ದರು. [QE][QS2]ಹೌದು, ಇಸ್ಸಾಕಾರನ ಗೋತ್ರದವರು ಬಾರಾಕನ ಹಿಂದೆ ಅವನ ಕಟ್ಟಳೆಯ ಪ್ರಕಾರ, [QE][QS2]ಕಾಲುನಡಿಗೆಯಾಗಿ ಕಣಿವೆಯಲ್ಲಿ ನಡೆದರು. [QE][QS]ರೂಬೇನನ ಕಡೆಯವರು ತಮ್ಮ ಹೃದಯಗಳನ್ನು [QE][QS2]ಮಹಾ ಪರಿಶೋಧನೆ ಮಾಡಿಕೊಂಡರು. [QE]
16. [QS]ಮಂದೆಗಳ ಕೂಗನ್ನು ಕೇಳಿ, [QE][QS2]ನೀನು ಕುರಿ ಹಟ್ಟಿಗಳ ಬಳಿಯಲ್ಲಿ ಇದ್ದದ್ದೇನು? [QE][QS]ರೂಬೇನ್ಯರ ನಡುವೆ [QE][QS2]ಹೃದಯದ ಮಹಾ ಪರಿಶೋಧನೆಗಳು ಇದ್ದವು. [QE]
17. [QS]ಗಿಲ್ಯಾದನು ಯೊರ್ದನ್ ನದಿಯ ಆಚೆ ವಾಸಿಸಿದನು. [QE][QS2]ದಾನನು ಹಡಗುಗಳಲ್ಲಿ ನಿಂತದ್ದೇನು? [QE][QS]ಆಶೇರನು ಸಮುದ್ರದ ದಡದಲ್ಲಿದ್ದು, [QE][QS2]ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು. [QE]
18. [QS]ಜೆಬುಲೂನ್ಯರು ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಕೊಡುವ ಜನರಾಗಿದ್ದರು. [QE][QS2]ನಫ್ತಾಲಿಯೂ ಸಹ ಹೊಲದ ಎತ್ತರವಾದ ಸ್ಥಳಗಳಲ್ಲಿ [QE][QS2]ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಕೊಡುವ ಜನರಾಗಿದ್ದರು. [QE][PBR]
19. [QS]“ಅರಸರು ಬಂದು ಯುದ್ಧಮಾಡಿದರು; [QE][QS2]ಆಗ ಕಾನಾನ್ಯರ ಅರಸರು [QE][QS]ಮೆಗಿದ್ದೋನಿನ ಜಲ ಸಮೀಪವಾದ ತಾನಕದಲ್ಲಿ ಯುದ್ಧಮಾಡಿದರು. [QE][QS2]ಅವರು ಬೆಳ್ಳಿ ದ್ರವ್ಯಗಳನ್ನು ತೆಗೆದುಕೊಳ್ಳಲಿಲ್ಲ. [QE]
20. [QS]ಆಕಾಶದಲ್ಲಿ ಇರುವವುಗಳು ಯುದ್ಧ ಮಾಡಿದವು. [QE][QS2]ನಕ್ಷತ್ರಗಳು ತಮ್ಮ ಓಟಗಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧ ಮಾಡಿದವು. [QE]
21. [QS]ಕೀಷೋನ್ ನದಿಯು, [QE][QS2]ಆ ಹಳೆಯದಾದ ಕೀಷೋನ್ ನದಿಯು ಅವರನ್ನು ಬಡಿದುಕೊಂಡು ಹೋಯಿತು. [QE][QS2]ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದೆ. [QE]
22. [QS]ಆಗ ನೆಲವನ್ನು ಘಟ್ಟಿಸಿ ಓಡುವ ಅವನ ಬಲವಾದ ಕುದುರೆಗಳ [QE][QS2]ಮೆಟ್ಟಿನಿಂದ ಗೊರಸುಗಳು ಸೀಳಿಹೋದವು. [QE]
23. [QS]ಯೆಹೋವ ದೇವರ ದೂತನು ಹೀಗೆ ಹೇಳುತ್ತಾನೆ, [QE][QS2]‘ನೀವು ಮೆರೋಜನ್ನು ಶಪಿಸಿರಿ. [QE][QS2]ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ, [QE][QS]ಏಕೆಂದರೆ ಅವರು ಯೆಹೋವ ದೇವರ ಸಹಾಯಕ್ಕೂ, [QE][QS2]ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಯೆಹೋವ ದೇವರ ಸಹಾಯಕ್ಕೂ ಬಾರದೆ ಹೋದರು.’ [QE][PBR] [PBR]
24. [QS]“ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳು ಆಶೀರ್ವಾದ ಹೊಂದಿದವಳು. [QE][QS2]ಗುಡಾರದಲ್ಲಿ ವಾಸಿಸುವ [QE][QS2]ಹೌದು, ಅವಳೇ ಸ್ತ್ರೀಯರೊಳಗೆ ಅಧಿಕ ಆಶೀರ್ವಾದ ಹೊಂದಿದವಳು. [QE]
25. [QS]ಅವನು ನೀರನ್ನು ಕೇಳಿದನು. ಅವಳು ಹಾಲು ಕೊಟ್ಟಳು; [QE][QS2]ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು. [QE]
26. [QS]ತನ್ನ ಕೈಯಲ್ಲಿ ಮೊಳೆಯನ್ನೂ, [QE][QS2]ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆಯನ್ನೂ ತೆಗೆದುಕೊಂಡಳು. [QE][QS]ಸುತ್ತಿಗೆಯಿಂದ ಸೀಸೆರನನ್ನು ಅವಳು ಹೊಡೆದಳು. ಅವಳು ಅವನ ತಲೆಯನ್ನು ತಿವಿದು ಹೊಡೆದಳು. [QE][QS2]ಅವನ ತಲೆಯನ್ನು ಹೊಡೆದು ಬಿಟ್ಟಳು. [QE]
27. [QS]ಅವಳ ಕಾಲುಗಳ ಹತ್ತಿರ ಮುದುರಿ ಬಿದ್ದು ಮಲಗಿದನು. [QE][QS2]ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು. [QE][QS]ಎಲ್ಲಿ ಬಾಗಿ ಬಿದ್ದನೋ, [QE][QS2]ಅಲ್ಲಿಯೇ ಬಿದ್ದು ಮರಣಹೊಂದಿದನು. [QE][PBR]
28. [QS]“ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, [QE][QS2]ಕಿಂಡಿಯಿಂದ ಕೂಗಿದಳು, [QE][QS]‘ಅವನ ರಥವು ಬರುವುದಕ್ಕೆ ಇಷ್ಟು ತಡವಾದದ್ದೇನು? [QE][QS2]ಅವನ ರಥಗಳ ಗಾಲಿಗಳು ಹಿಂದುಳಿದಿರುವುದೇನು?’ [QE]
29. [QS]ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಉತ್ತರಕೊಟ್ಟರು. [QE][QS2]ಅವಳೇ ತನಗೆ ಬದಲು ಮಾತು ಕೇಳಿಕೊಂಡಳು: [QE]
30. [QS]‘ಅವರು ಓಡಲಿಲ್ಲವೋ? ಕೊಳ್ಳೆ ಹಂಚಿಕೊಳ್ಳಲಿಲ್ಲವೋ? [QE][QS2]ಒಬ್ಬೊಬ್ಬ ಸೈನಿಕನಿಗೆ ಒಂದೆರಡು ದಾಸಿಯರು [QE][QS]ಸೀಸೆರನಿಗಾದರೋ ನಾನಾ ವರ್ಣವುಳ್ಳ ಬಟ್ಟೆಗಳು. [QE][QS2]ನಾನಾ ವರ್ಣವುಳ್ಳ ವಿಚಿತ್ರವಾಗಿ ಕಸೂತಿಹಾಕಿದ ಬಟ್ಟೆಗಳು, [QE][QS]ವಿಚಿತ್ರವಾಗಿ ಕಸೂತಿಹಾಕಿದ ಒಂದೆರಡು ಬಟ್ಟೆಗಳೂ [QE][QS2]ಕೊಳ್ಳೆ ಹಿಡಿಯುವವರಿಗೆ ತಕ್ಕಂಥ ಕಂಠಮಾಲೆಗಳೂ ಸಿಕ್ಕಲಿಲ್ಲವೋ?’ [QE][PBR] [PBR]
31. [QS]“ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ. [QE][QS2]ಆದರೆ ಅವರನ್ನು ಪ್ರೀತಿ ಮಾಡುವವರು [QE][QS2]ಪರಾಕ್ರಮದಿಂದ ಹೊರಡುವ ಸೂರ್ಯನ ಹಾಗೆಯೇ ಇರಲಿ.” [QE][PS]ಅನಂತರ ದೇಶವು ನಲವತ್ತು ವರ್ಷ ವಿಶ್ರಾಂತಿಯಲ್ಲಿತ್ತು. [PE]