ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಯಾಜಕಕಾಂಡ
1. {#1ರಕ್ತ ಭುಜಿಸುವುದು ನಿಷೇಧ } [PS]ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
2. “ಆರೋನನಿಗೂ, ಅವನ ಪುತ್ರರಿಗೂ, ಇಸ್ರಾಯೇಲರೆಲ್ಲರಿಗೂ ಮಾತನಾಡಿ ಅವರಿಗೆ ಹೀಗೆ ಹೇಳು: ‘ಯೆಹೋವ ದೇವರು ನಿಮಗೆ ಇಂತೆಂದು ಆಜ್ಞಾಪಿಸುತ್ತಾರೆ.
3. ಇಸ್ರಾಯೇಲಿನ ಮನೆತನದಲ್ಲಿ ಯಾವನು ಒಂದು ಎತ್ತನ್ನಾಗಲಿ ಇಲ್ಲವೆ ಒಂದು ಕುರಿಯನ್ನಾಗಲಿ ಇಲ್ಲವೆ ಒಂದು ಆಡನ್ನಾಗಲಿ ಪಾಳೆಯದೊಳಗೆ ಆಗಲಿ ಇಲ್ಲವೆ ಪಾಳೆಯದ ಹೊರಗೆ ಆಗಲಿ ವಧಿಸಿ,
4. ಯೆಹೋವ ದೇವರಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲ ಮುಂದೆ ತಾರದಿದ್ದರೆ, ಆ ಮನುಷ್ಯನ ಮೇಲೆ ರಕ್ತಾಪರಾಧವು ಹೊರಿಸಬೇಕು. ಅವನು ರಕ್ತ ಸುರಿಸಿರುವವನು, ಆ ಮನುಷ್ಯನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.
5. ಇಸ್ರಾಯೇಲರು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಯೆಹೋವ ದೇವರಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.
6. ಯಾಜಕನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಬಲಿಪೀಠದ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಯೆಹೋವ ದೇವರಿಗೆ ಆಹ್ಲಾದಕರ ಸುಗಂಧ ವಾಸನೆಯಾಗಿ ಸುಡಬೇಕು.
7. ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ[* ಮೇಕೆ ದೇವತೆ ಎಂದರೆ ಮೇಕೆ ರೂಪದಲ್ಲಿ ದೆವ್ವವನ್ನು ಆರಾಧಿಸಿದ ಕಾನಾನ್ಯರು ] ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’ [PE]
8. [PS]“ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರು ಇಲ್ಲವೆ ನಿಮ್ಮೊಳಗೆ ಪ್ರವಾಸಿಗರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸಿದರೆ,
9. ಅದನ್ನು ಯೆಹೋವ ದೇವರಿಗೆ ಸಮರ್ಪಿಸುವಂತೆ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ, ಆ ಮನುಷ್ಯನನ್ನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು. [PE]
10. [PS]“ ‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
11. ಏಕೆಂದರೆ ದೇಹದ ಜೀವವು ರಕ್ತದೊಳಗೆ ಇರುತ್ತದೆ ಮತ್ತು ನಾನು ಅದನ್ನು ನಿಮ್ಮ ಆತ್ಮಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಬಲಿಪೀಠದ ಮೇಲೆ ನಿಮಗೆ ಕೊಟ್ಟಿದ್ದೇನೆ. ಪ್ರಾಣಕ್ಕೆ ಪ್ರಾಯಶ್ಚಿತ್ತ ಮಾಡುವುದು ರಕ್ತವೇ.
12. ಆದಕಾರಣ ನಾನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಿದೆನು, “ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ತಂಗಿರುವ ಪರಕೀಯರಲ್ಲಿಯಾಗಲಿ ಯಾರೂ ರಕ್ತವನ್ನು ಭುಜಿಸಬಾರದು.” [PE]
13. [PS]“ ‘ಇದಲ್ಲದೆ ಇಸ್ರಾಯೇಲರು ಯಾವ ಮನುಷ್ಯನಾದರೂ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವುದಕ್ಕಾಗಿ ಬೇಟೆಯಾಡಿ, ಯಾವುದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ, ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿನಿಂದ ಮುಚ್ಚಬೇಕು.
14. ಏಕೆಂದರೆ ಅದು ಎಲ್ಲಾ ಶರೀರಗಳ ಜೀವವಾಗಿದೆ. ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ. ಆದ್ದರಿಂದ ನಾನು ಇಸ್ರಾಯೇಲರಿಗೆ, “ನೀವು ಯಾವ ತರಹದ ರಕ್ತವನ್ನೂ ತಿನ್ನಬಾರದು,” ಎಂದು ಹೇಳಿದ್ದೇನೆ. ಏಕೆಂದರೆ ಎಲ್ಲಾ ಶರೀರಗಳ ಜೀವವೂ ಅದರ ರಕ್ತದಲ್ಲಿಯೇ ಇದೆ. ಅದನ್ನು ತಿನ್ನುವ ಯಾವನನ್ನಾದರೂ ಬಹಿಷ್ಕರಿಸಬೇಕು. [PE]
15. [PS]“ ‘ಸ್ವದೇಶದವನಾಗಲಿ ಇಲ್ಲವೆ ಪರಕೀಯನಾಗಲಿ ತನ್ನಷ್ಟಕ್ಕೆ ತಾನೇ ಸತ್ತು ಹೋದದ್ದನ್ನು ಇಲ್ಲವೆ ಕಾಡುಮೃಗ ಕೊಂದದ್ದನ್ನು ತಿಂದ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರಬೇಕು. ತರುವಾಯ ಅವನು ಶುದ್ಧನಾಗಿರುವನು.
16. ಆದರೆ ಅವನು ಬಟ್ಟೆಗಳನ್ನು ಒಗೆದುಕೊಳ್ಳದೆ ಇದ್ದರೆ, ಇಲ್ಲವೆ ತಾನು ಸ್ನಾನ ಮಾಡದಿದ್ದರೆ, ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.’ ” [PE]
ಒಟ್ಟು 27 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 17 / 27
ರಕ್ತ ಭುಜಿಸುವುದು ನಿಷೇಧ 1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, 2 “ಆರೋನನಿಗೂ, ಅವನ ಪುತ್ರರಿಗೂ, ಇಸ್ರಾಯೇಲರೆಲ್ಲರಿಗೂ ಮಾತನಾಡಿ ಅವರಿಗೆ ಹೀಗೆ ಹೇಳು: ‘ಯೆಹೋವ ದೇವರು ನಿಮಗೆ ಇಂತೆಂದು ಆಜ್ಞಾಪಿಸುತ್ತಾರೆ. 3 ಇಸ್ರಾಯೇಲಿನ ಮನೆತನದಲ್ಲಿ ಯಾವನು ಒಂದು ಎತ್ತನ್ನಾಗಲಿ ಇಲ್ಲವೆ ಒಂದು ಕುರಿಯನ್ನಾಗಲಿ ಇಲ್ಲವೆ ಒಂದು ಆಡನ್ನಾಗಲಿ ಪಾಳೆಯದೊಳಗೆ ಆಗಲಿ ಇಲ್ಲವೆ ಪಾಳೆಯದ ಹೊರಗೆ ಆಗಲಿ ವಧಿಸಿ, 4 ಯೆಹೋವ ದೇವರಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲ ಮುಂದೆ ತಾರದಿದ್ದರೆ, ಆ ಮನುಷ್ಯನ ಮೇಲೆ ರಕ್ತಾಪರಾಧವು ಹೊರಿಸಬೇಕು. ಅವನು ರಕ್ತ ಸುರಿಸಿರುವವನು, ಆ ಮನುಷ್ಯನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು. 5 ಇಸ್ರಾಯೇಲರು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಯೆಹೋವ ದೇವರಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು. 6 ಯಾಜಕನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಬಲಿಪೀಠದ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಯೆಹೋವ ದೇವರಿಗೆ ಆಹ್ಲಾದಕರ ಸುಗಂಧ ವಾಸನೆಯಾಗಿ ಸುಡಬೇಕು. 7 ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ* ಮೇಕೆ ದೇವತೆ ಎಂದರೆ ಮೇಕೆ ರೂಪದಲ್ಲಿ ದೆವ್ವವನ್ನು ಆರಾಧಿಸಿದ ಕಾನಾನ್ಯರು ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’ 8 “ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರು ಇಲ್ಲವೆ ನಿಮ್ಮೊಳಗೆ ಪ್ರವಾಸಿಗರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸಿದರೆ, 9 ಅದನ್ನು ಯೆಹೋವ ದೇವರಿಗೆ ಸಮರ್ಪಿಸುವಂತೆ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ, ಆ ಮನುಷ್ಯನನ್ನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು. 10 “ ‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. 11 ಏಕೆಂದರೆ ದೇಹದ ಜೀವವು ರಕ್ತದೊಳಗೆ ಇರುತ್ತದೆ ಮತ್ತು ನಾನು ಅದನ್ನು ನಿಮ್ಮ ಆತ್ಮಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಬಲಿಪೀಠದ ಮೇಲೆ ನಿಮಗೆ ಕೊಟ್ಟಿದ್ದೇನೆ. ಪ್ರಾಣಕ್ಕೆ ಪ್ರಾಯಶ್ಚಿತ್ತ ಮಾಡುವುದು ರಕ್ತವೇ. 12 ಆದಕಾರಣ ನಾನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಿದೆನು, “ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ತಂಗಿರುವ ಪರಕೀಯರಲ್ಲಿಯಾಗಲಿ ಯಾರೂ ರಕ್ತವನ್ನು ಭುಜಿಸಬಾರದು.” 13 “ ‘ಇದಲ್ಲದೆ ಇಸ್ರಾಯೇಲರು ಯಾವ ಮನುಷ್ಯನಾದರೂ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವುದಕ್ಕಾಗಿ ಬೇಟೆಯಾಡಿ, ಯಾವುದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ, ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿನಿಂದ ಮುಚ್ಚಬೇಕು. 14 ಏಕೆಂದರೆ ಅದು ಎಲ್ಲಾ ಶರೀರಗಳ ಜೀವವಾಗಿದೆ. ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ. ಆದ್ದರಿಂದ ನಾನು ಇಸ್ರಾಯೇಲರಿಗೆ, “ನೀವು ಯಾವ ತರಹದ ರಕ್ತವನ್ನೂ ತಿನ್ನಬಾರದು,” ಎಂದು ಹೇಳಿದ್ದೇನೆ. ಏಕೆಂದರೆ ಎಲ್ಲಾ ಶರೀರಗಳ ಜೀವವೂ ಅದರ ರಕ್ತದಲ್ಲಿಯೇ ಇದೆ. ಅದನ್ನು ತಿನ್ನುವ ಯಾವನನ್ನಾದರೂ ಬಹಿಷ್ಕರಿಸಬೇಕು. 15 “ ‘ಸ್ವದೇಶದವನಾಗಲಿ ಇಲ್ಲವೆ ಪರಕೀಯನಾಗಲಿ ತನ್ನಷ್ಟಕ್ಕೆ ತಾನೇ ಸತ್ತು ಹೋದದ್ದನ್ನು ಇಲ್ಲವೆ ಕಾಡುಮೃಗ ಕೊಂದದ್ದನ್ನು ತಿಂದ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರಬೇಕು. ತರುವಾಯ ಅವನು ಶುದ್ಧನಾಗಿರುವನು. 16 ಆದರೆ ಅವನು ಬಟ್ಟೆಗಳನ್ನು ಒಗೆದುಕೊಳ್ಳದೆ ಇದ್ದರೆ, ಇಲ್ಲವೆ ತಾನು ಸ್ನಾನ ಮಾಡದಿದ್ದರೆ, ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.’ ”
ಒಟ್ಟು 27 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 17 / 27
×

Alert

×

Kannada Letters Keypad References